Author: kannadanewsnow57

ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು. ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ. ಕೆಂಪೇಗೌಡರು ನಿರ್ಮಾಣ…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಬೆಂಗಳೂರಿನಲ್ಲಿ ಶೀಘ್ರವೇ ನೀರಿನ ದರ ಏರಿಕೆ ಮಾಡುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಕಳೆದ 10 ವರ್ಷಗಳಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಮಾಡಲಾಗಿದ್ದು, ನೀರಿನ ದರ ಮಾತ್ರ ಪರಿಷ್ಕರಣೆ ಮಾಡಿಲ್ಲ ಹೀಗಾಗಿ ಶೀಘ್ರವೇ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸುವ ಕುರಿತು ಚರ್ಚೆ ನಡೆಸಲಾಗಿದೆ. ಜಲಮಂಡಳಿಯ ಅದಾಯಕ್ಕಿಂತಲೂ ವೆಚ್ಚ ಹೆಚ್ಚಾಗಿದೆ. ಗೃಹ ಬಳಕೆ ನೀರಿನ ದರವನ್ನು ಶೇ. 30 ರಿಂದ 40 ಹಾಗೂ ವಾಣಿಜ್ಯ ಬಳಕೆಗೆ ಶೇ. 45  ರಷ್ಟು ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.

Read More

ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದಿದ್ದೆ. ಈ ಎಲ್ಲಾ ತರಕಾರಿ ಬೆಲೆಯಲ್ಲಿ ಏರಿಕೆ : ಬೀನ್ಸ್ ಕೆಜಿಗೆ 229 ರೂ. ಗೆ ಏರಿಕೆಯಾಗಿದ್ದರೆ ಉಳಿದಂತೆ ಶುಂಠಿ 198 ರೂ. ಬೆಳ್ಳುಳ್ಳಿ 338 ರೂ. ನಾಟಿ ಕೊತ್ತಂಬರಿ 250 ರೂ. ಏಲಕ್ಕಿ ಬಾಳೆ 86 ರೂ. ಬಿಳಿ ಬದನೆ 100 ರೂ. ಬಜ್ಜಿ ಮೆಣಸಿನಕಾಯಿ 114 ರೂ. ಕ್ಯಾಪ್ತಿಕಾಂ 114 ರೂ. ಮೂಲಂಗಿ 70 ರೂ. ನುಗ್ಗೆಕಾಯಿ 184 ರೂ.…

Read More

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಮತ್ತು ತೈವಾನ್ ಅಧ್ಯಕ್ಷ ಲೈ ಚಿಂಗ್-ಟೆ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಚೀನಾದ ಆಕ್ರೋಶವನ್ನು ತೈವಾನ್ ತಿರಸ್ಕರಿಸಿದೆ, ಚೀನಾ ಪ್ರತಿಕ್ರಿಯೆಯನ್ನು “ಅಸಮಂಜಸ ಹಸ್ತಕ್ಷೇಪ” ಎಂದು ಬಣ್ಣಿಸಿದೆ. ಮೋದಿ ಜಿ ಅವರನ್ನು ಬೆದರಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ತೈವಾನ್ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್-ಕ್ವಾಂಗ್ ಹೇಳಿದ್ದಾರೆ. “… ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ  ಅವರನ್ನು ಹೊಸ ಅಧ್ಯಕ್ಷ ಲೈ ಚಿಂಗ್-ಟೆ ಅಭಿನಂದಿಸಿದರು. ಮೋದಿ  ಕೂಡ ಪ್ರತಿಕ್ರಿಯಿಸಲು ಆ ವೇದಿಕೆಯನ್ನು (ಎಕ್ಸ್) ಬಳಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ಪರಸ್ಪರ ಅಭಿನಂದಿಸುವುದು ಬಹಳ ಸಾಮಾನ್ಯ ವಿಷಯ. ಇತರ ಜನರು ಅದರ ಬಗ್ಗೆ ಏನನ್ನಾದರೂ ಹೇಳಲು ಏಕೆ ಬಯಸುತ್ತಾರೆ? ನನಗೆ ಅರ್ಥವಾಗುತ್ತಿಲ್ಲ. ಇದು ಇಬ್ಬರು ನಾಯಕರು ಪರಸ್ಪರ ಅಭಿನಂದಿಸುವ ನಡುವಿನ ಅತ್ಯಂತ ಅಸಮಂಜಸ ಹಸ್ತಕ್ಷೇಪವಾಗಿದೆ” ಎಂದು ಅವರು ಹೇಳಿದರು. ಜೂನ್ 5 ರಂದು, ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ವಿಜಯಕ್ಕಾಗಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ಲಾಲ್, ಉಭಯ ಕಡೆಗಳ…

