Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ವಿಮಾನ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸಿಹಿಸುದ್ದಿ ನೀಡಿದ್ದು, ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಪ್ರಕಾರ, ಈಗ ನೀವು ವಿಮಾನ ಟಿಕೆಟ್ ಬುಕ್ ಮಾಡುವಾಗಲೆಲ್ಲಾ, ನಿಮ್ಮ ಹಕ್ಕುಗಳು ಮತ್ತು ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು SMS ಅಥವಾ WhatsApp ಮೂಲಕ ನೀಡಲಾಗುವುದು. ಡಿಜಿಸಿಎ ನಿರ್ದೇಶನದ ಪ್ರಕಾರ, ಎಲ್ಲಾ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕ್ ಮಾಡಿದ ತಕ್ಷಣ, ನಾಗರಿಕ ವಿಮಾನಯಾನ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪ್ರಯಾಣಿಕರ ಚಾರ್ಟರ್‌ನ ಆನ್‌ಲೈನ್ ಲಿಂಕ್ ಅನ್ನು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಲಿಂಕ್ ಪ್ರಯಾಣಿಕರ ಹಕ್ಕುಗಳು, ನಿಯಮಗಳು ಮತ್ತು ದೂರು ಪರಿಹಾರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರಯಾಣಿಕರ ಹಕ್ಕುಗಳಿಗೆ ಸಂಬಂಧಿಸಿದ ಈ ಮಾಹಿತಿಯನ್ನು ವಿಮಾನಯಾನ ಸಂಸ್ಥೆಯ ವೆಬ್‌ಸೈಟ್ ಮತ್ತು ಟಿಕೆಟ್‌ನಲ್ಲಿಯೂ ಪ್ರಮುಖವಾಗಿ ಉಲ್ಲೇಖಿಸಬೇಕು ಎಂದು ಡಿಜಿಸಿಎ ಹೇಳಿದೆ. ವಿಮಾನ ವಿಳಂಬ ಅಥವಾ ರದ್ದತಿಯ ಸಂದರ್ಭದಲ್ಲಿ ಮರುಪಾವತಿ ಪಡೆಯಲು ಏನು ಮಾಡಬೇಕು,…
ದಾವಣೆಗೆರೆ : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.
ದಾವಣಗೆರೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ. ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆ, ರೈತರಿಗೆ ನೆಮ್ಮದಿ ಸಿಕ್ಕಿದ್ದು, ರಾಜ್ಯದಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಎಷ್ಟು ವಿದ್ಯುತ್ ಬೇಕೋ ಅಷ್ಟೂ ವಿದ್ಯುತ್ ನಮ್ಮಲ್ಲಿ ಇದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರತಿ ದಿನ 18 ರಿಂದ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹಿಂದೆಂದೂ ಈ ಪ್ರಮಾಣದಲ್ಲಿ ವಿದ್ಯುತ್ ಬೇಡಿಕೆ ಬಂದಿರಲಿಲ್ಲ. ಆದರೆ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ಬಿಳಿಜೋಳ ಹೈಬ್ರಿಡ್ 3,371 ರೂ. ಹಾಗೂ ಬಿಳಿಜೋಳ ಮಾಲ್ದಂಡಿ 3,421 ರೂ. ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು ಮಾರ್ಚ್ 25, 2025 ರಿಂದ ಜೋಳ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳತಕ್ಕದ್ದು, ಹಾಗೂ ಎಪ್ರಿಲ್ 1, 2025 ರಿಂದ ಮೇ 31, 2025 ಅವಧಿಯವರೆಗೆ ಜೋಳ ಖರೀದಿ ಕಾರ್ಯವನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಜೋಳ ಖರೀದಿ ಕೇಂದ್ರಗಳ ವಿವರ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ,…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಳಗಾವಿಯಲ್ಲಿ ಮದುವೆಗೆ ಮುನ್ನ ಗರ್ಭಿಣಿಯಾದ ಹೆಣ್ಣು ಮಗುವನ್ನು ಕೊಂದು ತಿಪ್ಪೆಗೆಸೆದ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ಹಸುಗೂಸನ್ನು ಕೊಂದು ತಿಪ್ಪೆಗೆಸೆದ ಪ್ರಕರಣಕ್ಕೆ ಸಂಬಂಧಿದಂತೆ ಪ್ರೇಮಿಗಳಿಬ್ಬರನ್ನು ಬಂಧಿಸಲಾಗಿದೆ. ಮಹಾಬಳೇಶ (31), ಸಿಮ್ರಾನ್ (22) ಬಂಧಿತ ಆರೋಪಿಗಳು. ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿದೆ. ಪರಿಣಾಮ ಸಿಮ್ರಾನ್, ಮದುವೆಗೂ ಮುಂಚೆಯೇ ಗರ್ಭಿಣಿಯಾಗಿದ್ದಾಳೆ. ಯುವತಿ 20 ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿಕೊಂಡು ಸೆಲ್ಫ್ ಡೆಲಿವರಿ ಮಾಡಿಕೊಂಡಿದ್ದಾಳೆ ಈ ವೇಳೆ ಆಕೆಗೆ ಹೆಣ್ಣು ಮಗು ಜನಿಸಿದ್ದು, ಅದನ್ನು ಪ್ರಿಯಕರ ಮಹಾಬಳೇಶನ ಕೈಗೆ ನೀಡಿದ್ದಳು. ಆದರೆ, ಆತ ಆ ಹಸುಗೂಸನ್ನು ಹತ್ಯೆ ಮಾಡಿ ತಿಪ್ಪೆಗೆ ಎಸೆದಿದ್ದಾನೆ. ಮಾ.5ರಂದು ಗ್ರಾಮದ ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ…
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಸಮಿತಿ ವರದಿ ನೀಡಿ ಒಳ ಮೀಸಲಾತಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ರೀತಿಯ ನೇಮಕಾತಿ, ಬಡ್ತಿ ಸೇರಿ ಇನ್ನಿತರ ಪ್ರಕ್ರಿಯೆಗಳನ್ನು ನಡೆಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವಾರದೊಳಗೆ ಮಧ್ಯಂತರ ವರದಿ ನೀಡುವಂತೆ ಸಭೆಯಲ್ಲಿ ಹಾಜರಿದ್ದ ವರದಿ ಹೊಣೆಗಾರಿಕೆ ಹೊಂದಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಅವರಿಗೆ ಸೂಚಿಸಲಾಗಿದೆ. ಬುಧವಾರದೊಳಗೆ ಮಧ್ಯಂತರ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಂತರ ಸಂಪೂರ್ಣ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಅಂತಿಮ ವರದಿ ಸಲ್ಲಿಸಲು ನಿರ್ದೇಶಿಸಲಾಗಿದೆ. ಅಂತಿಮ ವರದಿ ಸಂಪುಟದಲ್ಲಿ ಮಂಡಿಸಿ ಅಲ್ಲಿ ಚರ್ಚಿಸಿದ ಬಳಿಕ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಭೆಯಲ್ಲಿ ಸಚಿವರಾದ ಡಾ. ಜಿ.…
ಬೆಂಗಳೂರು : ಹತಾಶೆಗೊಂಡಿರುವ ಬಿಜೆಪಿ, ಅದರ ರಾಜ್ಯ ಮತ್ತು ಕೇಂದ್ರ ನಾಯಕತ್ವ ಮತ್ತು ಅದರ ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷ ಮತ್ತು ನನ್ನ ಮೇಲೆ ಸುಳ್ಳು ಹೇಳಿಕೆಗಳನ್ನು ಹೊರಿಸುವ ಮೂಲಕ ನಾಚಿಕೆಗೇಡಿನ ಮತ್ತು ಸ್ಪಷ್ಟವಾದ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಅದರ ಸುಳ್ಳು ಸಚಿವರು ತಿಳಿದಿರಬೇಕು -:1. ಮಸೂದೆಯ ಕುರಿತು ಚರ್ಚೆ ನಡೆದಾಗ ನಾನು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಸಿಎಂ ಸಿದ್ದರಾಮ್ಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆದಿದೆ. ನಾವು ತನಿಖೆ ನಡೆಸಿ ಎಂದು ಪ್ರತಿಭಟನೆ ನಡೆಸಿದೆವು. ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನಮ್ಮ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ, ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.