Author: kannadanewsnow57

ಬೆಂಗಳೂರು : 2025-26ನೇ ಸಾಲಿನ 1 ರಿಂದ 10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ ಕುರಿತು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ SATS ಮುಖಾಂತರ ಆನ್‌ಲೈನ್‌ನಲ್ಲಿ ಶಾಲೆಗಳಿಂದ ಸಲ್ಲಿಕೆಯಾಗಿರುವ 1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು ಹಾಗೂ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಭೌತಿಕವಾಗಿ ಸಲ್ಲಿಕೆಯಾಗಿರುವ ಅರೇಬಿಕ್ ಪಠ್ಯಪುಸ್ತಕಗಳ ಬೇಡಿಕೆಯನ್ವಯ ಮಾರಾಟ ಪಠ್ಯಪುಸ್ತಕಗಳನ್ನು ಮುದ್ರಿಸಿ ಬ್ಲಾಕ್ ಹಂತಕ್ಕೆ ಸರಬರಾಜು ಮಾಡಲು ಅರ್ಹ ಖಾಸಗಿ ಮುದ್ರಕರುಗಳಿಗೆ ಕಾರ್ಯಾದೇಶವನ್ನು ಜಾರಿಮಾಡಲಾಗಿರುತ್ತದೆ. ತರಗತಿವಾರು ಹಾಗೂ ಶೀರ್ಷಿಕವಾರು ಪಠ್ಯಪುಸ್ತಕಗಳ ಮಾರಾಟ ಬೆಲೆಯನ್ನು ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಿದೆ. ನಿಗದಿಪಡಿಸಿರುವ ದರದ ಪ್ರಕಾರ ಆಯಾ ಮಾರಾಟ ಪಠ್ಯಪುಸ್ತಕದಲ್ಲಿ ದರವನ್ನು ಮುದ್ರಿಸಲು ಸಂಬಂಧಿಸಿದ ಮುದ್ರಕರಿಗೆ ತಿಳಿಸಿದೆ ಹಾಗೂ ಈ ಕಛೇರಿವತಿಯಿಂದ ನೀಡಲಾಗುವ ಸುತ್ತೋಲೆಯಂತೆ ಪಠ್ಯಪುಸ್ತಕಗಳನ್ನು ವಿತರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳಿಗೆ ಸೂಚಿಸಿದೆ.

Read More

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ(01)ರ ಏಕಕಡತದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿ 22 ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಹಾಗೂ 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸಂಸ್ಥೆಗಳಲ್ಲಿ ಒಟ್ಟಾರೆ 508 ಸೂಪರ್ ಸ್ಪೆಷಾಲಿಟಿ ಹುದ್ದೆಗಳು ಮಂಜೂರಾಗಿದ್ದು, ಮಂಜೂರಾದ ಹುದ್ದೆಗಳಿಗೆ ಎದುರಾಗಿ 232 ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರುಗಳು ಕರ್ತವ್ಯ ನಿರ್ವಹಿಸುತ್ತಿದ್ದು, 276 ಸೂಪರ್ ಸ್ಪೆಷಾಲಿಟಿ ವೈದ್ಯರ ಹುದ್ದೆಗಳು ಖಾಲಿಯಿರುತ್ತವೆ ಎಂದು, ರಾಜ್ಯ ಸರ್ಕಾರದ ನೀತಿಯಂತ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ನಿವೃತ್ತಿ ವಯಸ್ಸು 60 ಆಗಿರುತ್ತದೆ. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ಕೊರತೆಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧನೆ ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಂದರೆಯಾಗುತ್ತಿರುವುದರಿಂದ, ಸದರಿ ಸೂಪ‌ರ್ ಸ್ಪೆಷಾಲಿಟಿ ವೈದ್ಯರುಗಳ ವಯೋ ನಿವೃತ್ತಿ ವಯಸ್ಸನ್ನು 60ರಿಂದ 65 ವರ್ಷಕ್ಕೆ ಹೆಚ್ಚಿಸುವಂತೆ…

Read More

ನವದೆಹಲಿ : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ. 19 ರ ಇಂದು ಕೊನೆಯ ದಿನವಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ಹಲವಾರು ವಲಯ ರೈಲ್ವೆಗಳಲ್ಲಿ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 9,970 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಪದವಿ ಪಡೆದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ/ಪದವಿ ಹೊಂದಿರಬೇಕು. ಅಭ್ಯರ್ಥಿಗಳು 18 ರಿಂದ 30 ವರ್ಷ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳಿಗೆ ಸೇರಿದವರಿಗೆ ಸಡಿಲಿಕೆ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಸಿಬಿಟಿ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ರೂ. ಪ್ರತಿ ತಿಂಗಳು. ಸಂಬಳ 19,900 ಆಗಿರುತ್ತದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಪಾವತಿಸಬೇಕು. ಎಸ್‌ಸಿ,…

Read More

ನವದೆಹಲಿ : 2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21, 2025 ರಿಂದ ಇಡೀ ದೇಶದಲ್ಲಿ ಜಾರಿಗೆ ಬರಲಿದೆ. ಈ ಬದಲಾವಣೆಗಳ ನಂತರ, ಅನೇಕ ಜನರಿಗೆ ಉಚಿತ ಪಡಿತರ ಸೌಲಭ್ಯವನ್ನು ನಿಲ್ಲಿಸಬಹುದು. ವಿಶೇಷವಾಗಿ ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗಿಂತ ಹೆಚ್ಚಿನ ಆದಾಯ ಅಥವಾ ಆಸ್ತಿ ಹೊಂದಿರುವ ಜನರು. ಈ ನಿಯಮಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (ಪಿಡಿಎಸ್) ಪಾರದರ್ಶಕತೆಯನ್ನು ತರುತ್ತವೆ ಮತ್ತು ಪ್ರಯೋಜನಗಳು ಸರಿಯಾದ ಜನರನ್ನು ತಲುಪುತ್ತವೆ ಎಂದು ಸರ್ಕಾರ ಹೇಳುತ್ತದೆ. ಪ್ರಮುಖ ಬದಲಾವಣೆಗಳು ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಗಳು ಉಚಿತ ಪಡಿತರ…

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ನಗರದ ಹಲವಡೆ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಬೆಂಗಳೂರಿನ ಭಾರೀ ಮಳೆಯಿಂದಾಗಿ ಹಲವಡೆ ಅವಾಂತರ ಸೃಷ್ಟಿಯಾಗಿದ್ದು, ಆಡುಗೋಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರಿಗೆ ಸಂಕಷ್ಟ ಎದುರಾಗಿದೆ. ಮನೆಯಿಂದ ನೀರು ಹೊರಹಾಕಲು ಜನರು ಪರದಾಡಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಮನೆಗಳಲ್ಲಿ ಇದ್ದ ವಸ್ತುಗಳು, ಆಹಾರ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿವೆ. ಶಾಂತಿನಗರ, ರಿಚ್ ಮಂಡ್ ಸರ್ಕಲ್ ಬಳಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಲಕ್ಕಸಂದ್ರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಪುಕ್ ರಾಜ್ ಬಡಾವಣೆಯ 2ನೇ ಮುಖ್ಯ ರಸ್ತೆ ಜಲಾವೃತೊಂಡಿದೆ. ಮನೆಗಳಿಗೆ ನೀರು ನುಗ್ಗಿ ಸ್ಥಳಿಯ ನಿವಾಸಿಗಳು ಪರದಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮೋಟಾರ್ ಹಾಕಿ ನೀರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಾಮರಾಜಪೇಟೆಯ ಶಿರಸಿ ರಸ್ತೆಯಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿಯ ಬೃಹತ್ ಮರ ಉರುಳಿ ಬಿದ್ದಿದ್ದು, ವಾಹನ ಸವಾರರು ಪರದಾಡಿದ್ದಾರೆ.

