Subscribe to Updates
Get the latest creative news from FooBar about art, design and business.
Author: kannadanewsnow57
ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 17 ಜನರು ಸಾವನ್ನಪ್ಪಿದ್ದು, ಸದ್ಯ ಅಗ್ನಿ ಅವಘಡದ ವಿಡಿಯೋ ವೈರಲ್ ಆಗಿದೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು PMO ಟ್ವೀಟ್ ಮಾಡಿದೆ. ಬೆಳಿಗ್ಗೆ 6.30ರ ಸುಮಾರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, “ಇಂತಹ ಘಟನೆಗಳು ತುಂಬಾ ದುಃಖಕರವಾಗಿವೆ. ನಾನು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ…
ನವದೆಹಲಿ. ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ (ಐಎಎಸ್) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಲು ಲಭ್ಯವಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ನ ಅಧಿಕೃತ ವೆಬ್ಸೈಟ್ upsconline.gov.in ಗೆ ಭೇಟಿ ನೀಡುವ ಮೂಲಕ UPSC ಪ್ರಿಲಿಮ್ಸ್ 2025 ಪ್ರವೇಶ ಪತ್ರವನ್ನು ತಕ್ಷಣವೇ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಎರಡು ವಿಧಾನಗಳನ್ನು (ನೋಂದಣಿ ಐಡಿ ಅಥವಾ ರೋಲ್ ಸಂಖ್ಯೆ) ನಮೂದಿಸುವ ಮೂಲಕ ಡೌನ್ಲೋಡ್ ಮಾಡಬಹುದು. ಪರೀಕ್ಷೆ ಮೇ 25 ರಂದು ನಡೆಯಲಿದೆ. ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ಎರಡು ಪಾಳಿಗಳಲ್ಲಿ ನಡೆಸಲಾಗುವುದು. ಪತ್ರಿಕೆ 1 ಬೆಳಿಗ್ಗೆ 9:30 ರಿಂದ 11:30 ರವರೆಗೆ ಮತ್ತು ಪತ್ರಿಕೆ 2 ಮಧ್ಯಾಹ್ನ 2:30 ರಿಂದ ಸಂಜೆ 4:30 ರವರೆಗೆ ನಡೆಯಲಿದೆ. ಈ ಹಂತಗಳೊಂದಿಗೆ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿ ಯುಪಿಎಸ್ಸಿ ಪ್ರಿಲಿಮ್ ಅಡ್ಮಿಟ್ ಕಾರ್ಡ್ ಡೌನ್ಲೋಡ್…
ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 17 ಜನರು ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು PMO ಟ್ವೀಟ್ ಮಾಡಿದೆ. https://twitter.com/ANI/status/1923985763332411792?ref_src=twsrc%5Egoogle%7Ctwcamp%5Eserp%7Ctwgr%5Etweet ಬೆಳಿಗ್ಗೆ 6.30ರ ಸುಮಾರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, “ಇಂತಹ ಘಟನೆಗಳು ತುಂಬಾ ದುಃಖಕರವಾಗಿವೆ. ನಾನು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ಪಡೆಯಲು ಪ್ರಯತ್ನಿಸುತ್ತೇನೆ”…
ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಮೇ 20 ರಿಂದ 24 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರೆಯಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1963 ರ ಪ್ರಕಾರ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಿ ಕೊಪ್ಪಳ ತಹಶೀಲ್ದಾರರು ಹಾಗೂ ತಾಲ್ಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ವಿಠ್ಠಲ್ ಚೌಗಲಾ ಅವರು ಆದೇಶ ಹೊರಡಿಸಿದ್ದಾರೆ. ಆದೇಶದನ್ವಯ ದೇವಸ್ಥಾನದ ಆವರಣದಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನುಗಳಲ್ಲಿ ಭಕ್ತಾದಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಆದೇಶವನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರರು ಹಾಗೂ ತಾಲ್ಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಉತ್ತರ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವೈರಲ್ ವಿಡಿಯೋದಲ್ಲಿ, ಮಹಿಳೆಯನ್ನು ಮನೆಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದ್ದು, ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನೆರೆಹೊರೆಯವರು ಮಹಿಳೆಯನ್ನು ಕೆಳಗಿಳಿಸುತ್ತಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಮೇ 13 ರಂದು ನಡೆದಿದೆ ಎಂದು ವರದಿಯಾಗಿದೆ. WATCH VIDEO https://twitter.com/Benarasiyaa/status/1923372428375265590?ref_src=twsrc%5Etfw%7Ctwcamp%5Etweetembed%7Ctwterm%5E1923372428375265590%7Ctwgr%5Edd5ed36a7b5d0edd3be5c9bc06c8cba63c4014c7%7Ctwcon%5Es1_c10&ref_url=https%3A%2F%2Fkannadadunia.com%2Finhuman-act-in-uttar-pradesh-cruel-husband-hangs-wife-upside-down%2F
