Author: kannadanewsnow57

ಬೆಂಗಳೂರು : ನರ್ಸಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಕ್ಲಿನಿಕಲ್ ಸೌಲಭ್ಯ’ ನೀಡುವ ಕುರಿತು ಸರ್ಕಾರ ಮಾರ್ಗಸೂಚಿ ಆದೇಶ ಬಿಡುಗಡೆ ಮಾಡಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಸಾಮಾನ್ಯ ಷರತ್ತುಗಳೊಂದಿಗೆ ಈ ಕೆಳಕಂಡ ಮಾರ್ಗಸೂಚಿಯನ್ವಯ ಪರಿಶೀಲಿಸಿ ಖಾಸಗಿ ನರ್ಸಿಂಗ್ ಶಾಲೆ ಹಾಗೂ ನರ್ಸಿಂಗ್ ಕಾಲೇಜು ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಗೆ ಕ್ಲಿನಿಕಲ್ ಸೌಲಭ್ಯಗಳನ್ನು ಒದಗಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಲಾಗಿದೆ. ಶೈಕ್ಷಣಿಕ ಸೌಲಭ್ಯಗಳನ್ನು ಹೊಂದಿರುವ ಕಾಲೇಜುಗಳಿಗೆ ಮಾತ್ರ ಕ್ಲಿನಿಕಲ್ ಸೌಲಭ್ಯಗಳನ್ನು ಒದಗಿಸಲು ಅನುಮತಿ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಸೌಲಭ್ಯಗಳನ್ನು ಪಡೆಯಲು ಆಸಕ್ತಿ ಹೊಂದಿರುವ ಕಾಲೇಜುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಕಠಿಣ ಮೌಲ್ಯಮಾಪನ ಮಾನದಂಡಗಳನ್ನು ಪೂರೈಸುವ ಕಾಲೇಜುಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. 6 ತಿಂಗಳ ನಿರಂತರ  ಸೇರಿದಂತೆ ಸಂಪೂರ್ಣ ಕೋರ್ಸ್ ಗೆ ಬದ್ಧವಾಗಿರುವ ಕಾಲೇಜುಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ವಿದ್ಯಾರ್ಥಿ ಗಳಿಗೆ ಕೌಶಲ್ಯವಾರು, ತಿಂಗಳವಾರು ತರಬೇತಿಯ ಸಂಪೂರ್ಣ ಮಾಸ್ಟರ್ ಪ್ಲಾನ್ ಅನ್ನು ಸಹ…

Read More

ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, (ಗೇರು, ಪೇರಲ, ಮಾವು, ಬಾಳೆ, ದಾಳಿಂಬೆ, ಪಪ್ಪಾಯ, ಇತರೆ) ರೋಗ ಮತ್ತು ಕೀಟ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ, ಸಂರಕ್ಷಿತ ಬೇಸಾಯ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಯಾಂತ್ರೀಕರಣ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ. ಕೇಂದ್ರ ವಲಯ, ರಾಜ್ಯವಲಯ ಮತ್ತು ಜಿಲ್ಲಾ ವಲಯ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ರೈತರು ಜೂನ್ 20 ರೊಳಗಾಗಿ ಅರ್ಜಿ ಸಮೇತ ಅಗತ್ಯವಾದ ದಾಖಲಾತಿಗಳನ್ನು ಸಂಬಂಧಪಟ್ಟ ಆಯಾ ತಾಲ್ಲೂಕಾ ತೋಟಗಾರಿಕಾ ಕಛೇರಿಯಲ್ಲಿ ಸಲ್ಲಿಸಬೇಕು.…

Read More

ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆಯಲ್ಲಿ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ ನೀಡಲಾಗಿದೆ. ವಿವಿಧ ಸಾಮಾಜಿಕ ಕಾರಣಕ್ಕೆ ಒಳಮೀಸಲಾತಿ ಸಮೀಕ್ಷೆ ವೇಳೆ ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ಜಾತಿಯ ಹೆಸರು ಹೇಳಲು ಆಗದ ಸಂದರ್ಭ ಎದುರಾಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿಯೇ ಮೂರು ಹಂತದಲ್ಲಿ ಮಾಹಿತಿ ಕಲೆ ಹಾಕಲು ಯೋಜನೆ ರೂಪಿಸಿದ್ದೇವೆ. ಮನೆ ಮಾಲೀಕರಿಗೆ ಗೊತ್ತಾಗಬಾರದು ಎಂದು ಜಾತಿ ಹೆಸರು ಮುಚ್ಚಿಟ್ಟಿರುವ ಮಂದಿ ಸಮೀಕ್ಷಾ ಶಿಬಿರಗಳಿಗೆ ಬಂದು ವಿವರ ನೀಡಬಹುದು. ಇಲ್ಲವೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ವಿವರ ನಮೂದಿಸಬಹುದು ಎಂದು ಒಳಮೀಸಲಾತಿ ಏಕಸದಸ್ಯ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ5 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ. http://twitter.com/KarnatakaVarthe/status/1927652643616223421

Read More

ಬೆಂಗಳೂರು: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಬೆಂಗಳೂರಿನ ಆಡುಗೋಡಿಯ ಪಟೇಲ್ ಮುನಿ ಚಿನ್ನಪ್ಪ ಪ್ರೌಢಶಾಲೆ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 9 ಗಂಟೆಗೆ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಶೈಕ್ಷಣಿಕ ಅವಧಿಯು ದಿನಾಂಕ:…

Read More

ಬೆಂಗಳೂರು: ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ರೈತ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೈತ ಸೇನೆ ಕರ್ನಾಟಕ ಅಧ್ಯಕ್ಷ ವಿ. ವೀರೇಶ್ ಸೊಬರದಮಠ ಅರ್ಜಿ ಸಲ್ಲಿಸಿದ್ದರು. ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕೆಂದು ಹೈಕೋರ್ಟ್ ತಿಳಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.…

Read More

ಬೆಂಗಳೂರು : ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ.ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ.ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ. ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ಪೊಲೀಸ್‌ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಅದನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ…

Read More

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ  ಮೆಟ್ರಿಕ್ ನಂತರ ಕೋರ್ಸ್ ಗಳಿಗೆ ಪ್ರವೇಶ  ಪಡೆಯುವ  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ವಿದ್ಯಾರ್ಥಿಗಳು  ಭಾರತ ಸರ್ಕಾರದ   Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal https://ssp.postmatric.karnataka.gov.in    ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ  Create  ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More