Subscribe to Updates
Get the latest creative news from FooBar about art, design and business.
Author: kannadanewsnow57
ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ನಾಳೆ ಬೆಳಗ್ಗೆ ವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಗಲಭೆ ಖಂಡಿಸಿ ಹಿಂದೂ -ಮುಸ್ಲೀಂ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ…
ಯಾದಗಿರಿ : ಫಾರಿನ್ ಗೆ ಅನ್ನಭಾಗ್ಯದ ಅಕ್ಕಿ ಕಳುಹಿಸುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, 6000 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ. ಆಹಾರ ಇಲಾಖೆಯ ಅಧಿ ಕಾರಿಗಳು ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆ ಗುರುಮಠಕಲ್ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮೇಲೆ ದಾಳಿ ನಡೆಸಿ, ಪ್ರಮಾಣ ದಲ್ಲಿ ಸರ್ಕಾರದ ‘ಅನ್ನಭಾಗ್ಯ’ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಬಿಪಿಎಲ್ , ಎಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿದ್ದ ಅಕ್ಕಿಯನ್ನು ಪಾಲಿಶ್ ಮಾಡಿ ದುಬೈ, ಫ್ರಾನ್ಸ್ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 6000 ಟನ್ ಅಕ್ಕಿ ಸೀಜ್ ಮಾಡಿದ್ದಾರೆ. ಜಿಲ್ಲೆಯ ಹಲವು ಕಡೆಯಿಂದ ಅಕ್ಕಿ ಸಂಗ್ರಹಿಸಿ ತಂದು ಅದನ್ನು ಪಾಲಿಶ್ ಮಾಡಿ ಅದಕ್ಕೊಂದು ಬ್ರ್ಯಾಂಡ್ ಹೆಸರು ಕೊಟ್ಟು ದುಬೈ, ಫ್ರಾನ್ಸ್ ಇನ್ನಿತರ ರಾಷ್ಟ್ರಗಳಿಗೆ ಕಳುಹಿಸಲು ಸಂಚು ರೂಪಿಸಲಾಗುತ್ತಿತ್ತು. ಹೊರ ದೇಶದಲ್ಲಿ ಅಕ್ಕಿಗೆ ಭಾರಿ ರೇಟ್ ಇದೆ. ಒಳ್ಳೆ ಗುಣಮಟ್ಟದ ಅಕ್ಕಿ ಎಂದು ಅಲ್ಲಿ ಮಾರಾಟ ಮಾಡಿ ಹಣ ಮಾಡುವ…
ಉತ್ತರ ಪ್ರದೇಶದ ಫರೂಕಾಬಾದ್ನ ಬಿಜೆಪಿ ಸಂಸದ ಮುಖೇಶ್ ರಜಪೂತ್ ಅವರ ಸಹೋದರಿಯೊಂದಿಗೆ ಕೌಟುಂಬಿಕ ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಮಾವ ಕೋಲುಗಳಿಂದ ತನ್ನನ್ನು ಕೆಟ್ಟದಾಗಿ ಹೊಡೆದಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಮತ್ತು ಇಡೀ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಯಾವುದೋ ವಿಷಯದ ಬಗ್ಗೆ ವಾಗ್ವಾದ ಆರಂಭವಾಗುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು ಮತ್ತು ಈ ವಿವಾದವು ಕ್ಷಣಮಾತ್ರದಲ್ಲಿ ಹಿಂಸಾತ್ಮಕವಾಗುತ್ತದೆ. ಹೊಡೆಯುವಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ವೀಡಿಯೊದಲ್ಲಿ, ಮೊದಲು