Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈಶಾನ್ಯ ದೆಹಲಿಯ ನೆಹರು ವಿಹಾರ್ನಲ್ಲಿ ಶನಿವಾರ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಶವವನ್ನು ಸೂಟ್ ಕೇಸ್ ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 7 ರಂದು ರಾತ್ರಿ 8:41 ಕ್ಕೆ ದಯಾಳ್ಪುರ ಪೊಲೀಸ್ ಠಾಣೆಗೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಕರೆ ಬಂದಿತ್ತು ಎಂದು ಈಶಾನ್ಯ ದೆಹಲಿಯ ಡಿಸಿಪಿ ಆಶಿಶ್ ಮಿಶ್ರಾ ತಿಳಿಸಿದ್ದಾರೆ. ಪ್ರಾಥಮಿಕವಾಗಿ, ಆಸ್ಪತ್ರೆಯ ಹಾಜರಾದ ವೈದ್ಯರು ಆಕೆಯ ಮುಖದ ಮೇಲೆ ಗೋಚರಿಸುವ ಗಾಯಗಳು ಮತ್ತು ಲೈಂಗಿಕ ದೌರ್ಜನ್ಯದ ಆರೋಪವನ್ನು ಗಮನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರಸ್ತುತ ಅಪರಾಧ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತಂಡಗಳು ಸ್ಥಳವನ್ನು ಪರಿಶೀಲಿಸುತ್ತಿವೆ ಎಂದು ಹೇಳಿದರು. ಬಾಲಕಿಯ ತಂದೆಯ ಪ್ರಕಾರ, ಅವರ ಮಗಳು ಶನಿವಾರ ಸಂಜೆ ಐಸ್ ಪಡೆಯಲು…
ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್ ಇಂದು ಕಮಿಷನರ್ ಗೆ ದೂರು ನೀಡಿದೆ. ಆರ್ಸಿಬಿ ವಿಜಯೋತ್ಸವಕ್ಕೆ ಬಂದ್ದಿದ್ದ ಜನರ ಕಾಲ್ತುಳಿತದಿಂದ ನೆಲಮಟ್ಟದ ಗಿಡಗಳು ನೆಲಸಮವಾಗಿವೆ. ಕಬ್ಬನ್ ಪಾರ್ಕ್ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್ನಿಂದ ಇಂದು ಕಮಿಷನರ್ ಗೆ ದೂರು ನೀಡಿದೆ. ಆರ್ ಸಿಬಿ, ಡಿಎನ್ ಎ ಕಂಪನಿ, ಕೆ ಎಸ್ ಸಿಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಬೆಂಗಲೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದು, ವಿಧಾನಸೌಧ ಹಾಗೂ ಹೈಕೋರ್ಟ್ ಮುಂಭಾಗದಲ್ಲಿ ಸೇರಿದ ಭಾರಿ ಜನರ ದಟ್ಟಣೆಯಿಂದಾಗಿ ಬ್ಯಾರಿಕೇಡ್ಗಳು, ನೆಲಮಟ್ಟದ ಗಿಡಗಳನ್ನು ಜನ ತುಳಿದು ಹಾಕಿದ್ದಾರೆ. ಇದರಿಂದಾಗಿ ವಿಧಾನಸೌಧ ಮುಂಭಾಗದ ಗಿಡಗಳೆಲ್ಲಾ ಮುರಿದು ಒಣಗಿ ಹೋಗಿ ಸರ್ವನಾಶವಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಇಂದು ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಭಾವಚಿತ್ರಕ್ಕೆ ಪತ್ನಿ ಪುತ್ರ ಸೇರಿ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಪೋಷಕರು ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 2024 ರ ಜೂನ್ 11ರಂದು ನಟ ದರ್ಶನ್ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದರು. ಮೈಸೂರಿನ ನಿವಾಸದಲ್ಲಿ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಬ್ಬಾಳದ ಕಲ್ಯಾಣಗರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಗಂಡ-ಹೆಂಡತಿ ಹಾಗೂ ಮಕ್ಕಳು ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ಬೆಂಗಳೂರು ಕಾಲ್ತುಳಿತದ ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ನಾಳೆ ಬಿಜೆಪಿ ಮನವಿ ಮಾಡಲಿದೆ. ಬೆಂಗಳೂರು ಕಾಲ್ತುಳಿತ ದುರಂತ ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನಾಯಕರು ರಾಜ್ಯ ಸರ್ಕಾರ ವಜಾಗೊಳಿಸುವ ಸಂಬಂಧ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.
ಹೈದರಾಬಾದ್: ಹೃದಯಾಘಾತದಿಂದ ಭಾರತ ರಾಷ್ಟ್ರ ಸಮಿತಿ (BRS) ಜುಬಿಲಿ ಹಿಲ್ಸ್‌ನ ಶಾಸಕ ಮಗಂತಿ ಗೋಪಿನಾಥ್ ಅವರು ಇಂದು ಬೆಳಿಗ್ಗೆ 5.45 ಕ್ಕೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂರು ಬಾರಿ ಶಾಸಕರಾಗಿದ್ದ ಅವರನ್ನು ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಮಗಂತಿ ಗೋಪಿನಾಥ್ ಪತ್ನಿ ಸುನಿತಾ ಮತ್ತು ಮೂವರು ಮಕ್ಕಳಾದ ಮಗಂತಿ ವಾತ್ಯಾಲ್ಯನಾದ್, ಅಕ್ಷರ ನಾಗ ಮತ್ತು ದಿಶಿರಾ ಅವರನ್ನು ಅಗಲಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹೈಡ್ರಾಮವೊಂದು ನಡೆದಿದ್ದು, 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ಹೌದು, ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟಿರುವ ಘಟನೆ ನಡೆದಿದೆ. 4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಮದುವೆಯಾಗಿದ್ದರು. ಆದರೆ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಕಾರ್ತಿಕ್ ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ಮೊದಲ ಪತ್ನಿ ತನುಜಾಗೆ ಗೊತ್ತಾಗಿದ್ದು, ಕುಟುಂಬಸ್ಥರೊಂದಿಗೆ ಚಿತ್ರದುರ್ಗದ ಗಾಯಿತ್ರಿ ಕಲ್ಯಾಣ ಮಂಟಪಕ್ಕೆ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.
ಬೆಂಗಳೂರು : ದ್ವಿತೀಯ ಪಿ.ಯು.ಸಿ. 2025ರ ಸಾಲಿನ ವಾರ್ಷಿಕ ಪರೀಕ್ಷೆ-3ನ್ನು ಜೂನ್.9 ರ ನಾಳೆಯಿಂದ ಜೂ.20 ರವರೆಗೆ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ…
ಬೆಂಗಳೂರು: ವಿಧಾನ ಪರಿಷತ್ತಿಗೆ ಸಿಎಂ ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಸೇರಿ ಪಕ್ಷದ ನಾಲ್ವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, NRI ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಸಾಗರ್ ಅವರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಪಡೆದ ವಿಧಾನಪರಿಷತ್ ಸದಸ್ಯರಾಗಿ ಈ ನಾಲ್ವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.