Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಸೆಪ್ಟೆಂಬರ್.15ರಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ಅದರ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪುಜಾಪ್ರಭುತ್ವದ ಆಡಳಿತ, ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮದ ಮೌಲ್ಯಗಳನ್ನು ಬಲಪಡಿಸಲು 2007 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ವಿದ್ಯುತ್ ಸರಬರಾಜು…
ಕಳೆದ ತಿಂಗಳ ಆರಂಭದಲ್ಲಿ UPI ನಿಯಮಗಳಲ್ಲಿ ಹಲವು ಬದಲಾವಣೆಗಳಾಗಿವೆ. ಅದೇ ಸಮಯದಲ್ಲಿ, ಈಗ ಮತ್ತೊಮ್ಮೆ ರಾಷ್ಟ್ರೀಯ ಪಾವತಿ ನಿಗಮ ಅಂದರೆ NPCI ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಅಂದರೆ UPI ಮೂಲಕ ದೊಡ್ಡ ಡಿಜಿಟಲ್ ಪಾವತಿಗಳನ್ನು ಮಾಡಲಿದೆ. ಹೌದು, ಈ ಬಾರಿ ವಹಿವಾಟು ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಲಾಗಿದೆ. ಈ ಹೊಸ ನಿಯಮಗಳು ಈ ತಿಂಗಳು 15 ಸೆಪ್ಟೆಂಬರ್ 2025 ರಿಂದ ಜಾರಿಗೆ ಬರಲಿವೆ. ಅಂದರೆ, Gpay-PhonePe ಅನ್ನು ನಡೆಸುವವರು ಈಗ ಅವುಗಳನ್ನು ತಿಳಿದುಕೊಳ್ಳಬೇಕು. ಈ ಹೊಸ ಬದಲಾವಣೆಗಳು ವಿಶೇಷವಾಗಿ ವ್ಯಕ್ತಿಯಿಂದ ವ್ಯಾಪಾರಿಗೆ ಅಂದರೆ P2M ವಹಿವಾಟುಗಳಿಗೆ ಅನ್ವಯಿಸುತ್ತವೆ. ಸರಳವಾಗಿ ಹೇಳುವುದಾದರೆ, ನೀವು ವಿಮಾ ಪ್ರೀಮಿಯಂ ಪಾವತಿಸಿದರೆ, ಸಾಲದ EMI ಪಾವತಿಸಿದರೆ ಅಥವಾ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ. ಆದಾಗ್ಯೂ, ವ್ಯಕ್ತಿಯಿಂದ ವ್ಯಕ್ತಿಗೆ ವಹಿವಾಟುಗಳ ಮಿತಿ ಅಂದರೆ ಕುಟುಂಬ ಅಥವಾ ಸ್ನೇಹಿತರಿಗೆ ಹಣವನ್ನು ಕಳುಹಿಸುವುದು ಹಿಂದಿನಂತೆಯೇ ದಿನಕ್ಕೆ 1 ಲಕ್ಷ ರೂ. ಇರುತ್ತದೆ. ಇದರಲ್ಲಿ ಈಗ ಯಾವುದೇ ಬದಲಾವಣೆ ಇರುವುದಿಲ್ಲ. UPI ಮಿತಿಯಲ್ಲಿ ಏನು ಬದಲಾಗುತ್ತಿದೆ…
ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲು ಸರ್ಕಾರ ಮುಂದಾಗಿದೆ. ಹೌದು, ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆಗೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಪತಿ/ಪತ್ನಿಗೆ 1 ಲಕ್ಷದಿಂದ 2 ಲಕ್ಷ ರೂ.ವರೆಗಿನ ಸೌಲಭ್ಯವನ್ನು ಆರೋಗ್ಯ ಸೇವೆಯಡಿ ಸೇರ್ಪಡೆಗೊಳಿಸಿದೆ. ಆರೋಗ್ಯ ಭಾಗ್ಯ ಯೋಜನೆಯಡಿ ಸಿಜಿಎಚ್ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಸರ್ಕಾರ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗೆ ಗರಿಷ್ಠ ಮಿತಿ 1 ವರ್ಷಕ್ಕೆ ಓರ್ವ ಸದಸ್ಯನ ಕುಟುಂಬಕ್ಕೆ 1 ಲಕ್ಷ ರೂ. ಸಿಗಲಿದೆ.
