Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯಾದ್ಯಂತ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಧ್ಯಾವಮ್ಮ (೫೦) ಹಾಗೂ ಪುಟ್ಟಮ್ಮ (೫೦) ಸಿಡಿಲಿಗೆ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿಯಲ್ಲಿ ಕುರಿ ಕಾಯುತ್ತಿದ್ದ ಡಾಬಗಲ್‌ ಮುದ್ದಾನೆ (೧೫) ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಿಕಿ ಗ್ರಾಮದಲ್ಲಿ ಅಮಘೋ ಶಿವನಿಂಗ (೪೦) ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು…

Read More

ಬೆಂಗಳೂರು : ಮೇಲ್ಮನೆಯ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಇಂದು ಬೆಳಗ್ಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಚುನಾವಣಾ ಕಣದಲ್ಲಿ ಒಟ್ಟು 78 ಅಭ್ಯರ್ಥಿಗಳಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಈಶಾನ್ಯ ಪದವೀಧರರ, ಬೆಂಗಳೂರು ಪದವೀಧರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ ಐಟಿ ಬುಧವಾರ ಪುರುಷತ್ವ ಪರೀಕ್ಷೆಗೊಳಪಡಿಸಿದೆ. ಪ್ರಜ್ವಲ್‌ ರೇವಣ್ಣ ಅವರ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಅವರು ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯ ಖಚಿತಪಡಿಸಿಕೊಳ್ಳಲು ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆ ಆವರಣದ ಆಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್‌ ಐಟಿ ಗೆ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ. ಎಸ್‌ ಐಟಿ ಅಧಿಕಾರಿಗಳು ಕೋರ್ಟ್‌ ಅನುಮತಿ ಪಡೆದು ಪ್ರಜ್ವಲ್‌ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಿದೆ. ಇದಕ್ಕಾಗಿ ತಜ್ಞರ ತಂಡ ರಚಿಸಲಾಗಿದೆ, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್‌ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್‌ ಐಟಿ…

Read More

ಬೆಂಗಳೂರು : 2024-25ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆಯ ದಿನಾಂಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ನಡೆಸಲು ಉಲ್ಲೇಖ-04ರ ಸುತ್ತೋಲೆಯನ್ವಯ ಕ್ರಮವಹಿಸಲಾಗಿದೆ. ಕಾರ್ಯಸೂಚಿಯನ್ವಯ ಆ‌ರ್.ಟಿ.ಇ ಅಡಿ ಮೊದಲ ಸುತ್ತಿನ ಆನ್‌ಲೈನ್ ಲಾಟರಿ ಪ್ರಕ್ರಿಯೆಯನ್ನು 05.06.2024 ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್‌ಲೈನ್ ಲಾಟರಿ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ದಿನಾಂಕ 07.06.2024 ನಡೆಸಲಾಗುವುದು. ಪರಿಷ್ಕೃತ ವೇಳಾಪಟ್ಟಿಯನ್ನು ಲಗತ್ತಿಸಿದೆ.

Read More

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನ ಗೆದ್ದಿರುವ ಎನ್‌ ಡಿಎ ಮೈತ್ರಿಕೂಟದ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು,  ಜೂನ್.7ರ ರ ನಾಳೆ ಎನ್ ಡಿ ಎ ನಾಯಕರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ 3ನೇ ಬಾರಿಗೆ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡಿಸಲಿದ್ದಾರೆ. ಮೋದಿ ನೇತೃತ್ವದಲ್ಲಿ ಬುಧವಾರ ಎನ್ ಡಿಎ ಸಂಸದರ ಸಭೆ ನಡೆಯಿತು. ಈ ಸಭೆಯಲ್ಲಿ ಎನ್ ಡಿಎಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಬೆಂಬಲ ಘೋಷಿಸಿ,  ಪತ್ರವನ್ನು ನೀಡಿದ್ದಾರೆ. ಅಲ್ಲದೇ ಜೂನ್.7ರಂದು ರಾಷ್ಟ್ರಪತಿ ಭೇಟಿಯಾಗಿ, ಸರ್ಕಾರ ರಚಿಸಲು ಹಕ್ಕು ಮಂಡಿಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. https://twitter.com/ANI/status/1798340118438346858 ಜೂನ್.7ರಂದು ಸಂಜೆ 5 ಗಂಟೆಗೆ ಎನ್ ಡಿಎ ಮೈತ್ರಿ ಕೂಟದ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡನೆ ಮಾಡಲಿದ್ದಾರೆ. ಜೂನ್.8ರಂದು ನರೇಂದ್ರ ಮೋದಿಯವರು…

