Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಪ್ರಶ್ನಿಸಿ ಎಸ್ ಐಟಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ. ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರಿಎ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಅರ್ಜಿ ಸಲ್ಲಿಸಿದ್ದು, ಇದಕೆ ಪ್ರತಿಕ್ರಿಯೆ ನೀಡಿರುವ ಕೋರ್ಟ್ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್ ತಿಳಿಸಿದೆ.
ಬೆಂಗಳೂರು : ಜೂನ್ 13 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾಗಿದ್ದು, ಸಿ.ಟಿ. ರವಿ ಸೇರಿ ಮೂವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು, ಈ ನಡುವೆ ಬಿಜೆಪಿ ತನ್ನ ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯಿಂದ ಸಿ.ಟಿ. ರವಿ, ರವಿಕುಮಾರ್ ಹಾಗೂ ಎಂ.ಜಿ. ಮುಳೆ ಅವರಿಗೆ ಟಿಕೆಟ್ ನೀಡಲಾಗಿದ್ದು, ನಾಳೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು 2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ: 30/06/2024.ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸದರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ತಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವ ಸ್ಥಳೀಯ ದಿನ…
ನವದೆಹಲಿ : ಪ್ರತಿ ವರ್ಗಕ್ಕೂ ಕೇಂದ್ರ ಸರ್ಕಾರವು ವಿಭಿನ್ನ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಮೂಲಕ, ಸರ್ಕಾರವು ಆರ್ಥಿಕವಾಗಿ ದುರ್ಬಲ ಜನರಿಗೆ ಸಹಾಯ ಮಾಡುತ್ತದೆ. ಇಂದಿನ ಯುಗದಲ್ಲಿ, ಯಾವುದೇ ರೋಗದ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರವು 2018 ರಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ, ಬಡವರು ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ. ಇಂದು ನಾವು ಈ ಸುದ್ದಿಯಲ್ಲಿ ಯೋಜನೆಯ ಲಾಭವನ್ನು ಹೇಗೆ ಪಡೆಯಬಹುದು? ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ ಎಷ್ಟು ಉಚಿತ ಚಿಕಿತ್ಸೆಯನ್ನು ಪಡೆಯಬಹುದು ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಗೋಲ್ಡನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ತೋರಿಸುವ ಮೂಲಕ, ಫಲಾನುಭವಿಗಳು ಪಟ್ಟಿ ಮಾಡಲಾದ ಆಸ್ಪತ್ರೆಗಳಲ್ಲಿ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಗೋಲ್ಡನ್ ಕಾರ್ಡ್ ದೇಶಾದ್ಯಂತ 13,000 ಕ್ಕೂ ಹೆಚ್ಚು ಸರ್ಕಾರಿ ಮತ್ತು…
