Author: kannadanewsnow57

ಬೆಂಗಳೂರು : ಹೆಚ್ಚಾದ ಈ ಬಿಸಿಲ ಬೇಗೆಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ದೇಹದಲ್ಲಿ ಉಷ್ಣಾಂಶ ಜಾಸ್ತಿಯಾದಂತೆ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ ಬಿಸಿಲಿನಲ್ಲಿ ಹೆಚ್ಚು ಓಡಾಡದಿರಿ. ಹೆಚ್ಚು ತಂಪಿರುವ ಸ್ಥಳದಲ್ಲಿ ಅಧಿಕ ಸಮಯ ಕಳೆಯಿರಿ. 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದು. ಹಾಗೂ ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿರುತ್ತಾರೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ.…

Read More

ಬೆಂಗಳೂರು : ಜಿಲ್ಲಾ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ವಸತಿನಿಲಯಗಳು ಮತ್ತು ಟ್ಯುಟೋರಿಯಲ್‌ಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಕೆಲವು ಜಿಲ್ಲೆಗಳಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಕೆಲವು ಶಾಲಾ ಆಡಳಿತ ಮಂಡಳಿಗಳು ಅನಧಿಕೃತವಾಗಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಟ್ಯುಟೋರಿಯಲ್‌ಗಳನ್ನು ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ರೀತಿ ಅನಧಿಕೃತವಾಗಿ ನಡೆಸುತ್ತಿರುವ ವಸತಿ ನಿಲಯಗಳು/ಟ್ಯುಟೋರಿಯಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅವಘಡ ಸಂಭವಿಸದಂತೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಅನಧಿಕೃತವಾಗಿ ವಸತಿ ನಿಲಯ ಮತ್ತು ಟ್ಯುಟೋರಿಯಲ್‌ಗಳನ್ನು ನಡೆಸುತ್ತಿರುವ ಬಗ್ಗೆ ತಮ್ಮ ಜಿಲ್ಲಾ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ತಕ್ಷಣ ಪರಿಶೀಲಿಸಿ 03 ದಿನಗಳೊಳಗಾಗಿ ಈ ಕಚೇರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಿದೆ. ಈ ರೀತಿ ಅನಧಿಕೃತವಾಗಿ ಟ್ಯುಟೋರಿಯಲ್‌ಗಳು ಮತ್ತು ವಸತಿ ನಿಲಯಗಳನ್ನು ನಡೆಸುತ್ತಿರುವ ಶಾಲಾ ಆಡಳಿತ ಮಂಡಳಿಗಳ…

Read More

ನವದೆಹಲಿ : ಟೆಲಿಕಾಂ ಆಪರೇಟರ್‌ಗಳು ಮಾತ್ರವಲ್ಲದೆ, ಗೂಗಲ್ ಪೇ ಮತ್ತು ಫೋನ್ ಪೇ ಸೇರಿದಂತೆ ಬ್ಯಾಂಕುಗಳು ಸಹ ಒಂದು ಸಂವೇದನಾಶೀಲ ನಿರ್ಧಾರವನ್ನು ತೆಗೆದುಕೊಂಡಿವೆ. ಈ ನಿರ್ಧಾರವು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಅಂದರೆ ಮುಂದಿನ 10 ದಿನಗಳಲ್ಲಿ ನಿಮ್ಮ ಫೋನ್ ಸಂಖ್ಯೆ ಸಕ್ರಿಯವಾಗಿಲ್ಲದಿದ್ದರೆ.. ಇನ್ನು ಮುಂದೆ, ನೀವು Google Pay, Phone Pay ನಂತಹ UPI ಮೂಲಕ ಅಂತಹ ಸಂಖ್ಯೆಗೆ ಹಣವನ್ನು ಕಳುಹಿಸಲು ಸಾಧ್ಯವಾಗುವುದಿಲ್ಲ.. ಸಕ್ರಿಯವಾಗಿಲ್ಲದ ಫೋನ್ ಸಂಖ್ಯೆಗೆ ನೀವು ಯಾವುದೇ ಹಣವನ್ನು ಕಳುಹಿಸಲು ಸಾಧ್ಯವಾಗುವುದಿಲ್ಲ.. ಅಂತಹ ಫೋನ್ ಸಂಖ್ಯೆಗಳನ್ನು ಬ್ಯಾಂಕ್ ಖಾತೆಯಿಂದ ಮಾತ್ರವಲ್ಲದೆ UPI ಪಾವತಿ ಗೇಟ್‌ವೇಯಿಂದ ತೆಗೆದುಹಾಕಲಾಗುತ್ತದೆ. ಅದು ಕೂಡ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಹೊಸ ಯುಪಿಐ ನಿಯಮಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ. ನೀವು ಪ್ರಸ್ತುತ ಬಳಸುತ್ತಿರುವ UPI ಖಾತೆಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಯನ್ನು ನೀವು ಹೊಂದಿದ್ದೀರಿ. ನೀವು ಆ ಫೋನ್ ಸಂಖ್ಯೆಯನ್ನು ದೀರ್ಘಕಾಲ ಬಳಸದಿದ್ದರೆ ಮತ್ತು ಅದು…

Read More

ನವದೆಹಲಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ರಾಜಕೀಯ ನಾಯಕರು ಸೇರಿದಂತೆ ಹಲವರ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆಗೆ ಅರ್ಜಿಯನ್ನು ವಕೀಲರು ಉಲ್ಲೇಖಿಸಿದ್ದಾರೆ. ಅರ್ಜಿಯನ್ನು ಇಂದು ಅಥವಾ ನಾಳೆ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿದೆ. ಆರೋಪಗಳ ಬಗ್ಗೆ ಸಿಬಿಐ ಅಥವಾ ಎಸ್‌ಐಟಿಯಿಂದ ಸ್ವತಂತ್ರ ತನಿಖೆ ನಡೆಸುವಂತೆ ಪಿಐಎಲ್ ಕೋರಿದೆ. https://twitter.com/ANI/status/1904042119909794238?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ನವದೆಹಲಿ : ವರ್ಷದ ಮೊದಲ ಗ್ರಹಣ ಹೋಳಿ ಹಬ್ಬದ ದಿನದಂದು, ಅಂದರೆ ಮಾರ್ಚ್ 14 ರಂದು ಸಂಭವಿಸಿತು. ಇದು ಚಂದ್ರ ಗ್ರಹಣ. ಈಗ, ವರ್ಷದ ಎರಡನೇ ಗ್ರಹಣ ಮಾರ್ಚ್‌ನಲ್ಲಿ ಸಂಭವಿಸಲಿದೆ.ಈ ಗ್ರಹಣವು 2025 ರ ಮೊದಲ ಸೂರ್ಯಗ್ರಹಣವಾಗಲಿದೆ. ಇದು ಮಾರ್ಚ್ 29 ರಂದು, ಚೈತ್ರ ಮಾಸದ ಆರಂಭದ ಒಂದು ದಿನ ಮೊದಲು ಸಂಭವಿಸುತ್ತದೆ. ಈ ಸೂರ್ಯಗ್ರಹಣದ ಸಮಯದಲ್ಲಿ, ಭೂಮಿಯ ಕೆಲವು ಪ್ರದೇಶಗಳು ಹಗಲು ಬೆಳಕಿನಿಂದ ಆವೃತವಾಗಿರುತ್ತವೆ ಮತ್ತು ಕೆಲವು ಪ್ರದೇಶಗಳು ಕತ್ತಲೆಯಲ್ಲಿ ಆವರಿಸಲ್ಪಡುತ್ತವೆ. ಜನರು ಸೂರ್ಯಗ್ರಹಣವನ್ನು ನೋಡಲು ತುಂಬಾ ಕುತೂಹಲದಿಂದ ಇದ್ದಾರೆ. ಈಗ 2025 ರಲ್ಲಿ ಮೊದಲ ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುತ್ತದೆಯೇ? ಈ ವರ್ಷದ ಮೊದಲ ಸೂರ್ಯಗ್ರಹಣ ಮಾರ್ಚ್ 29 ರ ಶನಿವಾರ ಸಂಭವಿಸಲಿದೆ. ಈ ಸೂರ್ಯಗ್ರಹಣವು ಮಾರ್ಚ್ 29 ರಂದು ಭಾರತೀಯ ಸಮಯ ಮಧ್ಯಾಹ್ನ 2:20 ಕ್ಕೆ ಪ್ರಾರಂಭವಾಗಿ ಸಂಜೆ 6:16 ಕ್ಕೆ ಕೊನೆಗೊಳ್ಳಲಿದೆ. ಇದು ಪಾಲ್ಗುಣ ಮಾಸದ…

Read More

ಶಿವಮೊಗ್ಗ : ಮುಂದಿನ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಇದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬಾರೇಹಳ್ಳ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಕ್ಕೆ ತರಲಾಗಿದೆ. ಸರ್ಕಾರದ ಮುಂದಿನ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ವಿಶೇಷವಾಗಿ ಶಿಕ್ಷಣ ಇಲಾಖೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ ಕೈಗೊಳ್ಳಲಿದೆ. ಪೋಷಕರು ತಮ್ಮ ಮಕ್ಕಳನ್ನು ದಿನನಿತ್ಯ ಶಾಲೆಗೆ ಕಳುಹಿಸಿಕೊಡಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದರು. ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ…

Read More

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತೆಲಂಗಾಣದ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಸ್ಥಳದಲ್ಲೇ ಸಾವನ್ನಪ್ಪಿದ್ದು, ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ವಿದ್ಯಾರ್ಥಿನಿಯರನ್ನು ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು : ಮಂಗಳೂರಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಪ್ರವಾಸಿಗ ಸಾವನ್ನಪ್ಪಿದ್ದಾರೆ. ಹೌದು, ಮಂಗಳೂರಿನ ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಮಡಿಕೇರಿ ಕುಶಾಲನಗರದ ಮೂಲದ ಪ್ರವಾಸಿ ನಿಶಾಂತ್ ಮೃತಪಟ್ಟಿದ್ದಾರೆ. ನಿಶಾಂತ್ ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸ್ವಿಮ್ಮಿಂಗ್ ಫೂಲ್ ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಾಗಲೇ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಕಲಬುರಗಿ : ಕಲಬುರಗಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಹಿಳೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಗಾಜು ಪುಡಿ ಪುಡಿ ಮಾಡಿ, ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಕಲಬುರಗಿ ನಗರದ MSK ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ನಿನ್ನೆ ಸಂಜೆ ಮಹಿಳೆ ಸಭಾ ಪರ್ವೀನ್ ದಾಖಲಾಗಿದ್ದರು. ಆದರೆ ಗರ್ಭದಲ್ಲೇ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದರು. ಬಳಿಕ ಬಾಣಂತಿಯೂ ಲೋಬಿಪಿಯಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಕ್ರೋಶಗೊಂಡ ಪರ್ವೀನ್ ಕುಟುಂಬಸ್ಥರು ಆಸ್ಪತ್ರೆಯ ಗಾಜು ಪುಡಿ ಪುಡಿ ಮಾಡಿ, ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಸ್ಥಳಕ್ಕೆ RJ ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Read More

ಬಾಗಲಕೋಟೆ : ಬಾಗಲಕೋಟೆಯ ಬನಹಟ್ಟಿಯಲ್ಲಿ ಭೀಕರ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬನಹಟ್ಟಿಯಲ್ಲಿರುವ ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಲೀಕ್ ಆಗಿ ಸ್ಪೋಟಗೊಂಡಿದ್ದು, ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರೀ ದುರಂತವೊಂದು ತಪ್ಪಿದೆ. ಅವಘಡದಲ್ಲಿ ಹೆಡ್ ಕಾನ್ಸ್ ಟೇಬಲ್ ರವೀಂದ್ರ ದಳವಾಯಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಲಿಂಡರ್ ಸ್ಪೋಟದಿಂದ ಮನೆಯಲ್ಲಿರುವ ಸಾವಿರಾರು ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

Read More