Author: kannadanewsnow57

ಬೆಳಗಾವಿ : ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಕೇಸ್ ನಲ್ಲಿ ಇದೀಗ ಮೊದಲ ತಲೆದಂಡವಾಗಿದ್ದು, ಖಾನಾಪುರದ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ ಸಿಪಿಐ. ಕರ್ತವ್ಯ ಲೋಪ ಆರೋಪದಲ್ಲಿ ಸಿಪಿಐ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ನಾಯಕರನ್ನು ಖಾನಾಪುರ ಠಾಣೆಯೊಳಗೆ ಬಿಟ್ಟು, ಬಿಜೆಪಿ ನಾಯಕರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾನಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯ್ಕ್ ಅವರನ್ನು ಐಜಿಪಿ ವಿಕಾಸ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Read More

ನವದೆಹಲಿ : ಆಸ್ಪತ್ರೆಗೆ ದಾಖಲಾದಾಗಿನಿಂದ ಹಿಡಿದು ದೊಡ್ಡ ವೈದ್ಯಕೀಯ ವೆಚ್ಚಗಳನ್ನು ಭರಿಸಲು ನೀವು ವೈದ್ಯಕೀಯ ವಿಮೆಯನ್ನು ಸಹ ಪಡೆದಿರಬಹುದು. ನೀವು ತುಂಬಾ ಚಿಂತನಶೀಲವಾಗಿ ಮತ್ತು ಎಲ್ಲಾ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ನಿಮಗಾಗಿ ವೈದ್ಯಕೀಯ ವಿಮೆಯನ್ನು ಆಯ್ಕೆ ಮಾಡಿಕೊಳ್ಳುತ್ತೀರಿ. ಆದರೆ ಕೆಲವೊಮ್ಮೆ ಇದು ಅಗತ್ಯವಿದ್ದಾಗ, ವಿಮಾ ಕಂಪನಿಗಳು ನಿಮ್ಮ ಕ್ಲೈಮ್ ಅನ್ನು ತಿರಸ್ಕರಿಸುತ್ತವೆ. ನಿಮ್ಮ ಮೆಡಿಕ್ಲೈಮ್ ಪಾಲಿಸಿಯು ತಿರಸ್ಕರಿಸಲ್ಪಟ್ಟಾಗ ಮತ್ತು ನಿಮ್ಮ ಸ್ವಂತ ಜೇಬಿನಿಂದ ಚಿಕಿತ್ಸೆಯ ವೆಚ್ಚವನ್ನು ನೀವು ಭರಿಸಬೇಕಾದಾಗ ನೀವು ಎಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಈಗ ಊಹಿಸಿ. ಇದು ಯಾರಿಗಾದರೂ ಭಯಾನಕ ಸತ್ಯವಾಗಬಹುದು. ಇದರಿಂದ ಒತ್ತಡ ಉಂಟಾಗುವುದಲ್ಲದೆ ಆರ್ಥಿಕ ಹೊರೆಯನ್ನೂ ಹೊರಬೇಕಾಗುತ್ತದೆ. IRDAI ಅಂಕಿಅಂಶಗಳ ಪ್ರಕಾರ, ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ, ವಿಮಾ ಕಂಪನಿಗಳು 26000 ಕೋಟಿ ಮೌಲ್ಯದ ಆರೋಗ್ಯ ನೀತಿ ಕ್ಲೈಮ್‌ಗಳನ್ನು ತಿರಸ್ಕರಿಸಿದವು. ಪ್ರತಿ ವರ್ಷ ಈ ಅಂಕಿ ಅಂಶ ಹೆಚ್ಚುತ್ತಿದೆ. 2022-23ರ ಅವಧಿಯಲ್ಲಿ ಈ ಅಂಕಿ ಅಂಶವು ಶೇ.19.10ರಷ್ಟಿತ್ತು. ಆರೋಗ್ಯ ವಿಮಾ ಕಂಪನಿಗಳು ಕ್ಲೈಮ್‌ಗಳನ್ನು ಏಕೆ…

Read More

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಕರ್ನಾಟಕದ ಮೂವರು,ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ

Read More

ಮೈಸೂರು : ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಟ್ಟು ಮರುನಾಮಕರಣ ಮಾಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೀಮಿತ ಮಾಡಬಾರದು. ಇದಕ್ಕೆ ವಿರೋಧ ಮಾಡುವುದು ಮೊಸರಲ್ಲಿ ಕಲ್ಲು ಹುಡುಕಿದಂತೆ ಎಂದು ಹೇಳಿದ್ದಾರೆ. ರಾಜಕೀಯವಾಗಿ ಸಿ.ಟಿ. ರವಿ ಅವರನ್ನು ಮುಗಿಸುವ ಯತ್ನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಇಂತಹ ಕೆಲಸಗಳಿಗೆ ಅವಕಾಶ ನೀಡಬಾರದು. ಸದನದಲ್ಲಿ ನಡೆದ ಘಟನೆ ಬಗ್ಗೆ ಸಭಾಪತಿ ನಿರ್ಧಾರ ಕೈಗೊಳ್ಳಬೇಕು. ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನ್ಯಾಯ ಕೇಳುವುದು ತಪ್ಪಲ್ಲ. ಸದನದಲ್ಲಿ ಸಮಸ್ಯೆಗೆ ಸ್ಪೀಕರ್ ಬಳಿ ದೂರು ನೀಡಬೇಕು. ಆಣೆ ಪ್ರಮಾಣ ಬಗ್ಗೆ ಮಾತನಾಡುವುದಲ್ಲ. ಯಾರ ಯಾರ ಯೋಗ್ಯತೆ ಏನು ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು…

