Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 7 ಜಿಲ್ಲೆಗಳಲ್ಲಿ 1,008 ಪೂರ್ವ ಪ್ರಾಥಮಿಕ ಶಾಲೆಗಳು ಈ ವರ್ಷದಿಂದಲೇ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಬಳ್ಳಾರಿ- 119 ಶಾಲೆಗಳು, ಬೀದರ್ -98 ಶಾಲೆಗಳು, ಕೊಪ್ಪಳ-131 ಶಾಲೆಗಳು, ಕಲಬುರಗಿ-234 ಶಾಲೆಗಳು, ರಾಯಚೂರು- 190 ಶಾಲೆಗಳು, ವಿಜಯನಗರ- 142 ಶಾಲೆಗಳು, ಯಾದಗಿರಿಯಲ್ಲಿ 94 ಶಾಲೆಗಳು ಆರಂಭಗೊಳ್ಳಲಿವೆ. ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು ಮೇಲೆ ಓದಲಾದ ಏಕ ಕಡತದಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ECCE) ಪ್ರಾರಂಭಿಸಲು ಅನುಮತಿ ನೀಡುವಂತೆ ಮತ್ತು ಇವುಗಳಿಗೆ ಅಗತ್ಯವಿರುವ ಪಠ್ಯಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಕಲಿಕಾ ಕಿಟ್ಗಳನ್ನು ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯ ವತಿಯಿಂದ ಒದಗಿಸುವಂತೆ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ, ಇವರು ಕೋರಿದ್ರು. ಸದರಿ ಕಿಟ್ಗಳಿಗೆ ಅಗತ್ಯವಿರುವ ಅನುದಾನದ ವಿವರ ಈ…
ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳವಂತೆ ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು. ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ: ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್…
ಅರ್ಜೆಂಟೀನಾದ ವಿಶ್ವಕಪ್ ವಿಜೇತ ಮತ್ತು ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರು ಇಂಟರ್ ಮಿಯಾಮಿಯಲ್ಲಿ ನಿವೃತ್ತರಾಗುವುದನ್ನು ಖಚಿತಪಡಿಸಿದ್ದಾರೆ, ಫುಟ್ಬಾಲ್ ನಂತರದ ಜೀವನದ ಬಗ್ಗೆ ತಮ್ಮ ಭಯ ಮತ್ತು ಆಲೋಚನೆಗಳ ಬಗ್ಗೆ ತೆರೆದಿಟ್ಟಿದ್ದಾರೆ. ಇಂಟರ್ ಮಿಯಾಮಿಯೊಂದಿಗಿನ ಮೆಸ್ಸಿಯ ಒಪ್ಪಂದವು 2025 ರ ಅಂತ್ಯದವರೆಗೆ ಇರುತ್ತದೆ, ಇದು ಅವರ ವೃತ್ತಿಜೀವನದ ಉಜ್ವಲ ಅಂತ್ಯವನ್ನು ಸೂಚಿಸುತ್ತದೆ, ಇದು ಕ್ರೀಡೆಯಲ್ಲಿ ಪ್ರತಿಯೊಂದು ಪ್ರಮುಖ ಪ್ರಶಂಸೆಯನ್ನು ಸಾಧಿಸಿದೆ. ವಿಶ್ವದ ಅಗ್ರ ಆಟಗಾರರಲ್ಲಿ ಒಬ್ಬರಾಗಿದ್ದರೂ, ಮೆಸ್ಸಿ ತಮ್ಮ ವೃತ್ತಿಜೀವನದ ಅಂತ್ಯವು ಸಮೀಪಿಸುತ್ತಿದೆ ಎಂದು ಒಪ್ಪಿಕೊಂಡರು. ಈ ತಿಂಗಳ ಕೊನೆಯಲ್ಲಿ 37 ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಬಾರ್ಸಿಲೋನಾ ಮತ್ತು ಪ್ಯಾರಿಸ್ ಸೇಂಟ್-ಜರ್ಮೈನ್ ತಾರೆ, ಇಎಸ್ಪಿಎನ್ ಅರ್ಜೆಂಟೀನಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಮ್ಮ ಭಾವನೆಗಳು ಮತ್ತು ಯೋಜನೆಗಳನ್ನು ಹಂಚಿಕೊಂಡಿದ್ದಾರೆ. “ನಾನು ಫುಟ್ಬಾಲ್ ತೊರೆಯಲು ಸಿದ್ಧನಿಲ್ಲ” ಎಂದು ಮೆಸ್ಸಿ ಇಎಸ್ಪಿಎನ್ ಅರ್ಜೆಂಟೀನಾಗೆ ತಿಳಿಸಿದರು. “ನಾನು ಇದನ್ನು ನನ್ನ ಜೀವನದುದ್ದಕ್ಕೂ ಮಾಡಿದ್ದೇನೆ, ನಾನು ತರಬೇತಿ, ಆಟಗಳನ್ನು ಆನಂದಿಸುತ್ತೇನೆ. ಎಲ್ಲವೂ ಮುಗಿಯುತ್ತದೆ ಎಂಬ ಭಯ, ಅದು…
