Subscribe to Updates
Get the latest creative news from FooBar about art, design and business.
Author: kannadanewsnow57
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಮಂಗಳವಾರ ಮೂರು ಪ್ರಮುಖ ಉಪಕ್ರಮಗಳನ್ನು ಪ್ರಾರಂಭಿಸಿದೆ – ಪ್ರವಾಹ್ ಪೋರ್ಟಲ್, ಚಿಲ್ಲರೆ ನೇರ ಮೊಬೈಲ್ ಅಪ್ಲಿಕೇಶನ್ ಮತ್ತು ಫಿನ್ಟೆಕ್ ಭಂಡಾರ. ಈ ಉಪಕ್ರಮಗಳನ್ನು ಕ್ರಮವಾಗಿ ಏಪ್ರಿಲ್ 2023, ಏಪ್ರಿಲ್ 2024 ಮತ್ತು ಡಿಸೆಂಬರ್ 2023 ರಲ್ಲಿ ಅಭಿವೃದ್ಧಿ ಮತ್ತು ನಿಯಂತ್ರಣ ನೀತಿಗಳ ಕುರಿತು ಕೇಂದ್ರ ಬ್ಯಾಂಕಿನ ದ್ವೈಮಾಸಿಕ ಹೇಳಿಕೆಯ ಭಾಗವಾಗಿ ಘೋಷಿಸಲಾಯಿತು. ಪ್ರವಾಹ್ ಪೋರ್ಟಲ್ ಯಾವುದೇ ವ್ಯಕ್ತಿ ಅಥವಾ ಘಟಕಕ್ಕೆ ವಿವಿಧ ನಿಯಂತ್ರಕ ಅನುಮೋದನೆಗಳಿಗಾಗಿ ತಡೆರಹಿತ ರೀತಿಯಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅನುಕೂಲಕರವಾಗಿಸುತ್ತದೆ. ಆರ್ಬಿಐ ನಿಯಂತ್ರಕ ಅನುಮೋದನೆಗಳು ಮತ್ತು ಅನುಮತಿಗಳನ್ನು ನೀಡಲು ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳ ದಕ್ಷತೆಯನ್ನು ಪೋರ್ಟಲ್ ಹೆಚ್ಚಿಸುತ್ತದೆ ಎಂದು ಕೇಂದ್ರ ಬ್ಯಾಂಕಿನ ಅಧಿಸೂಚನೆ ತಿಳಿಸಿದೆ. ಪೋರ್ಟಲ್ನಲ್ಲಿ, ಅರ್ಜಿದಾರರು ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿಯ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದು ಮತ್ತು ಮೇಲ್ವಿಚಾರಣೆ ಮಾಡಬಹುದು, ಅರ್ಜಿ ಅಥವಾ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರ್ಬಿಐ ಕೋರಿರುವ ಯಾವುದೇ ಸ್ಪಷ್ಟೀಕರಣ ಅಥವಾ ಪ್ರಶ್ನೆಗೆ ಪ್ರತಿಕ್ರಿಯಿಸಬಹುದು ಮತ್ತು…
ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಈ ಕಛೇರಿ ಜ್ಞಾಪನಾದಲ್ಲಿ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ໖. ಲ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು. 2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘ದೇವರು ಸಂದೇಶವಾಹಕನಾಗಿ ಕಳುಹಿಸಿದ್ದಾನೆ’ ಎಂಬ ಹೇಳಿಕೆಗೆ ಮಂಗಳವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, “ನರೇಂದ್ರ ಮೋದಿಯವರ ಪರಮಾತ್ಮ ಅದಾನಿ ಮತ್ತು ಅಂಬಾನಿಗೆ ಮಾತ್ರ ಸಹಾಯ ಮಾಡುವಂತೆ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ಬನ್ಸ್ಗಾಂವ್ ಲೋಕಸಭಾ ಕ್ಷೇತ್ರದಲ್ಲಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಮಾತನಾಡುತ್ತಿದ್ದರು. ಮೋದಿಯನ್ನು ನಿಜವಾಗಿಯೂ ಪರಮಾತ್ಮರು ಕಳುಹಿಸಿದ್ದರೆ, ಬಡವರಿಗಾಗಿ ಕೆಲಸ ಮಾಡುವ ಕೆಲಸವನ್ನು ಅವರಿಗೆ ವಹಿಸಲಾಗುತ್ತಿತ್ತು ಎಂದು ರಾಹುಲ್ ಹೇಳಿದರು, ಆದರೆ “ನರೇಂದ್ರ ಮೋದಿಯವರ ಪರಮಾತ್ಮ ಅವರು ಅದಾನಿ ಮತ್ತು ಅಂಬಾನಿಗೆ ಮಾತ್ರ ಸಹಾಯ ಮಾಡುವಂತೆ ಕೇಳಿದ್ದಾರೆಯೇ” ಎಂದು ಆಶ್ಚರ್ಯಪಟ್ಟರು. ಅಖಿಲೇಶ್ ತಮ್ಮ ಭಾಷಣದಲ್ಲಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ “ಮಿತ್ರ ಮಂಡಲ್” ಮತ್ತು “ಮಾಧ್ಯಮ ಮಂಡಲ್” ನಲ್ಲಿ ಬದಲಾವಣೆಯೊಂದಿಗೆ “ಪತ್ರಿಕಾ ಸ್ವಾತಂತ್ರ್ಯ” ವನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದರು. ಇಬ್ಬರೂ ನಾಯಕರು ಮಂಗಳವಾರ ವಾರಣಾಸಿಯಲ್ಲಿ ತಮ್ಮ ಮೊದಲ ಜಂಟಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ತಮ್ಮನ್ನು ಮತ್ತು…
