Author: kannadanewsnow57

ಬೆಳಗಾವಿ : ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ ಹಲವು ಮೊಟ್ಟೆಗಳನ್ನು ಪ್ರಯೋಗಾಲಯದಲ್ಲಿ ತಪಾಸಣೆ ನಡೆಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ಅಂತಿಮವಾಗಿ ಎಲ್ಲರಿಗೂ ಸಮಾಧಾನ ತರುವಂತಹ ವರದಿ ಬಂದಿದೆ ಎಂದು ಹೇಳಿದ್ದಾರೆ. ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಇರುವ ಸಾಧ್ಯತೆಯಿಲ್ಲ ಎಂದು ವದಂತಿ ಕೇಳಿ ಬಂದಾಗಲೇ ಹೇಳಿದ್ದೆ, ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷಾ ವೇಳೆ ಕೂಡ ಅದು ಸಾಭೀತಾಗಿದೆ. ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಮೊಟ್ಟೆಗಳ…

Read More

ಅಮರಿಕಾ : ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಸಂಭವಿಸಿದ್ದು, ಉತ್ತರ ಕೆರೊಲಿನಾದ ಇರೆಡೆಲ್ ಕೌಂಟಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ವಿಮಾನ ಘಟನೆ”ಯನ್ನು ಮೊದಲು ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣ ವರದಿ ಮಾಡಿದೆ, ಅದು ಫೇಸ್‌ಬುಕ್ ಪೋಸ್ಟ್‌ನಲ್ಲಿ, “ಸುಮಾರು ಬೆಳಿಗ್ಗೆ 10:15 ಕ್ಕೆ, ವಿಮಾನವು ಇಳಿಯುವಾಗ ಅಪಘಾತಕ್ಕೀಡಾಯಿತು. ಫೆಡರಲ್ ವಿಮಾನಯಾನ ಆಡಳಿತ (FAA) ಮಾರ್ಗದಲ್ಲಿದೆ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸುತ್ತದೆ” ಎಂದು ಹೇಳಿದೆ. ವಿಮಾನವು ವಿಮಾನ ನಿಲ್ದಾಣದಿಂದ ಹೊರಟು ತಕ್ಷಣವೇ ಹಿಂದಕ್ಕೆ ತಿರುಗಿ ಬೆಂಕಿ ಹೊತ್ತಿಕೊಳ್ಳುವ ಮೊದಲು ಇಳಿಯಲು ಪ್ರಯತ್ನಿಸಿತು ಎಂದು ಸ್ಥಳೀಯ ಮಾಧ್ಯಮ ಸಂಸ್ಥೆ WCNC ವರದಿ ಮಾಡಿದೆ, ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಸ್ವಲ್ಪ ಬೆಳಕು ಚೆಲ್ಲುತ್ತದೆ. ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಮತ್ತು ಫೆಡರಲ್ ವಿಮಾನಯಾನ ಆಡಳಿತ (FAA) ತನಿಖೆ ಪ್ರಸ್ತುತ ನಡೆಯುತ್ತಿದೆ ಮತ್ತು ದಿನ ಕಳೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/RT_com/status/2001699034180821046?s=20

Read More

ಬೆಳಗಾವಿ : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡುಗಳು ಅನರ್ಹವಾಗಿವೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್…

Read More

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ 9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು. 10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು. 11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು. 2. ಉನ್ನತ ಶಿಕ್ಷಣ ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ…

Read More

ಬೆಂಗಳೂರು : ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಹತ್ತಿರದ ಲಸಿಕಾ ಕೇಂದ್ರ ಪತ್ತೆಗೆ ‘Nearby Vaccination centre Karnataka’ ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು, ಕೇಂದ್ರ ಹುಡುಕಬಹುದು…

Read More

ಬೆಂಗಳೂರು : ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ. ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತವಾಗಿದೆ. ಬೇಕಾದ ದಾಖಲಾತಿಗಳು ಮಾಲೀಕರ ಭಾವಚಿತ್ರ ಮತ್ತು ಆಧಾರ್ ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು) ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ) ಸ್ವತ್ತಿನ ಛಾಯಾಚಿತ್ರ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು. K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ…

Read More

ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ…

Read More

ಬೆಳಗಾವಿ : ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ. ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ…

Read More

ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…

Read More

ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…

Read More