Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ. ಅರ್ಜಿ ಸಲ್ಲಿಕೆ ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಹಾಗೂ ಹೋಬಳಿಗೆ ನಿಗದಿಪಡಿಸಿದ ಗುರಿಗಳನ್ವಯ ಕಾರ್ಯಕ್ರಮ ಅನುಷ್ಠಾನಗೊಳಿಸುವುದು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ರೈತರ ಅರ್ಜಿ ರೈತರ ಭಾವಚಿತ್ರ FID (FID ಇಲ್ಲವಾದಲ್ಲಿ ಆಧಾರ್ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ) ಕೃಷಿ ಭಾಗ್ಯ ಪ್ಯಾಕೇಜ್ ನಲ್ಲಿ ಈ ಕೆಳಕಂಡ ಘಟಕಗಳು ಒಳಗೊಂಡಿದೆ ಕ್ಷೇತ್ರ ಬದು ನಿರ್ಮಾಣ ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಪೋಲಾಗದಂತೆ ಅದೇ ಜಮೀನಿನಲ್ಲಿ ಇಂಗಿಸಲು ಹಾಗೂ ಕೃಷಿ ಹೊಂಡದಲ್ಲಿ ಸಂಗ್ರಹಿಸಲು ಕ್ಷೇತ್ರ ಬದು ನಿರ್ಮಾಣ. ಕೃಷಿ ಹೊಂಡ ಎಲ್ಲಾ ರೀತಿಯ…
ಬೆಂಗಳೂರು : ರಾಜ್ಯ ಸರ್ಕಾರವು ಅಸ್ಪೃಶ್ಯತಾ ನಿವಾರಣಾ ಉದ್ದೇಶದಿಂದ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನ ಯೋಜನೆಯನ್ನು ಜಾರಿಮಾಡಲಾಗಿದೆ. ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಇತರೆ ಜಾತಿಯ ಯುವತಿ/ಯುವಕರನ್ನು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ಕ್ರಮವಾಗಿ 2.50 ಲಕ್ಷ ಹಾಗೂ 3 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಇತರೆ ಜಾತಿಯ ಯುವತಿ/ಯುವಕರನ್ನು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ʼಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನʼ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುತ್ತದೆ. ಅಂತರ್ಜಾತಿ ವಿವಾಹವಾದ ದಂಪತಿಗಳು, ವಿವಾಹವಾದ 18 ತಿಂಗಳುಗಳ ಒಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ : https://swdservices.karnataka.gov.in/swincentive/ICM/ICMHome.aspx
ಬೆಂಗಳೂರು : ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವ ಗಡುವು ಮುಗಿದಿದ್ದು, ಇಂದಿನಿಂದ ಕ್ರಮ ಕೈಗೊಳ್ಳಲು ಬಿಬಿಎಂಪಿ ನಿರ್ಧರಿಸಿದೆ. ಫೆಬ್ರವರಿ 28 ರಂದು ಹೊರಡಿಸಿದ್ದ ಸುತ್ತೋಲೆಯಂತೆಯೇ ಶೇ 60ರಷ್ಟು ಕನ್ನಡ ಬಳಸದ ವಾಣಿಜ್ಯ ಮಳಿಗೆಗಳ ʼವ್ಯಾಪಾರ ಪರವಾನಗಿʼ ಅಮಾನತು ಮಾಡಿ, ಬೀಗ ಹಾಕಲಾಗುತ್ತದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ರಾಜ್ಯದಲ್ಲಿನ ಎಲ್ಲಾ ಉದ್ದಿಮೆಗಳು, ಕಾರ್ಖಾನೆಗಳು, ಬ್ಯಾಂಕ್‍ಗಳು, ಸಂಘ, ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಶಾಲಾ, ಕಾಲೇಜುಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯ ಪ್ರದರ್ಶನ ಇರಲೇಬೇಕಾಗುತ್ತದೆ. ಕನ್ನಡವನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿದ್ದಲ್ಲಿ 5 ಸಾವಿರದಿಂದ 10 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ. ರಾಜ್ಯದ ಆಡಳಿತ ಭಾಷೆ ಕನ್ನಡವಾಗಿರುವುದರಿಂದ ಎಲ್ಲರೂ ಸ್ವಯಂ ಪ್ರೇರಿತವಾಗಿ ಕನ್ನಡ ಬಳಕೆ ಮಾಡಬೇಕು. ಒಂದು ವೇಳೆ ಸಂಪೂರ್ಣವಾಗಿ ಕನ್ನಡ ಬಳಕೆ ಮಾಡುವುದಾದರೇ ಯಾವುದೇ ಅಭ್ಯಂತರ ಇರುವುದಿಲ್ಲ. ಬ್ಯಾಂಕ್, ಉದ್ದಿಮೆಗಳು ತ್ರಿಭಾಷಾ ಸೂತ್ರ…
ಬೆಂಗಳೂರು : ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದೆ. ಇದರೊಂದಿಗೆ ಇನ್ನೂ ಮೂರು ತಿಂಗಳು ಆಧಾರ್ ಕಾರ್ಡ್ ಬಳಕೆದಾರರು ಉಚಿತ ಆಧಾರ್ ಅಪ್‌ಡೇಟ್ ಪ್ರಯೋಜನ ಪಡೆಯಬಹುದಾಗಿದೆ. ಆದರೆ, ಉಚಿತ ಪರಿಷ್ಕರಣೆ ಸೇವೆಯು ಆನ್‌ಲೈನ್ ಪೋರ್ಟಲ್‌ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯ. ನಿಮ್ಮ ಆಧಾರ್ ಕಾರ್ಡ್ ಆನ್ಲೈನ್ನಲ್ಲಿ ಉಚಿತವಾಗಿ ನವೀಕರಿಸುವುದು ಹೇಗೆ.? * ಯುಐಡಿಎಐ ಅಧಿಕೃತ ವೆಬ್ಸೈಟ್ https://uidai.gov.in ಗೆ ಭೇಟಿ ನೀಡಿ * ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾವನ್ನ ನಮೂದಿಸಿ ಮತ್ತು ನಿಮ್ಮ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ ‘ಸೆಂಡ್ ಒಟಿಪಿ’ ಕ್ಲಿಕ್ ಮಾಡಿ * ಇದರ ನಂತರ ‘ಡೆಮೋಗ್ರಾಫಿಕ್ಸ್ ಡೇಟಾವನ್ನು ನವೀಕರಿಸಿ’ ಮತ್ತು ಸಂಬಂಧಿತ ಆಯ್ಕೆಯನ್ನು ಆರಿಸಿ. * ‘ಮುಂದುವರಿಯಿರಿ’ ಕ್ಲಿಕ್ ಮಾಡಿ ಮತ್ತು ಅಗತ್ಯ ಡಾಕ್ಯುಮೆಂಟ್ ಅನ್ನು…
ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ 2021 ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದೆ. 2022 ರ ಮಾರ್ಚ್ 31 ರವರೆಗೆ ನೋಂದಣಿಯಾದ ಮತ್ತು 2022 ರ ಮಾರ್ಚ್ 31 ರೊಳಗೆ ಅಪಘಾತಗೊಂಡು ಮರಣ ಹೊಂದಿದ/ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ, ಅಸಂಘಟಿತ ಕಾರ್ಮಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತ ಪರಿಹಾರ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು:-ಮರಣ ಹೊಂದಿದ್ದಲ್ಲಿ, ನಾಮನಿರ್ದೇಶಿತರ ಆಧಾರ್ ಕಾರ್ಡ್, ಇ-ಶ್ರಮ್ (ಯು.ಎ.ಎನ್) ಕಾರ್ಡ್, ಮರಣ ಪ್ರಮಾಣ ಪತ್ರ, ಮರಣ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್.ಐ.ಆರ್, ಮರಣೋತ್ತರ ಪರೀಕ್ಷೆಯ ವರದಿ, ಫಲಾನುಭವಿಯು ಅಪ್ರಾಪ್ತ ವಯಸ್ಕರಾಗಿದ್ದಲ್ಲಿ, ಜಿಲ್ಲಾ ನ್ಯಾಯಾಲಯವು ನೀಡಿದ ಪಾಲಕನ ಅಧಿಕಾರ ಪ್ರಮಾಣ ಪತ್ರವನ್ನು ಹಾಜರು ಪಡಿಸಬೇಕು. ಶಾಶ್ವತ ದುರ್ಬಲತೆ ಅಥವಾ ಭಾಗಶಃ ಅಂಗ ವೈಕಲ್ಯತೆಗೆ ಒಳಗಾದಲ್ಲಿ, ಅಂಗವೈಕಲ್ಯ…
ಬೆಂಗಳೂರು : ನೋಂದಣಿ ಸಮಯದಲ್ಲಿನ ಅಕ್ರಮಗಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಪೌತಿ ಪಹಣಿ ಅದಾಲತ್ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸಲು ಪಹಣಿಗಳೊಂದಿಗೆ ಆಧಾರ್ ಜೋಡಣೆ ಕಾರ್ಯ (ನನ್ನ ಆಸ್ತಿ ಅಭಿಯಾನ) ಆರಂಭಿಸಲಾಗಿದೆ. ಪ್ರಾಯೋಗಿಕವಾಗಿ ಸಂಗ್ರಹಿಸಿದ 19 ಲಕ್ಷ ಪಹಣಿಗಳಲ್ಲಿ 6 ಲಕ್ಷ ಪಹಣಿಗಳು ಮೃತರ ಹೆಸರಿನಲ್ಲೇ ಇರುವುದು ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿನ 1.87 ಕೋಟಿ ಪಹಣಿ ಸಂಗ್ರಹಿಸಿದರೆ ಪೌತಿ ಪಹಣಿಗಳ ಸಂಖ್ಯೆಯ ನಿಖರ ಮಾಹಿತಿ ದೊರೆಯುತ್ತದೆ. ಮೃತರ ಹೆಸರಿನಲ್ಲಿ ಪಹಣಿ ಇದ್ದರೆ ದುರ್ಬಳಕೆಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಲೋಕ್ ಅದಾಲತ್ ಮೂಲಕ ಇಂತಹ ಪಹಣಿಗಳನ್ನು ಅದರ ವಾರಸುದಾರರಿಗೆ ವರ್ಗಾಯಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ತಿಳಿಸಿದ್ದಾರೆ.
ಉಡುಪಿ : ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ ಎಂದು ತಿಳಿಸಿದರು. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 3,11,652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 7,66,000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಬಡವರಿಗೆ ಅಕ್ಕಿ…
ಉಡುಪಿ : ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಕೊಟ್ರೂ ಬಿಜೆಪಿಯವರು ನನ್ನನ್ನು ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ರೂ. 100 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಆದರೂ ನನ್ನನ್ನು ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ ಎಂದರು. ಪ್ರಧಾನಿ ಮೋದಿ ಅವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ “ಬಿಜೆಪಿ ಗೋಬ್ಯಾಕ್” ಎನ್ನಬೇಕು.