ಹೈದರಾಬಾದ್ : ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. https://twitter.com/ANI/status/1923942952872620401?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ : ಶುಕ್ರವಾರ ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ನೊವಾವ್ಯಾಕ್ಸ್ನ ಕೋವಿಡ್-19 ಲಸಿಕೆಯನ್ನು ಅನುಮೋದಿಸಿತು, ಆದರೆ ಲಸಿಕೆ ಪಡೆಯಲು ಸಾಧ್ಯವಾಗುವ ವ್ಯಕ್ತಿಗಳ ಮೇಲೆ ಹೆಚ್ಚುವರಿ ಷರತ್ತುಗಳನ್ನು ವಿಧಿಸಿದೆ. ಅನುಮೋದನೆ ಪತ್ರದ ಪ್ರಕಾರ, ಪರವಾನಗಿಯು ನುವಾಕ್ಸೊವಿಡ್ ಎಂಬ ಲಸಿಕೆಯನ್ನು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ ಮತ್ತು ಕೋವಿಡ್ನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗುವ ಅಪಾಯವನ್ನು ಹೆಚ್ಚಿಸುವ ಕನಿಷ್ಠ ಒಂದು ಆಧಾರವಾಗಿರುವ ಸ್ಥಿತಿಯನ್ನು ಹೊಂದಿರುವ 12 ರಿಂದ 64 ವರ್ಷದೊಳಗಿನವರಿಗೆ ಬಳಸುವುದನ್ನು ನಿರ್ಬಂಧಿಸುತ್ತದೆ. ಪತ್ರವು ಆಧಾರವಾಗಿರುವ ಸ್ಥಿತಿಯಾಗಿ ಅರ್ಹತೆ ಪಡೆದಿರುವುದನ್ನು ನಿರ್ದಿಷ್ಟಪಡಿಸಿಲ್ಲ. ಮಕ್ಕಳ ಅಧ್ಯಯನಗಳು ಪೂರ್ಣಗೊಳ್ಳದ ಕಾರಣ, ಅರ್ಜಿಗಾಗಿ ಜನನದಿಂದ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಧ್ಯಯನಗಳ ಸಲ್ಲಿಕೆಯನ್ನು FDA ಮುಂದೂಡಿದೆ. ನೊವಾವ್ಯಾಕ್ಸ್ ಸಿಇಒ ಜಾನ್ ಜೇಕಬ್ಸ್ ಅವರು ಈ ಅನುಮೋದನೆಯು “ಮಹತ್ವದ ಮೈಲಿಗಲ್ಲು” ಆಗಿದ್ದು, ಜನರು ಲಸಿಕೆಯನ್ನು ಪ್ರವೇಶಿಸುವ ಮಾರ್ಗವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದರು. ಏಪ್ರಿಲ್ 1 ರಂದು ಎಫ್ಡಿಎ ಚುಚ್ಚುಮದ್ದನ್ನು ಅನುಮೋದಿಸುವ ಗುರಿಯನ್ನು ತಪ್ಪಿಸಿಕೊಂಡ ನಂತರ…
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. ಆಕಾಂಕ್ಷಾ ನಿನ್ನೆ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು ಆದರೆ ಇದೀಗ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ನಾಯರ್ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು. ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್ ತರಲೆಂದು ಹೋಗಿದ್ದರು. ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಆಕಾಂಕ್ಷಾ ಪ್ಲಾನ್ ಮಾಡಿದ್ದರು. ಇದಕ್ಕಾಗಿ ಸರ್ಟಿಫಿಕೇಟ್ ಗಾಗಿ ಪಂಜಾಬ್ ಪಗ್ವಾಡಾ ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ಪಡೆದಿದ್ದರು. ಸರ್ಟಿಫಿಕೇಟ್ ಪಡೆದ ಬಳಿಕ ಮನೆಗೆ ಕರೆ ಮಾಡಿದ್ದ ಆಕಾಂಕ್ಷಾ ಆ ಬಳಿಕ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಗಳ ಸಾವಿನ ಬಗ್ಗೆ ಜಲಂಧರ್ ಪೊಲೀಸರು ಪೋಷಕರಿಗೆ…
BREAKING : ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಮಕ್ಕಳು ಸೇರಿ 8 ಮಂದಿ ಸಜೀವ ದಹನ | Fire in Hyderabad
ಹೈದರಾಬಾದ್ : ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. https://twitter.com/ANI/status/1923942952872620401?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ನಿಗದಿಯಾಗಿತ್ತು. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಪ್ರವಾಸಗಳು ರದ್ದಾಗಿವೆ. ಭಾರಿ ಮಳೆಯಿಂದಾಗಿ ಹವಾಮಾನ ವೈಪರೀತ್ಯವುಂಟಾದ ಕಾರಣಕ್ಕೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.