ಸಂಸದರ ಸಹೋದರಿ ಮತ್ತು ಅವರ ಮಾವನ ನಡುವೆ ವಾಗ್ವಾದ ನಡೆಯುತ್ತದೆ, ಆದರೆ ಇದ್ದಕ್ಕಿದ್ದಂತೆ ಮಾವ ಸೊಸೆಯ ಮೇಲೆ ಕೋಲಿನಿಂದ ಹಲ್ಲೆ ಮಾಡುತ್ತಾನೆ. ಈ ಸಮಯದಲ್ಲಿ, ಮಹಿಳೆ ತನ್ನನ್ನು ತಾನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಆದರೆ ಮಾವನ ಕೋಪ ನಿಲ್ಲುವುದಿಲ್ಲ. ಮುಖೇಶ್ ರಜಪೂತ್ ಅವರ ಸಹೋದರಿಯ ಗಂಭೀರ ಆರೋಪಗಳು: ಸ್ನಾನ ಮಾಡುವಾಗ ವೀಡಿಯೊ ಮಾಡಲಾಗಿದ್ದು, ನಂತರ ಕೊಲೆ ಬೆದರಿಕೆ ನೀಡಲಾಗಿದೆ ಎಂದು ಸಹವರ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು…
ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಗಲಭೆ ಖಂಡಿಸಿ ಹಿಂದೂ -ಮುಸ್ಲೀಂ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮದ್ದೂರಿನಲ್ಲಿ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು. ಈಗಾಗಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುತ್ತಿದ್ದೇವೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1964308120651649526
ಬೆಂಗಳೂರು: ಈಡಿಗ ಸಮುದಾಯ ಎಂಜನಿಯರಿಂಗ್ ಕಾಲೇಜಷ್ಟೇ ಅಲ್ಲ, ಮೆಡಿಕಲ್ ಕಾಲೇಜನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ‘ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ’ ಉದ್ಘಾಟಿಸಿ ಮಾತನಾಡಿ, ಈಡಿಗ – ಬಿಲ್ಲವ ಸಮಾಜದ ಸಮುದಾಯ ಭವನ ನಿರ್ಮಾಣ, ಹಾಸ್ಟೆಲ್ ನಿರ್ಮಾಣಕ್ಕೆ ಸ್ಥಳ ಒದಗಿಸಿದವುದೂ ಸೇರಿದಂತೆ ನಮ್ಮ ಸರ್ಕಾರ ಅನುದಾನವನ್ನು ನೀಡಲಿದೆ. ಈಡಿಗರು, ಬಿಲ್ಲವರ ಅಭಿವೃದ್ಧಿ ನಿಗಮ ಈಗಾಗಲೇ ಘೋಷಣೆಯಾಗಿದೆ. ಕಾನೂನುನಾತ್ಮಕವಾಗಿ ಅವುಗಳನ್ನು ನೋಂದಣಿ ಮಾಡುವ ಕಾರ್ಯ ಆಗಬೇಕಾಗಿದೆ. ದೇವರಾಜ ಅರಸು ನಿಗಮದಲ್ಲಿ ಇದಕ್ಕಾಗಿ 10 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅದರ ಬದಲಿಗೆ ನಿಗಮಗಳಲ್ಲಿಯೇ ಸ್ವತಂತ್ರವಾಗಿ ಇಡಲು ಕ್ರಮ ಕೈಗೊಳ್ಳಲಾಗುವುದು. ಕಂಪನಿ ಕಾಯ್ದೆ ಪ್ರಕಾರ ನೋಂದಣಿ ಮಾಡಲಾಗುವುದು ಎಂದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು ಜನರು ಅರ್ಥೈಸಿಕೊಳ್ಳಬೇಕಿದೆ. ನಾರಾಯಣ ಗುರುಗಳು ಯಾವುದೇ ಒಂದು ಸಮುದಾಯ, ಜಾತಿಗೆ ಮೀಸಲಾಗದೇ, ಇಡೀ ಸಮಾಜದ ಆಸ್ತಿಯಾಗಿದ್ದಾರೆ. ಸಮಾಜದಲ್ಲಿರುವ ಜಾತಿವ್ಯವಸ್ಥೆ, ಮೂಢನಂಬಿಕೆ, ಅಂಧಶ್ರದ್ಧೆಯ…
ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಮಂಗಳೂರಿನ ಬಜಪೆ ಪೇಟೆಯಲ್ಲಿ ವಾಹನ ತಪಾಸಣೆ ವೇಳೆ ಟ್ರಿಪಲ್ ರೈಡ್ ಮಾಡಿಕೊಂಡು ಬಂದ ಸ್ಕೂಟರ್ ಸವಾರ ಅಪ್ರಾಪ್ತ ಎಂಬುದು ಪತ್ತೆಯಾದ ಹಿನ್ನೆಲೆಯಲ್ಲಿ ಆತನ ತಂದೆಗೆ 27,500 ರು. ದಂಡ ವಿಧಿಸಲಾಗಿದೆ. ಆ. 25ರಂದು ಬಜಪೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಟ್ರಿಪಲ್ ರೈಡ್‌ನಲ್ಲಿ ಆಗಮಿಸಿದ ಸ್ಕೂಟರ್‌ನ್ನು ನಿಲ್ಲಿಸಿ ದಾಖಲೆ ಪರಿಶೀಲಿಸಿದ್ದರು. ವಿಚಾರಣೆ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರ್ ಚಲಾಯಿಸಲು ಪೋಷಕರು ವಾಹನ ನೀಡಿರುವುದು ದೃಢಪಟ್ಟಿತ್ತು. ಈ ಬಗ್ಗೆ ಬಜಪೆ ಪೊಲೀಸರು ದೋಷಾರೋಪಣ ಪಟ್ಟಿ ತಯಾರಿಸಿ ಮಂಗಳೂರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸ್ಕೂಟರ್ ಮಾಲೀಕನಿಗೆ 27,500 ರು.ದಂಡ ವಿಧಿಸಿ ಆದೇಶಿಸಿದೆ.
ಬಾಗಲಕೋಟೆ : ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಡೀಸೆಲ್ ಸುರಿದು ಹೆತ್ತ ಮಗನನ್ನೇ ಸಜೀವವಾಗಿ ತಂದೆ-ತಾಯಿ ಸುಟ್ಟು ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿಯ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುಶ್ಚಟಗಳ ದಾಸನಾಗಿ, ಸಾಲ ಮಾಡಿಕೊಂಡು, ಆಸ್ತಿಯಲ್ಲಿ ಪಾಲು ಕೇಳಿ, ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅನೀಲ ಕಾನಟ್ಟಿ (32) ಕೊಲೆಯಾದ ಯುವಕ. ಆತನ ಸಹೋದರ ಬಸವರಾಜ (35), ತಂದೆ ಪರಪ್ಪ (62), ತಾಯಿ ಶಾಂತಾ (55) ಬಂಧಿತರು. ಶುಕ್ರವಾರ ರಾತ್ರಿ ಅನೀಲ ಮನೆಯಲ್ಲಿ ಜಗಳ ಮಾಡಿ, ನಿಮ್ಮನ್ನೆಲ್ಲ ಸಾಯಿಸುತ್ತೇನೆ ಎಂದು ಮುಂದಾದಾಗ ಪೋಷಕರು ಹತ್ಯೆಗೈದಿದ್ದಾರೆ. ಕಣ್ಣಿಗೆ ಕಾರದ ಪುಡಿ ಎರಚಿ, ಹಗ್ಗದಿಂದ ಕುತ್ತಿಗೆಗೆ ಬಿಗಿದು, ಎರಡೂ ಕೈ ಕಟ್ಟಿ, ಹೊರಗೆಳೆದು ತಂದು, ಆತನ ಮೈಮೇಲೆ ಡೀಸೆಲ್ ಸುರಿದು, ಸುಟ್ಟು ಹಾಕಿದ್ದಾರೆ.
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗಿರಕಿ ಬಿಜೆಪಿ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿ ಕೊಂಡು ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು ಎಂದು ಆರೋಪಿಸಿದ್ದಾರೆ. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಮಳೆಯ ಪ್ರಮಾಣವು ಕಡಿಮೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಮಳೆಯ ಪ್ರಮಾಣವು ಕಡಿಮೆಯಾಗಿ ಉಳಿಯುವ ಸಾಧ್ಯತೆ ಇದೆ ಎಂದು ಹವಾಮಾನ…












