Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ರಾಜ್ಯ ಸರ್ಕಾರವು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿರುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಇದು ಕರ್ನಾಟಕ ಸರ್ಕಾರದ ನಿರ್ಧಾರ – ಬಿಜೆಪಿ ಏಕೆ ಚಿಂತಿಸುತ್ತಿದೆ..? ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಅಧಿಕಾರ ಸರ್ಕಾರಕ್ಕೆ ಇದೆ, ಅದನ್ನು ಕಾನೂನಿನಲ್ಲಿ ನೀಡಲಾಗಿದೆ. ಅವರ ಅಧಿಕಾರಾವಧಿಯಲ್ಲಿಯೂ ಸಹ ಅದೇ ಕಾನೂನು ಅಸ್ತಿತ್ವದಲ್ಲಿತ್ತು. ಬ್ಯಾಲೆಟ್ ಪೇಪರ್ ಅಥವಾ ಇವಿಎಂ ಮೂಲಕ ಚುನಾವಣೆಗಳನ್ನು ನಡೆಸಬಹುದು ಎಂದು ಕಾನೂನು ಹೇಳುತ್ತದೆ ಎಂದರು. ನಮ್ಮ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ಗಳನ್ನು ಬಳಸಲು ನಿರ್ಧರಿಸಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲವನ್ನೂ ನಾವು ತನಿಖೆ ಮಾಡಿದ್ದೇವೆ. ನಾನು ಈಗ ಆ ವಿಷಯವನ್ನು ಚರ್ಚಿಸುವುದಿಲ್ಲ. ಕೇಂದ್ರ ಚುನಾವಣಾ ಆಯೋಗ, ರಾಜ್ಯ, ಸಂಸತ್ತು ಅಥವಾ ವಿಧಾನಸಭಾ ಚುನಾವಣೆಗಳಿಗೆ – ಅವರು ಬಯಸುವ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿ. ರಾಜ್ಯ ಸರ್ಕಾರದ ನಿರ್ಧಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಾತ್ರ…
ನವದೆಹಲಿ: ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಖ್ಯಾತ ನಟಿಯೊಬ್ಬರನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಅನುಷ್ಕಾ ಮೋನಿ ಮೋಹನ್ ದಾಸ್ ಳನ್ನು ಬಂಧಿಸಿದ್ದಾರೆ. ಬುಧವಾರ ಕಾಶಿಮಿರಾದ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿರುವ ಮಾಲ್ನಲ್ಲಿ ಬಂಧಿಸಲಾಗಿದೆ. ತಂಡವು ಆವರಣದ ಮೇಲೆ ದಾಳಿ ನಡೆಸಿ ವಂಚನೆ ಗ್ರಾಹಕರಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದೆ. ಟಿವಿ ಧಾರಾವಾಹಿಗಳು ಮತ್ತು ಬಾಂಗ್ಲಾ ಸಿನಿಮಾಗಳಲ್ಲಿ ಸಕ್ರಿಯವಾಗಿರುವ ಇಬ್ಬರು ಮಹಿಳೆಯರನ್ನು ಸಹ ನಾವು ರಕ್ಷಿಸಿದ್ದೇವೆ” ಎಂದು ವಸೈ-ವಿರಾರ್ ಪೊಲೀಸರ ಮೀರಾ-ಭಯಂದರ್ನ ಸಹಾಯಕ ಪೊಲೀಸ್ ಆಯುಕ್ತ ಮದನ್ ಬಲ್ಲಾಲ್ ಹೇಳಿದ್ದಾರೆ. ಮಾನವ ಕಳ್ಳಸಾಗಣೆ ಸಂಬಂಧ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 143(3) ಅಡಿಯಲ್ಲಿ ಮತ್ತು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆ (ಪಿಐಟಿಎ) ನಿಬಂಧನೆಗಳ ಅಡಿಯಲ್ಲಿ ದಾಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯರನ್ನು ಆಶ್ರಯ ಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ಶಿರನಗೊಂಡನಹಳ್ಳಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಚಿತ್ರಲಿಂಗ (31) ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಜ್ಜೀವನ್ ಫೈನಾನ್ಸ್ ಬಳಿ 1.23 ಲಕ್ಷ, ಐಡಿಎಫ್ ಸಿ ಬಳಿ 1 ಲಕ್ಷ ರೂ. ಎಲ್ ಎನ್ ಟಿ ಬಳಿ 75 ಸಾವಿರ ರೂ. ಸಾಲ ಪಡೆದಿದ್ದ ಚಿತ್ರಲಿಂಗ, ನನ್ನ ಕುಟುಂಬ ಚೆನ್ನಾಗಿರಲಿ ಎಂದು ಸಾಲ ಮಾಡಿದ್ದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಡೆತ್ ನೋಟ್ ನಲ್ಲಿ ಫೈನಾನ್ಸ್ ಕಂಪನಿ ಸಿಬ್ಬಂದಿ ನಂಬರ್ ಬರೆದು ನೇಣಿಗೆ ಶರಣಾಗಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳವೇ ನನ್ನ ಪತಿ ಸಾವಿಗೆ ಕಾರಣ ಎಂದು ಚಿತ್ರಲಿಂಗ ಪತ್ನಿ ಆರೋಪಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಗೆ ಪತ್ನಿ ಪವಿತ್ರಾ ದೂರು ನೀಡಿದ್ದಾರೆ.
ಉತ್ತರ ಕನ್ನಡ : ತಮಾಷೆ ಮಾಡೋಕೆ ಹೋಗಿ ಪ್ರಾಣವೇ ಹೋಗಿದ್ದು, ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮ ಫೈರಿಂಗ್ ಮಾಡಿದ ಪರಿಣಾಮ ಅಣ್ಣ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ತಮಾಷೆಗೆಂದು ತಮ್ಮ ಅಣ್ಣನ ಮೇಲೆ ಫೈರಿಂಗ್ ನಡೆಸಿದ್ದು, ಈ ವೇಳೆ ಗುಂಡು ಸಿಡಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಲಕನ ಮೃತದೇಹವನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಎಸ್ ಪಿ ಜಗದೀಶ್ ಹಾಗೂ ಸಿಪಿಐ ಶಶಿಕಾಂತ್ ವರ್ಮಾ ಭೇಟಿ ನೀಡಿದ್ದಾರೆ. ಮಕ್ಕಳ ಜೊತೆ ಆಟವಾಡುವಾಗ ಈ ಘಟನೆ ನಡೆದಿದೆ. ತಮಾಷೆಗಂತ ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮ ಫೈರಿಂಗ್ ಮಾಡಿದ್ದಾನೆ. ಈ ವೇಳೆ ಗುಂಡು ಸಿಡಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಮ್ಮ ಬಳಿ ಇರುವ ಇವಿಎಂ ಮಷಿನ್ ಗಳು ಹಳೆಯದಾಗಿವೆ. ಅವುಗಳನ್ನು ಡಿಸ್ಪೋಸ್ ಮಾಡುವಂತೆ ಇಸಿಐ ಸೂಚನೆ ನೀಡಿದೆ. ಬ್ಯಾಲೆಟ್ ಪೇಪರ್ ಬಳಸಿ ಚುನಾವನೆ ಮಾಡಿದ್ರೆ ತಪ್ಪಿಲ್ಲ. ನಾವು ಅದಕ್ಕೆ ಬೇಕಾದ ಸಿದ್ದತೆ ಮಾಡಿಕೊಳ್ಳಲು ರೆಡಿ ಇದ್ದೇವೆ. ಈಗ ರಾಜ್ಯ ಸರ್ಕಾರ ಕೂಡ ಇದನ್ನೇ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮತ್ತು ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮತ್ತು ಕೇಂದ್ರ ಚುನಾವಣಾ…
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡ ಕಛೇರಿಯ 44 ಸೇವೆಗಳು ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಕರೆಮಾಡಿ. ಪಂಚಮಿತ್ರ ಸಹಾಯವಾಣಿ- ಸದಾ ನಿಮ್ಮೊಂದಿಗೆ. ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಈಗ ನಾಡಕಚೇರಿ ಸೇವೆಗಳು ಲಭ್ಯ, ಜಾತಿ ಮತ್ತು ಆದಾಯ ಪ್ರಮಾಣಕ್ಕೆ ಅಲೆದಾಡುವ ಅಗತ್ಯವಿಲ್ಲ, ನಾಡಕಚೇರಿಯ 44 ಸೇವೆಗಳು ಬಾಪೂಜಿ ಸೇವಾಕೇಂದ್ರಗಳಲ್ಲಿ ಸಿಗಲಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಬಾಪೂಜಿ ಸೇವಾ ಕೇಂದ್ರಗಳಲ್ಇ 85 ಸೇವೆಗಳು ಲಭ್ಯವಿವೆ.
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸುಂದರವಾದ ಕೂದಲು ಎಲ್ಲರಿಗೂ ಮುಖ್ಯವಾದ ವಿಷಯ. ಆದ್ರೆ, ಸುಮಾರು 80 ಪ್ರತಿಶತ ಪುರುಷರು ಮತ್ತು 50 ಪ್ರತಿಶತ ಮಹಿಳೆಯರು ಕೂದಲು ಉದುರುವುದು ಮತ್ತು ತೆಳುವಾಗುವಂತಹ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಈಗ ಈ ಸಮಸ್ಯೆಗೆ ಹೊಸ ಪರಿಹಾರವಿದ್ದು, ವಿಜ್ಞಾನಿಗಳು ಹೊಸ ಔಷಧವನ್ನ ಅಭಿವೃದ್ಧಿಪಡಿಸಿದ್ದಾರೆ. ಇದು ಬೆಳೆಯುವುದನ್ನ ನಿಲ್ಲಿಸಿರುವ ಕೂದಲು ಕಿರುಚೀಲಗಳನ್ನ ಪುನಃ ಉತ್ತೇಜಿಸಲು ಸಹಾಯ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದಕ್ಕೂ ಪ್ರಸ್ತುತ ಔಷಧಿಗಳಿಗೂ ಏನು ವ್ಯತ್ಯಾಸ? ಮಿನೊಕ್ಸಿಡಿಲ್ ಮತ್ತು ಫಿನಾಸ್ಟರೈಡ್ ನಂತಹ ಸಾಮಾನ್ಯವಾಗಿ ಲಭ್ಯವಿರುವ ಔಷಧಿಗಳು ಕೂದಲು ಉದುರುವಿಕೆಯನ್ನ ಮಾತ್ರ ಕಡಿಮೆ ಮಾಡುತ್ತವೆ. ಆದಾಗ್ಯೂ, PP405 ಎಂಬ ಹೊಸದಾಗಿ ಅಭಿವೃದ್ಧಿಪಡಿಸಲಾದ ಅಣುವು ಕೂದಲಿನ ಬೆಳವಣಿಗೆಯನ್ನ ಉತ್ತೇಜಿಸುತ್ತದೆ. ಇದು ಸುಪ್ತ ಕೂದಲು ಕಿರುಚೀಲಗಳನ್ನ ಜಾಗೃತಗೊಳಿಸುತ್ತದೆ. ಅದು ಹೇಗೆ ಕೆಲಸ ಮಾಡುತ್ತದೆ? ಕೂದಲು ಕೋಶಕ ಕಾಂಡಕೋಶಗಳು ಸಕ್ರಿಯವಾಗಿದ್ದಾಗ, ಅವು ಕೂದಲನ್ನು ಮತ್ತೆ ಬೆಳೆಯುತ್ತವೆ. ಅವು ಸುಪ್ತ ಸ್ಥಿತಿಯಲ್ಲಿದ್ದಾಗ, ಕೂದಲಿನ ಬೆಳವಣಿಗೆ ನಿಲ್ಲುತ್ತದೆ. ಈ ಜೀವಕೋಶಗಳು ಸಕ್ರಿಯವಾಗಿದ್ದಾಗ, ಅವು…
ಬೆಂಗಳೂರು : ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ ಸಮಗ್ರ ಪುನರ್ವಸತಿಗಾಗಿ ಕರ್ನಾಟಕದಲ್ಲಿ ಮರು ಸಮೀಕ್ಷೆ ನಡೆಸಲು ಹಲವು ಸಂಸ್ಥೆಗಳು ಮತ್ತು ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಇದಕ್ಕಾಗಿ, 45 ವರ್ಷಗಳ ವಯಸ್ಸಿನ ಮಿತಿಯನ್ನು ಕೈಬಿಟ್ಟು, ಎಲ್ಲಾ ವಯಸ್ಸಿನ ದೇವದಾಸಿಯರನ್ನು ಒಳಗೊಳ್ಳಬೇಕು ಮತ್ತು ಸಮೀಕ್ಷೆಯನ್ನು ಮನೆ-ಮನೆಗೆ ತೆರಳಿ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ದೇವದಾಸಿಯರ ಮರು ಸಮೀಕ್ಷೆಗೆ ನಿರ್ಧರಿಸಿದ್ದು, ಇಂದು ಸಿಎಂ ಚಾಲನೆ ನೀಡಿದರು.ಕರ್ನಾಟಕ ಮಹಿಳಾ ಅಭಿವೃದ್ದಿ ನಿಗಮದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. https://twitter.com/CMofKarnataka/status/1963562510482563103
