Author: kannadanewsnow57

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆಯಾಗಿದೆ. 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಮುಂಡಳ್ಳಿ 299 ಮಿಮೀ, ಬೆಲೆ 277 ಮಿಮೀ ಮತ್ತು ಉಡುಪಿ ಬೈಂದೂರು ತಾಲೂಕಿನ ಪಡುವರಿಯಲ್ಲಿ 282 ಮಿಮಿ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.14ರಿಂದ ಜೂ.16ರವರೆಗೆ ಮತ್ತು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಭಾರಿ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಜೋರಾಗಿ ಬೀಸುವುದರಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜೂ.14ರಿಂದ ಜೂ.15ರವರೆಗೆ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆಯಲಾಗಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನಲ್ಲಿ NMMS ವಿದ್ಯಾರ್ಥಿ ವೇತನಕ್ಕಾಗಿ National Scholarship Portal ನಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು, ದಿನಾಂಕ:2-6-2025 ರಿಂದ NSP ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಾರಂಭಿಸಿರುವುದಾಗಿ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಕಲ್ಲಿಸಲು, ಅನುಸರಿಸಬೇಕಾದ ಪ್ರಮುಖ ಅಂಶಗಳು : 2025-26ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration(OTR) ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. *(OTR) is a unique 14-digit number issued based on the Aadhaar/Aadhaar Enrolment ID (EID) One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique)…

Read More

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 778 NPCI Failure/ E-KYC Failure ಫಲಾನುಭವಿಗಳು ಇದ್ದು ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್ಪುಸ್ತಕ ಒಂದು ಅಥವಾ ಇತರೆ ಪಾಸ್ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ…

Read More

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, ಅರ್ಚಕರ ಬ್ಯಾಂಕ್ ಖಾತೆ ವಿವರ, ಅರ್ಚಕರುಗಳ ಆಧಾರ್ ಕಾರ್ಡ್ ಪ್ರತಿ, ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ದೃಢೀಕರಣ ಪತ್ರ, ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆ, 200/- ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜೂ. 16 ರಿಂದ 30ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 1 ನೆ ಮಹಡಿ, ಸತ್ಯ…

Read More

ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000 ಪ್ರೋತ್ಸಾಹಧನದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲ್ಲೂಕಿನ ಗ್ರಾ.ಪಂ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು/ನಗರ ಮಟ್ಟದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಯುಡಿಐಡಿ ಕಾರ್ಡ್, ಸಕ್ಷಮ ಪ್ರಾಧಿಕಾರಿದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆರೈಕೆದಾರರ ಬ್ಯಾಂಕ್ ಪಾಸ್ ಬುಕ್, 2 ಜಂಟಿ ಭಾವಚಿತ್ರ, ಆರೈಕೆದಾರರ ಹಾಗೂ ವಿಕಲಚೇತನರ ಆಧಾರ ಕಾರ್ಡ್ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಜೂ.30 ರೊಳಗಾಗಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ.: 08182-251676, ಶಿವಮೊಗ್ಗ ತಾಲ್ಲೂಕು…

Read More

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಗೊಳಿಸುವಂತೆ ಓಲಾ, ಉಬರ್ಕಂಪನಿಗಳಿಗೆ ನಿರ್ದೇಶಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಹೀಗಾಗಿ ಈ ಮೊದಲು ನಿಗದಿ ಆದಂತೆ ಜೂ.16ರಿಂದ ಬೈಕ್ ಟ್ಯಾಕ್ಸಿ ಕ್ಸಿ ಸೇವೆಗೆ ಸಂಪೂರ್ಣ ನಿರ್ಬಂಧ ಬೀಳಲಿದೆ. ಓಲಾ, ಊಬರ್ ರ್ಯಾ ಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 24ಕ್ಕೆ ನಿಗದಿಪಡಿಸಿದೆ. ವಿಚಾರಣೆ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಮ್ಮ ರೂಪಿಸಲು ಸರ್ಕಾರ ಸಿದ್ಧವಿಲ್ಲ 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಕರ್ನಾಟಕದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗೆ ಪೆರ್ಮಿಟ್ ನೀಡಿಲ್ಲ 4…

