Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಮತ್ತೆ ತಾಂತ್ರಿಕ ದೋಷ ಎದುರಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿಯೋಜನೆಯ ಹಣ ತಲುಪಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ತಲುಪಿಲ್ಲ. ಲೋಕಸಭೆ ಚುನಾವಣೆ ಬಳಿಕ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನ ಖಾತೆಗೆ ಹಾಕಿರಲಿಲ್ಲ. ಮೂರು ತಿಂಗಳ ಬಳಿಕ ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನ ಕಳೆದ ತಿಂಗಳಿನಿಂದ ಹಾಕಲಾಗುತ್ತಿದೆ. ಆದರೆ ಹಣ ಹಾಕುವಾಗ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿದ್ದು, ಒಟ್ಟು 80 ಸಾವಿರ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿಯ ಹಣ ಖಾತೆಗೆ ಬಂದಿಲ್ಲ. ಹೀಗಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿಯಲ್ಲಿ 1 ಕೋಟಿ 23 ಲಕ್ಷ ಗೃಹಲಕ್ಷ್ಮಿ ಫಾಲಾನುಭವಿಗಳಿದ್ದು, 90 ಲಕ್ಷ ಜನರ ಖಾತೆಗೆ ಮಾತ್ರ ಹಣ ಜಮಾವಣೆಯಾಗಿದೆ. ಉಳಿದ 80 ಸಾವಿರ ಜನರ ಖಾತೆಯ ತಾಂತ್ರಿಕ ಸಮಸ್ಯೆಗಳನ್ನ ಬಗೆಹರಿಸಿ, ಬಲಿಕ ಹಣ ಹಾಕಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ.
ಹುಡುಗಿಯರ ಮೇಕಪ್ ನಲ್ಲಿ ಕಣ್ಣಿನ ಮೇಕಪ್ ಪ್ರಮುಖ ಪಾತ್ರ ವಹಿಸುತ್ತದೆ. ಕಾಜಲ್ ಅನ್ನು ಕಣ್ಣಿಗೆ ಹಚ್ಚಿಕೊಂಡರೆ ಹುಡುಗಿಯರ ಸೌಂದರ್ಯ ಇಮ್ಮಡಿಯಾಗುತ್ತದೆ. ದೊಡ್ಡವರಷ್ಟೇ ಅಲ್ಲ ಮಕ್ಕಳ ಕಣ್ಣಿಗೂ ಕಚ್ಚುವ ಸಂಪ್ರದಾಯ ಭಾರತದಲ್ಲಿ ಮುಂದುವರಿದಿದೆ. ಹೀಗೆ ಮಾಡುವುದರಿಂದ ಮಕ್ಕಳಿಗೆ ದೃಷ್ಟಿಯಾಗುವುದಿಲ್ಲ ಎಂಬ ನಂಬಿಕೆ ಇದೆ. ಆದರೆ ಮಕ್ಕಳಿಗೆ ಕಾಜಲ್ ಹಚ್ಚುವುದು ತುಂಬಾ ಅಪಾಯಕಾರಿ ಎನ್ನುತ್ತಾರೆ ತಜ್ಞರು. ಕಾಜಲ್ ತಯಾರಿಕೆಯಲ್ಲಿ ಬಳಸುವ ಸೀಸ (ಲೋಹ) ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಕ್ಕಳಿಗೆ ಮಾತ್ರವಲ್ಲ ದೊಡ್ಡವರಿಗೂ ಒಳ್ಳೆಯದಲ್ಲ. ಲೀಡ್ ಕಲಬೆರಕೆ ಕೆಲವು ಕಾಜಲ್ ತಯಾರಿಸಲು ಬಣ್ಣವನ್ನು ಗಾಢವಾಗಿಸಲು ಸೀಸವನ್ನು ಬಳಸಲಾಗುತ್ತದೆ. ಈ ಸೀಸ ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಇದು ಕಣ್ಣುಗಳಲ್ಲಿ ತುರಿಕೆ ಮತ್ತು ಕೆಂಪು ಬಣ್ಣವನ್ನು ಉಂಟುಮಾಡುವುದು ಮಾತ್ರವಲ್ಲದೆ ಮಕ್ಕಳ ಮೆದುಳಿನ ಬೆಳವಣಿಗೆಯನ್ನು ತಡೆಯುತ್ತದೆ. ಹಾಗಾಗಿ ಇದರ ಅಡ್ಡ ಪರಿಣಾಮಗಳನ್ನು ತಪ್ಪಿಸಲು ಮನೆಯಲ್ಲಿ ತಯಾರಿಸಿದ ಕಾಜಲ್ ಅನ್ನು ದೀಪದೊಂದಿಗೆ ಬಳಸುವುದು ಉತ್ತಮ. ಇದಲ್ಲದೆ, ಲಿಪ್ಸ್ಟಿಕ್, ಅರಿಶಿನ ಮತ್ತು ಮಸಾಲೆಗಳಂತಹ ಅನೇಕ ವಸ್ತುಗಳಲ್ಲಿ ಸೀಸವನ್ನು ಬಳಸಲಾಗುತ್ತದೆ. ಸೋಂಕು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದರಂತೆ ಮಾಹಿತಿಗಳು ಬಹಿರಂಗವಾಗುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ನಕಲಿ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದು, ನಾನೇ ಸತ್ಯ ಹರಿಶ್ಚಂದ್ರರ ಕೊನೆಯ ತುಂಡು ಎನ್ನುವ ರೀತಿ ಲಜ್ಜೆಬಿಟ್ಟು ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳುವ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಗತ್ತಿನ ಮುಂದೆ ಸತ್ಯವನ್ನು ಮರೆಮಾಚಲು ಹೋಗಿ ಇದೀಗ ಬೆತ್ತಲಾಗಿದ್ದಾರೆ ಎಂದು ಹೇಳಿದೆ. ಮಾಹಿತಿ ಹಕ್ಕಿನಡಿ ಆರ್‌ಟಿಐ ಕಾರ್ಯಕರ್ತ ಪಡೆದ ಶ್ರೀಮತಿ ಪಾರ್ವತಿಯವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ಬೇರೆ ಇದೆ. ನಕಲಿರಾಮಯ್ಯನವರು ಟಾರ್ಚ್ ಬಿಟ್ಟು ತೋರಿಸಿದ ವೈಟ್ನರ್ ಹಿಂದಿನ ಸಾಲಿನ ಪತ್ರದ ಸಹಿಯೇ ಬೇರೆ ಇದೆ. ಭ್ರಷ್ಟ ಮುಖ್ಯಮಂತ್ರಿಗಳೇ, ಒಂದು ಸತ್ಯವನ್ನು ಮರೆಮಾಚಲು ಹೋಗಿ ಹಲವು ಸುಳ್ಳುಗಳನ್ನು ಹೇಳಿದ್ದೀರಿ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಂತೆ ಸುಳ್ಳು ಸುದ್ದಿ ಹರಡುವುದಕ್ಕೆ ನಾಚಿಕೆ ಆಗುವುದಿಲ್ಲವೇ? ಮೊದಲು ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದೆ.
