Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳ ಜೊತೆಗೆ ಆಹಾರ ಧಾನ್ಯಗಳನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿ ಬೇಕು. ಪಡಿತರ ಚೀಟಿ ಇಲ್ಲದೆ, ಯಾವುದೇ ಪಡಿತರ ವಿತರಕರು ಪಡಿತರ ವಿತರಣೆ ಮಾಡುವುದಿಲ್ಲ. ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿಯನ್ನು ಕಾರ್ಡ್ನೊಂದಿಗೆ ಮಾಡುವುದು ಸಹ ಅಗತ್ಯವಾಗಿದೆ. ಅದು ಇಲ್ಲದೆ, ನೀವು ಉಚಿತ ಪಡಿತರವನ್ನು ಪಡೆಯುತ್ತೀರಾ ಅಥವಾ ಇಲ್ಲವೇ? ಪಡಿತರ ಚೀಟಿಯ ಇ-ಕೆವೈಸಿಯನ್ನು ನೀವು ಎಲ್ಲಿ ಪಡೆಯಬಹುದು? ಅದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ನೀವು ಪಡಿತರ ಚೀಟಿಯ ಮೂಲಕ ಉಚಿತ ಪಡಿತರ ಸೌಲಭ್ಯವನ್ನು ಪಡೆಯುತ್ತಿದ್ದರೆ ತಪ್ಪದೇ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆದರೆ ಪಡಿತರ ಚೀಟಿಗಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ನೀವು ಇನ್ನೂ ಪೂರ್ಣಗೊಳಿಸದಿದ್ದರೆ, ಈ ಕೆಲಸವನ್ನು ಶೀಘ್ರದಲ್ಲೇ ಮಾಡಿ. ನಿಯಮದ ಪ್ರಕಾರ, ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅವಶ್ಯಕ. ಇದಕ್ಕಾಗಿ, ಎಲ್ಲಾ ಸದಸ್ಯರ ಬೆರಳಚ್ಚು ಪರಿಶೀಲನೆ ಅವಶ್ಯಕ. ಪಡಿತರ ಚೀಟಿಯಲ್ಲಿ ಹೆಸರು ಇರುವ ಸದಸ್ಯರ ಇ-ಕೆವೈಸಿ ಹೊಂದಿರುವುದು ಅವಶ್ಯಕ. ಸದಸ್ಯರ ಇ-ಕೆವೈಸಿ ಮಾಡದಿದ್ದರೆ,…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾದ ಬಳಿಕ ನಟ ದರ್ಶನ್ ಅವರು ಪವಿತ್ರಾಗೌಡ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಬೆನ್ನಲ್ಲೇ ಕೋಪಗೊಂಡಿದ್ದ ನಟ ದರ್ಶನ್ ಅವರು, ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾದ ಪವಿತ್ರಾಗೌಡ ಆರ್.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎನ್ನಲಾಗಿದೆ. ನಟಿ ಪವಿತ್ರ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.
ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿಯನ್ನು ರಾಜ್ಯದ ಏಕೈಕ ರಾಜಧಾನಿಯಾಗಿ ಘೋಷಿಸಿದರು. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್ಡಿಎ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಶಾಸಕರ ಜಂಟಿ ಸಭೆಯನ್ನುದ್ದೇಶಿಸಿ ನಾಯ್ಡು ಈ ಘೋಷಣೆ ಮಾಡಿದ್ದಾರೆ. “ನಮ್ಮ ಸರ್ಕಾರದಲ್ಲಿ, ಮೂರು ರಾಜಧಾನಿಗಳ ಸೋಗಿನಲ್ಲಿ ಯಾವುದೇ ಆಟಗಳು ನಡೆಯುವುದಿಲ್ಲ. ನಮ್ಮ ರಾಜಧಾನಿ ಅಮರಾವತಿ. ಅಮರಾವತಿ ರಾಜಧಾನಿಯಾಗಿದೆ” ಎಂದು ನಾಯ್ಡು ಪ್ರತಿಪಾದಿಸಿದರು. 