Read More

ಬೆಂಗಳೂರು : ರಾಜ್ಯದಲ್ಲಿ ಶೇ.99 ರಷ್ಟು ಮಕ್ಕಳು ಮೊಬೈಲ್ ಗೀಳು ಹಚ್ಚಿಕೊಂಡಿದ್ದಾರೆ ಎಂಬ ಆಘಾತಕಾರಿ ಅಂಶ ಬಹಿರಂಗಗೊಂಡಿದೆ. ಹೌದು,ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ಫಂಡ್ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿರುವ  ಮಕ್ಕಳ ಆನ್ಲೈನ್ ಅಪಾಯಗಳ ಕುರಿತು ವಿಶೇಷ ಅಧ್ಯಯನ ವರದಿಯಲ್ಲಿ ಮಕ್ಕಳ ಮೇಲೆ ಮೊಬೈಲ್ ಪರಿಣಾಮದ ಕುರಿತು ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ಫಂಡ್ ಇಂಡಿಯಾ ಸಂಸ್ಥೆಗಳು ಬೆಂಗಳೂರು, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜ ನಗರ, ರಾಯಚೂರು ಜಿಲ್ಲೆಗಳಲ್ಲಿನ 8ರಿಂದ 18 ವರ್ಷದ 900ಕ್ಕೂ ಹೆಚ್ಚಿನ ಮಕ್ಕಳ ಮೊಬೈಲ್ ಬಳಕೆ ಕುರಿತಂತೆ ಅಧ್ಯಯನ ನಡೆಸಲಾಗಿದ್ದು, 8-11 ವರ್ಷದ ಮಕ್ಕಳು ಶೇ. 87ರಷ್ಟು ಬಳಕೆ ಮಾಡುತ್ತಿದ್ದಾರೆ. 15ರಿಂದ 18 ವರ್ಷ ವಯಸ್ಸಿನ ಶೇ. 99ರಷ್ಟು ಹುಡುಗರು, ಶೇ.100ರಷ್ಟು ಹುಡುಗಿಯರು ಮೊಬೈಲ್ ಗೀಳಿಗೆ ತುತ್ತಾಗಿದ್ದಾರೆ ಎಂದು ತಿಳಿಸಿದೆ. ಅಧ್ಯಯನದ ಪ್ರಕಾರ 12ರಿಂದ 14 ವರ್ಷ ದ ಶೇ.97ರಷ್ಟು ಮಕ್ಕಳು ಯೂಟ್ಯೂಬ್ ಬಳಕೆ ಮಾಡುತ್ತಿದ್ದಾರೆ. ಉಳಿದಂತೆ ಶೇ.…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-146 ರಲ್ಲಿ ಶ್ರವಣ ಸಂಜೀವಿನಿ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣ ದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಷಿಯಾರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿ ಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು ರೂ. 12.00 ಕೋಟಿ ಒದಗಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ. ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಏಕ-ಕಡತದಲ್ಲಿ ಪ್ರಸ್ತುತ ನಡೆಯುತ್ತಿರುವ ಯೋಜನೆಯನ್ನು ಮುಂದುವರೆಸಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಯೋಜನೆಯನ್ನು ಮರು ವಿನ್ಯಾಸಗೊಳಿಸಿದ್ದು, ಈ ಕೆಳಕಂಡ ಪ್ರಮುಖ ವೈಶಿಷ್ಟ್ಯ ಒಳಗೊಂಡ ಯೋಜನೆಯ ಅನುಷ್ಠಾನಗೊಳಿಸಲು ಅನುಮೋದನೆ ನೀಡುವಂತೆ ಪ್ರಸ್ತಾಪಿಸಲಾಗಿದೆ. 1. ಎರಡು ವರ್ಷದವರೆಗಿನ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ನಿರ್ಬಂಧಿಸುವುದು, ಕೆಲವು ಅತೀ ಅಗತ್ಯವಿರುವ ಉನ್ನತ ಮಟ್ಟದ ತಜ್ಞರ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ ಗೃಹ ಆರೋಗ್ಯ ಯೋಜನೆಯ ಕಾರ್ಯಕ್ರಮವನ್ನು ಹೆಚ್ಚುವರಿ ಅಸಾಂಕ್ರಾಮಿಕ ಖಾಯಿಲೆಗಳ ರೋಗ ತಪಾಸಣೆಯೊಂದಿಗೆ ರಾಜ್ಯದಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೇಲೆ ಓದಲಾದ ಆಯುಕ್ತರು, ಆಕುಕ ಸೇವೆಗಳು ಇವರಿಂದ ಸ್ವೀಕೃತವಾದ ಏಕಕಡತದಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 143 ರಲ್ಲಿ “ ಗೃಹ ಆರೋಗ್ಯ ಯೋಜನೆಯಡಿ 2025-26ನೇ ಸಾಲಿನಲ್ಲಿ 6 ಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗುವುದು. ಈ ಯೋಜನೆಯನ್ನು ರೂ.100.00 ಕೋಟಿಗಳ ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು.” ಎಂದು ಘೋಷಿಸಲಾಗಿದೆ. ಕೋಲಾರ ಜಿಲ್ಲೆಯ ಪ್ರಾಯೋಗಿಕ ಹಂತದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ಸುಸಜ್ಜಿತ ಆರೋಗ್ಯ ತಂಡಗಳು ತಮ್ಮ ತಮ್ಮ ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ…

Read More

ಟೆಲ್ ಅವಿವ್ : ಇರಾನ್ ಶನಿವಾರ ಮುಂಜಾನೆ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಹೊಸ ಕ್ಷಿಪಣಿ ದಾಳಿಗಳನ್ನು ಪ್ರಾರಂಭಿಸಿತು, ಇದು ಈ ಪ್ರದೇಶದಲ್ಲಿ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷವನ್ನು ತೀವ್ರಗೊಳಿಸಿತು.  ಇರಾನ್ ರಾಜ್ಯ ಪ್ರಸಾರಕವು ದಾಳಿಯನ್ನು ದೃಢಪಡಿಸಿತು, “ಜಿಯೋನಿಸ್ಟ್ ಆಡಳಿತದ ಮೇಲೆ ಹೊಸ ಸುತ್ತಿನ ಇರಾನಿನ ಕ್ಷಿಪಣಿ ದಾಳಿಗಳು ಪಶ್ಚಿಮ ಇರಾನ್ನ ನಗರವಾದ ಟೆಹ್ರಾನ್ ಮತ್ತು ಕೆರ್ಮನ್ಶಾದಿಂದ ಪ್ರಾರಂಭವಾಗುತ್ತವೆ” ಎಂದು ಹೇಳಿತು. ಇಸ್ರೇಲಿ ಮಿಲಿಟರಿ ತಕ್ಷಣವೇ ಎಚ್ಚರಿಕೆಗಳನ್ನು ನೀಡಿತು, ದೇಶಾದ್ಯಂತ ನಿವಾಸಿಗಳು ಆಶ್ರಯ ಪಡೆಯುವಂತೆ ಒತ್ತಾಯಿಸಿತು. “ಇರಾನ್ನಿಂದ ಇಸ್ರೇಲ್ ರಾಜ್ಯದ ಕಡೆಗೆ ಕ್ಷಿಪಣಿಗಳನ್ನು ಗುರುತಿಸಿದ ನಂತರ ಇಸ್ರೇಲ್ನಾದ್ಯಂತ ಹಲವಾರು ಪ್ರದೇಶಗಳಲ್ಲಿ ಸೈರನ್ಗಳು ಸದ್ದು ಮಾಡಿದವು” ಎಂದು ಇಸ್ರೇಲ್ ರಕ್ಷಣಾ ಪಡೆಗಳು (IDF) ಹೇಳಿಕೆಯಲ್ಲಿ ತಿಳಿಸಿವೆ. ಇಸ್ರೇಲಿ ವಾಯುಪಡೆಯು “ಬೆದರಿಕೆಯನ್ನು ತೊಡೆದುಹಾಕಲು ಅಗತ್ಯವಿರುವಲ್ಲಿ ತಡೆಹಿಡಿಯಲು ಮತ್ತು ದಾಳಿ ಮಾಡಲು ಕಾರ್ಯನಿರ್ವಹಿಸುತ್ತಿದೆ” ಎಂದು IDF ಸೇರಿಸಿದೆ. ಟೆಲ್ ಅವಿವ್ ಮತ್ತು ಜೆರುಸಲೆಮ್ನಲ್ಲಿ ವಾಯುದಾಳಿ ಸೈರನ್ಗಳು ಮೊಳಗುತ್ತಿದ್ದಂತೆ ಮತ್ತು ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಾಗ ಅನೇಕ ಸ್ಫೋಟಗಳು ಕೇಳಿಬಂದವು…

Read More