Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜಿನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಹಾಜರಿದ್ದರು.
ಬೆಂಗಳೂರು : ಇಂದಿನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರೆಗೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಇನ್ನೂ ಕೆಲವರು ಕಡಿಮೆ ಬಜೆಟ್ ಕಾರಣದಿಂದಾಗಿ ಹಳೆಯ ಸ್ಮಾರ್ಟ್ ಫೋನ್ ಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಆದರೆ ಮೊಬೈಲ್ ಖರೀಸುವಾಗ ಈ ತಪ್ಪು ಮಾಡಿದ್ರೆ ನಿಮಗೆ ಜೈಲು ಶಿಕ್ಷೆಯಾಗಬಹುದು ಎಚ್ಚರ. ಹೌದು, ಸೆಕೆಂಡ್ ಹ್ಯಾಂಡ್ ಸಾಧನವು ನಿಮ್ಮನ್ನು ಜೈಲಿಗೆ ತಳ್ಳಬಹುದು. ಕೆಲವರು ಯೋಚಿಸದೆ ಹಳೆಯ ಫೋನ್ ಖರೀದಿಸುತ್ತಾರೆ, ಅದರ ಹೊರೆಯನ್ನು ಅವರು ನಂತರ ಹೊರಬೇಕಾಗುತ್ತದೆ. ಇದರ ಬಗ್ಗೆ ಇಂದು ವಿವರವಾಗಿ ತಿಳಿದುಕೊಳ್ಳಿ. ಈ 3 ವಿಷಯಗಳನ್ನು ನೆನಪಿನಲ್ಲಿಡಿ ಫೋನ್ ಕಳ್ಳತನವಾಗಿಲ್ಲವೇ? ಇತ್ತೀಚಿನ ದಿನಗಳಲ್ಲಿ ನೀವು ಆನ್ಲೈನ್ನಲ್ಲಿ ಅಂತಹ ಅನೇಕ ವೆಬ್ಸೈಟ್ಗಳನ್ನು ಕಾಣಬಹುದು, ಅಲ್ಲಿಂದ ನೀವು ಸೆಕೆಂಡ್ ಹ್ಯಾಂಡ್ ಫೋನ್ ಅನ್ನು ಬಹಳ ಅಗ್ಗವಾಗಿ ಪಡೆಯುತ್ತೀರಿ. ಕೆಲವರು ಫೋನ್ ಖರೀದಿಸುವುದನ್ನು ತಡೆಯಲು ನಿಮಗೆ ಸಾಧ್ಯವಾಗುವುದಿಲ್ಲ ಎಂಬ ಕೊಡುಗೆಗಳನ್ನು ಸಹ ಪಡೆಯುತ್ತಾರೆ. ಈಗ ಒಎಲ್ಎಕ್ಸ್ ಮಾತ್ರವಲ್ಲದೆ ಹಳೆಯ ಸಾಧನಗಳು ಫೇಸ್ಬುಕ್ ಮಾರ್ಕೆಟ್ ಪ್ಲೇಸ್ನಲ್ಲಿ ಲಭ್ಯವಿದೆ, ಆದರೆ ಈ ಉತ್ತಮವಾಗಿ ಕಾಣುವ ಡೀಲ್ಗಳು ನಿಮ್ಮನ್ನು…
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರದ ನೂತನ ಎನ್ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು: 2024-25ನೇ ಸಾಲಿಗೆ ಎಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪ ಕಾಲೇಜುಗಳ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇ 10ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕುಪೆಕಾ) ಮತ್ತು ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (ಕೆಪಿಸಿಎಫ್) ಪ್ರತಿನಿಧಿಗಳೊಂದಿಗೆ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಿದರು. ಉನ್ನತ ಶಿಕ್ಷಣ ಇಲಾಖೆ ಶೀಘ್ರದಲ್ಲೇ ಪರಿಷ್ಕೃತ ಶುಲ್ಕ ರಚನೆಯನ್ನು ಬಿಡುಗಡೆ ಮಾಡಲಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕಕ್ಕೆ ಸಂಬಂಧಿಸಿದಂತೆ, ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳೊಂದಿಗೆ ಇನ್ನೂ ಎರಡು ಸಭೆಗಳನ್ನು ನಡೆಸಿದ ನಂತರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ
ನಾರಾಯಣಪುರ : ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ನಲ್ಲಿ ಎಂಟು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ೮ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ವಿದ್ಯುತ್ ಸ್ಪರ್ಶದಿಂದ ರಾಜ್ಯದಲ್ಲಿ ಆನೆಗಳು ಸಾವನ್ನಪ್ಪಿರುವ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿದೆ. ಅಶ್ವತ್ಥಾಮ ಎಂಬ ಆನೆ ವಿದ್ಯುತ್ ಸ್ಪರ್ಶದಿಂದ ಅಸಹಜ ಸಾವು ಸಂಭವಿಸಿದೆ ಎಂಬ ಪತ್ರಿಕೆ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. “ಕರ್ನಾಟಕ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಆಘಾತ ಅಥವಾ ಇತರ ಅಸ್ವಾಭಾವಿಕ ಕಾರಣಗಳಿಂದ ಆನೆಗಳು ಸತತವಾಗಿ ಮತ್ತು ಪದೇ ಪದೇ ಸಾವನ್ನಪ್ಪುತ್ತಿರುವುದು ಗಂಭೀರ ವಿಷಯವಾಗಿದೆ. ವಿಶೇಷವಾಗಿ ಆನೆಗಳಿಗೆ ಮತ್ತು ಸಾಮಾನ್ಯವಾಗಿ ವನ್ಯಜೀವಿಗಳಿಗೆ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವ ಉಸ್ತುವಾರಿ ಅಧಿಕಾರಿಗಳ ಶ್ರದ್ಧೆಯ ಕೊರತೆಯಿಂದಾಗಿ ಈ ಘಟನೆಗಳು ನಡೆದಿವೆ ಎಂದು ಪತ್ರಿಕೆ ವರದಿ ಪ್ರತಿಬಿಂಬಿಸುತ್ತದೆ” ಎಂದು ನ್ಯಾಯಪೀಠ ಹೇಳಿದೆ. “ಆನೆಗಳು ಮತ್ತು ವನ್ಯಜೀವಿಗಳು ಸುರಕ್ಷಿತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಹೊಂದಿವೆ, ಅಸ್ವಾಭಾವಿಕ ಸಾವು ಅಲ್ಲ, ಏಕೆಂದರೆ ಅವು ಶಾಸನಬದ್ಧ ರಕ್ಷಣೆಯಲ್ಲಿವೆ” ಎಂದು ನ್ಯಾಯಪೀಠ ಹೇಳಿದೆ. ಮೈಸೂರಿನಲ್ಲಿ ಅಶ್ವತ್ಥಾಮ ಆನೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ…
ಬೆಂಗಳೂರು : ನೀರಿನ ಶುದ್ಧತೆ ಮತ್ತು ಸುರಕ್ಷಿತತೆಯನ್ನು ಗ್ರಾಮ ಪಂಚಾಯಿತಿಯವರು ಖಾತ್ರಿಪಡಿಸಿಕೊಂಡು ಜನರಿಗೆ ಕುಡಿಯುವ ನೀರನ್ನು ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಪೋಟೆಬಲ್ ವಾಟರ್ ಕ್ವಾಲಿಟಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ಸುರಕ್ಷಿತ ನೀರನ್ನು ಗ್ರಾಮೀಣ ಜನರಿಗೆ ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದೆ. ಒಂದು ವೇಳೆ ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡುಬಂದಲ್ಲಿ ಜನರು ಏಕೀಕೃತ ಸಹಾಯವಾಣಿಗೆ ಅಥವಾ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಬೇಕು. ಏಕೀಕೃತ ಸಹಾಯವಾಣಿ ಸಂಖ್ಯೆ- 9480985555 8277506000
ರಾಯಚೂರು :ರಾಯಚೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ.ದಂಢ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿ ಹುಲ್ಲಪ್ಪಗೆ 20 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಪೋಕ್ಸೋ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ನೀಡಿದ್ದು, ನೋಂದ ಬಾಲಕಿಗೆ 9 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಸರ್ಕಾರದ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತೀರ್ಪು ನೀಡಿದೆ. 2021 ರಲ್ಲಿ ಲಿಂಗಸೂಗುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧಿ ಹುಲ್ಲಪ್ಪ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರವಾರ : ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಹೊರ ಬರುವಂತೆ ನಟ ದರ್ಶನ ಭಾವ ಮಂಜುನಾಥ್ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಪ್ರದೇಶದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಶನೈಶ್ವರ, ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ದರ್ಶನ್ ಗೆ ಗ್ರಹಗತಿ ಸರಿಯಲ್ಲಿ, ಮನುಷ್ಯನಿಗೆ ಜೀವಿತಾವಧಿಯಲ್ಲಿ ದೋಷ ನಿವಾರಣೆಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಅದರಂತೆ ರೇಣುಕಾಸ್ವಾಮಿ ಪ್ರಕರಣದಿಂದ ಆದಷ್ಟು ಬೇಗ ದರ್ಶನ್ ಹೊರಬರಬೇಕೆಂದು ದರ್ಶನ್ ಸಹೋದರಿ ಪತಿ ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.













