Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‍ಬಿಆರ್ ಲೇಔಟ್ ನಲ್ಲಿ ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್(32) ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹೆಚ್.ಬಿ.ಆರ್. ಲೇಔಟ್ ನ 13ನೇ ಕ್ರಾಸ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು. ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್‌ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ತಿಳಿಸಿದರು. ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ…
ನವದೆಹಲಿ : ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಮತ್ತು ರಾಜ್ಯ ಔಷಧ ನಿಯಂತ್ರಣ ಪ್ರಾಧಿಕಾರಗಳು ದೇಶಾದ್ಯಂತ ಔಷಧಗಳು ಮತ್ತು ಸೌಂದರ್ಯವರ್ಧಕ ಉತ್ಪನ್ನಗಳ ಗುಣಮಟ್ಟದ ಬಗ್ಗೆ ದೊಡ್ಡ ಬಹಿರಂಗಪಡಿಸುವಿಕೆಯನ್ನು ಮಾಡಿವೆ. ವಾಸ್ತವವಾಗಿ, ಮಾರ್ಚ್ ತಿಂಗಳಿಗೆ ನೀಡಲಾದ ಔಷಧ ಎಚ್ಚರಿಕೆಯ ಪ್ರಕಾರ, ದೇಶಾದ್ಯಂತ 131 ಔಷಧಿಗಳ ಮಾದರಿಗಳು ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿವೆ, ಇದರಲ್ಲಿ ಹಿಮಾಚಲ ಪ್ರದೇಶದಲ್ಲಿ ತಯಾರಾದ 38 ಔಷಧಿಗಳು ಸೇರಿವೆ. ಇದಲ್ಲದೆ, ಪಾಕಿಸ್ತಾನ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳಲಾದ ಕೆಲವು ಸೌಂದರ್ಯ ಉತ್ಪನ್ನಗಳ ಮಾದರಿಗಳು ಸಹ ವಿಫಲವಾಗುತ್ತಿರುವುದು ಕಂಡುಬಂದಿದ್ದು, ಅವುಗಳಲ್ಲಿ ಪಾದರಸದಂತಹ ಅಪಾಯಕಾರಿ ರಾಸಾಯನಿಕಗಳ ಉಪಸ್ಥಿತಿ ಕಂಡುಬಂದಿದೆ. ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಔಷಧಿಗಳಲ್ಲಿ ಹೃದ್ರೋಗ, ಮಧುಮೇಹ, ಕೀಲು ನೋವು, ವಿಟಮಿನ್-ಕಬ್ಬಿಣದ ಪೂರಕಗಳು, ಬ್ಯಾಕ್ಟೀರಿಯಾದ ಸೋಂಕುಗಳು, ಅಲರ್ಜಿ, ಸ್ನಾಯುಕ್ಷಯ, ನೋವು ನಿವಾರಕಗಳು, ಮೂತ್ರಪಿಂಡ ಮತ್ತು ಪ್ರತಿಜೀವಕಗಳು ಸೇರಿವೆ. ಹೆಚ್ಚಿನ ಔಷಧಿಗಳಲ್ಲಿ, ಸಕ್ರಿಯ ಪದಾರ್ಥಗಳ ಪ್ರಮಾಣವು ನಿಗದಿತ ಮಾನದಂಡಗಳಿಗಿಂತ ಕಡಿಮೆ ಅಥವಾ ಹೆಚ್ಚು ಇರುವುದು ಕಂಡುಬಂದಿದೆ ಅಥವಾ ಅವುಗಳಲ್ಲಿ ಧೂಳು ಮತ್ತು ಇತರ…
ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೊಂದು ಶಾಕ್, ಖಾಸಗಿ ಬಸ್ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಸರಬರಾಜು ಮಾಡುವ ಪಠ್ಯಪುಸ್ತಕದ ಬೆಲೆ ಕೂಡ ಶೇಕಡ 10ರಷ್ಟು ಹೆಚ್ಚಳವಾಗಿದೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಶಾಲೆಗಳ ಬೇಡಿಕೆಗೆ ಅನುಗುಣವಾಗಿ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ವಿತರಿಸುತ್ತದೆ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ, ಖಾಸಗಿ ಶಾಲೆಗಳಿಗೆ ನಿಗದಿತ ದರ ಪಡೆದು ಪುಸ್ತಕಗಳನ್ನು ನೀಡಲಿದೆ. ಕಳೆದ ವರ್ಷ 34 ರೂ. ಇದ್ದ ಪುಸ್ತಕದ ದರ ಈ ವರ್ಷ 36 ರೂಪಾಯಿಗೆ ಏರಿಕೆಯಾಗಿದೆ. ಕೆಲವು ಪುಸ್ತಕಗಳ ದರ ಶೇಕಡ 100ರಷ್ಟು ಏರಿಕೆಯಾಗಿದೆ. ಆಂಗ್ಲ ಭಾಷೆಯ ಪುಸ್ತಕ ಕಳೆದ ವರ್ಷ 25 ರೂ ಇದ್ದು, ಈ ವರ್ಷ 51 ರೂಪಾಯಿಗೆ ಏರಿಕೆಯಾಗಿದೆ. 14 ಶೀರ್ಷಿಕೆಗಳು 1ರಿಂದ 17 ರೂ, 86 ಶೀರ್ಷಿಕೆಗಳು 1 ರಿಂದ 27 ರೂ. ವರೆಗೆ ಹೆಚ್ಚಳ ಮಾಡಲಾಗಿದೆ. ಪಠ್ಯ ಪುಸ್ತಕಗಳ ಒಟ್ಟಾರೆ ಏರಿಕೆಯ ಪ್ರಮಾಣ ನೋಡಿದಾಗ ಶೇಕಡ 10ರಷ್ಟು ಹೆಚ್ಚಳ…
ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ. ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು…
