Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರಂನ ಐಟಿಐ ಗೇಟ್ ಬಳಿ ಬಿಎಂಟಿಸಿ ಬಸ್-ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಒಳಿತಾಗಲಿ ಎಂದು ಹಾರೈಸಿ ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಹೂವಿನ ಹಾರ ಹಾಕುವ ವೇಳೆ ಅಭಿಮಾನಿಯೊಬ್ಬ ಎಡವಟ್ಟು ಮಾಡಿಕೊಂಡಿದ್ದು, ದೇವಿ ತಲೆ ಮೇಲೆ ಕಾಲಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳ್ಳಾರಿಯ ಶ್ರೀಕನಕ ದುರ್ಗಮ್ಮ ದೇವಿಗೆ ಹೂವಿನಹಾರ ಹಾಕುವಾಗ ಕ್ರೇನ್ ಬಳಸಲಾಗುತ್ತದೆ. ಆದರೆ ದರ್ಶನ್ ಅಭಿಮಾನಿಗಳು ಮೂರ್ತಿ ಮೇಲೆ ಹತ್ತಿ ಹೂವಿನ ಹಾರ ಹಾಕಿದ್ದು, ವಿವಾದ ಕಾರಣವಾಗಿದೆ. ಈ ಸಂಬಂಧ ಅಭಿಮಾನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನು ದರ್ಶನ್ ಒಳಿತಿಗೆ ಹಾರೈಸಿಕ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ದರ್ಶನ್ ಗೆ ನೀಡಲು ಕಾರಾಗೃಹದ ಬಳಿ ಅಭಿಮಾನಿಗಳು ಬಂದಿದ್ದರು. ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಿಸಿದ್ದು, ನಂತರ ಅಭಿಮಾನಿಗಳು ಪ್ರಸಾದವನ್ನು ಬ್ಯಾರಿಕೇಡ್ ಮೇಲೆ ಇಟ್ಟು ಹೋಗಿದ್ದಾರೆ.

Read More

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ. ಕೆಇಎ ಯಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ. 144 ಸೆಕ್ಷನ್ ಜಾರಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ…

Read More

ನವದೆಹಲಿ : ನಾಳೆಯಿಂದ ಸೆಪ್ಟೆಂಬರ್ ತಿಂಗಳು ಆರಂಭವಾಗಲಿದ್ದು, ಹೊಸ ತಿಂಗಳಿನಿಂದ ಅನೇಕ ಪ್ರಮುಖ ಬದಲಾವಣೆಗಳು ಕಂಡುಬರುತ್ತವೆ, ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಸೆಪ್ಟೆಂಬರ್ ನಿಂದ ಕೆಲವು ವಿಶೇಷ ಬದಲಾವಣೆಗಳು ಇರಲಿವೆ, ಇದು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯಿಂದ ಹಿಡಿದು ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಇರುತ್ತವೆ. ಅಲ್ಲದೆ, ತುಟ್ಟಿಭತ್ಯೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಇರಬಹುದು. ಸೆಪ್ಟೆಂಬರ್ ತಿಂಗಳಲ್ಲಿ ಯಾವ ಬದಲಾವಣೆಗಳು ಸಂಭವಿಸಬಹುದು ಮತ್ತು ಅದು ನಿಮ್ಮ ಜೇಬಿನ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂದು ತಿಳಿಯೋಣ? `LPG’ ಸಿಲಿಂಡರ್ ಬೆಲೆ ಪ್ರತಿ ತಿಂಗಳ ಮೊದಲ ದಿನಾಂಕದಂದು, ಸರ್ಕಾರವು ಎಲ್ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಎಲ್ಪಿಜಿಗೆ ಬದಲಾಯಿಸಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಈ ಬಾರಿಯೂ ಬದಲಾವಣೆಯನ್ನು ನಿರೀಕ್ಷಿಸಲಾಗಿದೆ. ಕಳೆದ ತಿಂಗಳು, ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 8.50…

Read More

ಹಾವೇರಿ : ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ – ಜೆಡಿಎಸ್ ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ. ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ…

Read More

ಬೆಂಗಳೂರು : 2017-18ನೇ ಸಾಲಿನ ಪೂರ್ವದಲ್ಲಿ ಪ್ರಾರಂಭಗೊಂಡಿರುವ ಖಾಸಗಿ ಶಾಲೆಗಳಿಗೆ 2024-25ನೇ ಸಾಲಿಗೆ ಮಾನ್ಯತೆ ನವೀಕರಣ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಂತೆ, ಖಾಸಗಿ ಅನುದಾನಿತ / ಅನುದಾನರಹಿತ ಶಾಲೆಗಳು 2024-25ನೇ ಸಾಲಿಗೆ ಮಾನ್ಯತೆ ನವೀಕರಣಕ್ಕೆ ನಿಯಮಾನುಸಾರ ಎಲ್ಲಾ ಅಗತ್ಯ ದಾಖಲೆ ಮತ್ತು ಮಾಹಿತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ನವೀಕರಣ ಪಡೆಯಬೇಕಿರುತ್ತದೆ. ಉಲ್ಲೇಖ [2]ರಲ್ಲಿ ಖಾಸಗಿ ಅನುದಾನಿತ/ಅನುದಾನರಹಿತ ಶಾಲೆಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ ಮತ್ತು ಅಗ್ನಿ ಸುರಕ್ಷತಾ ಸಮಾಪನ ಪತ್ರ ಹಾಗೂ ಸರ್ಕಾರದ ಆದೇಶದಂತೆ ಶಾಲಾ ನಿವೇಶನವು ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನಾ ಆದೇಶ ಹಾಗೂ ಅನುಮೋದಿತ ಕಟ್ಟಡ ನಕ್ಷೆಯನ್ನು ಪಡೆದು ಮಾನ್ಯತೆ ನವೀಕರಣಕ್ಕಾಗಿ ದಿನಾಂಕ:30-09-2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅದರಂತೆ, ನಿಯಮಾನುಸಾರ ಎಲ್ಲಾ ಸುರಕ್ಷತಾ ಪ್ರಮಾಣ ಪತ್ರಗಳು, ದಾಖಲೆಗಳು ಮತ್ತು ಇತರೆ…

Read More

ಬೆಂಗಳೂರು: ವಿದ್ಯುತ್ ಮೂಲಸೌಕರ್ಯಗಳ ಅಗತ್ಯ ನಿರ್ವಹಣೆಯಿಂದಾಗಿ ಆಗಸ್ಟ್ 31 ರ ರ ಇಂದು ಬೆಂಗಳೂರಿನ ಹಲವು ಭಾಗಗಳಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಘೋಷಿಸಿವೆ. ನಿರ್ವಹಣಾ ಕಾರ್ಯವು ಸ್ವೀಕರಿಸುವ ಕೇಂದ್ರಗಳು ಮತ್ತು ವಿತರಣಾ ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ಪರಿಣಾಮ ಬೀರುತ್ತದೆ, ಇದರ ಪರಿಣಾಮವಾಗಿ ವಿವಿಧ ಪ್ರದೇಶಗಳಲ್ಲಿ ದಿನವಿಡೀ ವಿದ್ಯುತ್ ಕಡಿತವಾಗುತ್ತದೆ. ಕೆಳಗೆ ಪಟ್ಟಿ ಮಾಡಲಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆ.31 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ:- ಬಾಧಿತ ಪ್ರದೇಶಗಳು:- ಕೆಎಎಸ್ ಕಾಲೋನಿ- ಎನ್ ಎಸ್ ಪಾಳ್ಯ ಕೈಗಾರಿಕಾ ಪ್ರದೇಶ- ಬಿಳೇಕಹಳ್ಳಿ ಮುಖ್ಯ ರಸ್ತೆ- ಜಯನಗರ 4ನೇ ಟಿ ಬ್ಲಾಕ್- 9 ಬ್ಲಾಕ್- ಈಸ್ಟ್ ಎಂಡ್- ಬಿಎಚ್ ಇಎಲ್ ಲೇಔಟ್- ಎನ್ ಎಎಲ್ ಲೇಔಟ್- ತಿಲಕ್ ನಗರ- ಜಯದೇವ ಆಸ್ಪತ್ರೆ- ರಂಕಾ ಕಾಲೋನಿ ರಸ್ತೆ- ಬಿಸ್ಮಿಲ್ಲಾ ನಗರ- ವೇಗಾ ಸಿಟಿ ಮಾಲ್- ಬನ್ನೇರುಘಟ್ಟ ಮುಖ್ಯರಸ್ತೆ- BTM 1 ನೇ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆಗಸ್ಟ್.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ. ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ ಪಡಿತರ…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ರ ಇಂದೇ ಕೊನೆಯ ದಿನವಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಕುಟುಂಬ…

