Author: kannadanewsnow57

ಬಾಗಲಕೋಟೆ : ಬಾಗಲಕೋಟೆಯ ಬನಹಟ್ಟಿಯಲ್ಲಿ ಭೀಕರ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬನಹಟ್ಟಿಯಲ್ಲಿರುವ ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಲೀಕ್ ಆಗಿ ಸ್ಪೋಟಗೊಂಡಿದ್ದು, ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರೀ ದುರಂತವೊಂದು ತಪ್ಪಿದೆ. ಅವಘಡದಲ್ಲಿ ಹೆಡ್ ಕಾನ್ಸ್ ಟೇಬಲ್ ರವೀಂದ್ರ ದಳವಾಯಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಲಿಂಡರ್ ಸ್ಪೋಟದಿಂದ ಮನೆಯಲ್ಲಿರುವ ಸಾವಿರಾರು ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

Read More

ಹೈದರಾಬಾದ್ : ಮಾನವ ಅಂಗಾಂಗ ಕಸಿಯಲ್ಲಿ ಅಕ್ರಮಗಳನ್ನು ಮಾಡುವವರ ವಿರುದ್ಧ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ನಿಯಮಗಳನ್ನು ಉಲ್ಲಂಘಿಸುವ ಅಂಗಾಂಗ ಕಸಿ ಮಾಡಿಸಿಕೊಂಡರೆ ಭಾರಿ ದಂಡ ಮತ್ತು ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ನಿಟ್ಟಿನಲ್ಲಿ ತೆಲಂಗಾಣ ಸರ್ಕಾರವು ಕೇಂದ್ರ ಮಾನವ ಅಂಗ ಮತ್ತು ಅಂಗಾಂಶ ಕಸಿ ಕಾಯ್ದೆ-2011 ಅನ್ನು ಅಳವಡಿಸಿಕೊಳ್ಳಲಿದೆ. ಈ ಸಂಬಂಧ ಸೋಮವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು. ಈ ಕಾನೂನನ್ನು ಅಳವಡಿಸಿಕೊಳ್ಳಲು ರಾಜ್ಯ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ. ವಿಧಾನಸಭೆಯ ಅನುಮೋದನೆಯ ನಂತರ, ಅದನ್ನು ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ. ರಾಜ್ಯಪಾಲರು ಅನುಮೋದನೆ ನೀಡಿದ ನಂತರ ಗೆಜೆಟ್ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಇದರರ್ಥ ಅಂಗಾಂಗ ಕಸಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ಅಕ್ರಮಗಳನ್ನು ಮಾಡಿದರೆ ಶಿಕ್ಷೆಗಳು ತುಂಬಾ ಕಠಿಣವಾಗಿರುತ್ತವೆ. ಅಂಗಗಳ ಲಭ್ಯತೆ ಮತ್ತು ಸರ್ಕಾರದ ಮೇಲ್ವಿಚಾರಣೆಯೂ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರಿಗೆ ಮಾತ್ರ ಸೀಮಿತವಾಗಿದ್ದ ಜೀವಂತ ಅಂಗಾಂಗ ದಾನದ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು. ಅಜ್ಜಿಯರು ತಮ್ಮ ಮೊಮ್ಮಕ್ಕಳಿಗೆ ಅಂಗಾಂಗಗಳನ್ನು ದಾನ ಮಾಡುವ ಅವಕಾಶವೂ ಇರುತ್ತದೆ.…

Read More

ಬೆಂಗಳೂರು : ಮಾರ್ಚ್ 27 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 27.03.2025 ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 7 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

