Author: kannadanewsnow57

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನೂ ಮುಂದೆ ಮೂರು ತಿಂಗಳಿಗೊಮ್ಮೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. 2023 ಅಥವಾ 2024ನೇ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮ್ ನಲ್ಲಿ ತೇರ್ಗಡೆಯಾಗಿ, ಇನ್ನೂ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್‌ಸೈಟ್ https://sevasindhugs.karnataka.gov.in ಮೂಲಕ ಗ್ರಾಮ್‌ ಒನ್ , ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೆ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ : 18005997154ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.

Read More

ನವದೆಹಲಿ: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿರುವುದನ್ನು ಕೇಂದ್ರ ಸರ್ಕಾರ ದೃಢಪಡಿಸಿದೆ. ಅಲ್ಲದೇ ಭಾರತೀಯ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಲು ಸೂಚಿಸಿರುವುದಾಗಿ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಹೇಳಿದ್ದಾರೆ. ಇನ್ನು ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ದೃಢವಾಗಿ ಪ್ರತಿಕ್ರಿಯಿಸಲು ಪಡೆಗಳಿಗೆ ಸೂಚನೆ ನೀಡಲಾಗಿದೆ, ಸೇನೆಗೆ ಫ್ರೀ ಹ್ಯಾಂಡ್ ನೀಡಲಾಗಿದೆ. ಕದನ ವಿರಾಮದ ಒಪ್ಪಂದಂತೆ ಪಾಕಿಸ್ತಾನ ನಡೆದುಕೊಂಡಿಲ್ಲ. ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಸಿದ್ದವಾಗಿದೆ ಎಂದು ಅವರು ಹೇಳಿದರು.

Read More

ಬೆಂಗಳೂರು : ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅಗತ್ಯ ಬಿದ್ದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಈ ಕೆಳಕಂಡ ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು.…

Read More

ಶ್ರೀನಗರ : ಜಮ್ಮುಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನದ ದಾಳಿ ವೇಳೆ ಬಿಎಸ್ಎಫ್ ಇನ್ಸ್ ಪೆಕ್ಟರ್ ಇಮ್ತಿಯಾಜ್ ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರದ ಗಡಿಯಲ್ಲಿ ಪಾಕ್ ದಾಳಿಗೆ ಯೋಧ ಹುತಾತ್ಮರಾಗಿದ್ದಾರೆ. ಉಧಮ್ ಪುರ ಗಡಿಯಲ್ಲಿ ಮತ್ತೋರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆಯ ಸುರೇಂದ್ರ ಸಿಂಗ್ ಮೋಗಾ ಹುತಾತ್ಮರಾಗಿದ್ದಾರೆ.

Read More

ಶ್ರೀನಗರ : ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಮತ್ತೆ ಜಮ್ಮುಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ. ಪಾಕಿಸ್ತಾನದ ದಾಳಿ ವೇಳೆ ಬಿಎಸ್ಎಫ್ ಇನ್ಸ್ ಪೆಕ್ಟರ್ ಇಮ್ತಿಯಾಜ್ ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರದ ಗಡಿಯಲ್ಲಿ ಪಾಕ್ ದಾಳಿಗೆ ಯೋಧ ಹುತಾತ್ಮರಾಗಿದ್ದಾರೆ.

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನಗಳು ಚಲನಶೀಲ ಕ್ರಮಗಳ ಮೇಲಿನ ಷರತ್ತುಗಳ ಆಧಾರದ ಮೇಲೆ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ನವದೆಹಲಿಯ ಸರ್ಕಾರಿ ಮೂಲಗಳು ತಿಳಿಸಿವೆ. ಇದರರ್ಥ ಸಿಂಧೂ ಜಲ ಒಪ್ಪಂದದ ಅಮಾನತು ಮತ್ತು ವೀಸಾಗಳ ಅಮಾನತು ಕುರಿತು ನವದೆಹಲಿಯ ನಿರ್ಧಾರಗಳು ಜಾರಿಯಲ್ಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಈ ಪ್ರಗತಿಯನ್ನು ಘೋಷಿಸಿದರು, ಈ ಬೆಳವಣಿಗೆಗೆ ಅಮೆರಿಕ ಮಧ್ಯಸ್ಥಿಕೆಯ ಮಾತುಕತೆಗಳನ್ನು ಶ್ಲಾಘಿಸಿದರು. ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ” ಎಂದು ಅವರು ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು! ಎಂದು ಅವರು ಹೇಳಿದರು. ಒಪ್ಪಂದಕ್ಕೆ ಬರುವ ಗಂಟೆಗಳ ಮೊದಲು ಅವರ ಮಿಲಿಟರಿಗಳು ಪರಸ್ಪರರ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡವು, ಎರಡು…

Read More

ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಕುರಿತು. ಸರ್ಕಾರದ ಸುತ್ತೋಲೆ ಸಂಖ್ಯೆ:ಸಕಇ 60 ಬಿಸಿಎ 2004, ದಿನಾಂಕ:28-03-2005ರಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 2000ರ ನಿಯಮ-3(ಎ) (2) ಪ್ರಕಾರ ತಹಶೀಲ್ದಾರರು ಅರ್ಜಿ ಸ್ವೀಕರಿಸಿದ ದಿನಾಂಕದಿಂದ 2 ತಿಂಗಳೊಳಗಾಗಿ, ನಮೂನೆ-ಡಿ, ಇ, ಎಫ್ ಗಳಲ್ಲಿ ವ್ಯಾಸಂಗ, ಉದ್ಯೋಗ ಮತ್ತಿತರ ಎಲ್ಲಾ ಉದ್ದೇಶಗಳಿಗಾಗಿ ಜಾತಿ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದೆಂದು ಶ್ರುತಪಡಿಸಲಾಗಿದೆ ಎಂದು ನಮೂದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನೇರ ನೇಮಕಾತಿಗಾಗಿ ಸಂವಿಧಾನದ ಪರಿಚ್ಛೇದ 15(4) ಹಾಗೂ 16(4)ರಡಿಯಲ್ಲಿ ಪ್ರವರ್ಗ-॥ ಎ, ।।-ಬಿ, ||-ಎ, 111-ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕೆಳಗಿನ ಹಂತದ ಹುದ್ದೆಗಳಲ್ಲಿ ನಿರ್ಧಿಷ್ಟ ಅವಧಿಯ ಅನುಭವವನ್ನು ನಿಯಮಿಸಿದಲ್ಲಿ ಅಂತಹ ಸಂದರ್ಭದಲ್ಲಿ ಕನಪದರ…

Read More

ನವದೆಹಲಿ : ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆಯ ಪಾಕಿಸ್ತಾನಕ್ಕೆ ನುಗ್ಗಿದೆ. ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ಲಾಹೋರ್ ಕಡೆಗೆ ಹೊರಟಿವೆ. ಲಾಹೋರ್ ಸೇರಿ ಪಾಕಿಸ್ತಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಭಾರತೀಯ ಸೇನಾ ವಿಮಾನಗಳು ನುಗ್ಗಿವೆ.

Read More

ನವದೆಹಲಿ : ಪಾಕಿಸ್ತಾನ ಸೇನೆಯು ಜಮ್ಮು ಬಳಿಕ ಪಠಾಣ್ ಕೋಟ್ ಮೇಲೂ ಡ್ರೋನ್ ದಾಳಿ ನಡೆಸಿದ್ದು, ಭಾರತೀಯ ಸೇನೆಯು ದಾಳಿಯನ್ನು ವಿಫಲಗೊಳಿಸಿದೆ. ಇಂದು ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ 8 ಕ್ಷಿಪಣಿಗಳನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ. ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಸೆಕ್ಟರ್‌ಗಳಲ್ಲಿ ಪಾಕಿಸ್ತಾನ 8 ಕ್ಷಿಪಣಿಗಳನ್ನು ಉಡಾಯಿಸಿದೆ, ಎಲ್ಲವನ್ನೂ ಭಾರತೀಯ ವಾಯು ರಕ್ಷಣಾ ಘಟಕಗಳು ತಡೆದಿವೆ. https://twitter.com/ANI/status/1920511435601306086?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಜಮ್ಮು : ಇಂದು ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ 8 ಕ್ಷಿಪಣಿಗಳನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ. ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಸೆಕ್ಟರ್‌ಗಳಲ್ಲಿ ಪಾಕಿಸ್ತಾನ 8 ಕ್ಷಿಪಣಿಗಳನ್ನು ಉಡಾಯಿಸಿದೆ, ಎಲ್ಲವನ್ನೂ ಭಾರತೀಯ ವಾಯು ರಕ್ಷಣಾ ಘಟಕಗಳು ತಡೆದಿವೆ. https://twitter.com/ANI/status/1920511435601306086?ref_src=twsrc%5Egoogle%7Ctwcamp%5Eserp%7Ctwgr%5Etweet

Read More