Read More

ನವದೆಹಲಿ : ಇತ್ತೀಚೆಗೆ ಹೆಚ್ಚುತ್ತಿರುವ ಆನ್ ಲೈನ್ ವಂಚನೆಗಳನ್ನು ತಡೆಯಲು ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬ್ಯಾಂಕ್‌ಗಳಿಗೆ ಪ್ರತ್ಯೇಕ ಮತ್ತು ಸುರಕ್ಷಿತ ವಾದ ‘ಬ್ಯಾಂಕ್.ಇನ್’ ಡೊಮೈನ್ ರೂಪಿಸಿದೆ. ಭಾರತದ ಎಲ್ಲಾ ಬ್ಯಾಂಕುಗಳು ಆನ್‌ಲೈನ್ ವಂಚನೆಗಳನ್ನು ತಡೆಯಲು ಮುಂದಿನ 6 ತಿಂಗಳಲ್ಲಿ .bank.in ಡೊಮೇನ್‌ಗೆ ಬದಲಾಗಲಿವೆ. ಎನ್‌ಐಎಕ್ಸ್‌ಐ ಸಿಇಒ ಈ ವಿಷಯ ತಿಳಿಸಿದ್ದಾರೆ. ಭಾರತದಲ್ಲಿ ಸೈಬರ್‌ ವಂಚನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು (ಎಂಇಐಟಿವೈ) ಸಂಪರ್ಕಿಸಿ ಇದಕ್ಕೊಂದು ಪರಿಹಾರ ನೀಡುವಂತೆ ಕೇಳಿಕೊಂಡಿತ್ತು. ಇದರ ಪರಿಣಾಮವಾಗಿ, ಎಲ್ಲಾ ಭಾರತೀಯ ಬ್ಯಾಂಕುಗಳಿಗೆ .bank.in ಎಂಬ ಹೊಸ ಡೊಮೇನ್ ಅನ್ನು ರಚಿಸಲು ಮತ್ತು ಇದನ್ನೇ ಬಳಸಲು ನಿರ್ಧರಿಸಲಾಗಿದೆ. ಹೆಚ್ಚುತ್ತಿರುವ ಸೈಬರ್‌ವಂಚನೆಗಳನ್ನು ತಡೆಯಲು ಪರಿಹಾರ ರೂಪಿಸುವಂತೆ ಆರ್‌ಬಿಐ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಸಂಪರ್ಕಿ ಸಿತ್ತು. ಈ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್‌ಗಳಿಗಾಗಿ ಬ್ಯಾಂಕ್. ಇನ್’ ಡೊಮೈನ್ ರೂಪಿಸಲು ಮತ್ತು ಜಾರಿಗೆ ಸರಕಾರ ಮುಂದಾಗಿದೆ. ಡೊಮೈನ್ ಮಟ್ಟದ…

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಿಸಿದರು. ಸ್ಪರ್ಶ್‌ ಆಸ್ಪತ್ರೆ ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಭಾನುವಾರ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್‌ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು, ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ ಕಿಮೋಥೆರಪಿಯನ್ನೂ ಸಹ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲು ಮುಂದಾಗಿದ್ದು, ಶೀಘ್ರವೇ ಈ ಸೇವೆಗೆ ಚಾಲನೆ ಸಿಗಲಿದೆ ಎಂದರು. ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ ಎಂದು ತಿಳಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಶರಣ…

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆ ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ. 20, 21 ರಂದು ಬಾಗಲಕೋಟೆ, ಬೀದರ್, ಧಾರಾವಾಡ, ಗದಗ, ಹಾವೇರಿ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಗೆ ಮುಂದಿನ ಎರಡೂರು ದಿನಕ್ಕೆ, ಕರಾವಳಿ ಜಿಲ್ಲೆಗಳಿಗೆ ಇಡೀ ವಾರಕ್ಕೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಮೇ23ರಿಂದಮಳೆ ಪ್ರಮಾಣಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ,…

Read More

ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ…

Read More

ವಿಜಯಪುರ : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ…

Read More