Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಒಕ್ಕಲಿಗರು, ಲಿಂಗಾಯತ ನಾಯಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ, ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲಾಗಿದ್ದು, ಲಿಂಗಾಯಿತ, ಒಕ್ಕಲಿಗ ಮಠಾಧೀಶರನ್ನು ಭೇಟಿಯಾಗಿ ಚರ್ಚಿಸುವುದು, ಅವರನ್ನು ವಿಶ್ವಾಸದ ಪಡೆದುಕೊಂಡು ಮುಂದಿನ ಹೆಜ್ಜೆ ಇಡುವುದು, ಕಳೆದ ಬಾರಿ ಮೂಡಿದ್ದ ಗೊಂದಲ ಆಗದಂತೆ ಎಚ್ಚರಿಕೆ ವಹಿಸುವುದು, ಈಗ ಆ ರೀತಿ ಆಗದಂತೆ ಕಾನೂನು ಹೋರಾಟ ಮತ್ತು ಬೀದಿಗಿಳಿದು ಹೋರಾಟ ನಡೆಸಲು ಸಮುದಾಯದ ನಾಯಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯಿತ, ಒಕ್ಕಲಿಗ ಸಮುದಾಯದ ನಾಯಕರ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಹಿಂದುಳಿದವರಲ್ಲೂ ಅಸಮಾಧಾನ ಶುರುವಾಗಿದ್ದು, ಅಂಥವರನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ಒಕ್ಕಲಿಗ ನಾಯಕರು ವಹಿಸಿಕೊಂಡಿದ್ದಾರೆ. ಅಸಮಾಧಾನಿತ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Read More

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರದೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯವನ್ನು ಒದಗಿಸಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗಮದ ವೆಬ್‍ಸೈಟ್ kmdconline.karnataka.gov.in ತೆರೆದು ಲಿಂಕ್‍ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ಮುಂಚಿತವಾಗಿ ನೇರವಾಗಿ ಹಣಪಾವತಿ ಮಾಡಲಾಗುವುದು. ಆನ್‍ಲೈನ್ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯ ಪ್ರಿಂಟೌಟನ್ನು ತೆಗೆದುಕೊಂಡು SSLC, PUC Marks Card, Adhar card,…

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಈ ಆದೇಶದಂತೆ ರಾಜ್ಯಾಧ್ಯಂತ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಉಚ್ಚ ನ್ಯಾಯಾಲಯವು WP No.6421/2022 (MV) c/w WP No.14627/2021 (MV), WP No.19869/2021 (MV), WP No.24569/2023 (MV) (Uber India Systems Pvt.Ltd. Mumbi, Gurgaon & Bangalore and others V/S State of Karnataka, Rep.by the Secretary, Department of Transport, Bangalore and others) ಸಂಬಂಧಿಸಿದಂತೆ ದಿನಾಂಕ:02-04-2025 ರಂದು ನೀಡಿದ ಆದೇಶದ ಪುಟ ಸಂಖ್ಯೆ 70 ರಲ್ಲಿ ಕಂಡಿಕೆ (ಬಿ) ನಲ್ಲಿ, ಕೆಳಕಂಡಂತೆ ಆದೇಶ ನೀಡಿರುತ್ತದೆ ಎಂದಿದ್ದಾರೆ. The petitioners (M/s Uber India Systems Pvt.Ltd., M/s Roppen…

Read More

ಬೆಂಗಳೂರು : ರಾಜ್ಯ ಸರ್ಕಾರದ ಎರಡು ವರ್ಷಗಳ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರ ನೀಡಲು ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಯಿತು. ಅದರಂತೆ ಹಟ್ಟಿ, ತಾಂಡಾ ನಿವಾಸಿಗಳ ತ್ರಿಶಂಕು ಸ್ಥಿತಿ ನಿವಾರಿಸಲು ಹಾಗೂ ಅವರಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಹಟ್ಟಿ, ತಾಂಡಾ ನಿವಾಸಿಗಳ ಮನೆಗಳಿಗೆ ಕಾನೂನಿನ ಆಸರೆ ನೀಡಬೇಕು ಎಂಬ…

Read More

ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮುಂಡ್ರಿಗಿ ಬಡಾವಣೆಯಲ್ಲಿ ಗುರುವಾರ ಏರ್ಪಡಿಸಿದ್ದ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು. ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ…

Read More

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ…

Read More

ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/ANI/status/1915308682373689529?ref_src=twsrc%5Egoogle%7Ctwcamp%5Eserp%7Ctwgr%5Etweet ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು.

Read More

ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/ANI/status/1915308785054494881?ref_src=twsrc%5Egoogle%7Ctwcamp%5Eserp%7Ctwgr%5Etweet ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು. https://twitter.com/ANI/status/1915302365097324755?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/i/status/1915301411606217010

Read More

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ‍್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಮೂಲದ ಪ್ರದೀಪ್ (40) ಯುವತಿಗೆ ಲೈಂಗಿಕ ಕಿಕುಕುಳ ನೀಡಿದ್ದಾನೆ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೋಲಿ ಕಂಡಕ್ಟರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.

Read More

ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿಇದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನಿ ಪ್ರಜೆಗಳು ಮತ್ತು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅನಂತನಾಗ್ ಪೊಲೀಸರು ಘೋಷಿಸಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಗಳಿದ್ದಲ್ಲಿ ಅನಂತ್ ನಾಗ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ. ಎಸ್ ಪಿ ಅನಂತ್ ನಾಗ್: 9596777666, ಪಿಸಿಆರ್ ಅನಂತ್ ನಾಗ್ :9596777669 ಇ-ಮೇ: dpoanantnag-jk2nic.inಗೆ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ. https://twitter.com/ANI/status/1915303270886547764?ref_src=twsrc%5Egoogle%7Ctwcamp%5Eserp%7Ctwgr%5Etweet

Read More