Author: kannadanewsnow57

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತಕ್ಕೆ ಪರಮಾಣ ಬಾಂಬ್ ಬೆದರಿಕೆ ಹಾಕಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಛೀಮಾರಿ ಹಾಕಲಾಗಿದೆ. ಸೋಮವಾರ ನಡೆದ ಮುಚ್ಚಿದ ಬಾಗಿಲಿನ ಸಮಾಲೋಚನೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಸದಸ್ಯರು ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಎತ್ತಿದರು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಕೋರಿಕೆಯ ಮೇರೆಗೆ ನಡೆದ ಅನೌಪಚಾರಿಕ ಸಭೆಯು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜೀವಗಳನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ದಕ್ಷಿಣ ಏಷ್ಯಾದಲ್ಲಿ ಹದಗೆಡುತ್ತಿರುವ ಭದ್ರತಾ ವಾತಾವರಣದ ಮೇಲೆ ಕೇಂದ್ರೀಕರಿಸಿದೆ. ಸಭೆಯ ಗೌಪ್ಯ ಮೂಲಗಳು ವರದಿಗಾರರಿಗೆ ತಿಳಿಸಿದ್ದು, ಕೌನ್ಸಿಲ್ ಸದಸ್ಯರು ಪಾಕಿಸ್ತಾನದ “ಸುಳ್ಳು ಧ್ವಜ” ನಿರೂಪಣೆಯನ್ನು ಸ್ವೀಕರಿಸಲು ನಿರಾಕರಿಸಿದರು ಮತ್ತು ಬದಲಿಗೆ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT) ದಾಳಿಯಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆಯೇ ಎಂದು ಪ್ರಶ್ನಿಸಿದರು. ಭಯೋತ್ಪಾದಕ ದಾಳಿಯ ಬಗ್ಗೆ ವ್ಯಾಪಕ ಖಂಡನೆ ಮತ್ತು ಹೊಣೆಗಾರಿಕೆಯ ಅಗತ್ಯವನ್ನು ಗುರುತಿಸಲಾಯಿತು. ಕೆಲವು ಸದಸ್ಯರು ನಿರ್ದಿಷ್ಟವಾಗಿ ತಮ್ಮ ಧಾರ್ಮಿಕ ನಂಬಿಕೆಯ…

Read More

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಹ ಸಿದ್ಧವಾಗಿದೆ. ಯುದ್ಧಕ್ಕೆ ಮಿಲಿಟರಿ ಸಿದ್ಧತೆಗಳ ಮಧ್ಯೆ, ಭಾರತ ಸರ್ಕಾರವು ನಾಗರಿಕ ಮಟ್ಟದಲ್ಲಿ ಯುದ್ಧಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ದೇಶಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತುಗಳು, ಅಭ್ಯಾಸಗಳು ಮತ್ತು ಪೂರ್ವಾಭ್ಯಾಸಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಆದೇಶಗಳನ್ನು ಹೊರಡಿಸಿದೆ. ಜನರಿಗೆ ಆತ್ಮರಕ್ಷಣೆಯ ತರಬೇತಿ ನೀಡಬೇಕು. ಪಾಕಿಸ್ತಾನದೊಂದಿಗಿನ ಯುದ್ಧ ಪ್ರಾರಂಭವಾಗುವ ಮೊದಲು 1971 ರಲ್ಲಿ ಇಂತಹ ಅಣಕು ಡ್ರಿಲ್ ಅನ್ನು ಕೊನೆಯ ಬಾರಿಗೆ ನಡೆಸಲಾಯಿತು. ಇದಕ್ಕಾಗಿ ಇಂದು ಗೃಹ ಸಚಿವಾಲಯದಲ್ಲಿ ಎಲ್ಲಾ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಸಭೆ ನಡೆಯುತ್ತಿದೆ. ಗೃಹ ಸಚಿವಾಲಯದ ಉತ್ತರ ಬ್ಲಾಕ್‌ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಅವರು 244 ನಾಗರಿಕ ರಕ್ಷಣಾ ಜಿಲ್ಲೆಗಳ ಪ್ರತಿನಿಧಿಗಳೊಂದಿಗೆ ಹಾಜರಿದ್ದರು. ಅರೆಸೈನಿಕ ಪಡೆಗಳ ಹಿರಿಯ ಅಧಿಕಾರಿಗಳು ಮತ್ತು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಅಗ್ನಿಶಾಮಕ ಸೇವೆ, ನಾಗರಿಕ…