ನವದೆಹಲಿ:ಸಂಸದೆ ಕಂಗನಾ ರಾಣಾವತ್ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ರಾಜ್ಯದ ಧಾರ್ಮಿಕ ಸಾಮರಸ್ಯವನ್ನು ಮುರಿಯಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಇಂಡಿಯನ್ ಅಸೋಸಿಯೇಷನ್ ಆಫ್ ಲಾಯರ್ಸ್ (ಐಎಎಲ್) ಸದಸ್ಯರ ನಿಯೋಗ ಮಂಗಳವಾರ ಕಂಗನಾ ರನೌತ್ ವಿರುದ್ಧ ಜಿಲ್ಲಾ ಪೊಲೀಸರಿಗೆ ದೂರು ನೀಡಿದೆ. ಐಎಎಲ್ನ ಪಂಜಾಬ್ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ದರ್ಶನ್ ಸಿಂಗ್ ಧಲಿವಾಲ್ ನೇತೃತ್ವದ ನಿಯೋಗವು ಎಸ್ಪಿ (ಪ್ರಧಾನ ಕಚೇರಿ) ತುಷಾರ್ ಗುಪ್ತಾ ಅವರನ್ನು ಭೇಟಿಯಾಗಿ ರಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿತು. ಜೂನ್ 6 ರಂದು ಕಂಗನಾ ರನೌತ್ ಸಿಐಎಸ್ಎಫ್ (ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಅವರಿಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಧಲಿವಾಲ್ ಆರೋಪಿಸಿದ್ದಾರೆ. “ರಣಾವತ್ ರಾಜ್ಯದ ಧಾರ್ಮಿಕ ಸಾಮರಸ್ಯವನ್ನು ಮುರಿಯಲು ಪ್ರಯತ್ನಿಸಿದ್ದಾರೆ, ಅವರ ವಿರುದ್ಧ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣ ದಾಖಲಿಸಬೇಕು” ಎಂದು ಧಲಿವಾಲ್ ಒತ್ತಾಯಿಸಿದರು. ಹಿಮಾಚಲ ಪ್ರದೇಶದ ಮಂಡಿಯಿಂದ (ಎಚ್ಪಿ) ಹೊಸದಾಗಿ ಆಯ್ಕೆಯಾದ ಸಂಸದರು ಭದ್ರತಾ ಹೋಲ್ಡ್…
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ. ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ. ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ…
ಬೆಂಗಳೂರು : ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ವಿಸ್ತೃತ ಮಾರ್ಗಸೂಚಿ ಪ್ರಕಟಿಸಿದೆ. ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ನಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನಿಯಂತ್ರಿಸಲು…
ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭದ್ರತಾ ಕಾರ್ಯಾಚರಣೆಗಳಲ್ಲಿ, ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡುವ ಮೊದಲು, ಭಯೋತ್ಪಾದಕರು ಹಿರಾನಗರದ ಸೈದಾ ಸುಖಲ್ ಗ್ರಾಮದಲ್ಲಿ ಮನೆ ಮನೆಗೆ ಹೋಗಿ ನೀರು ಕೇಳುತ್ತಿರುವುದು ಕಂಡುಬಂದಿದೆ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಬಾಗಿಲು ಮುಚ್ಚಿ ಎಚ್ಚರಿಕೆ ನೀಡಿದ್ದು, ಭಯೋತ್ಪಾದಕರು ಗಾಳಿಯಲ್ಲಿ ಮತ್ತು ಹಾದುಹೋಗುವ ಗ್ರಾಮಸ್ಥರ ಮೇಲೆ ಯಾದೃಚ್ಛಿಕವಾಗಿ ಗುಂಡು ಹಾರಿಸಲು ಪ್ರೇರೇಪಿಸಿದರು. ಈ ಗೊಂದಲಮಯ ಪರಿಸ್ಥಿತಿಯು ಭದ್ರತಾ ಪಡೆಗಳಿಂದ ತ್ವರಿತ ಪ್ರತಿಕ್ರಿಯೆಗೆ ಕಾರಣವಾಯಿತು. ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. “ಗ್ರಾಮಸ್ಥರು ಅನುಮಾನಗೊಂಡು ಗದ್ದಲ ಎಬ್ಬಿಸಿದಾಗ ಭಯೋತ್ಪಾದಕರು ಭಯಭೀತರಾಗಿ ಯಾದೃಚ್ಛಿಕವಾಗಿ ಗುಂಡು ಹಾರಿಸಿದರು. ಪೊಲೀಸರ ಮೇಲೆ ಗ್ರೆನೇಡ್ ಎಸೆಯಲು ಪ್ರಯತ್ನಿಸುತ್ತಿದ್ದಾಗ ಒಬ್ಬ ಭಯೋತ್ಪಾದಕನನ್ನು ರಾತ್ರೋರಾತ್ರಿ ಕೊಲ್ಲಲಾಯಿತು ಮತ್ತು ಎರಡನೇ ಭಯೋತ್ಪಾದಕನನ್ನು ಇಂದು ಬೆಳಿಗ್ಗೆ ಕೊಲ್ಲಲಾಯಿತು” ಎಂದು ಅವರು ಹೇಳಿದರು. ಎನ್ಕೌಂಟರ್ ವೇಳೆ ಅರೆಸೈನಿಕ ಸೈನಿಕನೊಬ್ಬ ಮೃತಪಟ್ಟಿದ್ದಾನೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜೂನ್.14 ರ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ…
ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್ಎಸ್ಆರ್ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್ವರೆಗೆ ಎಚ್ಎಸ್ಆರ್ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು…