Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರ ನಿವಾಸದಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾದರು. ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು : ಮೇ.26 ರಿಂದ ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಮತ್ತು ಇತರೆ ನೋಂದಣಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. ಹೌದು, ಇನ್ನು ಮುಂದೆ ಆಸ್ತಿ ನೋಂದಾಣಿಗೆ ಇ-ಸಹಿ ಕಡ್ಡಾಯವಾಗಿರಲಿದೆ.ಇಂದಿನಿಂದ ಆಸ್ತಿ ಅಥವಾ ಇತರ ನೋಂದಣಿ ಪ್ರಕ್ರಿಯೆಗಳಿಗೆ ವಿದ್ಯುನ್ಮಾನ ಸಹಿ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟಾಂಪು ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಬ್ಯಾಂಕ್ ಚಲನ್‌ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಬೇಕಾಗಿದೆ. ಇನ್ನು ಮಂದೆ ಸ್ವತ್ತು ಮತ್ತು ಇತರ ನೋಂದಣಿಗಳಲ್ಲಿ ಡಿಜಿಟಲ್ ಸಹಿ, ಡಿಜಿಟಲ್ ಇ–ಸ್ಟಾಂಪ್ ಬಳಕೆ ಜಾರಿ ಕಡ್ಡಾಯವಾಗಲಿದೆ. ಈ ಹಿಂದಿನಂತೆ ಅಂಟಿಸುವ ಅಥವಾ ಮುದ್ರೆ ಹಾಕುವ ಸ್ಟಾಂಪ್‌ಗಳ ಬಳಕೆಯನ್ನು ನಿಲ್ಲಿಸಲಾಗುತ್ತದೆ. ಇ–ಸ್ಟಾಂಪ್ ದುರುಪಯೋಗವನ್ನು ತಡೆಯಲು ಸ್ಟಾಂಪ್ ಮೊತ್ತವನ್ನು ವಿದ್ಯುನ್ಮಾನ ಪಾವತಿ ಮಾಡಬೇಕಿದೆ. ಸಿಬ್ಬಂದಿ ಮೂಲಕ (ಮ್ಯಾನ್ಯುವಲ್) ಸ್ಟಾಂಪ್ ವಿತರಿಸುವುದು ಸಂಪೂರ್ಣ ಸ್ಥಗಿತವಾಗಲಿದೆ. ಸಿಬ್ಬಂದಿ ಮೂಲಕ ಸ್ಟಾಂಪ್ ವಿತರಣೆಗೆ ಸಂಪೂರ್ಣ…
ಜಗತ್ತು ಈಗ ಮತ್ತೆ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದೆ. ಕೇವಲ ಒಂದು ದೇಶವಲ್ಲ, ಹಲವು ದೇಶಗಳು ಈ ವೈರಸ್ ನಿಂದ ಪ್ರಭಾವಿತವಾಗಿವೆ. ಭಾರತದಲ್ಲಿಯೂ ಸಹ 1000 ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ, ಇದು ಪ್ರಸ್ತುತ ಕಳವಳಕಾರಿ ವಿಷಯವಲ್ಲ.ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಅಪಾಯ ಮತ್ತು ಸೋಂಕಿತರ ಪ್ರಮಾಣ ಹೆಚ್ಚಾಗಬಹುದು. ಆದಾಗ್ಯೂ, ಈ ಸಮಯದಲ್ಲಿ ದೇಶದಲ್ಲಿ ಜ್ವರ ಮತ್ತು ಶೀತ-ಕೆಮ್ಮಿನ ಋತುಮಾನ ನಡೆಯುತ್ತಿದೆ. ಹೌದು, ನಿಮಗೆ ಜ್ವರ, ಶೀತ ಅಥವಾ ಕೆಮ್ಮು ಪದೇ ಪದೇ ಬರುತ್ತಿದ್ದರೆ, ಅದು ಪ್ರತಿ ಬಾರಿಯೂ ಕೊರೊನಾ ಆಗುವ ಅಗತ್ಯವಿಲ್ಲ. ಇದು ಹವಾಮಾನ ಬದಲಾವಣೆಯಿಂದ ಉಂಟಾಗುವ ಕಾಲೋಚಿತ ಜ್ವರವೂ ಆಗಿರಬಹುದು. ಇದರ ಬಗ್ಗೆ ವೈದ್ಯರ ಅಭಿಪ್ರಾಯವನ್ನು ತಿಳಿದುಕೊಳ್ಳೋಣ. ವೈದ್ಯರು ಏನು ಹೇಳುತ್ತಾರೆ? ಜಾರ್ಖಂಡ್‌ನ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯ ಅನುಜ್ ಕುಮಾರ್, ಕೊರೊನಾ ಹೊರತುಪಡಿಸಿ, ಇತ್ತೀಚಿನ ದಿನಗಳಲ್ಲಿ ಜನರು ವೈರಲ್ ಜ್ವರಕ್ಕೂ ಬಲಿಯಾಗುತ್ತಿದ್ದಾರೆ ಎಂದು ಹೇಳುತ್ತಾರೆ. ಇದು ಹವಾಮಾನದಲ್ಲಿನ ಬದಲಾವಣೆಯಿಂದ ಬರುವ ಸಾಮಾನ್ಯ ಜ್ವರ. ಆದಾಗ್ಯೂ, ಜ್ವರ…
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಡ್ಯಾನ್ಸ್ ಮಾಸ್ಟರ್ ನನ್ನು ಪೋಕ್ಸ್ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. ಮೇ 24 ರಂದು ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮಾತನಾಡಿಸಿ ತಾನು ಡ್ಯಾನ್ಸ್ ಮಾಸ್ಟರ್ ಎಂದು ಹೇಳಿ ಪರಿಚಯ ಮಾಡಿಕೊಂಡು ಡ್ಯಾನ್ಸ್ ಹೇಳಿಕೊಡುವುದಾಗಿ ಕಾರು ಹತ್ತಿಸಿಕೊಂಡಿದ್ದನು. ಡ್ಯಾನ್ಸ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಈ ವಿಚಾರವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಳು. ಪೋಷಕರು ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೋಷಕರ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಭಾರತಿ ಕಣ್ಣನ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಮಡಿಕೇರಿ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಇಂದು, ನಾಳೆ 2 ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವ ಭಾರತೀಯ ಸೇನೆಯು ಶಸ್ತ್ರಾಸ್ತ್ರಗಳು ಮತ್ತು ಕೈ ಗ್ರೆನೇಡ್‌ಗಳು ವಶಪಡಿಸಿಕೊಳ್ಳಲಾಗಿದೆ.