Author: kannadanewsnow57

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯನ್ನು ಪುಸಲಾಯಿಸಿ ಇಬ್ಬರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಿನ್ನೆ ಸಂಜೆ ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ದಾಖಲಿಸಲಾಗಿದೆ.

Read More

ಮುಂಬೈ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಚುಚ್ಚಿ ವಿಕೃತಿ ಮೆರೆದಿದ್ದಾರೆ. ಮಹಾರಾಷ್ಟ್ರದ ಮುಂಬೈನ ಜೋಗೇಶ್ವರಿ ಪೂರ್ವದ ಮೇಘವಾಡಿ ಪ್ರದೇಶದಲ್ಲಿ ನಡೆದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಚ್ಚಿಬೀಳಿಸಿದೆ. ಇಲ್ಲಿ, ಮಹಿಳೆಯ ಪ್ರೇಮಿ ಆಕೆಯ 10 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ನಂತರ, ಆಕೆಯ ಖಾಸಗಿ ಭಾಗಗಳಿಗೆ ಸ್ಕ್ರೂಡ್ರೈವರ್ ಸೇರಿಸಲಾಗಿದೆ. ಇದಲ್ಲದೆ, ಆರೋಪಿಯು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಅದರ ವಿಡಿಯೋ ಕೂಡ ಮಾಡಿದ್ದಾನೆ. ಈ ಘಟನೆ ಮುಂಬೈಯನ್ನು ಮತ್ತೊಮ್ಮೆ ಬೆಚ್ಚಿಬೀಳಿಸಿದೆ. ಮೇಘವಾಡಿ ಪೊಲೀಸರು ಈ ಪ್ರಕರಣದಲ್ಲಿ ಪ್ರಕರಣ ದಾಖಲಿಸಿಕೊಂಡು 24 ವರ್ಷದ ಆರೋಪಿ ಮತ್ತು ಆತನ 21 ವರ್ಷದ ಗೆಳತಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನ ಗೆಳತಿಯ 10 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಲಿಪಶುವಿನ ತಾಯಿ ಅಡುಗೆ ಸೇವಾ ಸಂಸ್ಥೆಯಲ್ಲಿ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಾಹಿತಿಯ…

Read More

ವಾಷಿಂಗ್ಟನ್ : ಇರಾನಿನ ಪರಮಾಣು ನೆಲೆಗಳ ಮೇಲೆ ತನ್ನ ಸೇನೆ ದಾಳಿ ಮಾಡಿದ ಒಂದು ದಿನದ ನಂತರ, ಜೂನ್ 22 ರ ಸೋಮವಾರ, ಯುಎಸ್ ವಿದೇಶಾಂಗ ಇಲಾಖೆ “ವಿಶ್ವಾದ್ಯಂತ ಎಚ್ಚರಿಕೆ ಭದ್ರತಾ ಎಚ್ಚರಿಕೆ”ಯನ್ನು ಹೊರಡಿಸಿತು. ಒಂದು ಹೇಳಿಕೆಯಲ್ಲಿ, ವಿಶ್ವಾದ್ಯಂತ ಅಮೆರಿಕನ್ನರು ಹೆಚ್ಚಿನ ‘ಎಚ್ಚರಿಕೆ’ ವಹಿಸುವಂತೆ ಸಲಹೆ ನೀಡಿದೆ. ಮಧ್ಯಪ್ರಾಚ್ಯದಾದ್ಯಂತ ಸಂಭಾವ್ಯ ಪ್ರಯಾಣ ಅಡಚಣೆಗಳನ್ನು ಗುರುತಿಸುತ್ತಾ, “ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಮಧ್ಯಪ್ರಾಚ್ಯದಾದ್ಯಂತ ಪ್ರಯಾಣಕ್ಕೆ ಅಡ್ಡಿಪಡಿಸುವಿಕೆ ಮತ್ತು ನಿಯತಕಾಲಿಕವಾಗಿ ವಾಯುಪ್ರದೇಶವನ್ನು ಮುಚ್ಚಲು ಕಾರಣವಾಗಿದೆ. ಯುಎಸ್ ನಾಗರಿಕರು ಮತ್ತು ವಿದೇಶಗಳಲ್ಲಿ ಹಿತಾಸಕ್ತಿಗಳ ವಿರುದ್ಧ ಪ್ರದರ್ಶನಗಳ ಸಾಧ್ಯತೆಯಿದೆ.” “ವಿಶ್ವಾದ್ಯಂತ ಯುಎಸ್ ನಾಗರಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವಿದೇಶಾಂಗ ಇಲಾಖೆ ಸಲಹೆ ನೀಡುತ್ತದೆ. ಪ್ರಯಾಣವನ್ನು ಯೋಜಿಸುವಾಗ ದಯವಿಟ್ಟು ನಮ್ಮ ಪ್ರಯಾಣ ಸಲಹಾ, ದೇಶದ ಮಾಹಿತಿ ಮತ್ತು ಯಾವುದೇ ಇತ್ತೀಚಿನ ಭದ್ರತಾ ಎಚ್ಚರಿಕೆಗಳನ್ನು ಎಚ್ಚರಿಕೆಯಿಂದ ಓದಿ. ಈ ತಿಂಗಳ ಆರಂಭದಲ್ಲಿ ಇಸ್ರೇಲ್ ಇರಾನ್ ವಿರುದ್ಧ ಬಾಂಬ್ ದಾಳಿ ನಡೆಸಿದ ನಂತರ, ಅಮೆರಿಕದ ದಾಳಿಗಳು ಅಸ್ಥಿರ ಪ್ರದೇಶದಲ್ಲಿ ಸಂಘರ್ಷವನ್ನು…