ಚಿಕ್ಕೋಡಿ:ಚಾಲಕನಿಲ್ಲದ ಕಾರಣ ಸದಲಗಾದಿಂದ ಚಿಕ್ಕೋಡಿಗೆ 25 ಕಿ.ಮೀ ದೂರದವರೆಗೆ ಆಂಬ್ಯುಲೆನ್ಸ್ ಓಡಿಸಿದ ವ್ಯಕ್ತಿಯೊಬ್ಬ,ಗಾಯಗೊಂಡ ತಂದೆಯನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ಘಟನೆ ಶನಿವಾರ ನಡೆದಿದೆ. ಚಿಕ್ಕೋಡಿ ತಾಲೂಕಿನ ಜನವಾಡದ ಸಿದ್ದಪ್ಪ ಪೂಜಾರಿ (48) ಎಂಬುವರಿಗೆ ಗಾಯಗಳಾಗಿದ್ದು, ಅವರ ಕಿವಿಯನ್ನು ಕತ್ತರಿಸಲಾಗಿದೆ. ಅವರ ಮಗ ಮಾಳಪ್ಪ ಅವರನ್ನು ಬೈಕ್ ನಲ್ಲಿ ಸದಲಗಾಕ್ಕೆ ಕರೆತಂದರು, ಅಲ್ಲಿ ಪ್ರಥಮ ಚಿಕಿತ್ಸೆಯ ನಂತರ, ಪೂಜಾರಿಯನ್ನು ಚಿಕಿತ್ಸೆಗಾಗಿ ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದರು. ಆಂಬ್ಯುಲೆನ್ಸ್ ನಲ್ಲಿ ಚಾಲಕ ಇಲ್ಲದ ಕಾರಣ ಆಂಬ್ಯುಲೆನ್ಸ್ ಓಡಿಸಲು ಅವಕಾಶ ನೀಡುವಂತೆ ಮಾಳಪ್ಪ ವೈದ್ಯರನ್ನು ವಿನಂತಿಸಿದರು. ವೈದ್ಯರು ಒಪ್ಪಿದರು ಮತ್ತು ಅವರು ೨೫ ಕಿ.ಮೀ ದೂರದಲ್ಲಿರುವ ಚಿಕ್ಕೋಡಿಗೆ ತೆರಳಿದರು. ನಂತರ ಪೂಜಾರಿಯನ್ನು ಬಿಮ್ಸ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಪೂಜಾರಿ ತನ್ನ ಅತ್ತೆ-ಮಾವನ ಒಡೆತನದ ಕೃಷಿ ಭೂಮಿಯಲ್ಲಿ ತನ್ನ ಹೆಂಡತಿಗೆ ಪಾಲು ಕೇಳಿದ ನಂತರ ಜಗಳ ಪ್ರಾರಂಭವಾಯಿತು. ಅವರ ಪತ್ನಿಯ ಸಹೋದರರಾದ ಶಿವಪ್ಪ ನಿಂಗಗೋಳ ಮತ್ತು ಶಂಕರ ನಿಂಗಗೋಳ ಅವರು ಚಾಕುವಿನಿಂದ ಕಿವಿಯನ್ನು ಕತ್ತರಿಸಿದ್ದಾರೆ.…
ಬೆಂಗಳೂರು : 2024 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಉಲ್ಲೇಖ-2 ರಲ್ಲಿ ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಜೂನ್ 3 ರವರೆಗೆ ವಿಸ್ತರಿಸಲಾಗಿತ್ತು.
ಹಾಸನ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಶನಿವಾರ ತಿಳಿಸಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಹಾಸನ ಸಂಸದರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಸೋಲಿಸಲಿದ್ದಾರೆ. ಹಾಸನದಲ್ಲಿ ಎರಡನೇ ಹಂತದ ಮತದಾನ ನಡೆದಿದ್ದು, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ಹಗರಣದಲ್ಲಿ ಸಿಲುಕಿದ್ದಾರೆ. 2004 ರಿಂದ ಹಾಸನವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿರುವ ಜೆಡಿಎಸ್, ಪ್ರಾದೇಶಿಕ ಅಸಮತೋಲನ ಮತ್ತು ಈಡೇರಿಸದ ಭರವಸೆಗಳ ಬಗ್ಗೆ, ವಿಶೇಷವಾಗಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಕಳವಳಗಳನ್ನು ಎದುರಿಸುತ್ತಿದೆ. 2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಬಿಜೆಪಿಯ ಎ.ಮಂಜು ಹಾಸನ್ ಅವರನ್ನು 1.4 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರಲಿಲ್ಲ. ವಿಶೇಷವೆಂದರೆ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು…
ಬೆಂಗಳೂರು : 2024-25ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.121.00 ಕೋಟಿಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆ ಏತರಿಸಬೇಕಾಗಿದೆ. ಷರತ್ತುಗಳು:- 1. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗೆ ವಹಿಸುವುದು. 2. ಒಂದು ಜೊತೆ ಕಪ್ಪು ಬಣ್ಣದ ಶೂ ಗಳನ್ನು ಹಾಗೂ ಎರಡು ಜೊತೆ ಬಿಳಿ ಬಣ್ಣದ…