ಬೆಂಗಳೂರು : ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಸಕಾಲದಲ್ಲಿ ಇಲಾಖಾ ವಿಚಾರಣೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆಗಳನ್ನು ಹೊರಡಿಸಿದೆ. ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಅವರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆಗಾಗಿ ಕ್ಷುಪ್ತ ಸಮಯದಲ್ಲಿ ಅಂದರೆ ಅಂತಹ ನೌಕರ ಸೇವೆಯಿಂದ ನಿವೃತ್ತಿ ಹೊಂದುವ ಸಾಕಷ್ಟು ಪೂರ್ವದಲ್ಲಿಯೇ ಶಿಸ್ತಿನ ಕ್ರಮ ಆರಂಭಿಸುವಂತೆ ಹಾಗೂ ಇತ್ಯರ್ಥಪಡಿಸುವಂತೆ ಮೇಲೆ ಉಲ್ಲೇಖಿಸಿರುವ ಹಲವಾರು ಸುತ್ತೋಲೆ ಹಾಗೂ ಅಧಿಕೃತ ಜ್ಞಾಪನಗಳಲ್ಲಿ ಸರ್ಕಾರದಿಂದ ಕಾಲ ಕಾಲಕ್ಕೆ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರನ ನಿವೃತ್ತಿ ನಂತರದ ಶಿಸ್ತು ಕ್ರಮಗಳನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957 ರಡಿ ಕೈಗೊಳ್ಳಲು ಅವಕಾಶವಿರುವುದಿಲ್ಲ. ಅಂತಹ ಶಿಸ್ತಿನ ಕ್ರಮವನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 214 ರಡಿ ಮಾತ್ರ ಕೈಗೊಳ್ಳಲು ಅವಕಾಶವಿರುತ್ತದೆ. ಸರ್ಕಾರಿ ನೌಕರನು ನಿವೃತ್ತಿಯಾದ ನಂತರ ಅವನ ಮೇಲೆ ಹೂಡಲಾಗಿದ್ದ ಇಲಾಖಾ ವಿಚಾರಣೆಗಳನ್ನು ಸರ್ಕಾರಕ್ಕೆ ಆತನಿಂದ ಆರ್ಥಿಕ ಹಾನಿ ಉಂಟಾಗಿಲ್ಲವೆಂಬ ಕಾರಣದ ಮೇಲೆ…
ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ವೃಂದದಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಗ್ರೇಡ್-2 ವೃಂದಕ್ಕೆ ಮುಂಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಉಲ್ಲೇಖ (3) ರ ಪತ್ರದಲ್ಲಿ ಉಲ್ಲೇಖ(1) ರಲ್ಲಿ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ವೃಂದ ಮತ್ತು ನೇಮಕಾತಿ ನಿಯಮದಂತೆ ಸರ್ಕಾರಿ ಪ್ರಾಥಮಿಕ ಶಾಲಾ ವೃಂದದ ಶಿಕ್ಷಕರಿಂದ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವ ಕುರಿತು ಕಲಬುರಗಿ ವಿಭಾಗದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಇವರುಗಳಿಗೆ ವೇಳಾ ಪಟ್ಟಿಯೊಂದಿಗೆ ಬಡ್ತಿಗೆ ಕ್ರಮವಹಿಸಲು ಸೂಚಿಸಿರುತ್ತೀರಿ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರಿಗೆ ಪ್ರೌಢ ಶಾಲಾ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಮಾನ್ಯ…
ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 06 ಮಾರ್ಗಗಳ ತಂಡಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಜಿಲ್ಲಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು…
ದಾವಣಗೆರೆ : ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ್ದ ತಂದೆಗೆ ದಾವಣಗೆರೆ ಸಂಚಾರಿ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಉತ್ತಮ್ ಚಂದ್ ಬಡಾವಣೆ ನಿವಾಸಿಗೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬರೋಬ್ಬರಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಎಆರ್ ಜಿ ಕಾಲೇಜ್ ಬಳಿ ಮಗ ಬೈಕ್ ಚಾಲನೆ ಮಾಡಿದ್ದಾನೆ. ತಪಾಸಣೆ ವೆಳೆ ಅಪ್ರಾಪ್ತನಿಗೆ ಬೈಕ್ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಅಪ್ರಾಪ್ತ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ್ದು, ಪುನರಾವರ್ತೆಯಾದ್ರೆ ಎಫ್ ಐಆರ್ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.