Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಿಸಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ 5 ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಕ್ಷೀರಭಾಗ್ಯ ಹಾಲಿನ ಜೊತೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಮಕ್ಕಳಿಗೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜತೆಗೆ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾಗುತ್ತಿದ್ದ, ಇನ್ಮುಂದೆ ವಾರದಲ್ಲಿ 5 ದಿನ 1-10ನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸಲು…
ಬೆಳಗಾವಿ : ಬೆಳಗಾವಿಯ ಕುಡಚಿ ಪಟ್ಟಣದಿಂದ ಹೈದರಾಬಾದ್ ಗೆ ಅಕ್ರಮವಾಗಿ 3 ಟನ್ ಗೋಮಾಂಸ ಸಾಗಿಸುತ್ತಿದ್ದುದು ಬೆಳ ಕಿಗೆ ಬಂದಿದೆ. ಇದನ್ನು ಪತ್ತೆ ಹಚ್ಚಿರುವ ಐನಾಪುರದ ಸ್ಥಳೀಯರು, ಇಡೀ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 2045 ಸಂಖ್ಯೆಯ ಲಾರಿಯಲ್ಲಿ ಅಧಿಕ ಪ್ರಮಾಣದ ಗೋ ಮಾಂಸ ಕಂಡುಬಂದಿದ್ದು, ಈ ವೇಳೆ ಲಾರಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಥಣಿ ಡಿವೈಎಸ್ಪಿ ಮತ್ತು ಕಾಗವಾಡ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
BIG NEWS : ಜಾತಿ ಗಣತಿ ಸಮೀಕ್ಷೆಯಲ್ಲಿ 14 ಜಾತಿಗಳಿಗೆ `ಕ್ರೈಸ್ತ ಟ್ಯಾಗ್’ ರದ್ದು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಜಾತಿ ಪಟ್ಟಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ, ಮಾಜಿ ಸಚಿವ ವಿ ಸುನೀಲ್ ಕುಮಾರ್ ಆರೋಪಿಸಿದಂತ ಈ 14 ಜಾತಿಗಳನ್ನು ಜಾತಿ ಪಟ್ಟಿಯಲ್ಲಿ ಸೇರಿಸಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಹಿಂದುಳಿದ ವರ್ಗಗಳ ಆಯೋಗವು, ದಿನಾಂಕ:23-09-20250 ಪತ್ರದ ಮೂಲಕ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳಾದ ಛಲವಾದಿ ನಾರಾಯಣಸ್ವಾಮಿ (ವಿಧಾನ ಪರಿಷತ್ ವಿಪಕ್ಷ ನಾಯಕರು), ಎ.ನಾರಾಯಣಸ್ವಾಮಿ (ಕೇಂದ್ರದ ಮಾಜಿ ಸಚಿವರು) ಹಾಗೂ ವಿ. ಸುನಿಲ್ ಕುಮಾರ್(ಬಿ.ಜೆ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕರು) ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಈ ಕೆಳಕಂಡ ಜಾತಿಗಳನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸೇರಿಸಬಾರದು ಎಂದು ಆಗ್ರಹಿಸಿರುತ್ತಾರೆ ಎಂದಿದೆ. ಆದಿ ಆಂಧ್ರ ಕ್ರಿಶಿಯನ್ ಆದಿದ್ರಾವಿಡ ಕ್ರಿಶ್ಚಿಯನ್ ಬುಡುಗ ಜಂಗಮ ಕ್ರಿಶ್ಚಿಯನ್ ಲಮಾಣಿ ಕ್ರಿಶ್ಚಿಯನ್ ಮಾದಿಗ ಕ್ರಿಶ್ಚಿಯನ್ ಮಾಲಾ ಕ್ರಿಶ್ಚಿಯನ್ ವಡ ಕ್ರಿಶ್ಚಿಯನ್…
ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ. 12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಶಂಕಾಸ್ಪದ ಎಂದು ಗುರುತಿಸಿದ್ದ…
BREAKING : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಅ.1ರಿಂದ `ಆರೋಗ್ಯ ಸಂಜೀವಿನಿ’ ಯೋಜನೆ ಜಾರಿಗೆ ಸರ್ಕಾರ ಆದೇಶ
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ. ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯೋಜನೆಗೆ ಒಳಪಡಲು…