Read More

ನವದೆಹಲಿ : ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಉತ್ತಮ ಪರಿಹಾರವನ್ನು ನೀಡುತ್ತಿರುವ TRAI ನಕಲಿ SMS ಅನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುವ ಗಡುವನ್ನು ವಿಸ್ತರಿಸಿದೆ. ಈ ಹಿಂದೆ ಟೆಲಿಕಾಂ ನಿಯಂತ್ರಕವು ಇದನ್ನು ಸೆಪ್ಟೆಂಬರ್ 1, 2024 ರಿಂದ ಜಾರಿಗೆ ತರುವುದಾಗಿ ಹೇಳಿತ್ತು. ಪ್ರವೇಶ ಸೇವಾ ಪೂರೈಕೆದಾರರು ಮತ್ತು ಇತರ ಮಧ್ಯಸ್ಥಗಾರರ ಬೇಡಿಕೆಯ ಮೇರೆಗೆ, ನಿಯಂತ್ರಕರು ಈ ಗಡುವನ್ನು ವಿಸ್ತರಿಸಲು ನಿರ್ಧರಿಸಿದ್ದಾರೆ. ಇತ್ತೀಚೆಗೆ, ನಕಲಿ SMS ಮತ್ತು ಕರೆಗಳನ್ನು ತಡೆಗಟ್ಟಲು URL ಗಳು, APK ಗಳು ಮತ್ತು OTT ಲಿಂಕ್‌ಗಳನ್ನು ಹೊಂದಿರುವ ಸಂದೇಶಗಳನ್ನು ಶ್ವೇತಪಟ್ಟಿ ಮಾಡಲು ಟೆಲಿಕಾಂ ಸೇವಾ ಪೂರೈಕೆದಾರರು ಮತ್ತು ಟೆಲಿಮಾರ್ಕೆಟರ್‌ಗಳಿಗೆ TRAI ಆಗಸ್ಟ್ 31, 2024 ರ ಗಡುವನ್ನು ನೀಡಿತ್ತು. ಗಡುವನ್ನು ವಿಸ್ತರಿಸಿದೆ ಟೆಲಿಕಾಂ ಇಲಾಖೆಯ ಹೊಸ ನಿಯಮಗಳ ಅನುಷ್ಠಾನದಿಂದ, ನಕಲಿ ಲಿಂಕ್‌ಗಳೊಂದಿಗೆ ಸಂದೇಶಗಳು ಮತ್ತು ಕರೆಗಳಿಗೆ ಕಡಿವಾಣ ಹಾಕಬಹುದು. ಆದಾಗ್ಯೂ, ಅನೇಕ ಟೆಲಿಮಾರ್ಕೆಟರ್‌ಗಳು ತಮ್ಮ ಸಂದೇಶ ಟೆಂಪ್ಲೇಟ್‌ಗಳನ್ನು ಇನ್ನೂ ಶ್ವೇತಪಟ್ಟಿ ಮಾಡಿಲ್ಲ, ಈ ಕಾರಣದಿಂದಾಗಿ ಹೊಸ…

Read More