Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಡೆಲಿವರಿ ಬಾಯ್‌ ಹೇಮಂತ್‌ ಕುಮಾರ್‌ ಶವ ಜ್ಞಾನಭಾರತಿ ಗೇಟ್‌ ಬಳಿ ಪತ್ತೆಯಾಗಿದೆ. ಮೈಸೂರು ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಡೆಲಿವರಿ ಬಾಯ್‌ ಒಬ್ಬರು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು. ಮೃತ ಯುವಕನನ್ನು ಬ್ಯಾಟರಾಯನಪುರದ ಹೇಮಂತ್ ಕುಮಾರ್(28) ಎಂದು ಗುರುತಿಸಲಾಗಿದ್ದು, ಸದ್ಯ ಮೃತ ಯುವಕನ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶವವನ್ನು ಮೇಲೆತ್ತಿದ್ದಾರೆ. ಪೋರ್ಟರ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್‌ಕುಮಾರ್ ಅವರು, ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮೈಸೂರು ರಸ್ತೆಯ ಜ್ಞಾನಭಾರತಿ ಕಡೆಯಿಂದ ಬ್ಯಾಟರಾಯನಪುರದ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿ ರಾಜಕಾಲುವೆಗೆ ಬಿದ್ದಿದ್ದರು. ಇದೀಗ ಅಗ್ನಿಶಾಮಕ ಸಿಬ್ಬಂದಿ ಶವ ಪತ್ತೆಹಚ್ಚಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರೆದಿದ್ದು, ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ.

Read More

ಬೆಂಗಳೂರು: ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ಒಳಗೆ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ಹೊಸ ಎಕ್ಸ್ ಪ್ರೆಸ್ ವೇ ಚೆನ್ನೈ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಎರಡು ಗಂಟೆಗಳವರೆಗೆ ಕಡಿಮೆ ಮಾಡುತ್ತದೆ ಎಂದು ಒತ್ತಿ ಹೇಳಿದರು. ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ (ಬಿಸಿಇ) ಸುಮಾರು 258 ಕಿಲೋಮೀಟರ್ ಉದ್ದದ ಪ್ರಮುಖ ಚತುಷ್ಪಥ ಬ್ರೌನ್ ಫೀಲ್ಡ್ ಯೋಜನೆಯಾಗಿದೆ. ಇದು ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಆಂಧ್ರಪ್ರದೇಶದ ಚಿತ್ತೂರು, ಜೊತೆಗೆ ತಮಿಳುನಾಡಿನ ವೆಲ್ಲೂರು, ಕಾಂಚೀಪುರಂ ಮತ್ತು ತಿರುವಳ್ಳೂರು ಸೇರಿದಂತೆ ಏಳು ಜಿಲ್ಲೆಗಳನ್ನು ವ್ಯಾಪಿಸಿದೆ. ಬೆಂಗಳೂರಿನ ನಿರಂತರ ಸಂಚಾರ ಸವಾಲುಗಳ ಬಗ್ಗೆ ಗಡ್ಕರಿ, ಡಿಸೆಂಬರ್ ವೇಳೆಗೆ ಸ್ಯಾಟಲೈಟ್ ಟೌನ್ಶಿಪ್ ರಿಂಗ್ ರಸ್ತೆ (ಎಸ್ಟಿಆರ್ಆರ್) ಪೂರ್ಣಗೊಳಿಸಲು…

Read More

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಅಯೋಧ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಾರಂಭಿಸಿದ ದೇವಾಲಯ ಚಳವಳಿಯನ್ನು ಇಂಡಿಯಾ ಮೈತ್ರಿಕೂಟವು ಸೋಲಿಸಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು. ಅಯೋಧ್ಯೆ ಇರುವ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲನ್ನು ನೆನಪಿಸಿದ ರಾಹುಲ್, “ನಾವು ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆ, ನಾವು ಅದನ್ನು ಗುಜರಾತ್ನಲ್ಲಿ ಸೋಲಿಸುತ್ತೇವೆ” ಎಂದು ಹೇಳಿದರು. ಲೋಕಸಭೆಯಲ್ಲಿ ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ವಿರೋಧಿಸಿ ಜುಲೈ 2 ರಂದು ಆಡಳಿತ ಪಕ್ಷದ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದಾಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಘರ್ಷಣೆ ನಡೆಸಿದ ಕೆಲವು ದಿನಗಳ ನಂತರ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದರು. “ಅವರು ನಮ್ಮ ಕಚೇರಿಯನ್ನು ಆಕ್ರಮಿಸಿದರು ಮತ್ತು ನಮಗೆ ಬೆದರಿಕೆ ಹಾಕಿದರು. ಈಗ, ನಾವು ಅವರನ್ನು ಸೋಲಿಸುತ್ತೇವೆ” ಎಂದು ಅವರು ಹೇಳಿದರು. “ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸುವ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ. ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಡೆಂಗ್ಯೂ ಜ್ವರದ ಲಕ್ಷಣಗಳು ಡೆಂಗ್ಯೂ ಎಂಬುದು ಡೆಂಗ್ಯೂ ವೈರಸ್‌ನಿಂದ ಉಂಟಾಗುವ ಸೊಳ್ಳೆಯಿಂದ ಹರಡುವ ವೈರಲ್ ಕಾಯಿಲೆಯಾಗಿದೆ. ಈ ಸಂದರ್ಭದಲ್ಲಿ,…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಎಂಟು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್‌ ಅಧಿಕಾರಿಗಳು ಯಶವಂತ್ ವಿ ಗುರುಕಾರ್-ಜಿಲ್ಲಾಧಿಕಾರಿ, ರಾಮನಗರ ಡಾ. ಹರೀಶ್‌ಕುಮಾರ್- ವಿಶೇಷ ಆಯುಕ್ತ, ತ್ಯಾಜ್ಯ ನಿರ್ವಹಣೆ, ಬಿಬಿಎಂಪಿ, ಬೆಂಗಳೂರು (ಸಿಇಒ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಲಿ. ಹೆಚ್ಚುವರಿ ಹೊಣೆ) ಅರ್ಚನಾ ಎಂ.ಎಸ್- ನಿರ್ದೇಶಕರು, ಸೆಕ್ಯೂರಿಟಿ ಅಂಡ್ ವಿಜಿಲೆನ್ಸ್, ಬಿಎಂಟಿಸಿ, ಬೆಂಗಳೂರು. ಡಾ. ಅರವಿಂದ ಮೆನನ್ ರಾಜೇಂದ್ರನ್- ವಿಶೇಷ ಆಯುಕ್ತ, ಆಡಳಿತ, ಬಿಬಿಎಂಪಿ, ಬೆಂಗಳೂರು ಮೊಹಮ್ಮದ್ ಇಕ್ರಾಮುಲ್ಲಾ ಷರೀಪ್‌- ಉಪ ಕಾರ್ಯದರ್ಶಿ, ಆಯವ್ಯಯ ಮತ್ತು ಸಂಪನ್ಮೂಲ, ಹಣಕಾಸು ಇಲಾಖೆ, ಬೆಂಗಳೂರು ವರ್ನಿತ್ ನೇಗಿ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕರಕುಶಲ…

Read More

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 50 ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ ಭಾಗ-2 ರ ಪಠ್ಯ ಶೇ.50 ಒಟ್ಟು ಸೇರಿ ಶೇ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ…

Read More

ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್‌ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್‌ ಸೀಡಿಂಗ್‌ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ಮೂಲಕ ಯಾರದ್ದೋ…

Read More

ಮುಂಬೈ : ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಏಷ್ಯಾಕಪ್ನಲ್ಲಿ ತನ್ನ ಪ್ರಾಬಲ್ಯವನ್ನು ಕಾಯ್ದುಕೊಳ್ಳಲಿದೆ. ಜುಲೈ 19ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಟಿ 20 ಏಷ್ಯಾ ಕಪ್ ಗಾಗಿ ಹರ್ಮನ್ ಪ್ರೀತ್ ಕೌರ್ 15 ಸದಸ್ಯರ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ 7 ಬಾರಿ ಪ್ರಶಸ್ತಿ ಗೆದ್ದಿದೆ. ಟೀಮ್ ಇಂಡಿಯಾದ ಕಣ್ಣುಗಳು 8 ನೇ ಬಾರಿಗೆ ಹೆಸರು ಮಾಡುವತ್ತ ನೆಟ್ಟಿವೆ. ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟಗೊಂಡಿದೆ. ನಾಯಕತ್ವ ಮತ್ತೊಮ್ಮೆ ಹರ್ಮನ್ ಪ್ರೀತ್ ಕೌರ್ ಕೈಸೇರಲಿದೆ. ಸ್ಫೋಟಕ ಬ್ಯಾಟರ್‌ ಹರ್ಮನ್ಪ್ರೀತ್ ಪ್ರಸ್ತುತ ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಆಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಅವರನ್ನು ಮೀಸಲು…

Read More

ಒಡಿಶಾಕ್ಕೆ ನಾಲ್ಕು ದಿನಗಳ ಭೇಟಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ವಿಶೇಷ ಐಎಎಫ್ ವಿಮಾನದಲ್ಲಿ ಭುವನೇಶ್ವರಕ್ಕೆ ಆಗಮಿಸಿದರು. ರಾಜ್ಯಪಾಲ ರಘುಬರ್ ದಾಸ್ ಮತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 1936 ರಲ್ಲಿ ಒಡಿಶಾವನ್ನು ಪ್ರತ್ಯೇಕ ರಾಜ್ಯವಾಗಿ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಒಡಿಯಾ ಐಕಾನ್ ‘ಉತ್ಕಲಾಮಣಿ’ ಪಂಡಿತ್ ಗೋಪಬಂಧು ದಾಸ್ ಅವರ 96 ನೇ ಪುಣ್ಯತಿಥಿಯ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಮುರ್ಮು ತೆರಳಿದರು. ರಾಜ್ಯದ ಮಯೂರ್ಭಂಜ್ ಜಿಲ್ಲೆಯವರಾದ ರಾಷ್ಟ್ರಪತಿ ಮುರ್ಮು ಅವರು ಜುಲೈ 7 ರಂದು (ಇಂದು) ಪುರಿಯಲ್ಲಿ ರಥಯಾತ್ರೆಗೆ ಸಾಕ್ಷಿಯಾಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಉದಯಗಿರಿ ಗುಹೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಮರುದಿನ ಬಿಭೂತಿ ಕನುಂಗೊ ಕಾಲೇಜ್ ಆಫ್ ಆರ್ಟ್ ಅಂಡ್ ಕ್ರಾಫ್ಟ್ಸ್ ಮತ್ತು ಉತ್ಕಲ್ ಸಂಸ್ಕೃತಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಜುಲೈ 8 ರಂದು ರಾಷ್ಟ್ರಪತಿಗಳು ಭುವನೇಶ್ವರ ಬಳಿಯ ಹರಿದಮಾಡ ಗ್ರಾಮದಲ್ಲಿ ಬ್ರಹ್ಮಕುಮಾರಿಯರ ದೈವಿಕ…

Read More