ನವದೆಹಲಿ : ಇಬ್ಬರು ವಯಸ್ಕರು ಪರಸ್ಪರ ಒಪ್ಪಿಗೆಯ ಲೈಂಗಿಕ ಸಂಬಂಧ ಹೊಂದಿದ್ದರೆ ಮತ್ತು ನಂತರ ಯಾವುದೇ ಕಾರಣಕ್ಕಾಗಿ ಮದುವೆಯಾಗಲು ಸಾಧ್ಯವಾಗದಿದ್ದರೆ, ಅದನ್ನು ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೇ ರೀತಿಯ ಪ್ರಕರಣದಲ್ಲಿ ಯುವಕನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿತು. ವಿವಾಹದ ಸುಳ್ಳು ಭರವಸೆ ನೀಡಿದ ನಂತರ ತನ್ನ ನಿಶ್ಚಿತಾರ್ಥದ ವ್ಯಕ್ತಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದರು. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಮತ್ತು ನವೆಂಬರ್ 2024 ರಲ್ಲಿ ಮದುವೆಯಾಗಲು ನಿರ್ಧರಿಸಲಾಗಿತ್ತು. ಮದುವೆಗೆ ಮೊದಲು ಎರಡು ಕುಟುಂಬಗಳ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು, ಇದು ಮದುವೆಯನ್ನು ರದ್ದುಗೊಳಿಸಲು ಕಾರಣವಾಯಿತು. ಇದರ ನಂತರ, ಮಹಿಳೆ ಯುವಕನ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದರು. ನ್ಯಾಯಮೂರ್ತಿ ಕೀರ್ತಿ ಸಿಂಗ್ ಅವರ ಪೀಠವು ಪ್ರಕರಣವನ್ನು ಆಲಿಸಿತು ಮತ್ತು ಇಬ್ಬರೂ ವಿದ್ಯಾವಂತರು ಮತ್ತು ಪ್ರಬುದ್ಧ ವಯಸ್ಕರು ಎಂದು ಕಂಡುಕೊಂಡಿತು. ಅವರ ಸಂಬಂಧವು ಒಪ್ಪಿಗೆಯಿಂದ ಕೂಡಿತ್ತು. ಮದುವೆ…
ಮೈಸೂರು : ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು. ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ…
ಕರಾಚಿ : ಖೈಬರ್ ಪಖ್ತುಂಖ್ವಾ ಗ್ರಾಮದ ಮೇಲೆ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 8 ಬಾಂಬ್‌ಗಳು ಬಿದ್ದಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ತಿರಾ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಯುದ್ಧ ವಿಮಾನಗಳು ಎಂಟು LS-6 ಬಾಂಬ್ಗಳನ್ನು ಬೀಳಿಸಿ ಭಾರಿ ಹತ್ಯಾಕಾಂಡಕ್ಕೆ ಕಾರಣವಾದ ಘಟನೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸಂಭವಿಸಿದೆ. ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಅನೇಕ ಜನರು ಗಾಯಗೊಂಡಿದ್ದಾರೆ, ಆದರೆ ಅವರ ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ನಡೆದ ಸ್ಥಳದ ಗೊಂದಲದ ಚಿತ್ರಗಳು ಮತ್ತು ವೀಡಿಯೊಗಳು ಮಕ್ಕಳೂ ಸೇರಿದಂತೆ ಶವಗಳು ಸುತ್ತಲೂ ಬಿದ್ದಿರುವುದನ್ನು ತೋರಿಸಿವೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು ಹುಡುಕುವಲ್ಲಿ ನಿರತವಾಗಿದ್ದವು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭಯವನ್ನು ಹೆಚ್ಚಿಸಿದೆ. ಖೈಬರ್ ಪಖ್ತುಂಖ್ವಾದಲ್ಲಿ ಈ ಹಿಂದೆ…
ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು. ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ.…
ಹೈದರಾಬಾದ್: ಮೆಡ್ಚಲ್ ಜಿಲ್ಲೆಯ ಮೆಡಿಪಲ್ಲಿ ವ್ಯಾಪ್ತಿಯ ನರಪಲ್ಲಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಆತ್ಮಹತ್ಯೆಗೆ ರ್ಯಾ ಗಿಂಗ್ ಕಾರಣ ಎಂದು ಸ್ನೇಹಿತರು ಆರೋಪಿಸುತ್ತಿದ್ದಾರೆ. ಆದಿಲಾಬಾದ್ ಜಿಲ್ಲೆಯ ಉಟ್ನೂರಿನ ಜಾಧವ್ ಸಾಯಿ ತೇಜ (19) ನರಪಲ್ಲಿಯಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಎರಡನೇ ವರ್ಷ ಓದುತ್ತಿದ್ದ. ಅಲ್ಲಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ. ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳೊಂದಿಗೆ ಜಗಳವಾಡಿದ್ದ. ಇದರಿಂದ ಮನನೊಂದ ಸಾಯಿ ತೇಜ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಪಡೆದ ನಂತರ, ಮೆಡಿಪಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸಾಯಿ ತೇಜ ಅವರನ್ನು ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದರು. ನಂತರ, ಹಿರಿಯ ವಿದ್ಯಾರ್ಥಿಗಳು ಸಾಯಿ ತೇಜ ಅವರನ್ನು ಬಾರ್‌ಗೆ ಕರೆದೊಯ್ದು ಸುಮಾರು ₹10,000 ಬಿಲ್ ವಿಧಿಸಿದರು. ಸಂಪೂರ್ಣ ಬಿಲ್ ಪಾವತಿಸಲು ಒತ್ತಡ ಹೇರಿದ ಸಾಯಿ ತೇಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ…