Read More

ಸಹಾನಪುರ : ಪತ್ನಿ ಮೇಲೆ ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಕ್ಷಣಾರ್ಧದಲ್ಲಿ ತನ್ನ ಕುಟುಂಬವನ್ನೇ ಕೊಂದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಯೋಗೇಶ್ ರೋಹಿಲಾ ತಮ್ಮ ಪತ್ನಿ ಮತ್ತು ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಮೂವುರ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು, ನಂತರ ಅವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಈ ಘಟನೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಪ್ರಸ್ತುತ, ಪೊಲೀಸರು ಆರೋಪಿ ಯೋಗೇಶ್ ರೋಹಿಲಾನನ್ನು ಸ್ಥಳದಿಂದಲೇ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರು ಕೆಲವು ದಿನಗಳಿಂದ ಮಾನಸಿಕವಾಗಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೌದು, ಮನೆ ಪಾಯ ಹಾಕುವಾಗ ಚಿನ್ನದ ನಿಧಿ ಸಿಕ್ಕಿದೆ, ಚಿನ್ನದ ಬೆಲೆಗಿಂತ ಅರ್ಧ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಆರೋಪಿಗಳು ಮರದ ಹಲಗೆ ಹಾಗೂ ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ನಂತರ ನಕಲಿ ಚಿನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಚಿನ್ನ ತೆಗೆದುಕೊಳ್ಳು ಬರುವಂತೆ ಹೇಳಿ ಪದೇ ಪದೇ ಲೋಕೇಶನ್ ಚೇಂಜ್ ಮಾಡುತ್ತಿದ್ದರು. ಮಾಹಿತಿಯ ಮೇರೆಗೆ ಕೋರಮಂಗಲದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ರಬಿಕುಲ್ ಇಸ್ಲಾಂ, ಇದೀಶ್ ಅಲಿ, ಅನ್ವರ್ ಹುಸೇನ್ ಬಂಧಿತ ಆರೋಪಿಗಳು. ಸದ್ಯ ಮೂವರನ್ನು ಬಂಧಿಸಿದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳುರಿನ ಚಂದ್ರಾಲೇಔಟ್ ನಲ್ಲಿ ಮಾರ್ಚ್ 17 ರ ರಾತ್ರಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟ್ಟು ಬಿಡಿ ಎಂದರೂ ಬಿಡದೇ ಮನಸೋಇಚ್ಛೆ ಹಲ್ಲೆ ಮಾಡಲಾಗಿದೆ. ಕಟ್ಟಿಗೆಗಳಿಂದ ಇಬ್ಬರು ಬಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದಾಗಿ ಬಾಲಕರ ಕೈ, ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ. ಸದ್ಯ ಗಾಯಾಳು ಬಾಲಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಂದ್ರಾಲೇಔಟ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಜಬಲ್ಪುರ್ : ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಪ್ರಾಪ್ತ ಪ್ರೇಮಿಗಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಅಪ್ರಾಪ್ತ ಪ್ರೇಮಿಗಳು ಉತ್ತರ ಪ್ರದೇಶದಿಂದ ಬಂದು ಜಬಲ್ಪುರದ ಪನಗರ ಬ್ಲಾಕ್ ಬರೋಡಾ ಗ್ರಾಮದಲ್ಲಿ ವಾಸವಾಗಿದ್ದರು. ಪ್ರಸ್ತುತ, ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಪ್ರಾಪ್ತ ಪ್ರೇಮಿಗಳಿಬ್ಬರೂ ಉತ್ತರ ಪ್ರದೇಶದ ಕಾನ್ಪುರ ಗ್ರಾಮೀಣ ಪ್ರದೇಶದಿಂದ ಓಡಿಹೋಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಭಾನುವಾರ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಬಂದ ತಕ್ಷಣ, ಪನಗರ ಪೊಲೀಸ್ ಠಾಣೆ ಸ್ಥಳಕ್ಕೆ ತಲುಪಿ, ಮೃತ ದೇಹದ ಪಂಚನಾಮವನ್ನು ಸಿದ್ಧಪಡಿಸಿದ ನಂತರ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಸ್ತುತ, ಪೊಲೀಸರಿಗೆ ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಪೊಲೀಸರ ಮಾಹಿತಿಯ ಮೇರೆಗೆ, ಮೃತರ ಕುಟುಂಬ ಸದಸ್ಯರು ಸಹ ಜಬಲ್ಪುರವನ್ನು ತಲುಪಿದ್ದಾರೆ. ಹುಡುಗನ ವಯಸ್ಸು 17 ವರ್ಷ ಮತ್ತು ಹುಡುಗಿಯ ವಯಸ್ಸು 16 ವರ್ಷ…

Read More

ಚನ್ನಗಿರಿ: ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ನೀತಿ ವಿಜ್ಞಾನ ಕಲಿಕೆ ಅಗತ್ಯವಿದೆ. ಒಂದರಿಂದ 10ನೇ ತರಗತಿಯವರೆಗೆ ನೀತಿ ವಿಜ್ಞಾನ ಕಲಿಸುವ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ತರಲಾಗುವುದು. ವಾರಕ್ಕೆ ಎರಡು ದಿನ ಈ ವಿಷಯ ಕಲಿಸಲಿದ್ದು, ಎರಡು ದಿನ ಶಿಕ್ಷಣ, ಎರಡು ದಿನ ಕಲಿಕೆಯ ವಿಷಯ ತರಗತಿಗಳು ಇರಲಿವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ಎಂದರು. ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು,…

Read More

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಂಗಳೂರು : ರೀಲ್ಸ್ ಗಾಗಿ ಲಾಂಗ್‌ ಝಳಪಿಸಿದ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ಹಾಗೂ ರಜತ್‌ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೌದು, ಬಿಗ್ ಬಾಸ್ 10ರ ಸ್ಪರ್ಧಿ ವಿನಯ್ ಗೌಡ ಹಾಗೂ ಬಿಗ್ ಬಾಸ್ 11ರ ಸ್ಪರ್ಧಿ ರಜತ್ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ಅನ್ನು ದಾಖಲು ಮಾಡಿಕೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ಇಬ್ಬರೂ ರೀಲ್ಸ್ ಮಾಡಿದ್ದರು. ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಬಿಗ್ ಬಾಸ್ ಸ್ಪರ್ಧಿಗಳು ಹೀಗೆ ರೀಲ್ಸ್ ಮಾಡುವುದಕ್ಕೆ ಹೋಗಿ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ವಿನಯ್ ಗೌಡ ಹಾಗೂ ರಜತ್ ಇಬ್ಬರೂ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Read More