Author: kannadanewsnow57

ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಹಾಗೂ ಶ್ರವಣ ಮತ್ತು ದೃಷ್ಟಿನ್ಯೂನತೆ ಸೇರಿದಂತೆ ಬಹುವಿಧದ ಅಂಗವಿಕಲತೆಗಳಿAದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಸಿಕ 1000 ರೂ. ನಷ್ಟು ಗೌರವಧನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶನುಸಾರ ವಿಶೇಷ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಅಂಗವಿಕಲತೆಯಿAದ ಬಳಲುತ್ತಿರುವ ವಿಕಲಚೇತನರ ಆರೈಕೆದಾರರು ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ರಾಯಚೂರು ಜಿಲ್ಲಾ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ಭಾವಚಿತ್ರ, ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿರುವ ತಹಶೀಲ್ದಾರರು ನೀಡುವ ವಾಸಸ್ಥಳ ಪ್ರಮಾಣಪತ್ರ, ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣಪತ್ರ (ಯುಡಿಐಡಿ ಕಾರ್ಡ್), ಬ್ಯಾಂಕ್ ಉಳಿತಾಯ ಖಾತೆಯ ಪಾಸ್ಬುಕ್ ನಕಲು ಮತ್ತು ಇತರ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಾಲೂಕು ಬಾಗೇಪಲ್ಲಿ ಹೆಸರನ್ನು ಬದಲಾಯಿಸಲು ಒತ್ತಾಯ ಕೇಳಿಬಂದಿತ್ತು. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ, ಆದ್ದರಿಂದ ಈ ಹೆಸರನ್ನು ಬದಲಿಸಬೇಕೆಂದು ಅಭಿಯಾನ ಶುರುವಾಗಿತ್ತು.ಹೀಗಾಗಿ ರಾಜ್ಯ ಸರ್ಕಾರವು ಹೆಸರು ಬದಲಿಸಲು ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ಸಂಪುಟ ಸಭೆ ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಲಾಗಿದೆ. ನಾಳೆ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ…

Read More

ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ ಮಧು ಬಂಗಾರಪ್ಪ ಅವರು, ಗಡಿಭಾಗದ ಶಾಲೆಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ…

Read More

ಮಗು ಹುಟ್ಟಿದಾಗಿನಿಂದ ಹೇಗೆ ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಪ್ರತಿ ತಿಂಗಳು ಅವರ ತೂಕ ಮತ್ತು ಎತ್ತರವನ್ನು ಪರಿಶೀಲಿಸುವುದು ಬಹಳ ಮುಖ್ಯ. ಇದು ವೈದ್ಯರಿಗೆ ಅವರ ಆರೋಗ್ಯ ಸ್ಥಿತಿಯನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ. ಜನನದ ಸಮಯದಲ್ಲಿ ಮಗುವಿನ ಸರಾಸರಿ ತೂಕ ಭಾರತದಲ್ಲಿ ನವಜಾತ ಶಿಶುವಿನ ಸರಾಸರಿ ತೂಕ ಸಾಮಾನ್ಯವಾಗಿ 2.5 ರಿಂದ 3.5 ಕೆಜಿ ನಡುವೆ ಇರುತ್ತದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2.5 ಕೆಜಿಗಿಂತ ಕಡಿಮೆ ತೂಕವಿರುವ ಶಿಶುಗಳನ್ನು ‘ಕಡಿಮೆ ಜನನ ತೂಕ’ ಎಂದು ವರ್ಗೀಕರಿಸಲಾಗಿದೆ. ಈ ಸ್ಥಿತಿಯಲ್ಲಿರುವ ಶಿಶುಗಳಿಗೆ ವಿಶೇಷ ಕಾಳಜಿ ಮತ್ತು ಪೋಷಣೆಯ ಅಗತ್ಯವಿದೆ. ಮೊದಲ ವರ್ಷದಲ್ಲಿ ಬೆಳವಣಿಗೆ ಜನನದ ನಂತರದ ಮೊದಲ ವರ್ಷದಲ್ಲಿ ಮಗುವಿನ ಬೆಳವಣಿಗೆ ಅತ್ಯಂತ ವೇಗವಾಗಿರುತ್ತದೆ: ಜನನದ ಸಮಯದಲ್ಲಿ: ಸರಾಸರಿ ತೂಕ 3 ಕೆಜಿ 3 ತಿಂಗಳಲ್ಲಿ: ಸುಮಾರು 5-6 ಕೆಜಿ 6 ತಿಂಗಳಲ್ಲಿ: ಸುಮಾರು 7-8 ಕೆಜಿ 9 ತಿಂಗಳಲ್ಲಿ: ಸುಮಾರು 8-9 ಕೆಜಿ 1 ವರ್ಷದಲ್ಲಿ: ಸುಮಾರು 9-10 ಕೆಜಿ…

Read More

ಬೆಂಗಳೂರು : 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಮುಂಗಾರು ಹಂಗಾಮಿನ ಬೆಳೆ ವಿಮಾ ನೋಂದಣಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ಮಳೆ ಆಶ್ರಿತ ಬೆಳೆಗಳಾದ ರಾಗಿ, ಜೋಳ ಹಾಗೂ ಪಂಚಾಯಿತಿ ಮಟ್ಟದಲ್ಲಿ ನೀರಾವರಿ/ಮಳೆ ಆಶ್ರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆ ಆಗಿದ್ದು, ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಓರಿಯೆಂಟಲ್ ಜನರಲ್ ಇನ್‌ಶ್ಯೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು. ವಿಮಾ ಬೆಳೆ ನೋಂದಣಿ ಮಾಡಿಕೊಳ್ಳಲು ಜು.31 (ಮುಸುಕಿನ ಜೋಳ) ಹಾಗೂ ಆ.16 (ಭತ್ತ, ಜೋಳ,ರಾಗಿ) ಕೊನೆಯ ದಿನಾಂಕವಾಗಿದೆ. ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಅವಕಾಶವಿದ್ದು, ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣೆ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಸಿಎಸ್‌ಸಿ ಕೇಂದ್ರಗಳು) ನೋಂದಾಯಿಸಿಕೊಳ್ಳಬಹುದು. ಬೆಳೆ ಸಾಲ ಪಡೆಯುವ ರೈತರನ್ನು…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ ಅವಕಾಶ ನೀಡಲಾಗಿದೆ. ಪ್ರಥಮ ಪಿಯು ತರಗತಿಗಳಿಗೆ ಪ್ರವೇಶ ಪಡೆಯಲು ಜೂ.16ರಿಂದ 21ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.23ರಿಂದ 26 ಮತ್ತು 2220 ರೂ. ವಿಶೇಷ ದಂಡ ಶುಲ್ಕ ಮತ್ತು 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.30 ಕೊನೆಯ ದಿನವಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Read More

ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ. ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್ಸಿ ಮತ್ತು ಐಸಿಎಸ್ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ…

Read More

ಬೆಂಗಳೂರು: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದಂತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ. ಫಿಲ್ಮ್ ಚೇಂಬರ್ ಗೆ ತೆರಳಿದಂತ ಸಂಜು ವೆಡ್ಸ್ ಗೀತಾ-2 ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿಯವರು ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಸಂಚು ವೆಡ್ಸ್ ಗೀತಾ-2 ಚಿತ್ರದ ಪ್ರಚಾರ ಕಾರ್ಯವನ್ನು ಮಾಡಲಾಗುತ್ತಿದೆ. ಆದರೇ ನಟಿ ರಚಿತಾ ರಾಮ್ ಮಾತ್ರ ಪ್ರಚಾರಕ್ಕೆ ಬರುತ್ತಿಲ್ಲ. ಹೀಗಾಗಿ ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಪ್ರಮುಖ ಪಾತ್ರಗಳಲ್ಲಿನಟಿಸಿದ್ದಾರೆ , ಚೇತನ್ ಚಂದ್ರ ಮತ್ತು ರಾಗಿಣಿ ದ್ವಿವೇದಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಛಲವಾದಿ ಕುಮಾರ್ ನಿರ್ಮಿಸಿರುವ ಈ ಚಿತ್ರದ ಸಂಗೀತವನ್ನು ಶ್ರೀಧರ್ ವಿ. ಸಂಭ್ರಮ್ ಸಂಯೋಜಿಸಿದ್ದಾರೆ ಮತ್ತು ಛಾಯಾಗ್ರಹಣ ಸತ್ಯ ಹೆಗ್ಡೆ…

Read More

ಶಿವಮೊಗ್ಗ : ಸೊರಬ ತಾಲ್ಲೂಕಿನ ಉಳವಿ ಸಮೀಪದ ಕರ್ಜಿಕೊಪ್ಪ ಬಳಿಯಲ್ಲಿ ಕ್ಯಾಂಟರ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಾಗರಕ್ಕೆ ಕರೆದೊಯ್ಯಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ದಾರಿ ಹೋಕರಿಗೆ ತೊಂದರೆ ಮಳೆಗಾಲ ಆರಂಭಕ್ಕೆ ಮುನ್ನ ಬೀಳುವಂತೆ ಇದ್ದ ಮರಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿತಲೆ ಮಾಡದೇ ಇದ್ದದ್ದೇ ಘಟನೆಗೆ ಕಾರಣ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾರಿಗೆ ಅಡ್ಡಲಾಗಿ ಕ್ಯಾಂಟರ್ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ವಸಂತ ಬಿ ಈಶ್ವರಗೆರೆ, ಸಂಪಾದಕರು, kannadanewsnow.com- 9738123234

Read More

ಚಿಕ್ಕೋಡಿ : ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ (70) ಇಂದು ಅನಾರೋಗ್ಯದಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ನಿಧನರಾಗಿದ್ದಾರೆ.ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನ ಕಾಕಾ ಸಾಹೇಬ್ ಪಾಟೀಲ್ ಅಗಲಿದ್ದಾರೆ. ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು.

Read More