Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಇಂದು ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ. ಸರ್ವರ್ ಸಮಸ್ಯೆ ನಡುವೆಯೂ ನಿನ್ನೆ ಒಂದೇ ದಿನ 1,81,051 ಜನರ ಸಮೀಕ್ಷೆ ನೆಟ್ವರ್ಕ್ ಸಮಸ್ಯೆಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂರನೇ ದಿನವಾದ ಗುರುವಾರ ರಾಜ್ಯದಲ್ಲಿ 53,908 ಕುಟುಂಬಗಳ 1,81,051 ಜನರ…
ಬೆಂಗಳೂರು : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಸೆಪ್ಟೆಂಬರ್ 24 ರಂದು ಭೇಟಿ ನೀಡಿತು. ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮಥ್ರ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು. ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮಥ್ರ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ)…
ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE)…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಡುವೆಯೂ ಶಿಕ್ಷಕರು ಜಾತಿಗಣತಿ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಾಗಾದ್ರೇ ಈವರೆಗೆ ಎಷ್ಟು ಮನೆಗಳ ಸರ್ವೆ ಮಾಡಲಾಗಿದೆ ಎಂಬ ಬಗ್ಗೆ ಅಂಕಿ ಅಂಶ ಮುಂದಿದೆ ಓದಿ. ನೆಟ್ವರ್ಕ್ ಸಮಸ್ಯೆಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂರನೇ ದಿನವಾದ ಗುರುವಾರ ರಾಜ್ಯದಲ್ಲಿ 53,908 ಕುಟುಂಬಗಳ 1,81,051 ಜನರ ಸಮೀಕ್ಷೆ ಮಾಡಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ ಏರಿಯೆಲ್ಲ ಶಿಕ್ಷಕರು ಸಮೀಕ್ಷೆ ನಡೆಸುತ್ತಿರುವುದು ವರದಿಯಾಗಿದೆ. ಸರ್ವರ್ ಸಮಸ್ಯೆ ಕಾರಣಕ್ಕಾಗಿ ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಿಕೆ ಮಾಡುವಂತೆಯೂ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) NTPC 2025-26 ನೇಮಕಾತಿ ಡ್ರೈವ್ಗಾಗಿ ಅಧಿಕೃತವಾಗಿ ಕಿರು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಒಟ್ಟು 8,875 ಹುದ್ದೆಗಳನ್ನು ಪ್ರಕಟಿಸಿದೆ. ಈ ರಾಷ್ಟ್ರವ್ಯಾಪಿ ನೇಮಕಾತಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಅಡಿಯಲ್ಲಿ ವಿವಿಧ ಭಾರತೀಯ ರೈಲ್ವೆ ವಲಯಗಳಲ್ಲಿ ಪದವಿ ಮತ್ತು ಪದವಿಪೂರ್ವ ಮಟ್ಟದ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. RRB NTPC 2025 ನೇಮಕಾತಿಯು ರೈಲ್ವೆ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಬಯಸುವ ಆಕಾಂಕ್ಷಿಗಳಿಗೆ ಮಹತ್ವದ ಅವಕಾಶವನ್ನು ನೀಡುತ್ತದೆ. ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್, ಕಮರ್ಷಿಯಲ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್, ಜೂನಿಯರ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರಾಫಿಕ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳು ಸೇರಿವೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು, ಕೌಶಲ್ಯ ಮೌಲ್ಯಮಾಪನಗಳು, ದಾಖಲೆ ಪರಿಶೀಲನೆಗಳು ಮತ್ತು ವೈದ್ಯಕೀಯ ಫಿಟ್ನೆಸ್ ಪರೀಕ್ಷೆಗಳನ್ನು ಒಳಗೊಂಡ ಬಹು-ಹಂತದ ನೇಮಕಾತಿ ಪ್ರಕ್ರಿಯೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪದವಿ ಮತ್ತು 10+2 ಅರ್ಹ ಅಭ್ಯರ್ಥಿಗಳಿಗೆ ಹುದ್ದೆಗಳು…