ಬೆಂಗಳೂರು : ಬೆಂಗಳೂರಿನಲ್ಲಿ ಪ್ರಿಯಕರನಿಗಾಗಿ 3 ಮಕ್ಕಳನ್ನು ಬಿಟ್ಟು ತಾಯಿ ಒಬ್ಬಳು ಓಡಿ ಹೋಗಿದ್ದು, ಹೆಂಡತಿಗಾಗಿ ಗಂಡ ಗೋಳಾಟ ನಡೆಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರದಲ್ಲಿ ಘಟನೆ ನಡೆದಿದ್ದು, 11 ವರ್ಷದ ಹಿಂದೆ ಮಂಜುನಾಥ್ ಎಂಬುವರ ಜೊತೆಗೆ ಮದುವೆಯಾಗಿದ್ದ ಲೀಲಾವತಿ ಭಾನುವಾರ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ. ತಾಯಿಗಾಗಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಲೀಲಾವತಿ ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಪೊಲೀಸರ ಮುಂದೆಯೂ ನನಗೆ ಪ್ರಿಯಕರ ಬೇಕೆಂದು ಪಟ್ಟು ಹಿಡಿದಿದ್ದಾಳೆ. ಇದರಿಂದ ಗಂಟ ಮಂಜುನಾಥ್ ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಗೋಳಾಟ ನಡೆಸಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಯೋಜನೆಗಳು ಕುರಿತ ಮಾಹಿತಿಯನ್ನು ಈ ಕೆಳಕಂಡಂತೆ ನೀಡಲಾಗಿದೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳು : ನೇರಸಾಲ ಯೋಜನೆ-ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ. ಹೈನುಗಾರಿಕೆ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಷು ಅಥವಾ ಗರಿಷ್ಟ ರೂ. 1.25ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಸ್ವಾವಲಂಬಿ ಸಾರಥಿ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಉದ್ಯಮ ಶೀಲತಾ ಯೋಜನೆ- (ಬ್ಯಾಂಕ್ಗಳ ಸಹಯೋಗದೊಂದಿಗೆ) ಇತರೆ ಉದ್ದೇಶ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ.…