Author: kannadanewsnow57

ಬೆಂಗಳೂರು : ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲಾ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ (ESIS ಫಲಾನುಭವಿಗಳೂ ಸೇರಿ) ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆಗಳನ್ನು ವಿಸ್ತರಿಸುವ ಕುರಿತ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ವಯೋ ವಂದನಾ ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಹಾಗೂ ಭಾರತ ಸರ್ಕಾರದ ಅನುಮೋದನೆಯ ಷರತ್ತಿಗೊಳಪಟ್ಟು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ (ESIS ಫಲಾನುಭವಿಗಳನ್ನು ಒಳಗೊಂಡಂತೆ) ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸಲು ಸರ್ಕಾರವು ಅನುಮೋದಿಸಿದೆ. ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 59 ವೆಚ್ಚ-5/2025, ದಿನಾಂಕ: 09.09.2025 ರಲ್ಲಿ ನೀಡಿರುವ ಸಹಮತಿ ಮತ್ತು ಸಚಿವ ಸಂಪುಟ ನಿರ್ಣಯ ಸಂಖ್ಯೆ: A:761/2025, ದಿನಾಂಕ: 11-9-2025ರಲ್ಲಿನ ಅನುಮೋದನೆ ಮೇರೆಗೆ ಹೊರಡಿಸಲಾಗಿದೆ.

Read More

ಬೆಂಗಳೂರು : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಸೆಪ್ಟೆಂಬರ್ 22, 2025 ರಿಂದ 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ಶಿಬಿರವನ್ನು ಏರ್ಪಡಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆಪ್ಟೆಂಬರ್ 22, 2025 ರಂದು ಸೋಮಾವರ ಬೆಳಿಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ…

Read More

ಕಲಬುರಗಿ : ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ದಿನಾಂಕ:17.09.2024ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಸಚಿವ ಸಂಪುಟವು ನಿರ್ಧರಿಸಲಾಗಿರುತ್ತದೆ. ಮುಂದುವರೆದು, ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿರುತ್ತದೆ. ದಿನಾಂಕ 16.09.2025 ರಂದು ನಡೆದ…

Read More

ಕಲಬರುಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದ್ದು, ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯಿದೆ ಎಂದು ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಈಗ 120ಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ ಅಪ್ಗಳಿಗೆ ಕಲಬುರಗಿ ನೆಲೆಯಾಗಿದೆ. ಇದರಿಂದಾಗಿ ಈ ಭಾಗದ ಪ್ರತಿಭಾವಂತರ ವಲಸೆಯನ್ನು ತಡೆಯಲು ತಕ್ಕಮಟ್ಟಿಗೆ ಸಾಧ್ಯವಾಗಿದೆ. 2030ರ ವೇಳೆಗೆ 500ಕ್ಕೂ ಹೆಚ್ಚು…

Read More

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಲಬುರಗಿಯಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು, ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ, ಇದುವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ…

Read More

ಕಲಬುರಗಿ : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣನವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುರುಬ ಜನಾಂಗವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಕೇಂದ್ರವೇ ನಿರ್ಧರಿಸಬೇಕು. ರಾಜ್ಯ ಕೇವಲ ಶಿಫಾರಸು ಮಾಡಬಹುದು. ಅಲ್ಲದೆ ‘ಸೆ.22ರಿಂದ ಅ.7ರವರೆಗೆ ನಡೆವ ಜಾತಿ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಕಾಲಂನಲ್ಲಿ ಬರೆಯಿಸಿ’ ಎಂದ ಕುರುಬರಿಗೆ ಕರೆ ನೀಡಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಹಿಂದೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಅದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಲಾಗುವುದು.  ರಾಯಣ್ಣ ಜನ್ಮದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣಿ ನಡೆಸಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವ ಕಾರ್ಡನ್ನೂ ರದ್ದು ಮಾಡುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ಪರಿಷ್ಕರಿಸಿ ಎಪಿಎಲ್ ಗೆ ಸೇರ್ಪಡೆ ಮಾಡಲಾಗುವುದು, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಶೇಕಡ 70ರಿಂದ 75ರಷ್ಟು ಬಿಪಿಎಲ್ ಕಾರ್ಡ್ ಗಳು ಇದ್ದು, ಬರೋಬ್ಬರಿ 1.17…

Read More

ನವದೆಹಲಿ :  ಕೇಂದ್ರ ಸರ್ಕಾರವು ದೇಶದ ರೈತರಿಗೆ ಒಂದು ಪ್ರಮುಖ ಉಡುಗೊರೆಯನ್ನು ನೀಡಿದೆ. ಇತ್ತೀಚೆಗೆ, ಸೆಪ್ಟೆಂಬರ್ 3, 2025 ರಂದು ನವದೆಹಲಿಯಲ್ಲಿ ನಡೆದ 56 ನೇ GST ಕೌನ್ಸಿಲ್ ಸಭೆಯಲ್ಲಿ, ರೈತರು ಮತ್ತು ಕೃಷಿ ವಲಯದ ಹಿತಾಸಕ್ತಿಗಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಸಾಮಾನ್ಯ ಜನರು, ಕಾರ್ಮಿಕ-ತೀವ್ರ ಕೈಗಾರಿಕೆಗಳು ಮತ್ತು ಕೃಷಿ ವಲಯವನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಗಳನ್ನು ಮಾಡಲಾಗಿದೆ. ಕೃಷಿ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಮೇಲಿನ ಪ್ರಮುಖ ತೆರಿಗೆ ವಿನಾಯಿತಿ ರೈತರ ವೆಚ್ಚವನ್ನು ಕಡಿಮೆ ಮಾಡಲು, ಸರ್ಕಾರವು ಕೃಷಿಯಲ್ಲಿ ಬಳಸುವ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (GST) ದರಗಳನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಈಗ, ಟ್ರ್ಯಾಕ್ಟರ್ಗಳು, ಥ್ರೆಷರ್ಗಳು, ಕೊಯ್ಲು ಯಂತ್ರಗಳು, ಹುಲ್ಲು ಮತ್ತು ಮೇವು ಕತ್ತರಿಸುವ ಮತ್ತು ಪ್ಯಾಕಿಂಗ್ ಯಂತ್ರಗಳು, ಹುಲ್ಲು ತಯಾರಿಸುವ ಯಂತ್ರಗಳು ಮತ್ತು ಗೊಬ್ಬರ ಯಂತ್ರಗಳು ಸೇರಿದಂತೆ ಎಲ್ಲಾ ಅಗತ್ಯ ಕೃಷಿ ಉಪಕರಣಗಳ ಮೇಲೆ ಕೇವಲ 5% GST ವಿಧಿಸಲಾಗುತ್ತದೆ. ಹಿಂದೆ, ಇವುಗಳಿಗೆ…

Read More

ನೆಲ್ಲೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಂಗಮ್ ಮಂಡಲದ ಪೆರಮಾನ ಬಳಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟವರನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಕರಣ ದಾಖಲಿಸಲಾಗಿದೆ. ಏತನ್ಮಧ್ಯೆ.. ಅಪಘಾತದಲ್ಲಿ ಮೃತಪಟ್ಟವರ ವಿವರಗಳು ಮತ್ತು ಅಪಘಾತದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ

Read More