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ…

Read More

ಬೆಂಗಳೂರು : ಕರ್ನಾಟಕ ಕಂಡ ಅತ್ಯಂತ ಅಸಮರ್ಥ, ಪೆದ್ದ ಮುಖ್ಯಮಂತ್ರಿ ಅಂದರೆ ಅದು ತಾವೇ ಮಿಸ್ಟರ್ ಸಿದ್ದಾರಮಯ್ಯನವರೇ. ಇತಿಹಾಸ ನಿಮ್ಮನ್ನ ಕರೆಯುವುದು ಹೀಗೆ. ನೆನಪಿಡಿ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್.‌ ಅಶೋಕ್‌, ಅಸಮರ್ಥ ಸಿಎಂ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ದಿಟ್ಟ ಪ್ರಶ್ನೆಗಳು ಎದುರಾದಾಗ ಅಹಂಕಾರದ ಮಾತುಗಳನ್ನಾಡಿ ವೈಯಕ್ತಿಕ ನಿಂದನೆ ಮಾಡುವುದು. ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು. ಪುಕ್ಕಟೆ ಪ್ರಚಾರ ಪಡೆಯುವುದು. ನಾನೊಬ್ಬನೇ ಮಹಾ ಬುದ್ಧಿವಂತ ಎಂದು ಗರ್ವ ಪಡುವುದು. ನಿಮ್ಮ ಈ ಆಟಗಳು ಇನ್ನು ಮುಂದೆ ನಡೆಯುವುದಿಲ್ಲ ಮಿಸ್ಟರ್ ಸಿದ್ದರಾಮಯ್ಯ ಅವರೇ. ಗೆದ್ದಲು ಕಷ್ಟ ಪಟ್ಟು ಹುತ್ತ ಕಟ್ಟುತ್ತದೆ. ಹುತ್ತ ಕಟ್ಟಲು ಯಾವುದೇ ರೀತಿಯಲ್ಲಿಯೂ ಸಾಮರ್ಥ್ಯವಿಲ್ಲದ ಹಾವು ಮಾತ್ರ ಕಟ್ಟುವ ಕಾರ್ಯವೆಲ್ಲಾ ಮುಗಿದ ಮೇಲೆ ಹುತ್ತದೊಳಗೆ ಕೂರುತ್ತದೆ. ಇದು ನಿಮ್ಮ ಯೋಗ್ಯತೆ ಎಂದು ಕಿಡಿಕಾರಿದ್ದಾರೆ.…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮತ್ತು ಸಂತ್ರಸ್ತನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಪೊಲೀಸರು ನೋಡಿಕೊಳ್ಳಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಂಗಳವಾರ ಹೇಳಿದ್ದಾರೆ. ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಯಾಗಿರುವ ರೇಣುಕಾಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪವಿತ್ರ ಗೌಡರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದಯಾನಂದ, ಈ ಪ್ರಕರಣದಲ್ಲಿ ಪೊಲೀಸರು ತ್ವರಿತ ಮತ್ತು ಸಮಯೋಚಿತ ಕ್ರಮ ಕೈಗೊಂಡಿದ್ದಾರೆ. ತನಿಖೆಯಲ್ಲಿ ಸ್ವಲ್ಪ ಅಜಾಗರೂಕತೆ ಅಥವಾ ವಿಳಂಬವಾಗಿದ್ದರೆ, ತನಿಖೆಗೆ ಅಡ್ಡಿಯಾಗುತ್ತಿತ್ತು. ಆದರೆ ಪೊಲೀಸ್ ಸಿಬ್ಬಂದಿ ತಮ್ಮ ಕೆಲಸವನ್ನು ಸಮರ್ಪಣೆಯಿಂದ ಮಾಡಿದರು ಮತ್ತು ಎಲ್ಲಾ ಮಾಹಿತಿ ಮತ್ತು ಪುರಾವೆಗಳನ್ನು ಸಂಗ್ರಹಿಸಿದರು. ತ್ವರಿತ ತನಿಖೆಯಿಂದಾಗಿ, ಇಡೀ ವಿಷಯ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು. “ಇದು ಭಯಾನಕ ರೀತಿಯಲ್ಲಿ ಮಾಡಿದ ಘೋರ ಅಪರಾಧವಾಗಿದೆ ಮತ್ತು ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗುವುದನ್ನು ನಾವು…