Read More

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ ಸಂಜೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವಡೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.  ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಎಲೆಕ್ಟ್ರಾನಿಕ್‌ ಸಿಟಿ, ಬನ್ನೇರುಘಟ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್‌ ಆಗುವ ವಾಹನ ಸವಾರರು ಪರದಾಡುವಂತಾಗಿದೆ. ನಗರದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಆಗುತ್ತಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ, ಮಾಕಳಿ, ಮಾಚೋಹಳ್ಳಿ, ಟೌನ್ ಹಾಲ್, ಕೆ.ಆರ್.‌ ಮಾರ್ಕೆಟ್, ಲಾಲ್​ ಬಾಗ್, ಚಾಲುಕ್ಯ ಸರ್ಕಲ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.

Read More

ನವದೆಹಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಎಲ್ಲಾ ಸದಸ್ಯರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈತ್ರಿ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಮಿತ್‌ ಶಾ ಅವರು, ಎನ್ ಡಿಎ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಜೀ. ಕಳೆದ 10 ವರ್ಷಗಳು ಮೋದಿ ಜಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಮತ್ತು ಕಲ್ಯಾಣದ ಯುಗವಾಗಿ ನಿಲ್ಲುತ್ತವೆ. ಹೊಸ ಶಕ್ತಿ ಮತ್ತು ಆವೇಗದೊಂದಿಗೆ ರಾಷ್ಟ್ರ ಮತ್ತು ಅದರ ಜನರಿಗೆ ಸೇವೆ ಸಲ್ಲಿಸಲು ಎನ್ಡಿಎ ದೃಢವಾಗಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. https://twitter.com/AmitShah/status/1798348314938937688?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಉತ್ತರಾಖಂಡದ ಶಾಸ್ತ್ರತಾಳ್‌ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಸಾವನ್ನಪ್ಪಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು…

Read More

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮುಂದಿನ ನಾಲ್ಕು ದಿನ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ,ಗದಗ, ದಕ್ಷಿಣ ಕನ್ನಡ,ದಾವಣಗೆರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Read More

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ ಡಿಎ ಮಿತ್ರ ಪಕ್ಷಗಳ ನಾಯಕರು ಸರ್ಕಾರ ರಚನೆಗೆ ಸಭೆ ನಡೆಸಿದ ಬೆನ್ನಲ್ಲೇ ಪ್ರತಿಪಕ್ಷ ಇಂಡಿಯಾ ಬಣದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿ ಮೈತ್ರಿಕೂಟದ ಭವಿಷ್ಯವನ್ನು ಕಾರ್ಯತಂತ್ರ ರೂಪಿಸಲು ಪ್ರಯತ್ನಿಸಿದ್ದಾರೆ. ವರದಿಗಳ ಪ್ರಕಾರ, ಪ್ರತಿಪಕ್ಷಗಳು ಸರ್ಕಾರ ರಚನೆಯ ಸಾಧ್ಯತೆಗಳನ್ನು ಅನ್ವೇಷಿಸುತ್ತಿವೆ ಮತ್ತು ಮಾಜಿ ಮಿತ್ರರಾದ ನಿತೀಶ್ ಕುಮಾರ್ ಮತ್ತು ಎನ್ ಚಂದ್ರಬಾಬು ನಾಯ್ಡು ಅವರನ್ನು ತಲುಪಬೇಕೇ ಎಂದು ಪರಿಗಣಿಸುತ್ತಿವೆ. ಬಿಜೆಪಿ 240 ಸ್ಥಾನಗಳನ್ನು ಗಳಿಸಿದ್ದರೂ ಮತ್ತು ಕಾಂಗ್ರೆಸ್ 99 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿದ್ದರೂ, ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ ಮತ್ತು ಪ್ರಸ್ತುತ ಸರ್ಕಾರ ರಚಿಸುವ ಬಗ್ಗೆ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುತ್ತಿದೆ. 234 ಸ್ಥಾನಗಳನ್ನು ಹೊಂದಿರುವ ಪ್ರತಿಪಕ್ಷಗಳ ಮೈತ್ರಿಕೂಟವು ಲೋಕಸಭಾ ಚುನಾವಣಾ ಫಲಿತಾಂಶಗಳು ಮತ್ತು ಸರ್ಕಾರ ರಚನೆಗೆ ಅಗತ್ಯವಾದ ಬೆಂಬಲವನ್ನು ಸಂಗ್ರಹಿಸಲು ಜನತಾದಳ (ಯುನೈಟೆಡ್) ಮತ್ತು ತೆಲುಗು ದೇಶಂ ಪಕ್ಷವನ್ನು…

Read More