Author: kannadanewsnow57

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ಕಾರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನೂ ಮೈಸೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ೧೦-೧೫ ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್‌ ಘೋಷಣೆ ನೀಡಲಾಗಿದೆ.

Read More

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ್ದ ಭೂಮಿಯನ್ನು ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯಲ್ಲಿನ ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 (1979ರ ಕರ್ನಾಟಕ ಅಧಿನಿಯಮ 2) ರ 10ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವಂಥ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ನಿಯಮಗಳು, 1979 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಗಿನ ನಿಯಮಗಳ ಕರಡನ್ನು, ಪ್ರಕರಣ 10ರ ಮೂಲಕ ಅಗತ್ಯಪಡಿಸಲಾದಂತೆ 15 ದಿನಗಳ ಒಳಗಾಗಿ ಇದರಿಂದ ಬಾಧಿತವಾಗಿರುವ ಸಂಭವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಆಹ್ವಾನಿಸಿ ದಿನಾಂಕ 12.03.2024 ರ ಕರ್ನಾಟಕ ರಾಜ್ಯಪತ್ರದ 4ನೇ ಎ ಭಾಗದಲ್ಲಿ ಪ್ರಕಟಿಸಿರುವುದರಿಂದ, ಮತ್ತು ಈ ರಾಜ್ಯಪತ್ರವನ್ನು ದಿನಾಂಕ 12.03.2024 ರಂದು…

Read More

ಬೆಂಗಳೂರು : ಹಳೆಯ ಪಿಂಚಣಿ, ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.‌ ಷಡಕ್ಷರಿ ನೇತೃತ್ವದ ನಿಯೋಗ ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿಇಯ ಮಾಡಿ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳಾದರೂ ಈವರೆಗೆ ಶಿಫಾರಸುಗಳು ಜಾರಿಯಾಗಿಲ್ಲ. ಇದರಿಂದ ನೌಕರರ ಜೀವನ ಕಷ್ಟಕರವಾಗಿರುವುದರಿಂದ ವರದಿಯನ್ನು ಆದಷ್ಟು ಬೇಗ ಜಾರಿ ಮಾಡಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಸ್ಥಾಪಿಸಬೇಕು ಎಂದು ಮನವಿ ಮಾಡಲಾಗಿದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ನೌಕರರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂಧಿಸಿ, ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ ಎಂದು ತಿಳಿಸಿ, ಈಗಾಗಲೇ ಸಚಿವ ಸಂಪುಟದಲ್ಲಿ 7 ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ವೇತನ…

Read More

ಬೆಂಗಳೂರು : ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಧೋ ಅಂತ ಮಳೆ ಸುರಿಯುತ್ತಿದೆ. ಇಂದೂ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನು ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕೊಡಗು ಇಂದೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ರವರ ಸಹಯೋಗದೊಂದಿಗೆ ವಾ.ಕ.ರ ಸಾರಿಗೆ ಸಂಸ್ಥೆಯಲ್ಲಿ (NWKRTC) ಕಾರ್ಯನಿರತ ನೌಕರರಿಗೆ ಮತ್ತು ಅವರ ಅವಲಂಬಿತರಿಗೆ “ಸಾರಿಗೆ ಸಂಜೀವಿನಿ” ನಗದುರಹಿತ (Cashless) ಒಳರೋಗಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ವಾ.ಕ.ರ.ಸಾ.ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಮತ್ತು ಅವರ ಅವಲಂಬಿತರ ಆರೋಗ್ಯದ ಹಿತದೃಷ್ಟಿಯಿಂದ ಒಳರೋಗಿಗಳಿಗೆ ನಗದುರಹಿತ (Cashless) ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲು ಯೋಜಿಸಿ, ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ “ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ” (KIMS) ರವರೊಂದಿಗೆ ಮೂರು (03) ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಂಡು “ಸಾರಿಗೆ ಸಂಜೀವಿನಿ” ಯೋಜನೆಯನ್ನು ದಿನಾಂಕ: 06-03-2024 ರಿಂದ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವ ಕುರಿತು ಉಲ್ಲೇಖಿತ 02 ರ ಸುತ್ತೋಲೆಯಲ್ಲಿ ವಿವರವಾದ ನಿರ್ದೇಶನಗಳನ್ನು ನೀಡಲಾಗಿದೆ. ಮುಂದುವರೆದಂತೆ ಸಂಸ್ಥೆಯ ನೌಕರರು ಮತ್ತು ಅವರ ಅವಲಂಬಿತರು ಸರ್ಕಾರಿ/ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರುಪಾವತಿಗಾಗಿ ಕೋರುವ ವೈದ್ಯಕೀಯ ಬಿಲ್ಲುಗಳನ್ನು ಆಯಾ ವಿಭಾಗದ…