Read More

ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಹಾಗೂ ಜೂನ್ 24 ರ ಮಂಗಳವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯ ಎಚ್ ಬಿಆರ್ ಘಟಕ ವ್ಯಾಪ್ತಿಯ ಎಚ್ ಬಿಆರ್ 1,2,3,4 5, ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು  ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ಮೃತಪಟ್ಟಿದ್ದಾರೆ. ರಿಂಗ್ ರಸ್ತೆಯ ಕಲ್ಯಾಣ ನಗರದ ಶೋ ರೂಮ್ ವೊಂದರ ಬಳಿ ಈ ಘಟನೆ ನಡೆದಿದೆ. ಮೃತನನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ಗುರುತಿಸಲಾಗಿದೆ. ಸಾಫ್ಟ್ ವೇರ್ ರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

ನವದೆಹಲಿ : ಇಸ್ರೇಲ್ ಜೊತೆಗಿನ ಯುದ್ಧ ಮತ್ತು ಅಮೆರಿಕದ ದಾಳಿಯ ನಡುವೆ ಇರಾನ್ ಮಹತ್ವದ ಹೆಜ್ಜೆ ಇಟ್ಟಿದ್ದು ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಸ್ತಾಪವನ್ನು ಇರಾನಿನ ಸಂಸತ್ತಿನಲ್ಲಿ ಅನುಮೋದಿಸಲಾಗಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ತೆಗೆದುಕೊಳ್ಳಲಿದೆ. ಭಾನುವಾರ ಇದರ ಮೇಲೆ ಮತದಾನ ನಡೆಯಿತು. ವಿಶ್ವದ ತೈಲ ವ್ಯಾಪಾರದ ಸುಮಾರು 26 ಪ್ರತಿಶತ ಈ ಜಲಮಾರ್ಗದ ಮೂಲಕ ನಡೆಯುತ್ತದೆ. ಇರಾನ್ ಈ ನಿರ್ಧಾರವನ್ನು ಜಾರಿಗೆ ತಂದರೆ, ಇಡೀ ಜಗತ್ತಿನಲ್ಲಿ ಕೋಲಾಹಲ ಉಂಟಾಗುತ್ತದೆ. ಇದು ಅಮೆರಿಕ ಮತ್ತು ಭಾರತದ ಮೇಲೂ ಪರಿಣಾಮ ಬೀರುತ್ತದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿಯನ್ನು ಅರೇಬಿಯನ್ ಸಮುದ್ರ ಮತ್ತು ಹಿಂದೂ ಮಹಾಸಾಗರಕ್ಕೆ ಸಂಪರ್ಕಿಸುತ್ತದೆ ಎಂದು ನಾವು ನಿಮಗೆ ಹೇಳೋಣ. ಇದು 33 ಕಿ.ಮೀ ಅಗಲದ ಮಾರ್ಗವಾಗಿದ್ದು, ಇದರ ಮೇಲೆ ಇರಾನ್ ಹಕ್ಕನ್ನು ಹೊಂದಿದೆ. ಈ ಜಲಮಾರ್ಗದಲ್ಲಿನ ಹಡಗು ಮಾರ್ಗವು ಕೇವಲ 3 ಕಿ.ಮೀ ಅಗಲವಿದೆ. ಅಂತಹ…

Read More

ನವದೆಹಲಿ : ಫ್ರಾನ್ಸ್ನ ಆಹಾರ ಸುರಕ್ಷತಾ ಸಂಸ್ಥೆ ANSES ಬಿಡುಗಡೆ ಮಾಡಿದ ಅಧ್ಯಯನವು, ಗಾಜಿನ ಬಾಟಲಿಗಳು ಪ್ಲಾಸ್ಟಿಕ್ ಬಾಟಲಿಗಳಿಗಿಂತ ಗಮನಾರ್ಹವಾಗಿ ಹೆಚ್ಚು ಮೈಕ್ರೋಪ್ಲಾಸ್ಟಿಕ್ಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ, ಇದು ದೀರ್ಘಕಾಲದ ಊಹೆಗಳಿಗೆ ವಿರುದ್ಧವಾಗಿದೆ.ಸರಾಸರಿ, ತಂಪು ಪಾನೀಯಗಳು, ನಿಂಬೆ ಪಾನಕ, ಐಸ್ಡ್ ಟೀ ಮತ್ತು ಬಿಯರ್ಗಳ ಗಾಜಿನ ಬಾಟಲಿಗಳು ಪ್ರತಿ ಲೀಟರ್ಗೆ ಸುಮಾರು 100 ಮೈಕ್ರೋಪ್ಲಾಸ್ಟಿಕ್ ಕಣಗಳನ್ನು ಹೊಂದಿರುತ್ತವೆ, ಇದು ಪ್ಲಾಸ್ಟಿಕ್ ಅಥವಾ ಲೋಹದ ಪಾತ್ರೆಗಳಿಗಿಂತ 50 ಪಟ್ಟು ಹೆಚ್ಚು. ಜರ್ನಲ್ ಆಫ್ ಫುಡ್ ಕಾಂಪೊಸಿಷನ್ ಅಂಡ್ ಅನಾಲಿಸಿಸ್ನಲ್ಲಿ ಪ್ರಕಟವಾದ ಸಂಶೋಧನೆಗಳ ಪ್ರಕಾರ, ಗಾಜಿನ ಬಾಟಲಿಗಳು ಪ್ಲಾಸ್ಟಿಕ್ ಬಾಟಲಿಗಳಿಗಿಂತ ತುಲನಾತ್ಮಕವಾಗಿ ಸುರಕ್ಷಿತವಾಗಿರುತ್ತವೆ ಎಂದು ಸಂಶೋಧಕರು ಆರಂಭದಲ್ಲಿ ನಿರೀಕ್ಷಿಸಿದ್ದರು, ಆದರೆ ಫಲಿತಾಂಶಗಳು ಅವರನ್ನು ಆಶ್ಚರ್ಯಗೊಳಿಸಿದವು. ನಾವು ವಿರುದ್ಧ ಫಲಿತಾಂಶವನ್ನು ನಿರೀಕ್ಷಿಸಿದ್ದೇವೆ” ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಪಿಎಚ್ಡಿ ವಿದ್ಯಾರ್ಥಿನಿ ಐಸೆಲಿನ್ ಚೈಬ್ ಹೇಳಿದರು.ಪಾನೀಯಗಳಲ್ಲಿ ಪ್ರತ್ಯೇಕಿಸಲಾದ ಹೆಚ್ಚಿನ ಕಣಗಳು ಕ್ಯಾಪ್ಗಳ ಬಣ್ಣಕ್ಕೆ ಹೋಲುತ್ತವೆ ಮತ್ತು ಹೊರಗಿನ ಬಣ್ಣದ ಸಂಯೋಜನೆಯನ್ನು ಹಂಚಿಕೊಂಡಿರುವುದರಿಂದ ಕ್ಯಾಪ್ಗಳು ಮಾಲಿನ್ಯದ ಮುಖ್ಯ ಮೂಲವೆಂದು…

