Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ  ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಭಾರತಿನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದೆ. ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 2,000 ರೂ. ಗೌರವ ಧನವನ್ನು ಬುಧವಾರ ಘೋಷಣೆ ಮಾಡಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ 2 20:22-09-2025 ರಿಂದ 07-10-20250 ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಂಬಂಧಿಸಿದ ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ. ಮುಂದುವರೆದು, ಆರೋಗ್ಯ ಇಲಾಖೆಯಿಂದ ನಿಯೋಜಿಸಲಾದ ಆಶಾ ಕಾರ್ಯಕರ್ತೆಯರು ಶೇ.90% ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಆ್ಯಪ್ ಮೂಲಕ ಯು.ಹೆಚ್.ಐ.ಡಿ. ನಂಬರ್ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುವ…

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್‌ಗಳು ಮೊಬೈಲ್‌ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್‌ಗೆ ಲಿಂಕ್…

Read More

ಬೆಂಗಳೂರು : ಮುಂದೂಡಲ್ಪಟ್ಟಿದ್ದ ಸರ್ಕಾರಿ ಶಾಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಶುಕ್ರವಾರದಿಂದಲೇ ಚಾಲನೆ ದೊರಕಿದೆ. 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಸರ್ಕಾರ ಅಧಿಕೃತ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಜಾತಿಗಣತಿ ಸಮೀಕ್ಷೆ ಮುಂದೂಡಿಕೆ ಇಲ್ಲ. ನಿಗದಿಯಂತೆ ನಡೆಯುವುದು ಖಚಿತವಾದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನ ನೀಡಿ ಆದೇಶಿಸಿದೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ…

Read More

ಬೆಂಗಳೂರು : ರಾಜ್ಯದಲ್ಲಿ ನಿರ್ಮಾಣವಾದ ಕಟ್ಟಡಗಳಿಗೆ ಓಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿರುವವರಿಗೆ ನಿಯಮಗಳನ್ನು ಸಡಿಲಿಸಿ, ಒಂದು ಬಾರಿಯ ) (One Time Relaxation) ಅಸ್ತಿತ್ವದಲ್ಲಿರುವ ನಿಯಮಗಳಂತೆ ಗುರುತಿನ 23563 ಮತ್ತು ಮಾಲೀಕತ್ವದ ಪುರಾವೆಗಳನ್ನು ಪರಿಗಣಿಸಿ, (ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೆ) ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇನಿರ್ಮಾಣವಾಗಿರುವ ಕಟ್ಟಡಗಳಿಗೆ ಓಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಬಾರಿಗೆ ಅನ್ವಯಿಸುವಂತೆ ಒಂದು ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.

Read More

ಬೆಂಗಳೂರು: ಸೆಪ್ಟೆಂಬರ್ 20 ರ ಇಂದಿನಿಂದ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಲಾಗಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ. ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ…

Read More

ಬೆಂಗಳೂರು : ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ವಿವಿಧ ಯೋಜನೆಯಡಿಯಲ್ಲಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರಡಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS) “ಭಾವಿತ ನೊಂದಾವಣೆಗೆ (Deemed Empanelment) ಒಳಪಡಿಸಲು ಆದೇಶಿಸಲಾಗಿದೆ. ಅದರಂತೆ, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 186 ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಖಾಸಗಿ ನೊಂದಾವಣೆಗೊಳಿಸಲಾಗಿದೆ.ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.

Read More

ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಸಹ ಅರ್ಜಿಯನ್ನು ವಜಾಗೊಳಿಸಿದೆ. https://twitter.com/ANI/status/1968934536328204393?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಮುಂಬೈ : ಹಿಂದಿನ ಅವಧಿಗಳಲ್ಲಿ ಸತತ ಲಾಭಗಳ ನಂತರ ಶುಕ್ರವಾರ ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ತೀವ್ರವಾಗಿ ಕುಸಿದವು, ಇದು ಮಧ್ಯಾಹ್ನದ ಸುಮಾರಿಗೆ, ಎಸ್ & ಪಿ ಬಿಎಸ್‌ಇ ಸೆನ್ಸೆಕ್ಸ್ 471.67 ಅಂಕಗಳ ಕುಸಿತ ಕಂಡು 82,542.29 ಕ್ಕೆ ಸ್ಥಿರವಾಯಿತು, ಆದರೆ ಎನ್‌ಎಸ್‌ಇ ನಿಫ್ಟಿ 50 130.20 ಅಂಕಗಳ ಕುಸಿತ ಕಂಡು 25,293.40 ಕ್ಕೆ ತಲುಪಿತು. ಹೆಚ್ಚಿನ ವಿಶಾಲ ಮಾರುಕಟ್ಟೆ ಸೂಚ್ಯಂಕಗಳು ಅಧಿವೇಶನದಲ್ಲಿ ಕೆಂಪು ಬಣ್ಣದಲ್ಲಿವೆ, ಏಕೆಂದರೆ ಚಂಚಲತೆಯು ಸ್ವಲ್ಪ ಏರಿಕೆ ಕಂಡಿತು. ಈ ಕುಸಿತವು ಪ್ರಾಥಮಿಕವಾಗಿ ಹೂಡಿಕೆದಾರರ ಲಾಭದ ಬುಕಿಂಗ್ ಅನ್ನು ಪ್ರತಿಬಿಂಬಿಸಿತು, ಅವರು ಕಳೆದ ಕೆಲವು ದಿನಗಳಿಂದ ಯುಎಸ್ ದರ ಕಡಿತದ ಬಗ್ಗೆ ಆಶಾವಾದ ಮತ್ತು ಭಾರತ-ಯುಎಸ್ ವ್ಯಾಪಾರ ಚರ್ಚೆಗಳಲ್ಲಿನ ಪ್ರಗತಿಯಿಂದ ನಡೆಸಲ್ಪಟ್ಟ ರ್ಯಾಲಿಯ ಲಾಭವನ್ನು ಪಡೆದುಕೊಂಡರು.

Read More