Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಪದ್ಮಭೂಷಣ ಪುರಸ್ಕೃತ, ‘ಹಮ್ ಆಪ್ಕೆ ಹೈ ಕೌನ್’ ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ’ (72) ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಅವರು ಮೈಲೋಮಾ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು ಮತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದರು. https://twitter.com/ANI/status/1853842196098855302?ref_src=twsrc%5Etfw%7Ctwcamp%5Etweetembed%7Ctwterm%5E1853842196098855302%7Ctwgr%5E81a13bc88059a53d56eb2f549301b321e26256f1%7Ctwcon%5Es1_&ref_url=https%3A%2F%2Fkannadadunia.com%2Flive-news%2Fsharda-sinha-famous-singer-and-padma-bhushan-recipient-dies-at-aiims-after-prolonged-illness%2F ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. 2017 ರಿಂದ, ಅವರು ಮೈಲೋಮಾ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಶಾರದ ಸಿನ್ಹಾ ಅವರು ನವೆಂಬರ್ 1, 1952 ರಂದು ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಜನಿಸಿದರು. ಅವರು ‘ಕಾರ್ತಿಕ್ ಮಾಸ್ ಇಜೋರಿಯಾ’, ಕೋಯಲ್ ಬಿನ್’ ಮುಂತಾದ ಜಾನಪದ ಹಾಡುಗಳೊಂದಿಗೆ ಅಪಾರ ಅಭಿಮಾನಿಗಳನ್ನು ಗಳಿಸಿದರು. ಅವರು ಗ್ಯಾಂಗ್ಸ್ ಆಫ್ ವಸ್ಸೀಪರ್-2, ಬಬಲ್, ಹಮ್ ಆಪ್ಕೆ ಹೈ ಕೌನ್ ಮುಂತಾದ ಬಾಲಿವುಡ್ ಚಿತ್ರಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಅವರು ಛಾತ್ ಆಚರಣೆಗಳಿಗೆ ಸಂಬಂಧಿಸಿದ ಹಾಡುಗಳಿಗೆ ಪ್ರಸಿದ್ಧರಾಗಿದ್ದಾರೆ. ಬಿಹಾರದ ಕೋಗಿಲೆ ಎಂದೇ ಖ್ಯಾತರಾಗಿರುವ ಶಾರದ ಸಿನ್ಹಾ ಅವರು 1991ರಲ್ಲಿ ಪದ್ಮಶ್ರೀ ಹಾಗೂ 2018ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ. ಆಕೆಯ ಪತಿ ಬ್ರಜ್…
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. eLeave ಒಂದು ಸರಳ ಹಾಗೂ ಅನುಕೂಲಕರ workflow ಆಧಾರಿತ ವ್ಯವಸ್ಥೆಯಾಗಿದ್ದು, ಇದರ ಮೂಲಕ ಆನ್‌ಲೈನ್‌ನಲ್ಲಿ ರಜೆಗೆ ಅರ್ಜಿ ಸಲ್ಲಿಸಬಹುದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು, ತೆಗೆದುಕೊಂಡ ರಜೆಗಳ ವಿವರ ಹಾಗೂ ಬಾಕಿ ರಜೆಗಳ ಮಾಹಿತಿಯನ್ನು ಪಡೆಯಬಹುದು. ಪೂರ್ವ ನಿರ್ಧಾರಿತ workflow ನಲ್ಲಿರುವ ಶ್ರೇಣಿಯ ಮೂಲಕ ಸ್ವಯಂಚಾಲಿತವಾಗಿ ರಜೆ ಮಂಜೂರಾತಿ ಪ್ರಕ್ರಿಯೆ ನಡೆಯುತ್ತದೆ. ಸರ್ಕಾರದ ಪ್ರಸ್ತುತ ನಿಯಮಾವಳಿಗಳ ಪ್ರಕಾರ ರಜೆ ನಿಯಮಗಳನ್ನು ಹೊಂದಿಸಲಾಗಿದ್ದು, ಪಾತ್ರಾಧಾರಿತ ರಜೆ ಪ್ರಕ್ರಿಯೆಯನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯು ಕಾಗದ ಅಧಾರಿತ ಅರ್ಜಿಗಳನ್ನು ತೊಡೆದುಹಾಕಿ. ವೇಗವಾದ ಮತ್ತು ಸಮಯಬದ್ಧ ಪ್ರಕ್ರಿಯೆಗೆ ನೆರವಾಗುತ್ತದೆ. ಮಂಜೂರಾತಿ ಪ್ರಾಧಿಕಾರವು ರಜೆ ಮಂಜೂರು ಮಾಡುವ ಮೊದಲು ನೌಕರರ ಬಾಕಿ ರಜೆ ಮತ್ತು ರಜೆ ವಿವರಗಳನ್ನು ವೀಕ್ಷಿಸಬಹುದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಆದ್ಯತಾ ಪಡಿತರ ಚೀಟಿ ವಿತರಣೆ ಮಾಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. 1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ; 2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. 3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು. 4. ಜೀವನೋಪಾಯಕ್ಕಾಗಿ…
ನವದೆಹಲಿ : ಒಡಿಶಾದಲ್ಲಿ ದುಷ್ಕರ್ಮಿಗಳು ಪುರಿ-ನಂದನ್‌ಕಾನನ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಬೆದರಿಸಲು ಇದೆಲ್ಲವನ್ನೂ ಮಾಡಲಾಗಿದೆ. ರೈಲಿನಲ್ಲಿ ಹಲವು ಸುತ್ತು ಗುಂಡು ಹಾರಿಸಿದ್ದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ಪಡೆದ ನಂತರ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 9.25ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಂದನ್‌ಕಾನನ್ ಎಕ್ಸ್‌ಪ್ರೆಸ್ ಚರಂಪ ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಸಿಬ್ಬಂದಿಯ ವ್ಯಾನ್ ವಿಭಾಗದ ಕಡೆಗೆ ಗುಂಡು ಹಾರಿಸಲಾಯಿತು, ಅದರಲ್ಲಿ ಯಾವುದೇ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸ್ಥಳಾವಕಾಶವಿಲ್ಲ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ರೈಲು ನಿರ್ವಾಹಕರಿಂದ ಗುಂಡು ಹಾರಿಸಿದ ದೂರನ್ನು ಸ್ವೀಕರಿಸಿದ ನಂತರ, ಭದ್ರಕ್ ಜಿಆರ್‌ಪಿ ತನಿಖೆಯನ್ನು ಪ್ರಾರಂಭಿಸಿದೆ. ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೇ ಪೊಲೀಸರು (ಜಿಆರ್‌ಪಿ) ಈ ಗುಂಡಿನ ದಾಳಿ ನಡೆಸಿದವರು ಮತ್ತು…
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. eLeave ಒಂದು ಸರಳ ಹಾಗೂ ಅನುಕೂಲಕರ workflow ಆಧಾರಿತ ವ್ಯವಸ್ಥೆಯಾಗಿದ್ದು, ಇದರ ಮೂಲಕ ಆನ್‌ಲೈನ್‌ನಲ್ಲಿ ರಜೆಗೆ ಅರ್ಜಿ ಸಲ್ಲಿಸಬಹುದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು, ತೆಗೆದುಕೊಂಡ ರಜೆಗಳ ವಿವರ ಹಾಗೂ ಬಾಕಿ ರಜೆಗಳ ಮಾಹಿತಿಯನ್ನು ಪಡೆಯಬಹುದು. ಪೂರ್ವ ನಿರ್ಧಾರಿತ workflow ನಲ್ಲಿರುವ ಶ್ರೇಣಿಯ ಮೂಲಕ ಸ್ವಯಂಚಾಲಿತವಾಗಿ ರಜೆ ಮಂಜೂರಾತಿ ಪ್ರಕ್ರಿಯೆ ನಡೆಯುತ್ತದೆ. ಸರ್ಕಾರದ ಪ್ರಸ್ತುತ ನಿಯಮಾವಳಿಗಳ ಪ್ರಕಾರ ರಜೆ ನಿಯಮಗಳನ್ನು ಹೊಂದಿಸಲಾಗಿದ್ದು, ಪಾತ್ರಾಧಾರಿತ ರಜೆ ಪ್ರಕ್ರಿಯೆಯನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯು ಕಾಗದ ಅಧಾರಿತ ಅರ್ಜಿಗಳನ್ನು ತೊಡೆದುಹಾಕಿ. ವೇಗವಾದ ಮತ್ತು ಸಮಯಬದ್ಧ ಪ್ರಕ್ರಿಯೆಗೆ ನೆರವಾಗುತ್ತದೆ. ಮಂಜೂರಾತಿ ಪ್ರಾಧಿಕಾರವು ರಜೆ ಮಂಜೂರು ಮಾಡುವ ಮೊದಲು ನೌಕರರ ಬಾಕಿ ರಜೆ ಮತ್ತು ರಜೆ ವಿವರಗಳನ್ನು ವೀಕ್ಷಿಸಬಹುದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.…
Apple iPhone 14 Pro ಚಾರ್ಜಿಂಗ್ ಸಮಯದಲ್ಲಿ ಸ್ಫೋಟಗೊಂಡಿದೆ (iphone Explodes), ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದ ಶಾಂಕ್ಸಿಯಲ್ಲಿ ಈ ಘಟನೆ ನಡೆದಿದೆ. ಆದರೆ ಐಫೋನ್‌ಗಳು ಸ್ಫೋಟಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈಗಾಗಲೇ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದ್ದು, ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ಈ ಘಟನೆಗೆ ಆ್ಯಪಲ್ ಕಂಪನಿಯೂ ಪ್ರತಿಕ್ರಿಯಿಸಿದೆ. ಆಪಲ್..ಈ ಹೆಸರು ಎಷ್ಟು ಜನಪ್ರಿಯವಾಗಿದೆ ಎಂದು ಹೇಳಬೇಕಾಗಿಲ್ಲ. ಈ ಕಂಪನಿಯಿಂದ ಐಪಾಡ್, ಮ್ಯಾಕ್ ಬುಕ್, ಐಪಾಡ್ ಮಿನಿ ಮುಂತಾದ ಗ್ಯಾಜೆಟ್ ಗಳು ಎಷ್ಟೇ ಬಂದರೂ ಐಫೋನ್ ಗಳ ಬೇಡಿಕೆಯೇ ಬೇರೆ. ಪ್ರತಿಯೊಬ್ಬರೂ ಖರೀದಿಸಲು ಬಯಸುವ ಸ್ಮಾರ್ಟ್ ಫೋನ್ ಐಫೋನ್ ಆಗಿದೆ. ಸೆಕ್ಯೂರಿಟಿ ಹಾಗೂ ಸ್ಟೈಲಿಶ್ ಲುಕ್ ನೊಂದಿಗೆ ಬಂದಿರುವ ಈ ಫೋನ್ ಗಳ ಬೆಲೆ ಕೊಂಚ ಹೆಚ್ಚಿದ್ದರೂ ಗ್ರಾಹಕರ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಇತ್ತೀಚೆಗೆ, ಈ ಫೋನ್‌ನ ಸುರಕ್ಷತೆಯ ಬಗ್ಗೆ ಹಲವು ವಾದಗಳಿವೆ. ಕಾರಣ.. ಚೀನಾದ ಶಾಂಕ್ಸಿಯಲ್ಲಿ ಮಹಿಳೆಯೊಬ್ಬರು ಖರೀದಿಸಿದ್ದ ಐಫೋನ್ ಸ್ಫೋಟಗೊಂಡಿದೆ. ಚೀನಾದ ಶಾಂಕ್ಸಿ ಟಿವಿ ಚಾನೆಲ್ ಪ್ರಕಾರ, ಮಹಿಳೆಯೊಬ್ಬರು…
ಹಾವೇರಿ : ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಭಾಯಿ – ಭಾಯಿ ಆಗಿದ್ದಾರೆ ಎಂದರು. ಕ್ಷೇತ್ರದ…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್…