ಬೆಂಗಳೂರು : ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆಪ್ಟಂಬರ್ 15ರಿಂದ ಆರಂಭಿಸಿ, 45 ಕಚೇರಿ ಕೆಲಸದ ದಿನಗಳಲ್ಲಿ ಮುಕ್ತಾಯಗೊಳಿಸಲಾಗುತ್ತದೆ. ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆ್ಯಪ್ ಮೂಲಕ ಟ್ರಾನ್ಸ್ಜೆಂಡರ್ಸ್ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ KARMANI ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಗೆ ಸೇವಾ ಸಿಂಧು ಮೂಲಕ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ವೆಬ್ ಅಪ್ಲಿಕೇಶನ್ ರೆಡಿ ಮಾಡಲಾಗಿದೆ. ಈ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಯಲಿದೆ.…
ನವದೆಹಲಿ : ಡಿಜಿಟಲ್ ಪಾವತಿಗಳನ್ನ ಹೆಚ್ಚು ಸುಲಭವಾಗಿ ಮತ್ತು ವೇಗವಾಗಿ ಮಾಡುವ ಪ್ರಯತ್ನದಲ್ಲಿ, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಬಂಡವಾಳ ಮಾರುಕಟ್ಟೆ ಹೂಡಿಕೆಗಳು, ವಿಮಾ ಕಂತುಗಳು, ಕ್ರೆಡಿಟ್ ಕಾರ್ಡ್ ಬಿಲ್’ಗಳು, ಪ್ರಯಾಣ ಮತ್ತು ಸರ್ಕಾರಿ ಪಾವತಿಗಳಂತಹ ಆಯ್ದ ವ್ಯಾಪಾರಿ ವರ್ಗಗಳಿಗೆ ಈ ಬದಲಾವಣೆ ಅನ್ವಯಿಸುತ್ತದೆ. ಮಾಸಿಕ ಮಿತಿಯನ್ನ ಕ್ಯಾಲೆಂಡರ್ ತಿಂಗಳ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ, ಪ್ರತಿ ವರ್ಗಕ್ಕೂ ವಿಭಿನ್ನ ಮಿತಿಗಳು ಅನ್ವಯವಾಗುತ್ತವೆ. P2P (ವ್ಯಕ್ತಿಯಿಂದ ವ್ಯಕ್ತಿಗೆ) ವರ್ಗಾವಣೆಗಳು ದಿನಕ್ಕೆ 1 ಲಕ್ಷ ರೂ.ಗಳಲ್ಲಿ ಬದಲಾಗದೆ ಉಳಿಯುತ್ತವೆ. ಇನ್ನು ಮುಂದೆ, UPI ಮೂಲಕ 24 ಗಂಟೆಗಳ ಒಳಗೆ 10 ಲಕ್ಷ ರೂ. ವರೆಗಿನ ವಹಿವಾಟುಗಳನ್ನ ಮಾಡಬಹುದು. ವಿಶೇಷವಾಗಿ ತೆರಿಗೆ ಪಾವತಿ ಮತ್ತು ಇತರ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ವರ್ಗಗಳಿಗೆ ಈ ಬದಲಾವಣೆ ಮಾಡಲಾಗಿದೆ. ಈ ಹೊಸ ವ್ಯವಸ್ಥೆಯು ಸೆಪ್ಟೆಂಬರ್ 15, 2025ರಿಂದ ಜಾರಿಗೆ ಬರಲಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕವನ್ನ ಗಮನದಲ್ಲಿಟ್ಟುಕೊಂಡು NPCI…
ಮಂಡ್ಯ : ಈ ವರ್ಷ ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವರ್ಷ ಸುಮಾರು 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಬಿತ್ತನೆ ಆಗಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಗಗನಚುಕ್ಕಿ ಜಲಪಾತ ಅಭಿವೃದ್ಧಿಗೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಜನ ಕೂತು ನೋಡಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಜನರು ಜಲಪಾತ ವೀಕ್ಷಿಸಲು ಬರಬೇಕು. ಕಳೆದ ಮೂರು ವರ್ಷಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಶಿವನಸಮುದ್ರ ಜಲಾಶಯದಲ್ಲಿ 1902 ರಲ್ಲಿ ಏಷ್ಯಾದಲ್ಲಿಯೇ ಮೊದಲ ಬಾರಿಗೆ ವಿದ್ಯುತ್…
