Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) ಅಕ್ಟೋಬರ್ 21 ರಿಂದ ತಾಂತ್ರಿಕೇತರ ಜನಪ್ರಿಯ ವರ್ಗದ (ಪದವಿ/ಸಿಇಎನ್ ಸಂಖ್ಯೆ 06/2025) ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವ ಮತ್ತು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು RRB ಯ ಅಧಿಕೃತ ವೆಬ್ಸೈಟ್ rrbapply.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಫಾರ್ಮ್ ಅನ್ನು ಭರ್ತಿ ಮಾಡಲು ಕೊನೆಯ ದಿನಾಂಕ ನವೆಂಬರ್ 21 ಮತ್ತು ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 22, 2025. ಅರ್ಹತೆ ಮತ್ತು ಮಾನದಂಡಗಳು RRB NTPC ಗ್ರಾಜುಯೇಟ್ ಲೆವೆಲ್ ನೇಮಕಾತಿಯಲ್ಲಿ ಭಾಗವಹಿಸಲು, ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಪದವಿ ಅಗತ್ಯವಿದೆ. ಕೆಲವು ಹುದ್ದೆಗಳಿಗೆ, ಅಭ್ಯರ್ಥಿಗಳು ಪದವಿಯ ಜೊತೆಗೆ ಕಂಪ್ಯೂಟರ್ ಪ್ರಾವೀಣ್ಯತೆ/ಟೈಪಿಂಗ್ ಕೌಶಲ್ಯವನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಗಳ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು ಹುದ್ದೆಯನ್ನು ಅವಲಂಬಿಸಿ ಗರಿಷ್ಠ ವಯಸ್ಸು 33 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲು…
ತುಮಕೂರು : ರಾಜ್ಯದಲ್ಲಿ ದೀಪಾವಳಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಅಂದನಕೆರೆ ಬಳಿಯ ಎರೆಕಟ್ಟೆ ಕೆರೆಯಲ್ಲಿ ನಡೆದಿದೆ. ಇಬ್ಬರು ಸ್ನೇಹಿತೆಯರು ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಬಾಲಕಿ ತಂದೆ ಕೂಡ ಸಾವನ್ನಪ್ಪಿದ್ದಾರೆ.ವೆಂಕಟೇಶ್(48), ಪುತ್ರಿ ಶ್ರಾವ್ಯ(12) ಆಕೆಯ ಸ್ನೇಹಿತೆ ಪುಣ್ಯ(11) ಮೃತಪಟ್ಟವರು. ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಸಾವನ್ನಪ್ಪಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಈ ವರ್ಷ ಭಾರತದಲ್ಲಿ ದೀಪಾವಳಿ ಹಬ್ಬದಂದು ದಾಖಲೆಯ ಮಾರಾಟವಾಗಿದ್ದು, ಒಟ್ಟು ಹಬ್ಬದ ವ್ಯಾಪಾರವು ರೂ. 6.05 ಲಕ್ಷ ಕೋಟಿ ತಲುಪಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT) ತಿಳಿಸಿದೆ. ಒಟ್ಟು ಹಬ್ಬದ ವ್ಯಾಪಾರವು ರೂ. 5.40 ಲಕ್ಷ ಕೋಟಿ ಸರಕುಗಳು ಮತ್ತು ರೂ. 65,000 ಕೋಟಿ ಸೇವೆಗಳನ್ನು ಒಳಗೊಂಡಿದೆ. “ದೀಪಾವಳಿ ಹಬ್ಬದ ಮಾರಾಟ 2025 ರ ಸಂಶೋಧನಾ ವರದಿ”ಯಲ್ಲಿ ಬಿಡುಗಡೆಯಾದ ಈ ದತ್ತಾಂಶವು, ರಾಜ್ಯ ರಾಜಧಾನಿಗಳು ಮತ್ತು ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳು ಸೇರಿದಂತೆ 60 ಪ್ರಮುಖ ವಿತರಣಾ ಕೇಂದ್ರಗಳಲ್ಲಿ CAIT ಸಂಶೋಧನೆ ಮತ್ತು ವ್ಯಾಪಾರ ಅಭಿವೃದ್ಧಿ ಸೊಸೈಟಿ ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯನ್ನು ಆಧರಿಸಿದೆ. ದೆಹಲಿಯ ಚಾಂದನಿ ಚೌಕ್ ಸಂಸದ ಮತ್ತು CAIT ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಅವರು, GST ತರ್ಕಬದ್ಧಗೊಳಿಸುವಿಕೆ ಮತ್ತು ಸ್ವದೇಶಿ ಅಳವಡಿಕೆಯು ವ್ಯಾಪಾರ ಸಮುದಾಯ ಮತ್ತು ಗ್ರಾಹಕರಿಬ್ಬರಿಗೂ ಸ್ಫೂರ್ತಿ ನೀಡಿದೆ ಎಂದು ಮಾರಾಟವು ಎತ್ತಿ ತೋರಿಸುತ್ತದೆ ಎಂದು ಹೇಳಿದರು.…
ಹಾವೇರಿ: ಆಟವಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ತರುಣ ಸಿದ್ದನಗೌಡ ಮರಿಪರಪ್ಪನವರ (9)ಮೃತನು. ಗ್ರಾಮದಲ್ಲಿ ಇರುವ ನೀರಿನ ಹೊಂಡದ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಲ್ಲಿಬಿದ್ದು ಮುಳುಗಿದ್ದಾನೆ ಎಂದು ಮೃತ ಬಾಲಕನ ತಂದೆ ಸಿದ್ದನಗೌಡ ಮರಿಪರಪ್ಪನವರ ಪೊಲೀಸರಿಗೆ ನೀಡಿದ ದೂರಿನಲ್ಲಿತಿಳಿಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ…
