Author: kannadanewsnow57

ಬೆಂಗಳೂರು : 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿದೆ. ನೋಂದಣಿ ಸಂದರ್ಭದಲ್ಲಿ ಟ್ರಾಕ್ಸ್ ಸೂಟ್, ಕ್ಯಾಪ್, ಹಾಜರಾತಿ ಪ್ರಮಾಣಪತ್ರವನ್ನು ಮಧ್ಯಾಹ್ನ 3:00 ರವರೆಗೆ ಮಾತ್ರ ವಿತರಿಸಲಾಗುವುದು, ನಂತರ ಅವಕಾಶವಿರುವುದಿಲ್ಲ. ನೋಂದಣಿ ಸಮಯದಲ್ಲಿ ಕ್ರೀಡಾಪಟುಗಳು ಇಲಾಖೆಯ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿರುತ್ತದೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದಂತಹ ಕ್ರೀಡಾಪಟುಗಳು/ ಆಯ್ಕೆಯಾಗಿರುವ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಸಂಜೆ 04.00 ಗಂಟೆಗೆ ಸರಿಯಾಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕಡ್ಡಾಯವಾಗಿ ಸಂಘವು ನೀಡುವ ಟ್ರಾಕ್ ಸೂಟ್, ಟೀ ಶರ್ಟ್ ಮತ್ತು ಕ್ಯಾಪ್ ಧರಿಸಿ ನೆಹರು ಕ್ರೀಡಾಂಗಣದಲ್ಲಿ ಆಸೀನರಾಗುವುದು. ಉದ್ಘಾಟನಾ ಸಮಾರಂಭದ ತಾವು ಆಸೀನರಾದ ಸ್ಥಳದಲ್ಲಿಯೇ వాజరాతి ಪ್ರಮಾಣಪತ್ರವನ್ನು ವಿತರಿಸಲಾಗುವುದು.…

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ…

Read More

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ವಿವಿಧ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಇಂದು ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಕನ್ನಡ ನಟರಾದ ದುನಿಯಾ ವಿಜಯ್, ಗಣೇಶ್, ದ್ರುವ ಸರ್ಜಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕನ್ನಡ ಸಿನಿಮಾಗಳು, ಟಿಕೆಟ್ ದರ ವಿಚಾರ, ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಕುಸಿತ, ಚಿತ್ರಮಂದಿಗಳು ಬಂದ್, ಕನ್ನಡ ಸಿನಿಮಾಗಳ ಸವಾಲುಗಳು ಸೇರಿ ಹಲವು ಸಮಸ್ಯೆಗಳಿಗೆ ಪರಿಹರಿಸಲು ಹಾಗೂ ಕನ್ನಡ ಚಿತ್ರರಂಗ ಉಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ನಟ ಶಿವರಾಜ್ ಕುಮರ್ ನೇತೃತ್ವದಲ್ಲಿ ಚಿತ್ರರಂಗದ ಹಿರಿಯರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ

Read More

ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕೈದು ದಿನಗಳಲ್ಲಿ ದೇಶದ ಹಲವಾರು ಪ್ರದೇಶಗಳಲ್ಲಿ ನಿರಂತರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಮುಂದಿನ ಐದು ದಿನಗಳವರೆಗೆ ನಿರಂತರ ಮಳೆಯಾಗಲಿದ್ದು, ಗುಡುಗು ಸಹಿತ ಮತ್ತು ಬಿರುಗಾಳಿ ಬೀಸಲಿದೆ ಎಂದು ಗಮನಸೆಳೆದರು. ಮಧ್ಯ ಭಾರತದಾದ್ಯಂತ ಇದೇ ರೀತಿಯ ಹವಾಮಾನ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ. ದೇಶದ ಈಶಾನ್ಯ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಮಳೆ ಮುಂದುವರಿಯಲಿದೆ” ಎಂದು ಶ್ರೀವಾಸ್ತವ ಹೇಳಿದರು, ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಅಲೆಯ ಪರಿಸ್ಥಿತಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಭಾರತದಲ್ಲಿ, ವಿಶೇಷವಾಗಿ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ…

