Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಪರೀಷ್ಕರಣೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಮಾಡುವುದಿಲ್ಲ. ಪ್ರತಿ ತಿಂಗಳು 10 ರಿಂದ 15 ಸಾವಿರ ಹೊಸಬರು ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಇಲ್ಲ. ಈಗಾಗಲೇ ಏಪ್ರಿಲ್ ಕಂತು ಸಂದಾಯವಾಗಿದೆ. ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ಇಲಾಖೆ ಬದಲಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯ ಆಗಬೇಕು ಎಂದು ಕೇಂದ್ರದ ನಿಯಮವಿದೆ. ಇದರಿಂದ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.
BREAKING : ಅಶ್ಲೀಲ ಬಟ್ಟೆ ಧರಿಸಿ ಯುವತಿಯರ ನೃತ್ಯ : ಬೆಂಗಳೂರಿನ ಹಲವು ಕಡೆ `ಡ್ಯಾನ್ಸ್ ಬಾರ್’ಗಳ ಮೇಲೆ ಪೊಲೀಸರು ದಾಳಿ
ಬೆಂಗಳೂರು : ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವಡೆ ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಓವರ್ ಟೈಂ, ಯುವತಿಯರು ಅಶ್ಲೀಲ ಬಟ್ಟೆ ತೊಟ್ಟು ಡ್ಯಾನ್ಸ್ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ದಾಳಿ ನಡೆಸಿದ್ದಾರೆ. ಕೇಂದ್ರ ವಿಬಾಗ ಹಾಗೂ ಪಶ್ವಿಮ ವಿಭಾಗದ ಡ್ಯಾನ್ಸ್ ಬಾರ್ ಗಳ ಮೇಲೂ ದಾಳಿ ನಡೆಸಲಾಗಿದ್ದು, ಕಬ್ಬನ್ ಪಾರ್ಕ್ ಅಶೋಕ್ ನಗರ, ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್ ಗಳ ಮೇಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ಜೂನ್ 20 ಮತ್ತು 21 ರಂದು ಏರ್ಪೋರ್ಟ್ ರಸ್ತೆಯಲ್ಲಿರುವ ಹೆಬ್ಬಾಳ ಫ್ಲೈಓವರ್ ಬಳಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಲಾಗಿದೆ. ಹಾಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆ ಎರಡು ದಿನ ಬಂದ್ ಇರಲಿದೆ. ಜೂನ್ 20 ಮತ್ತು 21ರ ರಾತ್ರಿಯ ವೇಳೆ ಹೆಬ್ಬಾಳ ಬಂದ್ ಇರಲಿದೆ ರಾತ್ರಿ 11:30 ರಿಂದ ಮುಂಜಾನೆ 5 ಗಂಟೆಯ ವರೆಗೆ ಹೆಬ್ಬಾಳ್ ಫ್ಲೈ ಓವರ್ ಬಂದ್ ಇರಲಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರವು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ನಂತ್ರ ಎಚ್ಚೆತ್ತುಕೊಂಡಿದೆ. ಇಂತಹ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಹೊಸ ಕಾನೂನು ಜಾರಿಗೆ ತರಲು ಸಿದ್ಧವಾಗಿದೆ. ಈ ಕಾನೂನಿನ ಅನುಸಾರ ಕಾಲ್ತುಳಿತ ದುರಂತ ಸಂಭವಿದರೇ ಇನ್ಮುಂದೆ ಆಯೋಜಕರಿಗೆ 3 ವರ್ಷ ಜೈಲು, ಐದು ಲಕ್ಷದವರೆಗೆ ದಂಡ ವಿದಿಸುವಂತ ನಿಮಯವನ್ನು ಜಾರಿಗೆ ತರುತ್ತಿದೆ. ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ಕರ್ನಾಟಕ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025 ಎಂಬ ಹೊಸ ಶಾಸನವನ್ನು ಪ್ರಸ್ತಾಪಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾದ ಈ ಕರಡು ಮಸೂದೆಯು ದೊಡ್ಡ ಸಭೆಗಳನ್ನು ನಿಯಂತ್ರಿಸುವ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಕರಡು ಕಾನೂನು ಉಲ್ಲಂಘನೆಗಾಗಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಪ್ರಸ್ತಾಪಿಸುತ್ತದೆ. ರಾಜಕೀಯ ರ್ಯಾಲಿಗಳು ಮತ್ತು ಸಮ್ಮೇಳನಗಳಂತಹ ಕರ್ನಾಟಕದಲ್ಲಿ “ಪ್ರಾಯೋಜಿತ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆಯ ಆನ್ ಲೈನ್ ಸೇವೆ ವಿಸ್ತರಣೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಮಾ ಇಲಾಖೆಯ ಸೇವೆಗಳನ್ನು ಗಣಕೀಕರಣಗೊಳಿಸಲಾಗಿದ್ದು, ಹೆಚ್.ಆರ್.ಎಂ.ಎಸ್., ಮತ್ತು ಖಜಾನೆ -|| ವೇದಿಕೆಗಳ ಮೂಲಕ ವೇತನ ಪಡೆಯುವ ರಾಜ್ಯಸರ್ಕಾರದ ಅಧಿಕಾರಿಗಳು/ನೌಕರರಿಗೆ ಖಜಾನೆ-|| DDO Code ಆಧಾರದ ಮೇಲೆ ವಿಮಾ ಇಲಾಖೆಯ ಆನ್ಲೈನ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಅನ್ಯ ಸೇವೆ/ನಿಯೋಜನೆ ಮೇಲೆ, ನಿಗಮ ಮಂಡಳಿ/ಸ್ಥಳೀಯ ಸಂಸ್ಥೆ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು/ನೌಕರರ ವೇತನವನ್ನು ಹೆಚ್.ಆರ್.ಎಂ.ಎಸ್. ಮತ್ತು ಖಜಾನೆ-|| ವೇದಿಕೆ ಮೂಲಕ ಸೆಳೆಯದಿರುವುದರಿಂದ ಇವರಿಗೆ ವಿಮಾ ಇಲಾಖೆಯ ಆನ್ಲೈನ್ ಸೇವೆಗಳನ್ನು ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದುದರಿಂದ, ಅನ್ಯ ಸೇವೆ/ನಿಯೋಜನೆ ಮೇಲೆ, ನಿಗಮ ಮಂಡಳಿ/ಸ್ಥಳೀಯ ಸಂಸ್ಥೆ ಮತ್ತು ಸ್ನಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು/ನೌಕರರಿಗೆ ವಿಮಾ ಇಲಾಖೆಯ ಆನ್ಲೈನ್ ಸೇವೆಗಳನ್ನು ಒದಗಿಸಲು ಸಾಧ್ಯವಾಗವಂತೆ NTT DDO Code ಆಧಾರದ ಮೇಲೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು, ಉಲ್ಲೇಖ(1) ರ ಆದೇಶದಲ್ಲಿ ಸರ್ಕಾರದ…
ಬೆಂಗಳೂರು : ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಸೌಲಭ್ಯಕ್ಕೆ (ಎನ್.ಪಿ.ಎಸ್ ನಿಂದ ಒ.ಪಿ.ಎಸ್)ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ನೌಕರರುಗಳ ಕ್ರೂಢೀಕೃತ ಪ್ರಸ್ತಾವನೆಗಳನ್ನು ಆರ್ಥಿಕ ಇಲಾಖೆ ನಮೂನೆಯಲ್ಲಿ ಭರ್ತಿ ಮಾಡಿ ತಮ್ಮ ದೃಢೀಕರಣದೊಂದಿಗೆ ಹಾಗೂ ಸರ್ಕಾರಕ್ಕೆ ಕಳುಹಿಸುವ ಪೂರ್ವದಲ್ಲಿ ಯಾವುದೇ ಶಿಕ್ಷಕರಗಳ ವಿವರಗಳನ್ನು ಕೈಬಿಟ್ಟಿರುವುದಿಲ್ಲವೆಂಬುದನ್ನು ಸಹ ದೃಢೀಕರಿಸಿ ಕಳುಹಿಸುವಂತೆ ಹಾಗೂ ನಮೂನೆಗಳಲ್ಲಿ ಭರ್ತಿ ಮಾಡಿ ಸಾಫ್ಟ್ ಪ್ರತಿಯನ್ನು ಇ-ಮೇಲ್ ಮತ್ತು ಹಾರ್ಡ್ ಪ್ರತಿಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ಸರ್ಕಾರದಿಂದ ನಿರ್ದೇನವಾಗಿರುತ್ತದೆ. ಈ ಹಿನ್ನಲೆಯಲ್ಲಿ…
