Author: kannadanewsnow57

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಮಳೆ ಹಾನಿ ಪ್ರದೇಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್‌ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಿಬಿಎಂಪಿ, ಬಿಡಬ್ಲುಎಸ್‌ ಎಸ್‌ ಬಿ ಹಾಗೂ ಬಿಡಿಎ ಅಧಿಕಾರಿಗಳು ಸಾಥ್‌ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ರಾಜಕಾಲುವೆ ಪರಿಶೀಲನೆ ನಡೆಸಲಿದ್ದಾರೆ. ನಂತರ ನಾಯಂಡಹಳ್ಳಿ ಜಂಕ್ಷನ್‌ ಬಳಿಕ ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆ.ಪಿ.ನಗರದ ರಾಗಿಗುಡ್ಡ ಜಂಕ್ಷನ್‌ ವೀಕ್ಷಣೆ, ಅನುಗ್ರಹ ಲೇಔಟ್‌ ನ ರಾಜಕಾಲುವೆ ಕಾಮಗಾರಿ, ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನ ರಾಜ ಕಾಲುವೆ ಕಾಮಗಾರಿ, ಯೆಮಲೂರು ಬಳಿಕ ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಗೃಹ ಕಚೇರಿಗೆ ಸಿಎಂ ಸಿದ್ದರಾಮಯ್ಯ ವಾಪಸ್‌ ಆಗಲಿದ್ದಾರೆ ಎಂದು ಸಿಎಂ ಕಚೇರಿ…

Read More

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ ಹೈಕೋರ್ಟ್​ ಮುಂದೆ ಈ ರಿಟ್​ ಅರ್ಜಿ ವಿಚಾರಣೆಗೆ ಬಂದಿದೆ. ಆದ್ರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್​​ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ…

Read More

ನವದೆಹಲಿ : ಹಾಂಕಾಂಗ್‌, ನೇಪಾಳ ಮತ್ತು ಸಿಂಗಾಪುರದಲ್ಲಿ ನಿಷೇಧಕ್ಕೆ ಒಳಗಾಗಿರುವ ಎಂಡಿಎಚ್‌, ಎವರೆಸ್ಟ್‌ ಕಂಪನಿಯ ಮಸಾಲೆ ಪದಾರ್ಥಗಳಲ್ಲಿ ಯಾವುದೇ ಹಾನಿಕಾರಕ ಅಂಶಗಳಿಲ್ಲ ಎಂದು ಕೇಂದ್ರ ಸರ್ಕಾರದ ಎಫ್‌ಎಸ್‌ಎಐ ಸ್ಪಷ್ಟನೆ ನೀಡಿದೆ. ಸರ್ಕಾರಿ ಮೂಲಗಳ ಪ್ರಕಾರ, ನೇಪಾಳದಲ್ಲಿನ ಭಾರತೀಯ ಮಿಷನ್ನ ಅಧಿಕಾರಿಗಳು ನೇಪಾಳದ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಿದರು, ಅವರು ಸ್ವತಂತ್ರ ಮೌಲ್ಯಮಾಪನಗಳಿಗಿಂತ ಸುದ್ದಿ ವರದಿಗಳ ಆಧಾರದ ಮೇಲೆ ಕಾರ್ಯನಿರ್ವಹಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ನಿರ್ದೇಶನಗಳಿಗೆ ಅನುಗುಣವಾಗಿ, ಸಾಂಬಾರ ಪದಾರ್ಥಗಳ ಮಂಡಳಿಯು ಆಯಾ ಕಂಪನಿಗಳ ಉತ್ಪನ್ನಗಳ ಮೇಲೆ ಎಚ್ಚರಿಕೆಯಿಂದ ತಪಾಸಣೆ ಮತ್ತು ಮಾದರಿ ಅಭ್ಯಾಸವನ್ನು ಕೈಗೊಂಡಿತು. ಎಂಡಿಎಚ್ ಗಾಗಿ ಪರೀಕ್ಷಿಸಲಾದ ಎಲ್ಲಾ 18  ಮಾದರಿಗಳು ಮಾನದಂಡದ ಪ್ರಕಾರ ಇರುವುದು ಕಂಡುಬಂದಿದೆ. ಆದಾಗ್ಯೂ, ಎವರೆಸ್ಟ್ನ 12 ಮಾದರಿಗಳಲ್ಲಿ ಕೆಲವು ಅನುಸರಣೆಯಲ್ಲ ಎಂದು ಪರಿಗಣಿಸಲ್ಪಟ್ಟವು, ಇದು ಸರಿಪಡಿಸುವ ಕ್ರಮ ಮತ್ತು ನಿರ್ದೇಶನಗಳನ್ನು ಅಗತ್ಯಗೊಳಿಸಿತು. ಕಂಪನಿಗಳು ತಮ್ಮ ಉತ್ಪನ್ನಗಳ ಸಂಗ್ರಹಣೆ, ಸಂಗ್ರಹಣೆ, ಪ್ಯಾಕೇಜಿಂಗ್ ಮತ್ತು ಸಾರಿಗೆ ಹಂತಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಹಾಜರಾದಂತ ವಿದ್ಯಾರ್ಥಿಗಳಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ದಿನಾಂಕ 29-04-2024ರಿಂದ 16-05-2024ರವರೆಗೆ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕಾರ್ಯವು ಒಟ್ಟು 28 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ 15-05-2024ರಿಂದ 18-05-2024ರವರೆಗೆ 7875 ಮೌಲ್ಯ ಮಾಪಕರಿಂದ ನಡೆಸಲಾಯಿತು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಈಗ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 52,505…

Read More

ಬೆಂಗಳೂರು : ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್‍ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್‍ಡೇಟ್‍ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ…

Read More

 ಬೆಂಗಳೂರು: ರಾಜ್ಯದ ಅನೇಕ ಜನರ ಕನಸು ನಗರದಲ್ಲಿ ಒಂದು ಸೈಟು ಖರೀದಿ ಮಾಡಬೇಕು. ಆ ಬಳಿಕ ಮನೆ ಕಟ್ಟಬೇಕು ಅನ್ನೋದು. ಈ ನಿಮ್ಮ ಕನಸಿಗೆ ರಾಜ್ಯ ಸರ್ಕಾರ ನನಸು ಮಾಡೋದಕ್ಕೆ ಮುಂದಾಗಿದೆ.  ರಾಜ್ಯ ಸರ್ಕಾರದಿಂದ ಜಮೀನು ಖರೀದಿಸಿ, ಲೇಔಟ್ ಮಾಡಿ, ಅವುಗಳನ್ನು ಮಾರಾಟಕ್ಕೆ ಮುಂದಾಗೋ ಸುಳಿವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ವೇಳೆ ಮಾತನಾಡಿದಂತ ಅವರು, ಖಾಸಗಿ ಲೇಔಟ್ ನಿರ್ಮಾಣ ಮಾಡಿರುವವರಿಗೆ ನಕ್ಷೆ ಮತ್ತು ಲೇಔಟ್ ಅನುಮೋದನೆ ನೀಡುವ ಬದಲು ಆಯ ಪ್ರಾಧಿಕಾರಗಳ ವತಿಯಿಂದ ನೀವೆ ಜಮೀನನ್ನು ಗುರುತಿಸಿ ಖರೀದಿ ಮಾಡಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ನೀಡಲು ಮುಂದಾಗಬೇಕೆಂದು ತಾಕೀತು ಮಾಡಿದರು. ಸಾಧ್ಯವಾದ ಮಟ್ಟಿಗೆ ಸರ್ಕಾರಿ ಜಮೀನುಗಳನ್ನು ಗುರುತಿಸಲು ಪ್ರಾಧಿಕಾರಗಳ ಆಯುಕ್ತರು ಮುಂದಾಗಬೇಕು.…

Read More

ಬಳ್ಳಾರಿ : ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ತಹಶೀಲ್ದಾರರೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು. ಮಳೆಯಿಂದಾಗುವ ಮನೆಹಾನಿ ಮತ್ತು ಗುಡುಗು-ಸಿಡಿಲಿನಿಂದ ಜನ-ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು, ಅಲ್ಲದೆ ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು ಎಂದರು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು.…

Read More

ಬೆಂಗಳೂರು : ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಕಲ್ಪಿಸಲು ವಿಶೇಷ ಮೀಸಲಾತಿಗೆ ಅನುಮೋದನೆ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ. ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಬೆಂಗಳೂರು : ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು…

Read More

ಬೆಂಗಳೂರು: ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಜೂನ್, ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ಈ ಕೆಳಕಂಡಂತೆ ಇದೆ ಅಂತ ಹೇಳಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ದಿನಾಂಕ 24-06-2024ರ ಸೋಮವಾರ- ಕನ್ನಡ, ಅರೇಬಿಕ್ ದಿನಾಂಕ 25-06-2024ರ ಮಂಗಳವಾರ – ಇಂಗ್ಲೀಷ್ ದಿನಾಂಕ 26-06-2024ರ ಬುಧವಾರ – ಸಮಾಜಶಾಸ್ತ್ರ, ಜೀವ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ. ದಿನಾಂಕ 27-06-2024ರ ಗುರುವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ದಿನಾಂಕ 28-06-2024ರ ಶುಕ್ರವಾರ – ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ ದಿನಾಂಕ 29-06-2024ರ ಶನಿವಾರ – ಇತಿಹಾಸ, ಭೌತಶಾಸ್ತ್ರ ದಿನಾಂಕ 01-07-2024ರ ಸೋಮವಾರ- ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 02-07-2024ರ ಮಂಗಳವಾರ…

Read More