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ಇಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ. ಅವರ ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ…
ಬೆಂಗಳೂರು : ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಎಕರೆಗೂ ಹೆಚ್ಚು ಜಮೀನು ಇದ್ದಲ್ಲಿ ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ. ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ ಹೆಂಡತಿ / ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಜಿ.ಎಸ್.ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂಧಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು…
ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ತುಂತುರು ಮಳೆ ಹಾಗೂ ತಾಪಮಾನದಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆ ಉಂಟಾಗಿ ಅಲ್ಲಲ್ಲಿ ಭತ್ತದ ಬೆಳೆಗೆ ಕೀಟ ಮತ್ತು ರೋಗ ಭಾದೆಗಳನ್ನ ಕಂಡುಬರುತ್ತಿದ್ದು, ಸರಿಯಾಗಿ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕ್ರಮದ ಮಾಹಿತಿಯನ್ನು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ರೈತರಿಗೆ ನೀಡಿದ್ದಾರೆ. ಎಲೆ ಸುರುಳಿ ಹುಳು /ಕೊಳವೆ ಹುಳು: – ಈ ಹುಳುಗಳು ಮಡಚಿ ಕೊಳವೆ ಕೋಶದಲ್ಲಿ ಎಲೆಯನ್ನು ತಿನ್ನುತ್ತವೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಹಾಗೂ ಬದುಗಳನ್ನು ಸ್ವಚ್ಛಗೊಳಿಸುವುದು. ಕ್ವಿನಾಲ್ ಫಾಸ್ 2 ಮಿಲೀ ಅಥವಾ ಇಂಡಾಕ್ಸಿ ಕಾರ್ಬ್ 14.5 ಎಸ್ಸಿ 0.5 ಮಿಲಿ ಪ್ರತಿ ಲೀ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು. ಕಾಂಡಕೊರೆಯುವ ಹುಳು:- ಸುಳಿ ಒಣಗುವುದು ಮತ್ತು ಬಿಳಿ ತೆನೆಯಾಗಿ ಕಾಳು ಜೊಳ್ಳಾಗುವುದರಲ್ಲಿ ಈ ಹುಳುಗಳು ಕಂಡು ಬರಲಿದ್ದು, ಕ್ಲೋರೋಪೈರಿಪಾಸ್ 2 ಮಿಲಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು. ಕಂದುಜಿಗಿ ಹುಳು:-…
ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವಂತೆ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಜನರ ಜೀವನ ಗುಣಮಟ್ಟವನ್ನು, ಆರ್ಥಿಕ ಅಭಿವೃದ್ಧಿಯ ಶ್ರೇಯಾಂಕವನ್ನು ಗುರುತಿಸಲು ಉಪಕಾರಿಯಾಗಲಿದೆ. ಸದರಿ ಸಮೀಕ್ಷೆಗೆ ಈವರೆಗೂ ಮಾಹಿತಿ ನೀಡದವರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ ಅವರು, ಸಮೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ.91.29ರಷ್ಟು ಪ್ರಗತಿ ಸಾಧಿಸಲಾಗಿದೆ. ಸದರಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಆದರೆ, ಅಧಿಕವಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು…
ಮುಂಬೈ : ದೀಪಾವಳಿ ಹಬ್ಬದ ದಿನವೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹುಲಜಂತಿ ಮಾಳಿಂಗರಾಯ್ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದ ಸ್ನೇಹಿತರು ತೆರಳಿದ್ದರು. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಕಾರಿನಲ್ಲಿದ್ದ ಶಿವಕುಮಾರ್, ರತಿಕಾಂತ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರು ಬೀದರ್ ತಾಲೂಕಿನ ಖಾಶಂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