ಬೆಂಗಳೂರು : ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21, 2025 ರಂದು ‘ಅಂತರರಾಷ್ಟ್ರೀಯ ಯೋಗ ದಿವಸ’ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಶ್ವಸಂಸ್ಥೆಯು ಜೂನ್ 21 ನ್ನು ‘ಅಂತರರಾಷ್ಟ್ರೀಯ ಯೋಗ ದಿನ’ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಅತ್ಯಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಐಕ್ಯತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ. ಇದು ಒಬ್ಬ ಮನುಷ್ಯನ ಶಾರೀರಿಕರವಾದ, ಚೇತನಾತ್ಮಕವಾದ ಭೌದ್ಧಿಕವಾದ. ಭಾವನಾತ್ಮಕವಾದ, ಮಾನಸಿಕ ಮತ್ತು ಆಧ್ಯಾತ್ಮಿಕವಾದ ಎಲ್ಲಾ ಸ್ತರಗಳಲ್ಲಿಯೂ ಕೆಲಸ ಮಾಡುತ್ತದ. ಇದು ಇಂದಿನ ಮತ್ತು ಭವಿಷ್ಯದ ಅಗತ್ಯವೂ ಆಗಿದೆ. ಯೋಗಾಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕ ಹಂತಗಳ ಆಂತರಿಕ ಸಂಬಂಧಗಳ ಬಗ್ಗೆ ಮತ್ತು ಇವುಗಳಲ್ಲಿ ಯಾವುದಾದರೊಂದು ಅವ್ಯವಸ್ಥಿತವಾದರೆ, ಇನ್ನಿತರ ಹಂತಗಳ ಮೇಲೆ ಹೇಗೆ ಪ್ರಭಾವ…
ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 20, 21 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಹಾಲಕ್ಷ್ಮಿ ಲೇಔಟ್ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 20.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಕರೆಂಟ್ ಇರೋದಿಲ್ಲ. ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ,…
ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಟೋಲ್ ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಿದ್ದಾರೆ. ಈಗ ಕೇವಲ 3000 ರೂ.ಗಳಿಗೆ, ನೀವು ಒಂದು ವರ್ಷ ಅಥವಾ 200 ಟ್ರಿಪ್ಗಳಿಗೆ ಹೆಚ್ಚುವರಿ ಶುಲ್ಕವಿಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸಬಹುದು. ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಆಗಸ್ಟ್ 15, 2025 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ಈ ಪಾಸ್ನ ಬೆಲೆ 3000 ರೂ. ಆಗಿರುತ್ತದೆ ಮತ್ತು ಇದರೊಂದಿಗೆ ನೀವು ಒಂದು ವರ್ಷ ಅಥವಾ 200 ಟ್ರಿಪ್ಗಳಿಗೆ ಪ್ರತಿ ಬಾರಿಯೂ ಟೋಲ್ ತೆರಿಗೆಯನ್ನು ಪಾವತಿಸದೆ ಪ್ರಯಾಣಿಸಲು ಸಾಧ್ಯವಾಗುತ್ತದೆ, ಯಾವುದು ಮೊದಲು ಪೂರ್ಣಗೊಂಡರೂ. ಈ ಪಾಸ್ ಯಾವ ವಾಹನಗಳಿಗೆ ಮಾನ್ಯವಾಗಿದೆ? ಈ ಸೌಲಭ್ಯವು ಖಾಸಗಿ ಕಾರು, ಜೀಪ್ ಮತ್ತು ವ್ಯಾನ್ನಂತಹ ವಾಣಿಜ್ಯೇತರ ವಾಹನಗಳಿಗೆ ಮಾತ್ರ. ಈ ವಾರ್ಷಿಕ ಪಾಸ್ ಅದನ್ನು ಸಕ್ರಿಯಗೊಳಿಸಿದ ವಾಹನಕ್ಕೆ ಮಾತ್ರ ಮಾನ್ಯವಾಗಿರುತ್ತದೆ. ಪಾಸ್ ಅನ್ನು ಬೇರೆ ಯಾವುದೇ ವಾಹನಕ್ಕೆ ವರ್ಗಾಯಿಸಲಾಗುವುದಿಲ್ಲ. ಇದನ್ನು ಬೇರೆ ಯಾವುದೇ ವಾಹನದಲ್ಲಿ ಬಳಸಿದರೆ, ಪಾಸ್ ಅನ್ನು ತಕ್ಷಣವೇ ನಿಷ್ಕ್ರಿಯಗೊಳಿಸಲಾಗುತ್ತದೆ. ವಾರ್ಷಿಕ ಪಾಸ್ ಅನ್ನು…
ಬೆಂಗಳೂರು : ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ,ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ…