Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ : ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ತೋರಣಗಲ್ನ ಜಿಂದಾಲ್ ಏರ್ಪೋರ್ಟ್ನಲ್ಲಿ ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು. ತುಂಗಭದ್ರಾ ಜಲಾಶಯದಲ್ಲಿನ ಹೂಳಿನ ಸಮಸ್ಯೆ ಪರಿಹರಿಸಲು ಕೊಪ್ಪಳ ಜಿಲ್ಲೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ…
ನವದೆಹಲಿ : ಯೋಗ ಮಾಡಿ ಆರೋಗ್ಯವಾಗಿರಿ. ಯೋಗವು ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದರ ಮಹತ್ವವನ್ನು ಇಡೀ ಜಗತ್ತು ಈಗ ಗುರುತಿಸಿದೆ. ಯೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಅಂತಾರಾಷ್ಟ್ರೀಯ ಯೋಗ ದಿನ ಭಾರತಕ್ಕೆ ಬಹಳ ವಿಶೇಷವಾಗಿದೆ. ಏಕೆಂದರೆ ಯೋಗವು ಶತಮಾನಗಳಿಂದ ನಮ್ಮ ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದೆ. ಅದೇ ಸಮಯದಲ್ಲಿ, ಇಡೀ ಜಗತ್ತು ಜೂನ್ 21 ರ ಶುಕ್ರವಾರ 10 ನೇ ಯೋಗ ದಿನವನ್ನು ಆಚರಿಸಲಿದೆ. ಅದೇ ಸಮಯದಲ್ಲಿ, ಪ್ರತಿ ವರ್ಷ ಯೋಗ ದಿನವನ್ನು ನಿಗದಿತ ವಿಷಯದೊಂದಿಗೆ ಆಚರಿಸಲಾಗುತ್ತದೆ. ಹಾಗಾದರೆ ಈ ಬಾರಿ 2024 ರ ಅಂತರರಾಷ್ಟ್ರೀಯ ಯೋಗ ದಿನದ ಥೀಮ್ ಏನು ಮತ್ತು ಈ ದಿನ ಏಕೆ ವಿಶೇಷವಾಗಿದೆ ಎಂದು ತಿಳಿಯೋಣ. ನಿಮಗೆಲ್ಲರಿಗೂ ತಿಳಿದಿರುವಂತೆ, ಭಾರತವನ್ನು ಯೋಗ ಗುರುವನ್ನಾಗಿ ಮಾಡಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ. 2014ರ ಸೆಪ್ಟಂಬರ್ 14ರಂದು ನಡೆದ ಸಭೆಯಲ್ಲಿ ಯೋಗ ದಿನವನ್ನು ಆಚರಿಸಿದ್ದನ್ನು…
ಬೆಂಗಳೂರು : ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರನೆ ಅಂಗವಾಗಿ ನಡೆಯುವ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಫೋಟೋ ಜೊತೆಗೆ ಡಾ.ಬಿ.ಆರ್. ಅಂಬೇಡರ್ಕ ಅವರ ಫೋಟೋವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಜನವರಿ-26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಭಾರತ ರತ್ನ ಡಾ||…
ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಜೂ.21ರ ಇಂದು 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನದಂತೆ ಜಿಲ್ಲಾ ಉಪನಿರ್ದೇಶಕರು ಹಾಗೂ ಉಪ ಸಮನ್ವಯ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದೆ. ಜೂ.25ರೊಳಗೆ ಫೋಟೋ ಜತೆ ವರದಿಯನ್ನು ಕಚೇರಿಗೆ ಸಲ್ಲಿಸಲು ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ.
ಕ್ಯಾಲಿಫೋರ್ನಿಯಾ: ಓಕ್ಲ್ಯಾಂಡ್ನಲ್ಲಿ ಬುಧವಾರ ರಾತ್ರಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಮತ್ತು ಇರಿತದ ಘಟನೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಲೇಕ್ ಮೆರಿಟ್ ನಲ್ಲಿ ಈ ಘಟನೆ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ ಗುಂಡಿನ ದಾಳಿ ಮತ್ತು ಇರಿತದ ಸ್ಥಳದ ದೃಶ್ಯಗಳು ಆನ್ ಲೈನ್ ನಲ್ಲಿ ಕಾಣಿಸಿಕೊಂಡವು. ಹಂಚಿಕೊಂಡ ವೀಡಿಯೊಗಳಲ್ಲಿ, ಸಾಮೂಹಿಕ ಗುಂಡಿನ ದಾಳಿ ನಡೆದ ಬೀದಿಯಲ್ಲಿ ಜನರು ಕಾರುಗಳ ಹಿಂದೆ ಅಡಗಿರುವುದನ್ನು ಕಾಣಬಹುದು. ಗುಂಡಿನ ಶಬ್ದವನ್ನು ಸಹ ಕೇಳಬಹುದು. ಪ್ರಸ್ತುತ, ಓಕ್ಲ್ಯಾಂಡ್ನಲ್ಲಿ ಹಲವಾರು ಕಾನೂನು ಜಾರಿ ಅಧಿಕಾರಿಗಳು ಮತ್ತು ತುರ್ತು ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದಾರೆ. ಗುಂಡು ಹಾರಿಸಿದ ಮತ್ತು ಇರಿತಕ್ಕೊಳಗಾದವರ ನಿಖರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಅಧಿಕಾರಿಗಳು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ. ಯಾವುದೇ ಶಂಕಿತರನ್ನು ಗುರುತಿಸಲಾಗಿಲ್ಲ
ಹಾಸನ : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಾಡಹಗಲೇ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೊಯ್ಸಳ ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿದ್ದ ಇಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಹಾಸನ : ಹಾಸನದ ಹೊಯ್ಸಳ ನಗರದ ಬಡಾವಣೆಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೊಯ್ಸಳ ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿಎ.
ನವದೆಹಲಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸಮನ್ಸ್ ನೀಡಿದ ನಂತರವೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಎಂಪಿಎಂಎಲ್ಎ ಮ್ಯಾಜಿಸ್ಟ್ರೇಟ್ ಶುಭಂ ವರ್ಮಾ ಆದೇಶಿಸಿದ್ದಾರೆ. ಈ ಪ್ರಕರಣವು ಬಂಧುಕಾಲನ್ ಪೊಲೀಸ್ ಠಾಣೆಯದ್ದಾಗಿದೆ. ಸಂಸದರು ಅನುಮತಿಯಿಲ್ಲದೆ ಚುನಾವಣಾ ಸಾರ್ವಜನಿಕ ಸಭೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೈಭವ್ ಪಾಂಡೆ ಮಾತನಾಡಿ, ಏಪ್ರಿಲ್ 13, 2021 ರಂದು ಎಸ್ಎಚ್ಒ ಪ್ರವೀಣ್ ಕುಮಾರ್ ಸಿಂಗ್ ಎಫ್ಐಆರ್ ಬರೆದಿದ್ದರು. ಮಧ್ಯಾಹ್ನ 3.30 ಕ್ಕೆ ಎಂಪಿ ಸಿಂಗ್ ತಮ್ಮ ಪಕ್ಷದ ಜೆಐಪಿ ಸದಸ್ಯೆ ಸಲ್ಮಾ ಬೇಗಂ ಅವರ ಪರವಾಗಿ ಹಸನ್ಪುರ ಗ್ರಾಮದಲ್ಲಿ ಸಭೆ ನಡೆಸುತ್ತಿದ್ದರು, ಇದಕ್ಕಾಗಿ ಅವರಿಗೆ ಅನುಮತಿ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅವರೊಂದಿಗೆ 50-60 ಜನರಿದ್ದರು. ಅವರ ಕೃತ್ಯವು ಸಾಂಕ್ರಾಮಿಕ ಕಾಯ್ದೆ ಮತ್ತು ಇತರ ಕಾನೂನುಗಳನ್ನು ಉಲ್ಲಂಘಿಸಿದೆ. ತನಿಖೆಯ ನಂತರ ಪೊಲೀಸರು ಸಂಜಯ್ ಸಿಂಗ್, ಮಕ್ಸೂದ್ ಅನ್ಸಾರಿ,…
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಮತ್ತು ಇತರೆ ಯೂನಿಫಾರ್ಮ್ ಸೇವೆಗಳ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ), 3(ಎ) ಮತ್ತು 3(ಬಿ) ಗಳ ಅರ್ಹ ಬಾಲಕರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳ ಕುಟುಂಬದ ಆದಾಯ ಮಿತಿ ಪ್ರವರ್ಗ-1,2(ಎ) ರೂ.2.5 ಲಕ್ಷಗಳು, ಮತ್ತು 3(ಎ) ಮತ್ತು 3(ಬಿ) ಗಳಿಗೆ 1.00ಲಕ್ಷಗಳಿರುತ್ತದೆ. 10 ನೇ ತರಗತಿ ಉತ್ತೀರ್ಣವಾಗಿದ್ದು, ಶೇ 45 ರಷ್ಟು ಅಂಕ ಪಡೆದಿರಬೇಕು. ವಯೋಮಿತಿ 10 ಜುಲೈ 2004 ರಿಂದ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ತರಬೇತಿ ನೆಡೆಸಲಾಗುವುದು. ಅಭ್ಯರ್ಥಿಗಳು ಈ ಮೂರರಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, ಆ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ…
ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಘಟಕದಡಿ ಸಾಲ-ಸೌಲಭ್ಯ ಪಡೆಯಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಒಟ್ಟು 17 ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು, ಬ್ಯಾಂಕ್ ವಿಧಿಸುವ ಶೇ.7 ರ ಮೇಲ್ಪಟ್ಟು ಶೇಖಡವಾರು ಬಡ್ಡಿ ಮೊತ್ತವನ್ನು (ಬಡ್ಡಿ ಸಹಾಯಧನ) ಭರಿಸಲಾಗುವುದು. ಜುಲೈ 04 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ಕಾರ್ಡ್, ಯೋಜನಾ ವರದಿ, ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರ, ಸ್ವ-ಸಹಾಯ ಗುಂಪುಗಳ ಭಾವಚಿತ್ರ ಹಾಗೂ ಗುಂಪಿಗೆ ಸಂಬಂಧಪಟ್ಟ ದಾಖಲಾತಿ ಮತ್ತು ಯೋಜನಾ ವರದಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.