Read More

ಚಿಕ್ಕಮಗಳೂರು: ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಮಳೆ ಅನಾಹುತ ಸಂಭವಿಸಿದ ಖಾಂಡ್ಯ ಹೋಬಳ ಬಿಳುಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವರು ಬಳಿಕ ಪರಿಹಾರದ ಚೆಕ್ ಅನ್ನು ವಿತರಿಸಿದರು. ಬಳಿಕಮಾತನಾಡಿ ಹಣದಿಂದ ಕಾರಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯತೆಯಿದ ಪರಿಹಾರ ವಿತರಿಸಲಾಗುತ್ತಿದ್ದು, ಮೃತರ ಕುಟುಂಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲವಾಗಬೇಕಿದೆ ಎಂದರು. ಪ್ರಸ್ತುತ ಜಿಲ್ಲಾಧಿಕಾರಿಗಳ ಕಡೆಯಿಂದ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೃತ ಅನಿಲ್ ಪಾಯ್ಸ್ ಅವರ ಮನೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಹಿಂದೆ ಮನೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಂದ ಹಣ ನೀಡಲಾಗಿತ್ತು. ಇದೀಗ ಮನೆಯನ್ನು ಶಾಸಕ…

Read More

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ. ಅರಿವು ಶೈಕ್ಷಣಿಕ ಸಾಲ ಯೋಜನೆ-ಸಿಇಟಿ, ಎನ್‌ಇಇಟಿ ಕೌನ್ಸಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೆಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. 2019-20 ನೇ ಸಾಲಿನಿಂದ 2021-22 ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ…

Read More

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು, ಇವರು ವಿವಿಧ ನಾನ್ ಗೆಜೆಟೆಡ್ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ 14,582 ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಪರೀಕ್ಷೆ (ಅಉಐಇ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ, ನಿರ್ದಿಷ್ಟ ಹುದ್ದೆಗಳ ಅಪೇಕ್ಷಣೀಯ ಅರ್ಹತೆಯ ವಿವರಗಳಿಗೆ ಎಸ್ಎಸ್ಸಿ ಅಧಿಸೂಚನೆಯ ಪ್ಯಾರಾ-8 ಅನ್ನು ಪರಿಶೀಲಿಸಬಹುದು. 18 ರಿಂದ 32 ವರ್ಷದೊಳಗಿರಬೇಕು. ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅಧಿಸೂಚನೆಯ ಪ್ಯಾರಾ-5 ಅನ್ನು ಪರಿಶೀಲಿಸಬಹುದು. ಪರೀಕ್ಷೆಯ ಸಂಭವನೀಯ ದಿನಾಂಕ 2025 ರ ಆಗಸ್ಟ್, 13 ರಿಂದ 30 ರವರೆಗೆ, ಶುಲ್ಕ ರೂ.100, (ಎಸ್ಸಿ/ಎಸ್ಟಿ/ಮಹಿಳೆ/ದಿವ್ಯಾಂಗರು/ಮಾಜಿ ಸೈನಿಕರಿಗೆ ಶುಲ್ಕವಿಲ್ಲ). ಅರ್ಜಿ ಸಲ್ಲಿಸಲು ಜುಲೈ, 04 ರ ಮಧ್ಯಾಹ್ನ 11 ಗಂಟೆಗೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಹಾಗೂ ದೂರವಾಣಿ ಸಂಖ್ಯೆ…

Read More