Author: kannadanewsnow57

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ. ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.

Read More

ಮೈಸೂರು : ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಭರ್ಜರಿ ಸಿದ್ಧತೆ ನಡೆದಿದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ- ಸಿಎಂ ಸಿದ್ದರಾಮ್ಯಯ ಶುಭಸಂದೇಶ ನಾಡಿನ ಸಮಸ್ತ ಜನತೆಗೆ ನಾಡಹಬ್ಬ ಮೈಸೂರು ದಸರಾದ ಹಾರ್ದಿಕ ಶುಭಾಶಯಗಳು. ನಮ್ಮ ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಹೊನಲಿನಲ್ಲಿ ಪ್ರಕಾಶಮಾನವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಕರ್ನಾಟಕದ ಹೆಮ್ಮೆ ಶಕ್ತಿಯ ಆರಾಧನೆ, ಕಲಾ ಸಂಸ್ಕೃತಿಯ ಪೋಷಣೆ ಮತ್ತು ಸಮೂಹ ಸೌಹಾರ್ದತೆಯ ಪ್ರತೀಕವಾಗಿದೆ, ನ್ಯಾಯದ ಸ್ಥಾಪನೆಯ ಸಂಕೇತವಾಗಿದೆ. ಈ ದಸರಾ ಹಬ್ಬದ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿಯ ಕೃಪೆ ಎಲ್ಲರ ಮೇಲೂ ಇರಲಿ. ನಾಡಿನಲ್ಲಿ ಶಾಂತಿ, ಸಮೃದ್ಧಿ ಮತ್ತು ಸೌಭಾಗ್ಯ ಮೇಲೈಸಲಿ ಎಂಬುದೇ ನನ್ನ ಹಾರೈಕೆ. ವೈಭವೋಪೇತ ಮೈಸೂರು ದಸರಾ ಹಬ್ಬವು ನಾಡಿನ ವೈಶಿಷ್ಟ್ಯತೆ, ಜನಪದ ಕಲಾಪರಂಪರೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, `ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಬಡ್ತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೌದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವಿ ಮತ್ತು TET Certification ಶಾಲಾ ಶಿಕ್ಷಕರುಗಳಿಗೆ ಸಂಚಿತ ಪರಿಣಾಮ ಹೊಂದಿಲ್ಲದಂತೆ ಒಂದು ಬಾರಿಯ ವೇತನ ಬಡ್ತಿಯನ್ನು ನೀಡಲು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅವಕಾಶ ನೀಡಲು ಮತ್ತು ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹೀಗಿವೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ…

Read More

ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಸ್ಡಡಿ ಚಿತ್ರಹಿಂಸೆ ತಡೆಯಲು ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸ್ವಯಂ ಪ್ರೇರಿತ ನೋಟಿಸ್ ನೀಡಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. 2025 ರ ಮೊದಲ ಎಂಟು ತಿಂಗಳಲ್ಲಿ ರಾಜಸ್ಥಾನದಲ್ಲಿ 11 ಜನರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳುವ ಮಾಧ್ಯಮ ವರದಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪರಿಗಣಿಸಿದೆ. ವರದಿಯ ಪ್ರಕಾರ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವುದಿಲ್ಲ. ತಾಂತ್ರಿಕ ದೋಷಗಳು, ಸಂಗ್ರಹಣೆಯ ಕೊರತೆ, ನಡೆಯುತ್ತಿರುವ ತನಿಖೆಗಳು ಅಥವಾ ಕಾನೂನು ನಿರ್ಬಂಧಗಳು ಸೇರಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ತಡೆಹಿಡಿಯಲು ಪೊಲೀಸರು ವಿವಿಧ ಕಾರಣಗಳನ್ನು ನೀಡಿದ್ದಾರೆ. ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮತ್ತು ಕಸ್ಟಡಿ ಚಿತ್ರಹಿಂಸೆಯ ಪ್ರಕರಣಗಳನ್ನು ತಡೆಯಲು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದನ್ನು ಸುಪ್ರೀಂ ಕೋರ್ಟ್…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹೀಗಿದೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಗತ್ಯವಿರುವ 271 ಎಕರೆ ಜಮೀನನ್ನು ₹77.35 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ. ಬೇಡ್ತಿ ನದಿಯಿ೦ದ ನೀರನ್ನು ಎತ್ತಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳನ್ನು ತುಂಬಿಸುವ ₹179.50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ. ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಯ ಮೂಲಕ ಹಾವೇರಿ ಜಿಲ್ಲೆಯ ಬ್ಯಾಡಗಿ ಮತ್ತು ಹಾನಗಲ್‌ ತಾಲೂಕಿನ 137 ಕೆರೆಗಳನ್ನು ತು೦ಬಿಸುವ ₹115.60 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ. ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯನ್ನು, ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ಹಾಗೂ ಬೀದ‌ರ್ ಜಿಲ್ಲೆಯ ಹೂಮ್ನಾಬಾದ್‌ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ. ರಾಜ್ಯದ 22 ವಿಧಾನಸಭಾ…

Read More

ಧಾರವಾಡ : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ. ಹುಬ್ಬಳ್ಳಿಯ ಸೆಂಟ್ರಲ್ಎ ಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್ನಿಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರಲ್ಲಿತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತವನ್ನು ಠೇವಣಿ ಇಟ್ಟಿದ್ದರು. ಕೇಲವು ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು ಮತ್ತು ಕೇಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು. ದೂರುದಾರರು ಎದುರುದಾರರ ಬಗ್ಗೆ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ ಮರಳಿಸುವಂತೆ ಎದುರುದಾರರಿಗೆ ಸಾಕಷ್ಟು ಸಲ ಕೇಳಿಕೊಂಡಿರುತ್ತಾರೆ. ಆದರೆ ಎದುರುದಾರರು ಠೇವಣಿ ಹಣವನ್ನು ಕೊಡದೆ ತಮಗೆ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತ ಹೇಳಿ ಸೊಸೈಟಿಯವರ, ಎದುರುದಾರರ ಮೇಲೆ ಕ್ರಮಕೈಗೊಂಡು ತಮ್ಮ ಠೇವಣಿ ಹಣ ಮರುಪಾವತಿಸುವಂತೆ ಮತ್ತು ತಮಗಾದ ತೊಂದರೆ…

Read More

ಬೆಂಗಳೂರು : ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ. ಈ ಮೂಲಕ ದೇಸಾಯಿ ವಿಚಾರಣಾ ಆಯೋಗ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದೆ. ಡಿ.ಕೆ. ಶಿವಕುಮಾರ್ ಬೆಂಬಲಿಗರ ಕೇಸ್ ವಾಪಸ್ ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ ಬೇರೆ ಬೇರೆಯ 62 ಕ್ರಿಮಿನಲ್ ಕೇಸ್ ಗಳನ್ನು ಸಂಪುಟ ಸಭೆ ಹಿಂಪಡೆದುಕೊಂಡಿದೆ. ಡಿ.ಕೆ. ಬೆಂಬಲಿಗರ 11 ಪ್ರಕರಣಗಳನ್ನು ಸಂಪುಟ ಸಭೆ ಕೈಬಿಡಲು ತೀರ್ಮಾನ ಕೈಗೊಂಡಿದೆ. 2019ರಲ್ಲಿ ಡಿಕೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಅವರ ಬಂಧನ ಖಂಡಿಸಿ ಬೆಂಬಲಿಗರು…

Read More

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್ ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ. ಈ ಸಮಯದಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದರಿಂದ ಅನ್ಯಕೋಮಿನವರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ, ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸೆ.15 ರವರೆಗೆ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು…

Read More