Read More

ದಾವಣಗೆರೆ ; ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ ನೌಕರರ ವಿವರವನ್ನು ನೀಡಲು ತಿಳಿಸಿರುತ್ತಾರೆ. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಚುನಾವಣೆ ನಡೆಸಲು ಅರ್ಹ ಮತದಾರರನ್ನು ನಿಗಧಿತ ನಮೂನೆಯಲ್ಲಿ ತಮ್ಮ ಇಲಾಖೆ ಹಾಗೂ ಆಧೀನ ಕಛೇರಿಗಳಲ್ಲಿ (ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಅರ್ಹ ಮತದಾರರ ಪಟ್ಟಿ ತಯಾರಿಸಲು ವಿವರವಾದ ಮಾಹಿತಿಯನ್ನು) ಭರ್ತಿ ಮಾಡಿ ಪ್ರತಿಯನ್ನು ಜಿಲ್ಲಾ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್ ಸರ್ಕಲ್, ದಾವಣಗೆರೆ ಜೂನ್ 21 ರೊಳಗಾಗಿ ಕಳುಹಿಸಬೇಕೆಂದು ಕ.ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷರದ ವಿರೇಶ್.ಎಸ್.ಒಡೆಯನಪುರ ತಿಳಿಸಿದ್ದಾರೆ.

Read More

ಮುಂಬೈ : ಬಿಎಂಸಿ ಪ್ರಧಾನ ಕಚೇರಿ ಸೇರಿದಂತೆ ಮುಂಬೈನ ಸುಮಾರು 50 ಆಸ್ಪತ್ರೆಗಳನ್ನು ಬಾಂಬ್‌ ನಿಂದ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಮೇಲ್ ಕಳುಹಿಸಿದ್ದಾನೆ. ಬೆದರಿಕೆ ಇ-ಮೇಲ್ ಸ್ವೀಕರಿಸಿದ ನಂತರ, ಬಿಎಂಸಿ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯಲ್ಲಿ ಕೋಲಾಹಲ ಉಂಟಾಯಿತು. ವಿಪಿಎನ್ ನೆಟ್ವರ್ಕ್ ಬಳಸಿ ಬೆದರಿಕೆ ಇಮೇಲ್ಗಳನ್ನು ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ದೃಢಪಡಿಸಿದ್ದಾರೆ. ಕಳುಹಿಸುವವರ ಗುರುತು ಮತ್ತು ಬೆದರಿಕೆಯ ಹಿಂದಿನ ಉದ್ದೇಶವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ನಂತರ, ಮುಂಬೈ ಪೊಲೀಸರ ತಂಡವು ಸ್ಥಳಕ್ಕೆ ತಲುಪಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಬಾಂಬ್ ನಿಷ್ಕ್ರಿಯ ದಳವನ್ನು ಸಹ ಸ್ಥಳಕ್ಕೆ ಕರೆಸಲಾಯಿತು. ಆದಾಗ್ಯೂ, ದೀರ್ಘ ಶೋಧ ಕಾರ್ಯಾಚರಣೆಯ ನಂತರವೂ, ಪೊಲೀಸರು ಸ್ಥಳದಿಂದ ಯಾವುದೇ ಅನುಮಾನಾಸ್ಪದ ವಸ್ತುವನ್ನು ಕಂಡುಹಿಡಿಯಲಿಲ್ಲ. ಮಾಹಿತಿಯ ಪ್ರಕಾರ, ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ…

Read More

ಬೆಂಗಳೂರು : ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯವಾಗಿದ್ದು, ತಪ್ಪಿಲದೇ ಸರಿಯಾದ ಕನ್ನಡದಲದಲಿ ನಾಮಫಲಕ ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಾಯವಾಣಿ ಆರಂಭಿಸಿದೆ. ರಾಜ್ಯಾದ್ಯಂತ ಪ್ರಸ್ತುತ ಕೆಲವು ಅಂಗಡಿ ಮಾಲೀಕರು, ವ್ಯಾಪಾರ ಸಂಸ್ಥೆಗಳು, ಸಾರ್ವಜನಿಕರು ನಾಮಫಲಕಗಳಲ್ಲಿ ಕನ್ನಡ ಪದಗಳನ್ನು ತಪ್ಪು ತಪ್ಪಾಗಿ ಬರೆಸಿ ಅಳವಡಿಸುತ್ತಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಸಹಕಾರ ಮತ್ತು ಪರಾಧಿಕಾರಕ್ಕೆ ದೂರು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿಲ್ಲದೇ ನಾಮಫಲಕ ಅಳವಡಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಹಾಯವಾಣಿ ಆರಂಭಿಸಿದೆ. ಸರಿಯಾದ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಲು ಸಹಾಯದ ಅಗತ್ಯವಿದ್ದರೆ ಪ್ರಾಧಿಕಾರವನ್ನು ದೂರವಾಣಿ: 080-22286773 ಅಥವಾ 2225 6365 (: ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ) ಮಿಂಚಂಚೆ: chairman.kanpra@gmail.com ಅಥವಾ secretary.kanpra@gmail.com ಸಂಪರ್ಕಿಸಬಹುದು.

Read More