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ 7000 ಕ್ಕೂ ಹೆಚ್ಚು ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಶಾರ್ಟ್ ನೋಟಿಸ್ ನೀಡಿದೆ. 7934 ಹುದ್ದೆಗಳಿಗೆ ಕೇಂದ್ರ ಉದ್ಯೋಗ ಅಧಿಸೂಚನೆ ಹೊರಡಿಸಲಾಗಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಲ್ಲಿ ಜೆಇ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ ಮಂಡಳಿಯ ಜೆಇ ಹುದ್ದೆಗಳಿಗೆ ಸಂಕ್ಷಿಪ್ತ ನೋಟಿಸ್ ಮಾತ್ರ ನೀಡಲಾಗಿದೆ. ಅರ್ಜಿ ಪ್ರಕ್ರಿಯೆಯು ಜುಲೈ 30, 2024 ರಂದು ಪ್ರಾರಂಭವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29, 2024 ಆಗಿದೆ. ಅಭ್ಯರ್ಥಿಗಳು ಈ ದಿನಾಂಕಗಳನ್ನು ಬರೆದಿಟ್ಟುಕೊಳ್ಳಬೇಕು ಮತ್ತು ಅಪ್ಲಿಕೇಶನ್ ಲಿಂಕ್ ಸಕ್ರಿಯಗೊಳಿಸಿದ ಕೂಡಲೇ ಅರ್ಜಿ ಸಲ್ಲಿಸಬೇಕು. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 29 ಆಗಿದೆ. ಈ ವೆಬ್ ಸೈಟ್ ನಿಂದ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಆರ್ಆರ್ಬಿಯ ಅಧಿಕೃತ ವೆಬ್ಸೈಟ್ಗೆ ಹೋಗಬೇಕು, ಅದರ ವಿಳಾಸ – rrbapply.gov.in. ಫಾರ್ಮ್ ಅನ್ನು ಇಲ್ಲಿಂದ ಭರ್ತಿ ಮಾಡಬಹುದು. ಈ ಪೋಸ್ಟ್ಗಳ ವಿವರಗಳು ಅಥವಾ ಇದರ…
ನವದೆಹಲಿ : ಎಸ್ ಸಿ, ಎಸ್ ಟಿ ಪಟ್ಟಿ ಬದಲಾವಣೆ ಆಗಿದ್ದರೂ ಮೀಸಲಾತಿಯಡಿ ನೇಮಕಗೊಂಡಿದ್ದ ಸಿಬ್ಬಂದಿಯನ್ನು ಮುಂದುವರೆಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ಎಸ್ ಸಿ, ಎಸ್ ಟಿಯಾಗಿ ಪರಿಗಣಿಸಲ್ಪಟ್ಟಿದ್ದ ಕೆಲ ಜಾತಿಗಳನ್ನು ನಂತರ ಆ ಪಟ್ಟಿಯಿಂದ ಹೊರಗಿಟ್ಟು ಕರ್ನಾಟಕ ಸರ್ಕಾರದ ಕ್ರಮದಿಂದ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಕೇಂದ್ರ ಸರ್ಕಾರಿ ಸ್ವಾಮದ್ಯದ ಬ್ಯಾಂಕ್, ಸಂಸ್ಥೆಗಳ ನೌಕರರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಹಿಮಾ ಕೊಹ್ಲಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಎಸ್ ಸಿ, ಎಸ್ ಟಿ ಮೀಸಲಾತಿಯಡಿ ನೇಮಕವಾದ ಈ ಸಿಬ್ಬಂದಿಗಲು ಅವರು ಕೆಲಸ ಮಾಡುತ್ತಿರುವ ಸರ್ಕಾರಿ ಸಂಸ್ಥೆಗಳು ನೀಡಿದ್ದ ನೋಟಿಸ್ ರದ್ದು ಮಾಡಿದೆ. ಈ ಮೂಲಕ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಸರ್ಕಾರಿ ನೌಕರರಿಗೆ ಸುಪ್ರೀಂಕೋರ್ಟ್ ರಕ್ಷಣೆ ನೀಡಿದೆ.
ಈಗ ಮಳೆಗಾಲ ನಡೆಯುತ್ತಿದೆ. ನೀವು ಪ್ರತಿ ಮೂಲೆಯಲ್ಲಿ ಸೊಳ್ಳೆಗಳ ಹಿಂಡುಗಳನ್ನು (ಸೊಳ್ಳೆ ಕಡಿತ) ಕಾಣಬಹುದು. ಸೊಳ್ಳೆಗಳು ಹೆಚ್ಚು ಅಥವಾ ಕಡಿಮೆ ಇರಲಿ. ಅವು ಕೆಲವು ಜನರನ್ನು ಹೆಚ್ಚು ಕುಡಿಯುತ್ತವೆ ಎಂದು ನೀವು ಎಂದಾದರೂ ಗಮನಿಸಿದ್ದೀರಾ? ಅವರು ಸೊಳ್ಳೆಗಳನ್ನು ಆಯಸ್ಕಾಂತದಂತೆ ಆಕರ್ಷಿಸುತ್ತಾರೆ. ಈ ಜನರು ಯಾರು? ಇದಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳೋಣ. O+ ರಕ್ತದ ಗುಂಪು ಹೊಂದಿರುವ ಜನರು ಸೊಳ್ಳೆಗಳು O+ ರಕ್ತದ ಗುಂಪು ಹೊಂದಿರುವ ಜನರಿಗೆ ಹೆಚ್ಚು ಆಕರ್ಷಿತವಾಗುತ್ತವೆ. ಏಕೆಂದರೆ ಈ ರಕ್ತದ ಗುಂಪಿನ ಜನರಲ್ಲಿ ಚಯಾಪಚಯ ದರವು ತುಂಬಾ ಹೆಚ್ಚಾಗಿರುತ್ತದೆ. ಇದಲ್ಲದೆ, ಈ ರಕ್ತವು ಸೊಳ್ಳೆಗಳ ಬೆಳವಣಿಗೆಗೆ ಸಹ ಅಗತ್ಯವಾಗಿದೆ. ಇಂಗಾಲದ ಡೈಆಕ್ಸೈಡ್ ವಾಸನೆ ಸೊಳ್ಳೆಗಳು ರಾತ್ರಿಯಲ್ಲಿ ಮಲಗಿರುವಾಗ ಹೆಚ್ಚು ಕಚ್ಚುತ್ತವೆ ಏಕೆಂದರೆ ಮನುಷ್ಯರು ಹೆಚ್ಚಿನ ಪ್ರಮಾಣದ ಇಂಗಾಲದ ಡೈಆಕ್ಸೈಡ್ ಅನ್ನು ಹೊರಸೂಸುತ್ತಾರೆ. ಕಾರ್ಬನ್ ಡೈಆಕ್ಸೈಡ್ ವಾಸನೆಯು ಸೊಳ್ಳೆಗಳನ್ನು ತ್ವರಿತವಾಗಿ ಆಕರ್ಷಿಸುತ್ತದೆ. ಇದಲ್ಲದೆ, ಸೊಳ್ಳೆಗಳು ಲ್ಯಾಕ್ಟಿಕ್ ಆಮ್ಲ, ಯೂರಿಕ್ ಆಸಿಡ್ ಮತ್ತು ಅಮೋನಿಯಾದಿಂದ ಕೂಡ ಆಕರ್ಷಿತವಾಗುತ್ತವೆ. ಗಾಢ ಬಣ್ಣ ಜನರು…
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತು ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಆರಂಭಿಸಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿ ಗ್ಯಾರಂಟಿ ಯೋಜನೆಗಳ ಕುರಿತು ಸಮಸ್ಯೆಗಳಿದ್ದರೆ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಸಹಾಯವಾಣಿ ಆರಂಭಿಸಲಾಗಿದ್ದು, ಸಮಸ್ಯೆಗಳಿದ್ದರೆ 9480683972 ಸಂಖ್ಯೆಗೆ ಕರೆ ಮಾಡುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿನ ಜನರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದ್ದು, 9480683972 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ದಾಖಲಿಸಬಹುದಾಗಿದೆ. ಸಂಬಂಧ ಪಟ್ಟ ಅಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿ ಪರಿಹಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ತಡರಾತ್ರಿ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದ ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ತಡರಾತ್ರಿ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.












