Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಆಂಧ್ರಪ್ರದೇಶ ಮತ್ತು ಯಾಣಂ ಕರಾವಳಿ ಪ್ರದೇಶಗಳು, ಗಂಗಾ ಪಶ್ಚಿಮ ಬಂಗಾಳ, ರಾಯಲಸೀಮಾ, ಬಿಹಾರ, ತೆಲಂಗಾಣ, ಜಾರ್ಖಂಡ್, ಕರ್ನಾಟಕದ ಉತ್ತರ ಒಳನಾಡು, ಒಡಿಶಾ ಮತ್ತು ವಿದರ್ಭ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಹವಾಮಾನ ಇಲಾಖೆ ಏಪ್ರಿಲ್ 7 ಮತ್ತು 8 ರಂದು ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢಕ್ಕೆ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನ ಅನುಭವಿಸುವ ಪ್ರದೇಶಗಳನ್ನ ಐಎಂಡಿ ಗುರುತಿಸಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರ ಶಾಖವನ್ನು ಎದುರಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪಶ್ಚಿಮ ಪರ್ಯಾಯ ದ್ವೀಪದ ಭಾಗಗಳು ಹೆಚ್ಚಿನ ಪರಿಣಾಮವನ್ನು ಬೀರುತ್ತವೆ. ಇದು ಏಪ್ರಿಲ್ 19 ರಿಂದ ಪ್ರಾರಂಭವಾಗುವ ಏಳು ಹಂತಗಳ ಬೃಹತ್ ಸಾರ್ವತ್ರಿಕ ಚುನಾವಣೆಯೊಂದಿಗೆ ಹೊಂದಿಕೆಯಾಗುತ್ತದೆ. https://twitter.com/Indiametdept/status/1776246476949348636?ref_src=twsrc%5Etfw%7Ctwcamp%5Etweetembed%7Ctwterm%5E1776246476949348636%7Ctwgr%5E882a6280eff8440fd53b7bcbb2a1e1a320ee61de%7Ctwcon%5Es1_&ref_url=https%3A%2F%2Fwww.oneindia.com%2Findia%2Fweather-alert-imd-predicts-heatwave-and-hailstorms-in-several-states-3793019.html…
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿ, ಸಾವು ಗೆದ್ದಿದ್ದ ಸಾತ್ವಿಕ್ ಗುಣಮುಖನಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಾತ್ವಿಕ್ ಗೆ 48ಗಂಟೆಗಳವರೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ತಂಡ ಸಾತ್ವಿಕ್ ಹೆಸರಿನಲ್ಲಿ ಕೇಕ್ ತಂದು ಆಸ್ಪತ್ರೆಯಲ್ಲಿ ಮಗುವಿನ ತಂದೆ-ತಾಯಿ ಜೊತೆಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಏಪ್ರಿಲ್ 3 ರಂದು ಕೊಳವೆ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಾತ್ವಿಕ್ ಇದೀಗ ಸಂಪೂರ್ಣವಾಗಿ ಗುಣಮುಖನಾಗಿ ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.
ಶಿವಮೊಗ್ಗ : ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯದೇ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಏಪ್ರಿಲ್ 5 ರಂದು ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನವೊಂದರಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ, ಬಳಿಕ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅವರ ಮನೆಯಂಗದಲ್ಲಿ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಶನಿವಾರ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ದಿನಪತ್ರಿಕೆಯ ಪರೀಕ್ಷೆಗೆ ಶೇ. 98.2 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಏಪ್ರಿಲ್15 ರಿಂದ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಮತ್ತು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ನಡುವೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ: 06.04.2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಿದೆ.
ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಇದರ ಪರಿಣಾಮದಿಂದ ಬಿಸಿಗಾಳಿ ಬೀಸುತ್ತಿದೆ. ಈ ನಡುವೆ ರಾಜ್ಯದ ಮಧ್ಯ, ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಎರಡು ದಿನ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು : ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏಪ್ರಿಲ್ 11 ರಿಂದ ಮೇ 28 ರ ವರೆಗೆ ಭಾನುವಾರಗಳಂದು ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬಿಸಿಯೂಟವನ್ನು ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಂದರೆ ಪ್ರಸ್ತುತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಲಾಗುತ್ತದೆ. ಶಾಲೆಗಳ ಬೇಸಿಗೆ ರಜೆ ಏಪ್ರಿಲ್ 11 ರಿಂದ ಆರಂಭವಾಗಲಿದೆ. ಶಾಲೆ ಆಯ್ಕೆ; ಗ್ರಾಮ, ಕೇಂದ್ರಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಅವುಗಳಲ್ಲಿ ಹೆಚ್ಚು ಮಕ್ಕಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಶಾಲೆಗೆ ಇತರೆ ಶಾಲೆ ಮಕ್ಕಳು ಬಂದು ಊಟ ಮಾಡಿ ಹೋಗಬಹುದಾಗಿದೆ. ಪ್ರತಿ…
ನವದೆಹಲಿ: ಭಾರತವು 2024 ರ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ, ಇದರ ಮತದಾನವು ಏಳು ಹಂತಗಳಲ್ಲಿ ನಡೆಯಲಿದೆ – ಮೊದಲನೆಯದು ಏಪ್ರಿಲ್ 19, 2024 ರಿಂದ ಪ್ರಾರಂಭವಾಗುತ್ತದೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಮೈಕ್ರೋಸಾಫ್ಟ್ ಆಘಾತಕಾರಿ ಹೇಳಿಕೆ ನೀಡಿ ಎಚ್ಚರಿಕೆ ನೀಡಿದೆ. ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ಭಾರತದಲ್ಲಿ ಚುನಾವಣೆಗೆ ಅಡ್ಡಿಪಡಿಸಲು ಚೀನಾ ಯೋಜಿಸುತ್ತಿದೆ ಮತ್ತು ಭಾರತದೊಂದಿಗೆ, ಯುಎಸ್ ಅಧ್ಯಕ್ಷೀಯ ಚುನಾವಣೆ 2024 ಸೇರಿದಂತೆ ಇತರ ದೇಶಗಳಲ್ಲಿನ ಚುನಾವಣೆಗೆ ಅಡ್ಡಿಪಡಿಸಲು ಯೋಜಿಸುತ್ತಿದೆ ಎಂದು ಟೆಕ್ ದೈತ್ಯ ಹೇಳಿದೆ. ಯುಎಸ್ ಅಧ್ಯಕ್ಷೀಯ ಚುನಾವಣೆ ಮತ್ತು ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಚುನಾವಣೆಗಳ ಜೊತೆಗೆ ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆ 2024 ಅನ್ನು ಅಡ್ಡಿಪಡಿಸಲು ಚೀನಾ ಯೋಜಿಸುತ್ತಿದೆ ಎಂದು ಟೆಕ್ ಕಂಪನಿ ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಚೀನಾ ನಡೆಸಿದ ತೈವಾನ್ ಅಧ್ಯಕ್ಷೀಯ ಚುನಾವಣೆಯ ಪ್ರಾಯೋಗಿಕ ಓಟದ ನಂತರ ಈ ಎಚ್ಚರಿಕೆ ನೀಡಲಾಗಿದೆ, ಅಲ್ಲಿ ಎಐ ಮತದಾನದ ಫಲಿತಾಂಶದ ಮೇಲೆ ಪ್ರಭಾವ ಬೀರುವಲ್ಲಿ ಪಾತ್ರ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ: 06.04.2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು/ ಪೋಷಕರು/ ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳನ್ನು ದಿನಾಂಕ: 08.04.2024ರ ಸಾಯಂಕಾಲ 5.00 ಗಂಟೆಯೊಳಗೆ ಮಂಡಲಿಯ ಜಾಲತಾಣದ ಮೂಲಕ ಸಲ್ಲಿಸಲು ತಿಳಿಸಿದೆ. ಮಂಡಲಿಯ ಜಾಲತಾಣ http://kseab.karnataka.gov.in ಲಿಂಕನ್ನು ಬಳಸಿ ಮಾರ್ಚ್/ಏಪ್ರಿಲ್-2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಕೀ ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು/ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ. KEY ANSWER – 85E_A KEY ANSWER – 31E_A KEY ANSWER – 01K_A (1)
ಬೆಂಗಳೂರು : ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ. ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ ಯೋಜನೆಯಲ್ಲಿ, ಅನ್ನಭಾಗ್ಯದ ಅಕ್ಕಿಯಲ್ಲಿ ಹೀಗೆ ಸಾಲು ಸಾಲು ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನು ದನಿ ಎತ್ತಬೇಕಾಗಿದೆ. ಇದು ಕನ್ನಡಿಗರಾದ ನಮ್ಮೆಲ್ಲರ ಸ್ವಾಭಿಮಾನದ ಪ್ರಶ್ನೆಯೂ ಹೌದು ಎಂದು ಹೇಳಿದ್ದಾರೆ.
ಕೋಲಾರ : ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುವ ಹೊಸ ಸುಳ್ಳು ಸೃಷ್ಟಿಸಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಇಂದು ಆಯೋಜಿಸಿದ್ದ ಬೃಹತ್ ರೋಡ್ ಶೋ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ತಳಮಟ್ಟದಿಂದ ಬೆಳೆದು ಈಗ ಈ ಹಂತಕ್ಕೆ ಬಂದಿದ್ದಾರೆ. ಇವರು ಬಹುಮತದಿಂದ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದರು. ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ…