Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ಪುನರುಚ್ಚರಿಸಿದೆ ಮತ್ತು ಶಾಂತಿಯನ್ನು ಪುನಃಸ್ಥಾಪಿಸುವ ಯಾವುದೇ ಕಾರ್ಯಸಾಧ್ಯ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರ ಅಥವಾ ಸ್ವರೂಪವನ್ನು ಬೆಂಬಲಿಸುತ್ತದೆ ಎಂದು ಹೇಳಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, “ಶಾಂತಿ ಮಾತುಕತೆಯನ್ನು ಯಾವಾಗ ಮತ್ತು ಹೇಗೆ ಪ್ರಾರಂಭಿಸಬೇಕು ಎಂಬ ನಿರ್ಧಾರವು ಸಂಘರ್ಷಕ್ಕೆ ಎರಡೂ ಪಕ್ಷಗಳ ವಿಶೇಷಾಧಿಕಾರವಾಗಿದೆ. ಸ್ನೇಹಿತರು ಮತ್ತು ಪಾಲುದಾರರಾಗಿ, ಶಾಂತಿಯನ್ನು ಪುನಃಸ್ಥಾಪಿಸುವ ಯಾವುದೇ ಕಾರ್ಯಸಾಧ್ಯವಾದ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರ ಅಥವಾ ಸ್ವರೂಪವನ್ನು ನಾವು ಬೆಂಬಲಿಸುತ್ತೇವೆ …” ರಷ್ಯಾದ ಸೇನೆಯಲ್ಲಿ ಸಿಲುಕಿರುವ ಭಾರತೀಯರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಷ್ಯಾದಲ್ಲಿ ಸಿಲುಕಿದ್ದ 15 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಮತ್ತು ಭಾರತಕ್ಕೆ ಮರಳಿದ್ದಾರೆ ಎಂದು ಹೇಳಿದರು. “ನಾವು ಈಗ ನವೀಕರಣವನ್ನು ಹೊಂದಿದ್ದೇವೆ, ಇಂದಿನವರೆಗೆ ನಾವು 15 ಭಾರತೀಯರನ್ನು ಬಿಡುಗಡೆ ಮಾಡಿದ್ದೇವೆ ಮತ್ತು ಅವರು ಭಾರತಕ್ಕೆ ಮರಳಿದ್ದಾರೆ, ಇತರರು ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಮ್ಮ ಮಿಷನ್, ನಮ್ಮ ರಾಯಭಾರ…
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 29ರ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಆ.31 ರ ಇಂದು ಮುಂದೂಡಿದ್ದರು.
ಭಾರತದಲ್ಲಿ ಮಹಿಳೆಯರನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ, ಅವರ ಉಪಸ್ಥಿತಿಯು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ನಮ್ಮ ಹಿರಿಯರು ಜೀವನದ ನಿರ್ದೇಶನವು ತಮ್ಮ ದೇಹದ ಗುಣಲಕ್ಷಣಗಳೊಂದಿಗೆ ಬೇರ್ಪಡಿಸಲಾಗದಂತೆ ಸಂಬಂಧ ಹೊಂದಿದೆ ಎಂಬ ಕಲ್ಪನೆಯು ಸಾಮುದ್ರಿಕಾ ಶಾಸ್ತ್ರದ ಪ್ರಾಚೀನ ಜ್ಞಾನವನ್ನು ಆಧರಿಸಿದೆ ಎಂಬ ಆಳವಾದ ನಂಬಿಕೆಯನ್ನು ಹೊಂದಿದ್ದರು. ದೈಹಿಕ ಗುಣಲಕ್ಷಣಗಳು ವ್ಯಕ್ತಿಯ ಹಣೆಬರಹದ ಬಗ್ಗೆ ಬಹಳಷ್ಟು ಹೇಳಬಹುದು. ಮಹಿಳೆಯ ಕಾಲ್ಬೆರಳುಗಳ ಮೇಲಿನ ಕೂದಲು ವಿವಿಧ ವಿಷಯಗಳನ್ನು ಸೂಚಿಸುತ್ತದೆ, ಈ ವಿಶೇಷ ಲಕ್ಷಣವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಕಾಲ್ಬೆರಳುಗಳ ಮೇಲೆ ಕೂದಲು ಹೊಂದಿರುವ ಮಹಿಳೆಯರು ತುಂಬಾ ಅದೃಷ್ಟವಂತರು, ಇದು ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ದೈಹಿಕ ಗುಣಲಕ್ಷಣಗಳು ವ್ಯಕ್ತಿಯ ಒಟ್ಟಾರೆ ಸಂತೋಷ ಮತ್ತು ಯಶಸ್ಸಿಗೆ ಆಳವಾದ ಅರ್ಥಗಳು ಮತ್ತು ಸಂಪರ್ಕಗಳನ್ನು ಹಿಡಿದಿಟ್ಟುಕೊಳ್ಳಬಹುದು.