Read More

ಮೈಸೂರು : ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆದಿದೆ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಸಿ.ಟಿ. ರವಿ ಅವರನ್ನು ಮುಗಿಸುವ ಯತ್ನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಇಂತಹ ಕೆಲಸಗಳಿಗೆ ಅವಕಾಶ ನೀಡಬಾರದು. ಸದನದಲ್ಲಿ ನಡೆದ ಘಟನೆ ಬಗ್ಗೆ ಸಭಾಪತಿ ನಿರ್ಧಾರ ಕೈಗೊಳ್ಳಬೇಕು ಎಂದರು. ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನ್ಯಾಯ ಕೇಳುವುದು ತಪ್ಪಲ್ಲ. ಸದನದಲ್ಲಿ ಸಮಸ್ಯೆಗೆ ಸ್ಪೀಕರ್ ಬಳಿ ದೂರು ನೀಡಬೇಕು. ಆಣೆ ಪ್ರಮಾಣ ಬಗ್ಗೆ ಮಾತನಾಡುವುದಲ್ಲ. ಯಾರ ಯಾರ ಯೋಗ್ಯತೆ ಏನು ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

Read More

ಕೋಲಾರ : ಕೋಲಾರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಕಮ್ಮಸಂದ್ರದಲ್ಲಿ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತಿಮ್ಮಮ್ಮ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಮೆಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತಿಮ್ಮಮ್ಮ ಗಂಡ ಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಬೆಳಗ್ಗೆ ಎದ್ದು ಲೈಟ್ ಹಾಕಿದಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿಗರ ನಿದ್ದೆ ಕೆಡಿಸಿದ್ದ ಚಡ್ಡಿಗ್ಯಾಂಗ್ ಇದೀಗ ಬೆಂಗಳೂರಿನ ಹೊರವಲಯಕ್ಕೂ ಕಾಲಿಟ್ಟಿದ್ದು, ಹೊಸಕೋಟೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊರ ವಲಯದ ಹೋಸಕೋಟೆಯ ಕುವೆಂಪು ನಗರದಲ್ಲಿ ಚಡ್ಡಿಗ್ಯಾಂಗ್ ಕಾಣಿಸಿಕೊಂಡಿದ್ದು, ಕುವೆಂಪು ನಗರದ ಗೋಡೌನ್ ನಲ್ಲಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಚಡ್ಡಿಗ್ಯಾಂಗ್ ಸದಸ್ಯರು ಮೈ, ಕೈಗೆಲ್ಲಾ ಗ್ರೀಸ್ ಹಚ್ಚಿ, ಸೋಂಟದಲ್ಲಿ ಚಾಕು ಸೇರಿದಂತೆ ಇತರೆ ಟೂಲ್ಸ್ ಇಟ್ಟುಕೊಂಡು ಕಳ್ಳತನಕ್ಕೆ ಇಳಿಯುತ್ತಾರೆ. ಕುವೆಂಪು ನಗರದ ಗೋಡೌನ್ ನಲ್ಲಿ ಚಡ್ಡಿಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್‌ಸಿಎಸ್‌ಪಿ/ಟಿಎಎಸ್‌ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್‌ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಅಹ್ವಾನಿಸಿದೆ. ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ‍್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಡಿ. 31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223405 ನ್ನು ಸಂಪರ್ಕಿಸುವುದು.

Read More

ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.  ಶಸ್ತ್ರಚಿಕಿತ್ಸೆ ಬಳಿಕ ವಿಡಿಯೋ ಬಿಡಿಗಡೆ ಮಾಡಿರುವ ಡಾ. ಮುರುಗೇಶ್, ಶಸ್ತ್ರಚಿಕಿತ್ಸೆ ವೇಳೆ ಶಿವಣ್ಣ ಆರೋಗ್ಯ ಸ್ಥಿರವಾಗಿತ್ತು. ಆಪರೇಷನ್ ನಂತರವೂ ಶಿವಣ್ಣ ನ ಹೆಲ್ತ್ ಪ್ಯಾರಾಮೀಟರ್ಸ್ ಚೆನ್ನಾಗಿದೆ.ಆದಷ್ಟು ಬೇಗ ಅವರು ಚೇತರಿಸಿಕೊಳ್ಳಲಿದ್ದಾರೆ. ಶಿವಣ್ಣ ಅವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ತಿಳಿಸಿದ್ದಾರೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು…

Read More