ಬೆಂಗಳೂರು : ಬೆಂಗಳೂರಲ್ಲಿ ಇಂದಿನಿಂದ ಮೂರು ದಿನ ಕಾವೇರಿ ನೀರು ಸರಬರಾಜು ಬಂದ್ ಆಗಲಿದೆ. ಸೆಪ್ಟೆಂಬರ್ 15 ರ ಇಂದಿನಿಂದ ಸೆ. 17ರವರೆಗೆ ಕಾವೇರಿ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ. ಸುಮಾರು 68 ಗಂಟೆಗಳ ಕಾಲ ನೀರು ಸರಬರಾಜು ಬಂದ್ ಮಾಡಲಾಗುತ್ತಿದೆ. ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ. ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳಲ್ಲಿ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಹಾಗೂ 17ರಂದು ಸ್ಥಗಿತಗೊಳಿಸಲಾಗುತ್ತದೆ. ಕಾವೇರಿ 5ನೇ ಹಂತ ಸೆಪ್ಟೆಂಬರ್.15ರಿಂದ ಬೆಳಿಗ್ಗೆ 1 ರಿಂದ ಸೆಪ್ಟೆಂಬರ್.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳ ಕಾಲ ಕಾವೇರಿ 1, 2, 3, 4,ರಲ್ಲಿ ಸೆಪ್ಟೆಂಬರ್ 16ರ ಬೆಳಿಗ್ಗೆ 6ರಿಂದ ಸೆಪ್ಟೆಂಬರ್ 17ರ ಬೆಳಿಗ್ಗೆ 6ರವರೆಗೆ…
ನವದೆಹಲಿ : ಮಲೇರಿಯಾ ವಿರುದ್ಧದ ಹೋರಾಟದಲ್ಲಿ ಭಾರತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ದೇಶದಲ್ಲಿ ತಯಾರಾಗುವ ಮೊದಲ ಮಲೇರಿಯಾ ಲಸಿಕೆಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಅನುಮೋದಿಸಿದೆ. ಅಡ್ಫಾಲ್ಸಿವಾಕ್ಸ್ ಎಂಬ ಈ ಲಸಿಕೆ ಏಕಕಾಲದಲ್ಲಿ ಮಲೇರಿಯಾದ ಬಹು ಹಂತಗಳನ್ನು ಗುರಿಯಾಗಿಸುತ್ತದೆ ಮತ್ತು ರೋಗಿಯನ್ನು ರಕ್ಷಿಸುವ ಸಾಮರ್ಥ್ಯವನ್ನು ಕಾಯ್ದುಕೊಳ್ಳುತ್ತದೆ. ತಜ್ಞರ ಪ್ರಕಾರ, ಈ ಲಸಿಕೆ 2030 ರ ವೇಳೆಗೆ ಮಲೇರಿಯಾವನ್ನು ನಿರ್ಮೂಲನೆ ಮಾಡುವ ಭಾರತದ ಗುರಿಯಲ್ಲಿ ಉತ್ತಮ ಸಹಾಯ ಮಾಡುತ್ತದೆ. ಅಡ್ಫಾಲ್ಸಿವಾಕ್ಸ್ ಎಂದು ಕರೆಯಲ್ಪಡುವ ಈ ಲಸಿಕೆ ಅತ್ಯಂತ ಮಾರಕ ಮಲೇರಿಯಾ ಪರಾವಲಂಬಿ ಪ್ಲಾಸ್ಮೋಡಿಯಂ ಫಾಲ್ಸಿಪ್ಯಾರಮ್ ವಿರುದ್ಧ ರಕ್ಷಿಸಲು ವಿನ್ಯಾಸಗೊಳಿಸಲಾದ ಭಾರತದ ಮೊದಲ ಲಸಿಕೆಯಾಗಿದೆ. ಈ ಲಸಿಕೆಯನ್ನು ಭುವನೇಶ್ವರದಲ್ಲಿರುವ ICMR ನ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ (RMRC) ಅಭಿವೃದ್ಧಿಪಡಿಸಲಾಗಿದೆ. ಈ ಲಸಿಕೆ ವಿಶೇಷ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ರಕ್ತವನ್ನು ತಲುಪುವ ಮೊದಲು ಮಲೇರಿಯಾ ಪರಾವಲಂಬಿಯನ್ನು ನಿಲ್ಲಿಸುತ್ತದೆ. ಇದು ಮಲೇರಿಯಾದಿಂದ ವ್ಯಕ್ತಿಯನ್ನು ರಕ್ಷಿಸುವುದಲ್ಲದೆ, ಈ ಲಸಿಕೆ ಈ ರೋಗವು ಇತರರಿಗೆ ಹರಡುವುದನ್ನು ತಡೆಯುತ್ತದೆ.…
ನವದೆಹಲಿ: ತಂಬಾಕು ಸೇವನೆಯಿಂದಾಗಿ ಪ್ರತಿ ವರ್ಷ ಭಾರತದಲ್ಲಿ 13.5 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸಂಬಂಧಿತ ಕಾಯಿಲೆಗಳಿಗಾಗಿ ಭಾರತೀಯರು 1.77 ಲಕ ಕೋಟಿ ರು ಗೂ ಅಧಿಕ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ(ಸಿಡಿಸಿ) ವರದಿ ತಿಳಿಸಿದೆ. 10 ಭಾರತೀಯರಲ್ಲಿ ಒಬ್ಬರು ತಂಬಾಕು ಸಂಬಂಧಿತ ಕಾಯಿಲೆಗಳಿಂದ ಅಕಾಲಿಕವಾಗಿ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಧೂಮಪಾನ ತ್ಯಜಿಸುವ ಪ್ರಮಾಣ ಮಾತ್ರ ಕಡಿಮೆಯೇ ಉಳಿದಿವೆ. ಕೇವಲ ಶೇ.7ರಷ್ಟು ಧೂಮಪಾನಿಗಳು ಧೂಮಪಾನ ತ್ಯಜಿಸುತ್ತಾರೆ ಎಂದು ಅದು ತಿಳಿಸಿದೆ. ತಜ್ಞರ ಪ್ರಕಾರ, ಧೂಮಪಾನವು ಹೃದಯ ಕಾಯಿಲೆಯ ಅಪಾಯವನ್ನು 2 ರಿಂದ 3 ಪಟ್ಟು ಹೆಚ್ಚಿಸುತ್ತದೆ. ತಂಬಾಕಿನಲ್ಲಿರುವ ನಿಕೋಟಿನ್ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದರಿಂದಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಸಿಗುವುದಿಲ್ಲ. ಇದರ ಹೊರತಾಗಿ, ಧೂಮಪಾನವು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಅಪಧಮನಿಗಳಲ್ಲಿ ಪ್ಲೇಕ್ ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದು ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿದೆ. ಹೃದಯ ಕಾಯಿಲೆಗಳ ಹೊರತಾಗಿ, ಧೂಮಪಾನವು ದೇಹದ ಬಹುತೇಕ ಎಲ್ಲಾ ಭಾಗಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.…
ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 18 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ತರಬೇತಿ ನೀಡಲಾಗುವುದು ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 25000 ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ದೊರೆಯಬೇಕೆಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯಾದ್ಯಂತ 800 ಕೆಪಿಎಸ್ ಹಾಗೂ 5,000 ದ್ವಿಭಾಷಾ ಶಾಲೆ ಮಂಜೂರು ಮಾಡಲಾಗಿದೆ. 18 ಸಾವಿರ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.