2014 ಮತ್ತು 2019 ರ ನಡುವೆ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ, ಅಮರಾವತಿಯನ್ನು ರಾಜಧಾನಿಯಾಗಿ ರೂಪಿಸುವ ಕಲ್ಪನೆಯನ್ನು ಅವರು ಹುಟ್ಟುಹಾಕಿದ್ದರು. ಆದಾಗ್ಯೂ, 2019 ರಲ್ಲಿ ಟಿಡಿಪಿ ಅಧಿಕಾರವನ್ನು ಕಳೆದುಕೊಂಡಾಗ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಭರ್ಜರಿ ಗೆಲುವು ಸಾಧಿಸಿದಾಗ ನಾಯ್ಡು ಅವರ ಈ ಆಲೋಜನೆಗೆ ಹಿನ್ನಡೆಯಾಯಿತು. ಇದೀಗ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಮೈತ್ರಿಕೂಟವು ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ರಾಜ್ಯದ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹3,000 ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಳೆಯಾಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದ್ದ 3,457 ಕೋಟಿ ರೂ. ಬರಪರಿಹಾರ ಹಣವನ್ನು 27.5ಲಕ್ಷ ರೈತರಿಗೆ ಹಂಚಿಕ ಬಳಿಕ ಉಳಿದಿರುವ 808ಕೋಟಿ ರೂ. ಹಣದಲ್ಲಿ ಹೆಚ್ಚುರಿಯಾಗಿ ಏಳು ಲಕ್ಷ ರೈತರಿಗೆ ಬರಪರಿಹಾರ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಇನ್ನು ಎನ್ ಡಿಆರ್ ಎಫ್ ಅಡಿ ರಾಜ್ಯಕ್ಕೆ ಹೆಚ್ಚುರಿಯಾಗಿ ಹಂಚಿಕೆಯಾಗಿರುವ 232 ಕೋಟಿ ರೂ.ಗಳಿಗೆ ರಾಜ್ಯ ಸರ್ಕಾರ ಇನ್ನೂ 232 ಕೋಟಿ ರೂ. ಸೇರಿಸಿ 17ಲಕ್ಷ ರೈತ…
ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನಾಳೆಯೇ ಕೊನೆಯ ದಿನವಾಗಿದ್ದು, ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ. • ನಿಮ್ಮವಾಹನ ತಯಾರಕರನ್ನು…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ -ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ. -ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್,…
ಬೆಂಗಳೂರು : ದಿನಾಂಕ:12-06-2024 ರಂದು “ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ” ವನ್ನು ಆಚರಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ. ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (LO) ಪ್ರತಿ ವರ್ಷ ಜೂನ್-12ನೇ ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಎಂದು 2002 ರಲ್ಲಿ ಘೋಷಣೆ ಮಾಡಿರುತ್ತದೆ ಹಾಗೂ ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ತಾರೀಖಿನ ದಿನವನ್ನು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ವನ್ನಾಗಿ ಆಚರಿಸುತ್ತಾ ಬಂದಿರುತ್ತವೆ. ಅದರಂತೆ ರಾಜ್ಯದಲ್ಲಿ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಮಟ್ಟದ ವ್ಯಾಪಕ ಪ್ರಚಾರಕ್ಕಾಗಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಂದ, ಖಾಸಗಿ ವಲಯದ ನೌಕರರಿಂದ, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಬಾಲಕಾರ್ಮಿಕ ಕಿಶೋರ ಕಾರ್ಮಿಕರಿಂದ ದುಡಿಮೆ ಬಯಸುವುದಿಲ್ಲವೆಂಬ ಪ್ರಮಾಣವಚನ ಸ್ವೀಕರಿಸುವ ಅಗತ್ಯತೆ ಇರುತ್ತದೆ. ಸರ್ಕಾರದ ಎಲ್ಲಾ ಇಲಾಖೆ / ನಿಗಮ /…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ನಟ ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿಯನ್ನು ಹೇಳಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ವೇಳೆ ನಾನು ಅಲ್ಲಿ ಇರಲಿಲ್ಲ. ನಾನು ಬುದ್ಧಿವಾದ ಹೇಳಿ ಹೋಗಿದ್ದೆ. ಆದರೆ ನನ್ನ ಜೊತೆಗಿದ್ದವರು ಹಲ್ಲೆ ಮಾಡಿದ್ದಾರೆ. ಆದರೆ ಪೊಲೀಸ್ ತನಿಖೆಯಲ್ಲಿ ದರ್ಶನ್ ಅಲ್ಲಿದ್ದರು ಎನ್ನಲಾಗಿದೆ ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ಬೆಂಗಳೂರು : ಸುಳ್ಳು ಸುದ್ದಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿಯ ಸತ್ಯಾಸತ್ಯತೆ ತಿಳಿಯಲು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಬಂದ ಸುದ್ದಿಗಳನ್ನು ಈ ಲಿಂಕ್ ನಲ್ಲಿ ಹಂಚಿಕೊಳ್ಳುವ ಮೂಲಕ ನಿಖರ ಮಾಹಿತಿ ತಿಳಿದುಕೊಳ್ಳಬಹುದು. ಹೌದು, ರಾಜ್ಯ ಸರ್ಕಾರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಸತ್ಯಾಸತ್ಯತೆ ತಿಳಿಯಯಲು ಹೊಸದಾಗಿ ವೆಬ್ ಸೈಟ್ ವೊಂದನ್ನು ಸಿದ್ದಪಡಿಸಿದ್ದು, ಇದರ ಮೂಲಕ ನೀವು ಮಾಹಿತಿಯ ಸತ್ಯಾಸತ್ಯತೆ ತಿಳಿಯಬಹುದಾಗಿದೆ. ಹಾಗಿದ್ದಲ್ಲಿ ವಿಡಿಯೋ/ಚಿತ್ರ/ಪೋಸ್ಟ್ ಲಿಂಕ್ ಅನ್ನು https://satya.karnataka.gov.in/ ಜೊತೆ ಹಂಚಿಕೊಳ್ಳಿ. ಪರಿಶೀಲಿಸಿ, ನಿಖರ ಮಾಹಿತಿಯನ್ನು ತಿಳಿದುಕೊಳ್ಳಿ. ಸಾಮಾಜಿಕ ಜಾಲತಾಣಗಳ ಮೂಲಕ ಬಂದ ಸುದ್ದಿಗಳನ್ನು ನಂಬದಿರಿ, ನಂಬಿ ಮೋಸ ಹೋಗದಿರಿ. ಸತ್ಯ ಶೋಧನೆಯ ನಿಖರ ಮಾಹಿತಿಗಾಗಿ sathya.karnataka.gov.in ವೆಬ್ತಾಣಕ್ಕೆ ಭೇಟಿ ನೀಡಿ.
ಬೆಂಗಳೂರು:ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ (ಬಿಬಿಪಿ) ಪ್ರಾಣಿ ಆರೈಕೆಯಲ್ಲಿ ಡಿಪ್ಲೊಮಾ ಕೋರ್ಸ್ ನೀಡುವ ಪ್ರಸ್ತಾಪವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಪರಿಗಣಿಸುತ್ತಿದೆ. ಪಶುಸಂಗೋಪನೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಕೋರ್ಸ್ ಆರಂಭಿಸಲು ಸಚಿವ ಈಶ್ವರ ಖಂಡ್ರೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಬಿಬಿಪಿ ಮತ್ತು ಬೆಂಗಳೂರು ಲೈಫ್ ಸೈನ್ಸಸ್ ಎಜುಕೇಶನ್ ಟ್ರಸ್ಟ್ ಜಂಟಿಯಾಗಿ ನೀಡಲಿರುವ ಈ ಕೋರ್ಸ್ ಅನ್ನು ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಮಾನ್ಯತೆ ನೀಡಲಿದೆ. ಡಿಪ್ಲೊಮಾ ಪಡೆದವರಿಗೆ ಉದ್ಯೋಗ ನೀಡಲಾಗುವುದು ಎಂದು ಖಂಡ್ರೆ ಹೇಳಿದರು. ಪಠ್ಯಕ್ರಮ ಮತ್ತು ಪ್ರಾಯೋಗಿಕ ಪಾಠಗಳನ್ನು ಕೋರ್ಸ್ ಪೂರ್ಣಗೊಳಿಸಿದವರಿಗೆ ಉದ್ಯೋಗ ಪಡೆಯಲು ಸಾಧ್ಯವಾಗುವಂತೆ ರೂಪಿಸಬೇಕು ಎಂದು ಅವರು ಹೇಳಿದರು, ವಿವಿಧ ಅಂಶಗಳನ್ನು ಪರಿಶೀಲಿಸಿ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾಣಿಗಳ ವೈಜ್ಞಾನಿಕ ಆರೈಕೆ ಮತ್ತು ನಿರ್ವಹಣೆಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈ ಕೋರ್ಸ್ ಅನ್ನು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಪ್ಲೊಮಾ ಪಡೆದವರನ್ನು ಮೃಗಾಲಯಗಳು ಮತ್ತು ಪ್ರಾಣಿ ಪುನರ್ವಸತಿ ಕೇಂದ್ರಗಳು ಅಥವಾ ಖಾಸಗಿ…