ನವದೆಹಲಿ : ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಮರ್ಥ್ಯವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಪ್ರಮುಖ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮುಂದಿನ ಮೂರು ವರ್ಷಗಳಲ್ಲಿ, 5,023 ಹೊಸ MBBS ಸೀಟುಗಳು ಮತ್ತು 5,000 PG ಸೀಟುಗಳನ್ನು ಸೇರಿಸಲಾಗುವುದು, ಇದು ದೇಶದ ಆರೋಗ್ಯ ರಕ್ಷಣಾ ಕಾರ್ಯಪಡೆಯನ್ನು ಬಲಪಡಿಸಲು ಮತ್ತು ಸಾವಿರಾರು ಮಹತ್ವಾಕಾಂಕ್ಷಿ ವೈದ್ಯರಿಗೆ ಭಾರತದಲ್ಲಿ ವೈದ್ಯಕೀಯ ವೃತ್ತಿಜೀವನವನ್ನು ಮುಂದುವರಿಸಲು ನಿರ್ಣಾಯಕ ಅವಕಾಶವನ್ನು ನೀಡುವ ಒಂದು ಪ್ರಮುಖ ಕ್ರಮವಾಗಿದೆ. 15,034 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾದ ಈ ಉಪಕ್ರಮವು, 2025-26 ರ ಕೇಂದ್ರ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ, ಮುಂದಿನ ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೇರಿಸುವ ಸರ್ಕಾರದ ವಿಶಾಲ ಗುರಿಯ ಭಾಗವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸುವ ಯೋಜನೆಗಳು ವೈದ್ಯರು ಮತ್ತು ತಜ್ಞರ ಲಭ್ಯತೆಯನ್ನು ಹೆಚ್ಚಿಸುವುದು, ಸೇವೆ ಸಲ್ಲಿಸದ ಪ್ರದೇಶಗಳಲ್ಲಿ ಗುಣಮಟ್ಟದ…
ಬೆಂಗಳೂರು : ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 50 ಸೇಇವಿ 2025, ದಿನಾಂಕ:30/08/2025 ಅನ್ನು ಈ ಹಿಂಬರಹದೊಂದಿಗೆ ಮಾಹಿತಿ ಮತ್ತು ಮುಂದಿನ ಸೂಕ್ತ ಕ್ರಮಕ್ಕಾಗಿ ಲಗತ್ತಿಸಿ ಕಳುಹಿಸಲಾಗಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಸ್ಥಳನಿಯುಕ್ತಿ ಆದೇಶ (Order of Posting) ಪಡೆಯದೆ, ಅಮಾನತ್ತಿನಲ್ಲಿರಿಸುವ ಪೂರ್ವದಲ್ಲಿ ಅವನು ಹೊಂದಿದ್ದ ಹುದ್ದೆಯ ಪ್ರಭಾರವನ್ನು ತಾನಾಗಿಯೇ ವಹಿಸಿಕೊಂಡಿರುವ/ವಹಿಸಿಕೊಳ್ಳುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿರುತ್ತವೆ. ಈ ಹಿನ್ನೆಲೆಯಲ್ಲಿ,…
ಯಾದಗಿರಿ : ಪತ್ನಿ ಮೇಲಿನ ಅನೈತಿಕ ಸಂಬಂಧದ ಶಂಕೆ ಯಿಂದ ಆಕ್ರೋಶಗೊಂಡಿದ್ದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿದೆ. ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ದುಗನೂರ, 4 ವರ್ಷದ ಮಗಳು ಸ್ವಾನಿ ಮತ್ತು 3 ವರ್ಷದ ಮಗ ಭಾರ್ಗವನನ್ನು ಹತ್ಯೆ ಮಾಡಿದ್ದಾನೆ. 8 ವರ್ಷದ ಹೇಮಂತ ಗಾಯಗೊಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಉದ್ದೇಶಿಸಲಾಗುತ್ತಿದ್ದು, ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳು: ಶ್ರಮಶಕ್ತಿ ಸಾಲದ ಯೋಜನೆ: ಈ ಯೋಜನೆಯಡಿ ರೂ.50 ಸಾವಿರಗಳ ಒಳಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು. ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನ/ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಫಲಾನುಭವಿಗಳಿಗೆ ಬ್ಯಾಂಕ್ ನಿಂದ ಸಾಲ ಮಂಜೂರಾತಿಯಾಗಿದ್ದಲ್ಲಿ, ನಿಗಮದಿಂದ ವಾಹನದ ಮೌಲ್ಯದ ಶೇ.50ರಷ್ಟು ಸಹಾಯಧನ ಗರಿಷ್ಠ ರೂ.3 ಲಕ್ಷ ನೀಡಲಾಗುವುದು. ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿಧ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು. ವೃತ್ತಿ ಪ್ರೋತ್ಸಾಹ ಯೋಜನೆ:…
ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕುಂದಗೋಳ ತಾಲ್ಲೂಕಿನಲ್ಲಿ 2006-07 ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು. 2006-07ನೇ ಸಾಲಿಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳಲ್ಲಿ 16 ಫಲಾನುಭವಿಗಳು ಪರಿಪಕ್ವ ಮೊತ್ತಕ್ಕಾಗಿ ಅರ್ಜಿ ಸಲ್ಲಿಸಿರುವುದಿಲ್ಲ. ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಅಳವಡಿಸಲು ಸಾಧ್ಯವಾಗದ ಕಾರಣ ಪರಿಗಣಿಸುವುದಿಲ್ಲ ಎಂದು ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.