ನವದೆಹಲಿ : ದೇಶಾದ್ಯಂತ ತಾಪಮಾನವು ಮುಂದುವರಿಯುತ್ತಿರುವುದರಿಂದ, ಅನೇಕ ಜನರು ಪರಿಹಾರಕ್ಕಾಗಿ ಜ್ಯೂಸ್ ಮತ್ತು ತಂಪು ಪಾನೀಯಗಳನ್ನು ಸೇವಿಸುತ್ತಿದ್ದಾರೆ. ಕಬ್ಬಿನ ರಸ ಸೇರಿದಂತೆ ವಿವಿಧ ಹಣ್ಣಿನ ರಸಗಳನ್ನು ಸೇವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಚರ ಸೇರಿದಂತೆ ಹೆಚ್ಚಿನ ಸಕ್ಕರೆ ರಸಗಳು ಮತ್ತು ತಂಪು ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು. ಈ ನಿಟ್ಟಿನಲ್ಲಿ, ಐಸಿಎಂಆರ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (ಎನ್ಐಎನ್) ಸಹಯೋಗದೊಂದಿಗೆ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು 17 ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕಬ್ಬಿನ ರಸದಲ್ಲಿ ಸಕ್ಕರೆ ಅಂಶವು ಹೆಚ್ಚಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಾದಷ್ಟು ಕಡಿಮೆ ತೆಗೆದುಕೊಳ್ಳಬೇಕು ಎಂದು ಐಸಿಎಂಆರ್ ಹೇಳಿದೆ. ಅಷ್ಟೇ ಅಲ್ಲ, ಆರೋಗ್ಯಕ್ಕೆ ಹಾನಿಕಾರಕವಾದ ತಂಪು ಪಾನೀಯಗಳು, ಸಕ್ಕರೆ ಸೇರಿಸಿದ ಹಣ್ಣಿನ ರಸಗಳು, ಚಹಾ ಮತ್ತು ಕಾಫಿಯಿಂದ ದೂರವಿರಲು ಸೂಚಿಸಲಾಗಿದೆ. ಹಣ್ಣುಗಳ ಜೊತೆಗೆ ಆರೋಗ್ಯಕರ ಪರ್ಯಾಯಗಳನ್ನು ಶಿಫಾರಸು ಮಾಡಲಾಗಿದೆ. ಇದು ಸಮತೋಲಿತ ಆಹಾರ ಮತ್ತು ಉತ್ತಮ ಆಹಾರ ಪದ್ಧತಿಯನ್ನು…
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಎಸ್ ಐಟಿ ಅಧಿಕಾರಿಗಳ ವಶದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಸದ್ಯ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣರನ್ನು ಮಹಿಳಾ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಎಸ್ ಐಟಿ ಮಹಿಳಾ ಅಧಿಕಾರಿಗಳ ಹೆಗಲಿಗೆ ವಹಿಸಲಾಗಿದ್ದು, ಪ್ರಜ್ವಲ್ ರೇವಣ್ಣರನ್ನ SIT ಕಚೇರಿಗೆ ಜೀಪ್ನಲ್ಲಿ ಕರೆತಂದಿದ್ದು ಮಹಿಳಾ ಅಧಿಕಾರಿಗಳು. ಪ್ರಜ್ವಲ್ ರೇವಣ್ಣ ಅವರು ಇದ್ದ ಜೀಪ್ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ ಐವರು ಮಹಿಳಾ ಅಧಿಕಾರಿಗಳೆ ಇದ್ದರು. ಎಸ್‌ಐಟಿ ಅಧಿಕಾರಿಗಳು ಮೂವರು ಮಹಿಳಾ ಪೊಲೀಸ್ ಪೇದೆಗಳ ಮೂಲಕ ಪ್ರಜ್ವಲ್ ಅವರನ್ನ ವಶಕ್ಕೆ ಪಡೆದಿದ್ದರು. ಇದೀಗ ಮಹಿಳಾ ಅಧಿಕಾರಿಗಳೇ ಪ್ರಜ್ವಲ್ ರೇವಣ್ಣ ವಿಚಾರಣೆ ನಡೆಸಲಾಗುತ್ತಿದೆ. ಎಸ್.ಪಿ. ಸುಮನ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಸಾಕ್ಷ್ಯಾಧಾರಗಳ ಮುಂದಿಟ್ಟುಕೊಂಡು ಪ್ರಶ್ನೆಗಳನ್ನು ಕೇಳುವುದು, ಆ ಸ್ಟೇಟ್ಮೆಂಟ್ ಗಳನ್ನು ವಿಡಿಯೋ ರೆಕಾರ್ಡ್ ಮಾಡುವುದು, ಎವಿಡೆನ್ಸ್ ಪರಿಶೀಲನೆ ಎಲ್ಲವೂ ಮಹಿಳಾ ಅಧಿಕಾರಿಗಳೇ ಮಾಡುತ್ತಿದ್ದಾರೆ.