Read More

ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೆಂಪು ಮೂತಿ ಹುಳು ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ.ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ. 4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದ್ದು, ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ. ನಿರ್ವಹಣಾ ಕ್ರಮಗಳು: ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು ಮತ್ತು ಸುಳಿಯಲ್ಲಿರುವ…

Read More

ತುಮಕೂರು : ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆ ಮುಂದಿನ ವಿದುತ್‌ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋರಘಟ್ಟದಲ್ಲಿ ಮನೆ ಮುಂದಿನ ತಂತಿ ಬೇಲಿ ವಿದ್ಯುತ್‌ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದು, ಈ ವೇಳೆ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ದಂಡಿಶಿವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಟಿನ್‌ ಚೆಕಪ್‌ ಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಭೇಟಿ ನೀಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

Read More

ದಾವಣಗೆರೆ :ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕಾಭಿವೃದ್ದಿಯಾಗುತ್ತಿದ್ದು ಯೋಜನೆಗಳ ಅನುಷ್ಟಾನಕ್ಕೆ ಅಪಸ್ವರವೆತ್ತಿದವರು ರಾಜ್ಯಕ್ಕೆ ಬಂದು ಗ್ಯಾರಂಟಿ ಯೋಜನೆಗಳ ಅಧ್ಯಯನ ಮಾಡುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು. ಅವರು ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಇಂಧನ, ಸಾರಿಗೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಂದ ಏರ್ಪಡಿಸಲಾದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕಚೇರಿ ಉದ್ಘಾಟನೆ ನೆರವೇರಿಸಿ ಸಮಾರಂಭದಲ್ಲಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಕಷ್ಟ, ಇದರಿಂದ ಆರ್ಥಿಕ ನಷ್ಟವಾಗಿ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿದ್ದರು. ಆದರೆ ಯೋಜನೆಗಳನ್ನು ಕಳೆದೆರಡು ವರ್ಷಗಳಿಂದ ಯಶಸ್ವಿಯಾಗಿ ಅನುಷ್ಟಾನ ಮಾಡಲಾಗಿದೆ. ಯಶಸ್ವಿಯಾದ ಯೋಜನೆಗಳ ಕುರಿತು ವಿವಿಧ ರಾಜ್ಯಗಳು ಕರ್ನಾಟಕಕ್ಕೆ ಬಂದು ಅಧ್ಯಯನ ಮಾಡುವಂತಾಗಿದೆ. ಪ್ರತಿ ಕುಟುಂಬಕ್ಕೆ 4 ರಿಂದ 6 ಸಾವಿರದಷ್ಟು ಯೋಜನೆಗಳ ಲಾಭ ಸಿಗುತ್ತಿರುವುದರಿಂದ ಜನರ…

Read More

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನೂ ಮುಂದೆ ಮೂರು ತಿಂಗಳಿಗೊಮ್ಮೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. 2023 ಅಥವಾ 2024ನೇ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮ್ ನಲ್ಲಿ ತೇರ್ಗಡೆಯಾಗಿ, ಇನ್ನೂ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್‌ಸೈಟ್ https://sevasindhugs.karnataka.gov.in ಮೂಲಕ ಗ್ರಾಮ್‌ ಒನ್ , ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೆ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ : 18005997154ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ  ಕಿರೇಸೂರು ಕ್ರಾಸ್‌ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಒಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ  ಕಿರೇಸೂರು ಕ್ರಾಸ್‌ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಒಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದ್ದು, ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ವಾಬಸಂದ್ರ ಬಳಿ ನಡೆದಿದೆ. ಪ್ರಿಯದರ್ಶಿನಿ (21) ಎಂಬ ಮಹಿಳೆಯನ್ನು ಪತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕಳೆದ ಒಂದು ವಾರದ ಹಿಂದೆ ದಂಪತಿಗಳು ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. ಇವರಿಗೆ ಒಂದು ಮಗು ಕೂಡ ಇತ್ತು. ಹೆಂಡತಿಯನ್ನು ಕೊಂದ ಗಂಡ ಎಸ್ಕೇಪ್ ಆಗಿದ್ದನು. ಮಗು ಅಳುತ್ತಿದ್ದ ಶಬ್ದ ಕೇಳಿ ಮನೆಯೊಳಗೆ ಬಂದ ಮನೆ ಮಾಲೀಕಿ ಕೊಲೆ ನಡೆದಿದ್ದನ್ನು ಕಂಡು ಬೆಚ್ಚಿಬಿದ್ದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More