Read More

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ ವರದಿಯಾಗಿದೆ. 96 ವರ್ಷದ ಎಲ್.ಕೆ. ಅಡ್ವಾಣಿ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ನ ವೃದ್ಧಾಪ್ಯ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ. ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಪಡೆದ ಕೇವಲ ಮೂರು ತಿಂಗಳ ನಂತರ ಮಾಜಿ ಉಪ ಪ್ರಧಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್.ಕೆ.ಅಡ್ವಾಣಿ ಅವರು ಜೂನ್ 2002 ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು. https://Twitter.com/ANI/status/1806091270231654445

Read More

ನವದೆಹಲಿ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌, ಯೆಲ್ಲೋ ಅಲರ್ಟ್‌ ಘೋಷಣೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜೂನ್ 27ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಜೂನ್ 27 ರವರೆಗೆ ಸೌರಾಷ್ಟ್ರ ಮತ್ತು ಕಚ್ನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 29 ರವರೆಗೆ ಗುಜರಾತ್ ಪ್ರದೇಶ ಮತ್ತು ಕರಾವಳಿ ಕರ್ನಾಟಕದಲ್ಲಿ ಜೂನ್ 27ರವರೆಗೆ ತಮಿಳುನಾಡು; ಜೂನ್ 27ರಂದು ಉತ್ತರ ಒಳನಾಡು; ಜೂನ್ 27 ಮತ್ತು 28 ರಂದು ತೆಲಂಗಾಣ ಮತ್ತು ಜೂನ್ 25 ರಿಂದ ಜೂನ್ 28 ರವರೆಗೆ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. https://twitter.com/Indiametdept/status/1805528249768067520?ref_src=twsrc%5Etfw%7Ctwcamp%5Etweetembed%7Ctwterm%5E1805528249768067520%7Ctwgr%5E8b295725543d467ed01d6186438be3aa3afe990f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ಅಲ್ಲದೆ, ಐಎಂಡಿ ರಾಷ್ಟ್ರ ರಾಜಧಾನಿ ದೆಹಲಿಗೆ ಹಳದಿ ಎಚ್ಚರಿಕೆ ನೀಡಿದ್ದು, ಜುಲೈ 1 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಗೋವಾ,ಕೇರಳ, ತಮಿಳುನಾಡು, ಪುದುಚೇರಿ, ಬಿಹಾರ, ಅರುಣಾಚಲ ಪ್ರದೇಶ ಮತ್ತು…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಶಿವಮೊಗ್ಗ : ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನÀ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Read More

ಅಯೋಧ್ಯೆ : ಅಯೋಧ್ಯೆಯಲ್ಲಿ ವಿಶ್ವದರ್ಜೆಯ ಭಾರತೀಯ ದೇವಾಲಯ ವಸ್ತುಸಂಗ್ರಹಾಲಯವನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ವಸ್ತುಸಂಗ್ರಹಾಲಯದ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಯುಪಿ ಸರ್ಕಾರ ಸೂಚನೆಗಳನ್ನು ನೀಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನಗಳನ್ನು ಅನುಸರಿಸಿ, ಸರಯೂ ನದಿಯ ದಡದಲ್ಲಿ ಸುಮಾರು 50 ಎಕರೆ ಪ್ರದೇಶದಲ್ಲಿ ಹರಡಿರುವ ದೇವಾಲಯದ ವಸ್ತುಸಂಗ್ರಹಾಲಯಕ್ಕೆ ಸೂಕ್ತವಾದ ಭೂಮಿಯನ್ನು ಹುಡುಕುವ ಪ್ರಯತ್ನಗಳನ್ನು ತೀವ್ರಗೊಳಿಸಲಾಗಿದೆ. ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆಯು ಭೂಮಿಯನ್ನು 90 ವರ್ಷಗಳವರೆಗೆ ಗುತ್ತಿಗೆಗೆ ನೀಡಲಿದೆ. ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ (ಸಿಎಸ್ಆರ್ ನಿಧಿ) 650 ಕೋಟಿ ರೂ.ಗಳ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ವಿಶ್ವದರ್ಜೆಯ ಭಾರತೀಯ ದೇವಾಲಯ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಟಾಟಾ ಸನ್ಸ್ ಕಂಪನಿಯು ಕೇಂದ್ರ ಸರ್ಕಾರದ ಮೂಲಕ ರಾಜ್ಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಠಾಕೂರ್ ಜೈವೀರ್ ಸಿಂಗ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ಭೂಮಿ…

Read More