ಬೆಂಗಳೂರು : 2017-18ನೇ ಸಾಲಿನ ಪೂರ್ವದಲ್ಲಿ ಪ್ರಾರಂಭಗೊಂಡಿರುವ ಖಾಸಗಿ ಶಾಲೆಗಳಿಗೆ 2024-25ನೇ ಸಾಲಿಗೆ ಮಾನ್ಯತೆ ನವೀಕರಣ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಂತೆ, ಖಾಸಗಿ ಅನುದಾನಿತ / ಅನುದಾನರಹಿತ ಶಾಲೆಗಳು 2024-25ನೇ ಸಾಲಿಗೆ ಮಾನ್ಯತೆ ನವೀಕರಣಕ್ಕೆ ನಿಯಮಾನುಸಾರ ಎಲ್ಲಾ ಅಗತ್ಯ ದಾಖಲೆ ಮತ್ತು ಮಾಹಿತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ನವೀಕರಣ ಪಡೆಯಬೇಕಿರುತ್ತದೆ. ಉಲ್ಲೇಖ [2]ರಲ್ಲಿ ಖಾಸಗಿ ಅನುದಾನಿತ/ಅನುದಾನರಹಿತ ಶಾಲೆಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ ಮತ್ತು ಅಗ್ನಿ ಸುರಕ್ಷತಾ ಸಮಾಪನ ಪತ್ರ ಹಾಗೂ ಸರ್ಕಾರದ ಆದೇಶದಂತೆ ಶಾಲಾ ನಿವೇಶನವು ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನಾ ಆದೇಶ ಹಾಗೂ ಅನುಮೋದಿತ ಕಟ್ಟಡ ನಕ್ಷೆಯನ್ನು ಪಡೆದು ಮಾನ್ಯತೆ ನವೀಕರಣಕ್ಕಾಗಿ ದಿನಾಂಕ:30-09-2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅದರಂತೆ, ನಿಯಮಾನುಸಾರ ಎಲ್ಲಾ ಸುರಕ್ಷತಾ ಪ್ರಮಾಣ ಪತ್ರಗಳು, ದಾಖಲೆಗಳು ಮತ್ತು ಇತರೆ…
ದಾವಣಗೆರೆ : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕೋಡೆ ರಮಣಯ್ಯ ತಂದೆ ಕೋಡೆ ಶ್ರೀನಿವಾಸಲು ಇವರು ಈ ಪ್ರೈವೇಟ್ ಲಿಮಿಟೆಡ್‍ನಲ್ಲಿ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ನಂಬಿಸಿ 106 ಗ್ರಾಹಕರಿಂದ ರೂ.4,79,99,000 ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಲಾಗಿದೆ ಎಂದು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದ ರಮೇಶಪ್ಪ ಇವರು ನೀಡಿದ ದೂರು ಮೇರೆಗೆ ಪ್ರಕರಣ ದಾಖಲಿಸಿ ದಾವಣಗೆರೆ ಸಿಐಡಿ, ಸಿಐಯು ಘಟಕದಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಉಪಾಧೀಕ್ಷಕರಾದ ಮಾಲತೇಶ್ ಎನ್.ಕೂನಬೇವು ತಿಳಿಸಿದ್ದಾರೆ. ರಮೇಶಪ್ಪನಿಗೆ ಪರಿಚಯಸ್ಥರಾದ ಟಿ.ವಿ.ಶೇಷಯ್ಯ ಮತ್ತು ಎಂ.ಏಳುಕೊಂಡಲು ಇವರು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಹಣ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ತಿಳಿಸಿ ಕಂಪನಿಯ ಙes ಬ್ಯಾಂಕ್ ಖಾತೆ 114563300000374 ಗೆ ಹಣ ವರ್ಗಾವಣೆ ಮಾಡಿದ್ದು 60 ದಿನಗಳ ನಚಿತರ ರಮೇಶಪ್ಪ…
ಬೆಂಗಳೂರು: ನಗರದಲ್ಲಿ ದಿನಾಂಕ 07-09-2024ರಿಂದ ಆರಂಭಗೊಳ್ಳುವಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಗಣೇಶೋತ್ಸವದ ವೇಳೆಯಲ್ಲಿ ಆ ನಿಯಮಗಳನ್ನು ಪಾಲಿಸುವುದು ಕಡ್ಡಾಯ ತಪ್ಪಿದ್ರೇ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬುದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:07/09/2024 ರಿಂದ ಬೆಂಗಳೂರು ನಗರಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸುವರು. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. 1. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2022 ಮತ್ತು 2023ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು, ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ,…
ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ. ಕರ್ನಾಟಕ ರಾಜ್ಯ ಸೇವಾ ನಿಯಮಗಳು 1958 ರ ನಿಯಮ 8 (24) ಸೇರಿಕೆ ಕಾಲ ಸರ್ಕಾರಿ ನೌಕರನಿಗೆ ಯಾವ ಸಂದರ್ಭದಲ್ಲಿ ಲಭಿಸುತ್ತದೆ? ಯಾರೇ ಒಬ್ಬ ಸರ್ಕಾರಿ ನೌಕರನು ಸರ್ಕಾರದ ಹಿತಾಸಕ್ತಿ ಮೇರೆಗೆ ವರ್ಗಾವಣೆಯಾದಾಗ, ಆತನಿಗೆ ಆ ಹುದ್ದೆಗೆ ಹೋಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೇರಿಕೆ ಕಾಲ ಸಿಗುತ್ತದೆ. 3.ಯಾವ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರನಿಗೆ ಸೇರಿಕೆ ಕಾಲ ಲಭಿಸುವದಿಲ್ಲ? ಯಾರೇ ಒಬ್ಬ ಸರ್ಕಾರಿ ನೌಕರನನ್ನು ಯಾವುದೇ ಒಂದು ವಿಶೇಷ ಕರ್ತವ್ಯಕ್ಕೆ ತಾತ್ಕಾಲಿಕವಾಗಿ ನಿಯೋಜಿಸಿದಾಗ ಮತ್ತು ಆತನ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಯಾದಾಗ ಆತನಿಗೆ ಆ ಸ್ಥಳವನ್ನು ಹೋಗಿ ತಲುಪಲು ಬೇಕಾಗುವ ಪ್ರಯಾಣದ ಅವಧಿಯನ್ನು ಬಿಟ್ಟು ಆತನಿಗೆ ಯಾವುದೇ ಸೇರಿಕೆ ಕಾಲ ಲಭಿಸುವುವುದಿಲ್ಲ. ವಹಿಸಿಕೊಟ್ಟಿದ್ದರೆ, ಆತನು ತನ್ನ ಮುಂದಿನ ಕರ್ತವ್ಯದ ಕಾರ್ಯಾಭಾರವನ್ನು ಮುಂದಿನ ಕೆಲಸದ…
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಸಂಸದರು, ಸಚಿವರು, ಶಾಸಕರು ಕೂಡ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಲಿ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿಗಳು, ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ.
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ.…
ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ (WHO) ಹೊಸ ವರದಿಯಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಹದಿಹರೆಯದವರಲ್ಲಿ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಿದೆ, ಇದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ. ಈ ವರದಿಯು ಯುರೋಪಿಯನ್ ದೇಶಗಳಲ್ಲಿ, ಸುಮಾರು ಮೂರನೇ ಒಂದು ಭಾಗದಷ್ಟು ಹುಡುಗರು ಮತ್ತು ಹುಡುಗಿಯರು ಕೊನೆಯ ದೈಹಿಕ ಸಮಯದಲ್ಲಿ ಕಾಂಡೋಮ್ ಅಥವಾ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳುತ್ತದೆ. 2018 ರಿಂದ ಈ ಅಭ್ಯಾಸದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಕಾರಣದಿಂದಾಗಿ, ಅಸುರಕ್ಷಿತ ಲೈಂಗಿಕತೆಯಿಂದ ಉಂಟಾಗುವ ರೋಗಗಳು ಮತ್ತು ಅನಗತ್ಯ ಗರ್ಭಧಾರಣೆಯ ಅಪಾಯವು ಹೆಚ್ಚಾಗಿದೆ. WHO ಡೇಟಾ ಏನು ಹೇಳುತ್ತದೆ? WHO ಇತ್ತೀಚೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯದ 42 ದೇಶಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ಇದರಲ್ಲಿ 15 ವರ್ಷ ವಯಸ್ಸಿನ 2,42,000 ಹದಿಹರೆಯದವರು ಸೇರಿದ್ದಾರೆ. ಅವರಿಗೆ ಕೇಳಿದ ಪ್ರಶ್ನೆಗಳ ಪ್ರಕಾರ, ಕೊನೆಯ ಬಾರಿ ಯಾರೊಂದಿಗಾದರೂ ಸಂಬಂಧ ಹೊಂದಿದ್ದಾಗ ಕಾಂಡೋಮ್ ಬಳಸಿದ ಹುಡುಗರ ಸಂಖ್ಯೆ 2014 ರಲ್ಲಿ 70% ರಿಂದ…












