Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ವಿದ್ಯುತ್ ಸ್ಪರ್ಶದಿಂದ ರಾಜ್ಯದಲ್ಲಿ ಆನೆಗಳು ಸಾವನ್ನಪ್ಪಿರುವ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿದೆ. ಅಶ್ವತ್ಥಾಮ ಎಂಬ ಆನೆ ವಿದ್ಯುತ್ ಸ್ಪರ್ಶದಿಂದ ಅಸಹಜ ಸಾವು ಸಂಭವಿಸಿದೆ ಎಂಬ ಪತ್ರಿಕೆ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. “ಕರ್ನಾಟಕ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಆಘಾತ ಅಥವಾ ಇತರ ಅಸ್ವಾಭಾವಿಕ ಕಾರಣಗಳಿಂದ ಆನೆಗಳು ಸತತವಾಗಿ ಮತ್ತು ಪದೇ ಪದೇ ಸಾವನ್ನಪ್ಪುತ್ತಿರುವುದು ಗಂಭೀರ ವಿಷಯವಾಗಿದೆ. ವಿಶೇಷವಾಗಿ ಆನೆಗಳಿಗೆ ಮತ್ತು ಸಾಮಾನ್ಯವಾಗಿ ವನ್ಯಜೀವಿಗಳಿಗೆ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವ ಉಸ್ತುವಾರಿ ಅಧಿಕಾರಿಗಳ ಶ್ರದ್ಧೆಯ ಕೊರತೆಯಿಂದಾಗಿ ಈ ಘಟನೆಗಳು ನಡೆದಿವೆ ಎಂದು ಪತ್ರಿಕೆ ವರದಿ ಪ್ರತಿಬಿಂಬಿಸುತ್ತದೆ” ಎಂದು ನ್ಯಾಯಪೀಠ ಹೇಳಿದೆ. “ಆನೆಗಳು ಮತ್ತು ವನ್ಯಜೀವಿಗಳು ಸುರಕ್ಷಿತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಹೊಂದಿವೆ, ಅಸ್ವಾಭಾವಿಕ ಸಾವು ಅಲ್ಲ, ಏಕೆಂದರೆ ಅವು ಶಾಸನಬದ್ಧ ರಕ್ಷಣೆಯಲ್ಲಿವೆ” ಎಂದು ನ್ಯಾಯಪೀಠ ಹೇಳಿದೆ. ಮೈಸೂರಿನಲ್ಲಿ ಅಶ್ವತ್ಥಾಮ ಆನೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ…
ಬೆಂಗಳೂರು : ನೀರಿನ ಶುದ್ಧತೆ ಮತ್ತು ಸುರಕ್ಷಿತತೆಯನ್ನು ಗ್ರಾಮ ಪಂಚಾಯಿತಿಯವರು ಖಾತ್ರಿಪಡಿಸಿಕೊಂಡು ಜನರಿಗೆ ಕುಡಿಯುವ ನೀರನ್ನು ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಪೋಟೆಬಲ್ ವಾಟರ್ ಕ್ವಾಲಿಟಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ಸುರಕ್ಷಿತ ನೀರನ್ನು ಗ್ರಾಮೀಣ ಜನರಿಗೆ ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದೆ. ಒಂದು ವೇಳೆ ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡುಬಂದಲ್ಲಿ ಜನರು ಏಕೀಕೃತ ಸಹಾಯವಾಣಿಗೆ ಅಥವಾ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಬೇಕು. ಏಕೀಕೃತ ಸಹಾಯವಾಣಿ ಸಂಖ್ಯೆ- 9480985555 8277506000
ರಾಯಚೂರು :ರಾಯಚೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ.ದಂಢ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿ ಹುಲ್ಲಪ್ಪಗೆ 20 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಪೋಕ್ಸೋ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ನೀಡಿದ್ದು, ನೋಂದ ಬಾಲಕಿಗೆ 9 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಸರ್ಕಾರದ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತೀರ್ಪು ನೀಡಿದೆ. 2021 ರಲ್ಲಿ ಲಿಂಗಸೂಗುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧಿ ಹುಲ್ಲಪ್ಪ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರವಾರ : ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಹೊರ ಬರುವಂತೆ ನಟ ದರ್ಶನ ಭಾವ ಮಂಜುನಾಥ್ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಪ್ರದೇಶದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಶನೈಶ್ವರ, ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ದರ್ಶನ್ ಗೆ ಗ್ರಹಗತಿ ಸರಿಯಲ್ಲಿ, ಮನುಷ್ಯನಿಗೆ ಜೀವಿತಾವಧಿಯಲ್ಲಿ ದೋಷ ನಿವಾರಣೆಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಅದರಂತೆ ರೇಣುಕಾಸ್ವಾಮಿ ಪ್ರಕರಣದಿಂದ ಆದಷ್ಟು ಬೇಗ ದರ್ಶನ್ ಹೊರಬರಬೇಕೆಂದು ದರ್ಶನ್ ಸಹೋದರಿ ಪತಿ ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚಿತ್ರದುರ್ಗ : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪುತ್ರನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಹೃದಯಾಘಾತ ನಿಧನಹೊಂದಿದ ಚಂದ್ರಪ್ಪ ಅಂತ್ಯಕ್ರಿಯೆಗೆ ಪುತ್ರ ಅನಿಲ್ಕುಮಾರ್ ನನ್ನು ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದ ಆರೋಪಿ ಅನಿಲ್ಕುಮಾರ್ ತಂದೆ ಚಂದ್ರಪ್ಪ ಅಂತ್ಯಕ್ರಿಯೆಗೆ ಕರೆದುಕೊಂಡಲು ಹೋಗಲು ಕೋರ್ಟ್ ನ ಅನುಮತಿ ಕೇಳಿದ್ದು, ಕೋರ್ಟ್ ಅನುಮತಿ ಕೊಟ್ರೆ ಅನು ತಂದೆಯ ಅಂತ್ಯಕ್ರಿಯೆಲ್ಲಿ ಭಾಗವಹಿಸಲಿದ್ದಾನೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಗನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದಿದ್ದ ಹೊಳಲ್ಕೆರೆ ರಸ್ತೆಯ ಸಿಹಿನೀರು ಹೊಂಡ ಬೀದಿಯ ನಿವಾಸಿ ಚಂದ್ರಪ್ಪ (55) ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಮೈಸೂರು : ನೀಟ್ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಿರುವುದು ಸರಿಯಲ್ಲ, ನೀಟ್ ಮರು ಪರೀಕ್ಷೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆ ಬರೆದವರಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಿರುವುದು ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಇದರಿಂದ ಮೋಸವಾಗಲಿದೆ. ಹೀಗಾಗಿ ನೀಟ್ ಮರುಪರೀಕ್ಷೆ ನಡೆಸಬೇಕು. ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ. ಇನ್ನು ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಕಾನೂನು ರೀತಿ ಹೇಗೆ ತನಿಖೆಯಾಗಬೇಕು ಹಾಗೆಯೇ ಆಗುತ್ತದೆ, ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನವದೆಹಲಿ:ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಒಟ್ಟಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ಫೋಟೋದಲ್ಲಿ ಮೆಲೋನಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದನ್ನು ತೋರಿಸುತ್ತದೆ. ಇದಕ್ಕೂ ಮೊದಲು, ಪಿಎಂ ಮೋದಿ ಶುಕ್ರವಾರ (ಜೂನ್ 14) ರಾತ್ರಿ ಮೆಲೋನಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು ಮತ್ತು ಭಾರತ ಮತ್ತು ಇಟಲಿ ನಡುವಿನ ರಕ್ಷಣಾ ಮತ್ತು ಭದ್ರತಾ ಸಹಕಾರದ ಬಗ್ಗೆ ಚರ್ಚಿಸಿದರು. ವಿಶೇಷವೆಂದರೆ, ಪ್ರಧಾನಿ ಮೆಲೋನಿ ಅವರ ಆಹ್ವಾನದ ಮೇರೆಗೆ ಭಾರತೀಯ ಪ್ರಧಾನಿ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಹೋದರು. PM Narendra Modi and Italy’s PM Giorgia Meloni’s selfie on the sidelines of the G7 summit, in Italy. pic.twitter.com/wE1ihPHzeq — ANI (@ANI) June 15, 2024
ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಪ್ರೀಡಂ ಪಾರ್ಕ್ ಗೆ ಆಗಮಿಸಿದ್ದು, ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈಗಾಗಲೇ ತರಗತಿಗಳು ಆರಂಭವಾಗಿದ್ದು, ಇತ್ತ ಉಪನ್ಯಾಸಕರು ಪ್ರತಿಭಟನೆಗೆ ಇಳಿದಿದ್ದಾರೆ.
ನವದೆಹಲಿ: ಚಾಂದನಿ ಚೌಕ್ನಲ್ಲಿ ಸುಮಾರು 80 ಅಂಗಡಿಗಳು ಬೆಂಕಿಗೆ ಆಹುತಿಯಾದ ಕೆಲವು ದಿನಗಳ ನಂತರ, ವಸಂತ್ ವಿಹಾರ್ ಸಿ ಬ್ಲಾಕ್ ಮಾರುಕಟ್ಟೆಯ ಶಾಪಿಂಗ್ ಕಾಂಪ್ಲೆಕ್ಸ್ನೊಳಗಿನ ಐದು ಅಂಗಡಿಗಳಲ್ಲಿ ಶನಿವಾರ ಬೆಳಿಗ್ಗೆ ಮತ್ತೊಂದು ಬೆಂಕಿ ಕಾಣಿಸಿಕೊಂಡಿದೆ. 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ವಸಂತ್ ವಿಹಾರ್ನ ಸಿ ಬ್ಲಾಕ್ ಮಾರುಕಟ್ಟೆಯ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಪ್ರಾರಂಭವಾಯಿತು ಮತ್ತು ನಂತರ ಅದರ ಮೊದಲ ಮಹಡಿಗಳಿಗೆ ಹರಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ













