Author: kannadanewsnow57

ನವದೆಹಲಿ : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಬುಧವಾರ ಬೆಳಿಗ್ಗೆ 11 ಗಂಟೆಗೆ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಸಿಐಎಸ್ಸಿಇ ಮುಖ್ಯ ಕಾರ್ಯನಿರ್ವಾಹಕ ಜೋಸೆಫ್ ಎಮ್ಯಾನುಯೆಲ್ ಮಂಗಳವಾರ ತಿಳಿಸಿದ್ದಾರೆ. “ಅಭ್ಯರ್ಥಿಗಳು ಮತ್ತು ಪಾಲುದಾರರು CISCE ವೆಬ್‌ಸೈಟ್ ಅಥವಾ ಮಂಡಳಿಯ CAREERS ಪೋರ್ಟಲ್ ಬಳಸಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗಳನ್ನು ಡಿಜಿಲಾಕರ್ ಮೂಲಕವೂ ಪ್ರವೇಶಿಸಬಹುದು” ಎಂದು ಎಮ್ಯಾನುಯೆಲ್ ಹೇಳಿದರು. 10 ನೇ ತರಗತಿ (ICSE) ಮತ್ತು 12 ನೇ ತರಗತಿ (ISC) ಗಾಗಿ ಸುಧಾರಣಾ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸಲಾಗುವುದು. ಪಿಟಿಐ ಜಿಜೆಎಸ್ ಎಆರ್ಐ

Read More

ಶಿಶುಗಳಿಗೆ 12 ಮಾರಕ ರೋಗಗಳ ವಿರುದ್ಧ ತಪ್ಪದೇ ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸಿ, ಮಕ್ಕಳ ಆರೋಗ್ಯ ರಕ್ಷಣೆ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗಂಗಾವತಿ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಸಿದ್ದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸೋಮವಾರ ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶೇಷ ಆರೋಗ್ಯ ಅರಿವು ಆಂದೋಲನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರೋಗ್ಯ ಸೇವಾ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಿಸುವ ಉದ್ದೇಶದಿಂದ ಸರಕಾರ ವಿವಿಧ ಜಾಗೃತಿ ಮಾಧ್ಯಮದ ಮೂಲಕ ಅರಿವು ಮೂಡಿಸುತ್ತಿದೆ. ಪ್ರತಿಯೊಂದು ಹೆರಿಗೆಯನ್ನು ಆಸ್ಪತ್ರೆಯಲ್ಲಿ ಮಾಡಿಸಬೇಕು. ಮಗು ಹುಟ್ಟಿದ ಅರ್ಧ ಗಂಟೆಯ ಒಳಗೆ ತಾಯಿಯ ಎದೆಹಾಲು ನೀಡಬೇಕು. 6 ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲು ಮಾತ್ರ ನೀಡಬೇಕು. ಇದರ ಬದಲಿಗೆ ಬೇರೇನೂ ನೀಡಬಾರದು. 6 ತಿಂಗಳ ನಂತರ ಪೂರಕ ಪೌಷ್ಠಿಕ ಆಹಾರ ನೀಡಬೇಕು. ಒಂದು ಮಗುವಿನಿಂದ ಇನ್ನೊಂದು…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ ಹಾಗೂ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನೀಡುತ್ತಿದೆ.ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಯು 30 ಎಪ್ರಿಲ್ 2005 ರಿಂದ 29 ಎಪ್ರಿಲ್ 2008 ರ ನಡುವಿನ ಅವಧಿಯಲ್ಲಿ ಜನಸಿರಬೇಕು. ಅಭ್ಯರ್ಥಿಯ ವಯಸ್ಸನ್ನು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 29 ಎಪ್ರಿಲ್ 2025 ಕ್ಕೆ ಅನ್ವಯಿಸುವಂತೆ ಪರಿಗಣಿಸಲಾಗುವುದು. ತರಬೇತಿ ನೀಡುವ ಸ್ಥಳ: ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ತರಬೇತಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿರುವ ಸೇನಾ ಆಯ್ಕೆ…

Read More

ನವದೆಹಲಿ : ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮೇ 29 ರಂದು ಐತಿಹಾಸಿಕ ಕಾರ್ಯಾಚರಣೆಗಾಗಿ ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ. ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಭೇಟಿ ನೀಡಿದ ಮೊದಲ ಭಾರತೀಯ ಗಗನಯಾತ್ರಿಯಾಗಲಿದ್ದಾರೆ. ಅವರು ರಾತ್ರಿ 10:33 ಕ್ಕೆ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಉಡಾವಣೆಗೊಳ್ಳಲಿದ್ದಾರೆ. ಈ ಮಿಷನ್ ಆಕ್ಸಿಯಮ್ ಮಿಷನ್ 4 (ಆಕ್ಸ್-4) ನ ಭಾಗವಾಗಿದ್ದು, ಇದು ನಾಸಾ, ಸ್ಪೇಸ್‌ಎಕ್ಸ್, ಆಕ್ಸಿಯಮ್ ಸ್ಪೇಸ್ ಮತ್ತು ಇಸ್ರೋ ನಡುವಿನ ಸಹಯೋಗವಾಗಿದೆ. ಈ ಕಾರ್ಯಾಚರಣೆಯಲ್ಲಿ ಶುಕ್ಲಾ ಅವರೊಂದಿಗೆ ಅಮೆರಿಕದ ಗಗನಯಾತ್ರಿ ಪೆಗ್ಗಿ ವಿಟ್ಸನ್ ಮತ್ತು ಹಂಗೇರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳು ಇರಲಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅವರು ಪೈಲಟ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಶುಕ್ಲಾ ಅವರಿಗೆ 2000 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವವಿದೆ. ಅವರು 2019 ರಲ್ಲಿ ಭಾರತದ ಗಗನಯಾತ್ರಿ ಕಾರ್ಯಕ್ರಮಕ್ಕೆ ಆಯ್ಕೆಯಾದರು ಮತ್ತು ಭಾರತ ಮತ್ತು ರಷ್ಯಾದಲ್ಲಿ ಕಠಿಣ ತರಬೇತಿಯನ್ನು ಪಡೆದಿದ್ದಾರೆ. 1984 ರಲ್ಲಿ ರಾಕೇಶ್ ಶರ್ಮಾ ಅವರ ಬಾಹ್ಯಾಕಾಶ ಹಾರಾಟದ ನಂತರ…

Read More

ಬೆಂಗಳೂರು : ಶಾಸಕ ನರೇಂದ್ರ ಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎಂ. ನರೇಂದ್ರ ಸ್ವಾಮಿ ಶಾಸಕರು, ಮಳವಳ್ಳಿ ವಿಧಾನಸಭಾ ಕ್ಷೇತ್ರ, ನಂ-305, ಪೂರಿಗಾಲಿ, ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇ-ಎಫ್ ಸಿಸಿ 545 ಇಪಿಸಿ 2024 ದಿನಾಂಕ 05.02.2025ರಂದು ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದ್ದು, ಅದೇ ದಿನಾಂಕದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸದರಿ ಮಾನ್ಯರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ.

Read More

ನವದೆಹಲಿ : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಬುಧವಾರ ಬೆಳಿಗ್ಗೆ 11 ಗಂಟೆಗೆ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಸಿಐಎಸ್ಸಿಇ ಮುಖ್ಯ ಕಾರ್ಯನಿರ್ವಾಹಕ ಜೋಸೆಫ್ ಎಮ್ಯಾನುಯೆಲ್ ಮಂಗಳವಾರ ತಿಳಿಸಿದ್ದಾರೆ. “ಅಭ್ಯರ್ಥಿಗಳು ಮತ್ತು ಪಾಲುದಾರರು CISCE ವೆಬ್‌ಸೈಟ್ ಅಥವಾ ಮಂಡಳಿಯ CAREERS ಪೋರ್ಟಲ್ ಬಳಸಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗಳನ್ನು ಡಿಜಿಲಾಕರ್ ಮೂಲಕವೂ ಪ್ರವೇಶಿಸಬಹುದು” ಎಂದು ಎಮ್ಯಾನುಯೆಲ್ ಹೇಳಿದರು. 10 ನೇ ತರಗತಿ (ICSE) ಮತ್ತು 12 ನೇ ತರಗತಿ (ISC) ಗಾಗಿ ಸುಧಾರಣಾ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸಲಾಗುವುದು. ಪಿಟಿಐ ಜಿಜೆಎಸ್ ಎಆರ್ಐ

Read More

ಬೆಂಗಳೂರು : ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ, ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ : ಇಪಿ 250 ಪಿಜಿಸಿ 2021, ದಿನಾಂಕ: 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ಕಾರಣಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1 ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಿದ. ಮುಂದುವರೆದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ…

Read More

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಮಹತ್ವದ ಸಭೆಯಲ್ಲಿ ರಕ್ಷಣಾ ಸಚಿವರು, ಎನ್‌ಎಸ್‌ಎ, ಸಿಡಿಎಸ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆಯಯಲ್ಲಿ ಭಾಗಿಯಾಗಿದ್ದಾರೆ. https://twitter.com/ANI/status/1917189854321938492?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಮಹತ್ವದ ಸಭೆಯಲ್ಲಿ ರಕ್ಷಣಾ ಸಚಿವರು, ಎನ್‌ಎಸ್‌ಎ, ಸಿಡಿಎಸ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆಯಯಲ್ಲಿ ಭಾಗಿಯಾಗಿದ್ದಾರೆ. https://twitter.com/ANI/status/1917189854321938492?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಮಂಗಳೂರಿನಲ್ಲಿ ಹಜ್‌ ಭವನ ನಿರ್ಮಾಣಕ್ಕೆ ಮೇ 16 ರಂದು ಶಂಕುಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ಅವರು ಕಲಬುರಗಿಯಲ್ಲಿ ಹಜ್‌ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಹಜ್‌ ಭವನಕ್ಕೆ ಬರುವ ಪ್ರವಾಸಿಗರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಈ ಬಾರಿ 10 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Read More