Read More

ಮಥುರಾ: ಉತ್ತರ ಪ್ರದೇಶದ ಮಥುರಾದ ನೌಝೀಲ್ ಪೊಲೀಸ್ ಠಾಣೆಯು ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮತ್ತು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 90 ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಿದ್ದಾರೆ. ಪ್ರಸ್ತುತ, ಪೊಲೀಸರು ಈ ಜನರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಭಾರತಕ್ಕೆ ಅವರ ಪ್ರವೇಶ ಜಾಲದ ಬಗ್ಗೆಯೂ ತನಿಖೆ ಆರಂಭಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಪೊಲೀಸರು ನೌಝೀಲ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜ್‌ಪುರ ಮತ್ತು ಬಜ್ನಾದಲ್ಲಿರುವ ಇಟ್ಟಿಗೆ ಗೂಡುಗಳ ಮೇಲೆ ದಾಳಿ ನಡೆಸಿ 90 ಬಾಂಗ್ಲಾದೇಶಿಗಳನ್ನು ಬಂಧಿಸಿದ್ದಾರೆ ಎಂದು ಎಸ್‌ಎಸ್‌ಪಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ. ಬಂಧಿತ ಬಾಂಗ್ಲಾದೇಶಿಗಳಲ್ಲಿ 35 ಪುರುಷರು, 27 ಮಹಿಳೆಯರು ಮತ್ತು 28 ಮಕ್ಕಳು ಸೇರಿದ್ದಾರೆ. ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರು. ಇತರ ಏಜೆನ್ಸಿಗಳು ಸಹ ಬಂಧಿತ ಜನರನ್ನು ವಿಚಾರಣೆ ನಡೆಸುತ್ತಿವೆ. ಬಂಧಿತರ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ. ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಶುಕ್ರವಾರ ಮಥುರಾ ಜಿಲ್ಲೆಯಿಂದ ಹಲವಾರು…

Read More

ಕೇದಾರನಾಥ್ : ಏಮ್ಸ್ ರಿಷಿಕೇಶದ ಹೆಲಿಕಾಪ್ಟರ್‌ನ ಹಿಂಭಾಗಕ್ಕೆ ಹಾನಿಯಾಗಿ ಕೇದಾರನಾಥದಲ್ಲಿ ಪತನವಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬರುತ್ತಿದ್ದ ಹೆಲಿಕಾಪ್ಟರ್ ಕೇದಾರನಾಥ ಹೆಲಿಪ್ಯಾಡ್ ನಲ್ಲಿ ಇಳಿಯುವಾಗ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಪತನಗೊಂಡಿದೆ. ಈ ಸೇವೆಯು ಋಷಿಕೇಶದಿಂದ ಬಂದ ಹೆಲಿ ಆಂಬ್ಯುಲೆನ್ಸ್ ರೂಪದಲ್ಲಿ ಕಾರ್ಯನಿರ್ವಹಿಸುತ್ತದೆ, ಅದು ರೋಗಿಯನ್ನು ಕರೆದುಕೊಂಡು ಹೋಗಲು ಕೇದಾರನಾಥಕ್ಕೆ ಬಂದಿತ್ತು.ಲ್ಲಿ ವಿಮಾನದಲ್ಲಿ ಇಬ್ಬರು ವೈದ್ಯರು ಮತ್ತು ಪೈಲಟ್ ಇದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಹೆಲಿಪ್ಯಾಡ್‌ನಿಂದ 20 ಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ. ಏಮ್ಸ್ ರಿಷಿಕೇಶದ ಹೆಲಿಕಾಪ್ಟರ್‌ನ ಹಿಂಭಾಗಕ್ಕೆ ಹಾನಿಯಾಗಿ ಕೇದಾರನಾಥದಲ್ಲಿ ಅಪಘಾತಕ್ಕೀಡಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಪ್ರಯಾಣಿಕರು (ಒಬ್ಬ ವೈದ್ಯರು, ಒಬ್ಬ ಕ್ಯಾಪ್ಟನ್ ಮತ್ತು ವೈದ್ಯಕೀಯ ಸಿಬ್ಬಂದಿ) ಸುರಕ್ಷಿತವಾಗಿದ್ದಾರೆ ಎಂದು ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ. https://twitter.com/ANI/status/1923633411010314565?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಐಪಿಎಲ್ 2025 ಪುನರಾರಂಭಗೊಂಡಿದ್ದು, ಏಳು ತಂಡಗಳು ನಾಲ್ಕು ಪ್ಲೇಆಫ್ ಸ್ಥಾನಗಳಿಗೆ ಪೈಪೋಟಿ ನಡೆಸಲಿವೆ. ಗುಜರಾತ್ ಟೈಟಾನ್ಸ್, ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಬಲವಾದ ಸ್ಥಾನಗಳನ್ನು ಕಾಯ್ದುಕೊಂಡಿವೆ, ಆದರೆ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಭರವಸೆಯನ್ನು ಜೀವಂತವಾಗಿಡಲು ಗೆಲ್ಲಲೇಬೇಕಾದ ಪಂದ್ಯಗಳನ್ನು ಎದುರಿಸುತ್ತಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯಾಚೆಗಿನ ಉದ್ವಿಗ್ನತೆಯಿಂದಾಗಿ ಒಂದು ವಾರ ರದ್ದುಗೊಂಡ ನಂತರ ಐಪಿಎಲ್ 2025 ಪುನರಾರಂಭಗೊಳ್ಳಲಿದೆ. ಮೇ 17 ರ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳೊಂದಿಗೆ ಪುನರಾರಂಭ ನಡೆಯಲಿದೆ. ಸೀಸನ್ ಪುನರಾರಂಭವಾಗುತ್ತಿದ್ದಂತೆ, ಪ್ಲೇಆಫ್ ಸ್ಥಾನಕ್ಕಾಗಿ ತಂಡಗಳು ತೀವ್ರವಾಗಿ ಹೋರಾಡುತ್ತಿರುವುದರಿಂದ ಇದು ಈಗಾಗಲೇ ವ್ಯವಹಾರದ ಅಂತ್ಯದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿವೆ ಮತ್ತು ಲೀಗ್ ಹಂತದಲ್ಲಿ ಅಗ್ರ-ನಾಲ್ಕು ಸ್ಥಾನಕ್ಕಾಗಿ ಏಳು ತಂಡಗಳು ಪೈಪೋಟಿಯಲ್ಲಿವೆ. ಐಪಿಎಲ್ 2025 ಲೀಗ್…

Read More

ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದೆ.ಕರಾವಳಿ ಭಾಗದ ಯುವಜನರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು, ರಾಷ್ಟ್ರೀಯ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಈ ಕ್ರೀಡಾಂಗಣ ನೆರವಾಗಲಿದೆ ಎನ್ನುವ ನಂಬಿಕೆ ನನ್ನದು ಎಂದು ತಿಳಿಸಿದ್ದಾರೆ.

Read More

ಧಾರವಾಡ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2024-25 ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ ಮತ್ತು ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಮೇ 23, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://dom.karnataka.gov.in/ ಮೂಲಕ ಅಥವಾ ಸಹಾಯವಾಣಿ ಸಂಖ್ಯೆ:8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಧಾರವಾಡ : ಹುಬ್ಬಳ್ಳಿಯ ಅಕ್ಷಯಪಾರ್ಕನ ಪ್ರತೀಕ್ ಗುಡಿಸಾಗರ ವಿಧ್ಯಾರ್ಥಿಯಾಗಿದ್ದು, ತನ್ನ ವ್ಯಾಸಂಗಕ್ಕಾಗಿ ಅಮೆಜಾನ್ ಮುಖಾಂತರ ರೆಡ್ ಮಿ ನೋಟ್-13 ಪ್ರೋ + ಮೊಬೈಲನ್ನು ರೂ.24,999 ಗಳಿಗೆ ಬುಕ್ ಮಾಡಿದ್ದರು. ಎದುರುದಾರರು ಬುಕ್ ಮಾಡಿದ ಮೊಬೈಲ್ ಬದಲಾಗಿ ಬೇರೆ ಇನ್ನೊಬ್ಬರು ಬುಕ್ ಮಾಡಿದ ಕಡಿಮೆ ಮೊತ್ತದ ಸ್ಯಾಮಸಂಗ್ ಗ್ಯಾಲಕ್ಷಿ ಮೊಬೈಲನ್ನು ಕೊಟ್ಟಿರುತ್ತಾರೆ. ಇದರಿಂದ ತನಗೆ ಸೇವಾ ನ್ಯೂನ್ಯತೆ ಆಗಿದೆ ಅಂತಾ ಹೇಳಿ ಎದುರುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ದಿ:22/11/2024 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಬೋಳಶೆಟ್ಟಿ ಸದಸ್ಯರು, ದೂರುದಾರರ ದಾಖಲೆಗಳನ್ನು ಪರಿಶೀಲಿಸಿದ ಆಯೋಗ ರೂ.24,999 ಪಾವತಿಸಿ ಆನ್‍ಲೈನ್ ಮುಖಾಂತರ ಎದುರುದಾರರ ಬಳಿ ರೆಡ್ ಮಿ ನೋಟ್ ಮೊಬೈಲ್ ಖರೀದಿಸಿರುವುದು ಆಯೋಗದ ಗಮನಕ್ಕೆ ಕಂಡುಬಂದಿರುತ್ತದೆ. ಎದುರುದಾರರು ಡೆಲಿವರಿಕೊಟ್ಟಂತಹ ಮೊಬೈಲ್ ಬೇರೆ ಇರುವುದನ್ನು ಗಮನಿಸಿದ ಆಯೋಗ ಎದುರುದಾರರು ಸೇವಾ ನ್ಯೂನ್ಯತೆ ಎಸಗಿರುವರೆಂದು…

Read More