ನವದೆಹಲಿ:ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಪುಷ್ಪಕ್ ನ ಎರಡನೇ ಲ್ಯಾಂಡಿಂಗ್ ಪರೀಕ್ಷೆಯನ್ನು ಇಸ್ರೋ ನಡೆಸಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ 2035 ರ ವೇಳೆಗೆ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಯೋಜಿಸುತ್ತಿರುವುದರಿಂದ ಬಾಹ್ಯಾಕಾಶಕ್ಕೆ ಕಡಿಮೆ ವೆಚ್ಚದ ಪ್ರವೇಶವನ್ನು ಸಕ್ರಿಯಗೊಳಿಸಲು ಸಂಪೂರ್ಣವಾಗಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನಕ್ಕಾಗಿ ಅಗತ್ಯ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡುತ್ತಿದೆ. ಈ ತಿಂಗಳ ಅಂತ್ಯದ ವೇಳೆಗೆ ಲ್ಯಾಂಡಿಂಗ್ ಪರೀಕ್ಷೆ ನಡೆಯಬಹುದು ಎಂದು ಇಸ್ರೋ ಮೂಲಗಳು ಖಚಿತಪಡಿಸಿವೆ. ಅಂತಿಮ ದಿನಾಂಕವನ್ನು ಬಾಹ್ಯಾಕಾಶ ಸಂಸ್ಥೆ ಇನ್ನೂ ಬಿಡುಗಡೆ ಮಾಡಿಲ್ಲ. ಹೈಪರ್ಸಾನಿಕ್ ಫ್ಲೈಟ್, ಸ್ವಾಯತ್ತ ಲ್ಯಾಂಡಿಂಗ್ ಮತ್ತು ಪವರ್ಡ್ ಕ್ರೂಸ್ ಫ್ಲೈಟ್ ಸೇರಿದಂತೆ ವಿವಿಧ ತಂತ್ರಜ್ಞಾನಗಳನ್ನು ಮೌಲ್ಯಮಾಪನ ಮಾಡಲು ಫ್ಲೈಯಿಂಗ್ ಟೆಸ್ಟ್ ಬೆಡ್ ಆಗಿ ಕಾರ್ಯನಿರ್ವಹಿಸಲು ರೆಕ್ಕೆಗಳ ತಂತ್ರಜ್ಞಾನ ಪ್ರದರ್ಶನಕಾರ ಆರ್ಎಲ್ವಿಯನ್ನು ಕಾನ್ಫಿಗರ್ ಮಾಡಲಾಗಿದೆ. ಕಳೆದ ತಿಂಗಳು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ವಾಹನದ ಅಭಿವೃದ್ಧಿಯ ಬಗ್ಗೆ ವಿವರಿಸಿದರು. ಜನವರಿ…
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮಂಡಳಿ ಅಧ್ಯಕ್ಷ ರಾಮ್ ಮನೋಹರ್ ಅವರು ಬಿಲ್ಡರ್ ಗಳು ಮತ್ತು ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ನೀರಿನ ಬಿಕ್ಕಟ್ಟನ್ನು ನಿಭಾಯಿಸಲು ಪ್ರಯತ್ನಿಸಿದರು. 20,000 ಚದರ ಅಡಿಗಿಂತ ಹೆಚ್ಚಿನ ಕಟ್ಟಡಗಳನ್ನು ನಿರ್ಮಿಸುವಲ್ಲಿ ತೊಡಗಿರುವ ಬಿಲ್ಡರ್ ಗಳು ಈಗ ನಿರ್ಮಾಣ ಕಾರ್ಯಗಳಿಗೆ ‘ಶುದ್ಧೀಕರಿಸಿದ ಪರಿಸರ ಸ್ನೇಹಿ ನೀರನ್ನು’ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿರ್ದೇಶನವು ಒಣಗುತ್ತಿರುವ ಸರೋವರಗಳನ್ನು ದಿನಕ್ಕೆ 1,300 ಮಿಲಿಯನ್ ಲೀಟರ್ ಸಂಸ್ಕರಿಸಿದ ನೀರಿನಿಂದ ತುಂಬಿಸುವ ಮೂಲಕ ಅಂತರ್ಜಲವನ್ನು ಮರುಪೂರಣ ಮಾಡುವ ಇತ್ತೀಚಿನ ಉಪಕ್ರಮಗಳನ್ನು ಅನುಸರಿಸುತ್ತದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಕಾರು ತೊಳೆಯುವುದು, ತೋಟಗಾರಿಕೆ, ನಿರ್ಮಾಣ, ನೀರಿನ ಕಾರಂಜಿಗಳು ಮತ್ತು ರಸ್ತೆ ನಿರ್ವಹಣೆ ಸೇರಿದಂತೆ ಅಗತ್ಯವಲ್ಲದ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿದೆ. ಈ ನಿರ್ಬಂಧವನ್ನು ಉಲ್ಲಂಘಿಸುವವರು ₹ 5,000 ದಂಡವನ್ನು ಎದುರಿಸಬೇಕಾಗುತ್ತದೆ. ನೀರು ಸರಬರಾಜನ್ನು ಹೆಚ್ಚಿಸಲು, ಬಿಡಬ್ಲ್ಯೂಎಸ್ಎಸ್ಬಿ ಫಿಲ್ಟರ್ ಬೋರ್ವೆಲ್ಗಳನ್ನು ಸ್ಥಾಪಿಸುತ್ತಿದೆ ಮತ್ತು ಪುನರುಜ್ಜೀವನಗೊಂಡ ಸರೋವರದ ಹಾಸಿಗೆಗಳ ಬಳಿ ನೀರಿನ ಘಟಕಗಳನ್ನು ನಿರ್ಮಿಸುತ್ತಿದೆ,…