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಮುನಿರಾಬಾದ್ ಸಮೀಪದ ಹೊಸಲಿಂಗಾಪುರ ಗ್ರಾಮಚ ಚರ್ಚ್ ಏರಿಯಾ ಹಿಂಭಾಗದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ. ರಾಜೇಶ್ವರಿ, ಅವರ ಪುತ್ರಿ ವಸಂತ, ವಸಂತಳ ಪುತ್ರಿ ಸಾಯಿಧರ್ಮ ಎಂಬುವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ರಾಜೇಶ್ವರಿ ಜೋಗಮ್ಮಳಾಗಿದ್ದು, ಅವರ ಪುತ್ರಿ ವಸಂತ ಲಿಂಗಾಪುರ ಗ್ರಾಮದ ಗೊಂಬೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ಗೊಂಬೆ ಕಾರ್ಖಾನೆ ಸಿಬ್ಬಂದಿ ವಸಂತಳನ್ನು ಕೆಲಸಕ್ಕೆ ಕರೆಯಲೆಂದು ಮನೆಗೆ ಹೋದಾಗ ಮನೆಯಲ್ಲಿ ಮೂವರು ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಸೂರತ್: ರಾಜ್ಕೋಟ್ ಗೇಮ್ ಝೋನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಸೂರತ್ನಲ್ಲಿ ಮಂಗಳವಾರ ಕೋಚಿಂಗ್ ಸೆಂಟರ್ಗಳು ಮತ್ತು ಕ್ಲಿನಿಕ್ಗಳು ಸೇರಿದಂತೆ 168 ಘಟಕಗಳಿಗೆ ಬೀಗಮುದ್ರೆ ಹಾಕಲಾಗಿದೆ. ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್ ಎಂಸಿ) ನ ಅಗ್ನಿಶಾಮಕ ಇಲಾಖೆಯ 150 ಕ್ಕೂ ಹೆಚ್ಚು ಅಧಿಕಾರಿಗಳು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ ಒಸಿ) ಹೊಂದಿರದ ಘಟಕಗಳನ್ನು ಮುಚ್ಚುವ ಅಭಿಯಾನವನ್ನು ಪ್ರಾರಂಭಿಸಿದರು. ಸೂರತ್ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಖ್ ಮಾತನಾಡಿ, “ನಾವು ಎಲ್ಲಾ ಒಂಬತ್ತು ಪುರಸಭೆ ವಲಯಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದೇವೆ ಮತ್ತು ಎನ್ಒಸಿ ಹೊಂದಿರದ ಅಥವಾ ಎನ್ಒಸಿ ನವೀಕರಿಸದ ಅಂಗಡಿಗಳನ್ನು ಮುಚ್ಚಲು ಪ್ರಾರಂಭಿಸಿದ್ದೇವೆ. ಅಗ್ನಿ ಸುರಕ್ಷತಾ ಉಪಕರಣಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ನಮ್ಮ ತಂಡಗಳು ಪರಿಶೀಲಿಸುತ್ತಿವೆ. ಈ ಅಭಿಯಾನ ಮುಂದುವರಿಯುತ್ತದೆ. ಸೂರತ್ ಜಿಲ್ಲಾ ಶಿಕ್ಷಣ ಅಧಿಕಾರಿ ಭಗೀರಥಸಿನ್ಹ ಪರ್ಮಾರ್ ಅವರು 1,796 ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಸುರಕ್ಷತಾ ಮಾನದಂಡಗಳನ್ನು ಅನುಸರಿಸುವಂತೆ ನೆನಪಿಸಿದ್ದಾರೆ. “ಬೇಸಿಗೆಯಲ್ಲಿ, ಚಾಲ್ತಿಯಲ್ಲಿರುವ ಶಾಖದ ನಡುವೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತದೆ. ಎಲೆಕ್ಟ್ರಾನಿಕ್ ಉಪಕರಣಗಳ ಅಜಾಗರೂಕ…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ -2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಸ ನೀಡಿ ಆದೇಶ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳ ರವರು ಕೋರಿರುತ್ತಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 14.06.2024 ರಿಂದ 22.06.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ,…
ಬೆಂಗಳೂರು : ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿತ್ತನೆ ಬೀಜದ ದರದಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ.ಬಿತ್ತನೆ ಬೀಜದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರಿಗೆ ಮೊತ್ತೊಂದು ಶಾಕ್ ಎದುರಾಗಿದೆ. ರಾಜ್ಯದಲ್ಲಿ ವಿವಿಧ ಭತ್ತದ ತಿಳಗಳ ಬಿತ್ತನೆ ಬೀದರ ದರ ಕ್ವಿಂಟಾಲ್ಗೆ 675 ರೂ.ನಿಂದ 1,875 ರು. ವರೆಗೂ ಏರಿಕೆಯಾಗಿದೆ. ಹೆಸರು (5 ಕೆಜಿ) 501 ರಿಂದ 785ರವರೆಗೆ, ತೊಗರಿ (5 ಕೆಜಿ) 525 ರಿಂದ 770 ರವರೆಗೆ ಏರಿಕೆಯಾಗಿದ್ರೆ, ಜೋಳ (3 ಕೆಜಿ) 202 ರಿಂದ 285ರ ವರೆಗೂ ಏರಿಕೆಯಾಗಿದೆ. ಇನ್ನು ಬಿತ್ತನೆ ಬೀಜದ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ…
ನವದೆಹಲಿ:ಪಿಎಂಎಲ್ಎಯ ಸೆಕ್ಷನ್ 70 ರ ಪ್ರಕಾರ, ವ್ಯಕ್ತಿಗಳ ಸಂಘವಾದ ಎಎಪಿಯ ರಾಷ್ಟ್ರೀಯ ಸಂಚಾಲಕರಾಗಿ ಸಿಎಂ ನೇರ ಪಾತ್ರ ಮತ್ತು ವಿಕಾರಾತ್ಮಕ ಪಾತ್ರವನ್ನು ಹೊಂದಿದ್ದಾರೆ ಎಂದು ಇಡಿ ಅಭಿಪ್ರಾಯಪಟ್ಟಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅಪರಾಧದ ಆದಾಯವನ್ನು ಗಳಿಸುವ ದೊಡ್ಡ ಪಿತೂರಿಯ ಭಾಗವಾಗಿದ್ದರು. ಯಾವುದೇ ಅರ್ಥಪೂರ್ಣ ಚರ್ಚೆ ನಡೆಯದಂತೆ ಅವರು ನೋಡಿಕೊಂಡರು” ಎಂದು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿತು, ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯ ಪಾತ್ರವನ್ನು ಎತ್ತಿ ತೋರಿಸಿದೆ. ಈಗ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಯಲ್ಲಿ ಲಾಭದ ಅಂತರವು ಶೇಕಡಾ 5 ರಿಂದ 12 ಕ್ಕೆ ಹೆಚ್ಚಾದಾಗ ಕೇಜ್ರಿವಾಲ್ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರನ್ನು ಭೇಟಿ ಮಾಡಿದ್ದರು ಎಂದು ಇಡಿ ವಿಶೇಷ ವಕೀಲ ಜೊಹೆಬ್ ಹುಸೇನ್ ವಾದಿಸಿದರು. “ಅಬಕಾರಿ ನೀತಿಯ ಹಿಂದಿನ ಮೆದುಳು ಕೇಜ್ರಿವಾಲ್ ಎಂದು ವಿಜಯ್ ನಾಯರ್ (ಮಾಜಿ ಎಎಪಿ ಸಂವಹನ ಉಸ್ತುವಾರಿ) ಸಮೀರ್ ಮಹೇಂದ್ರು (ಪ್ರಕರಣದ ಸಹ ಆರೋಪಿ) ಗೆ…
ಬೆಂಗಳೂರು : ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ. ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ” ಆದೇಶಿಸಿದ ಎಂಬುದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಇಪಿ 260 ಪಿಜಿಸಿ 2021, ಬೆಂಗಳೂರು ದಿನಾಂಕ: 26.07.2022. ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶಿಸಿದೆ. ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್.ಕೆ.ಜಿ ತರಗತಿಗೆ ದಾಖಲಾತಿ ಹೊಂದಲು ಜೂನ್ 01ನೇ ತಾರೀಖಿಗೆ ಅನ್ವಯವಾಗುವಂತೆ 04 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿರುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸುವಾಗ…
ಬೆಂಗಳೂರು : 2024 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಉಲ್ಲೇಖ-2 ರಲ್ಲಿ ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು.