Author: kannadanewsnow57

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ…

Read More

ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಜೂನ್, 30 ರವರೆಗೆ ಕಾಲಾವಕಾಶ ನೀಡಿದೆ. ಈ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ ಹಳೆಯ ಕಚ್ಚಾಮನೆ ಉಳ್ಳವರು) ಹಾಗೂ ನಿವೇಶನ ರಹಿತ ಮಹಿಳೆಯರು, ಹಿರಿಯ ನಾಗರೀಕರು, ವಿಧುರರು, ವಿಶೇಷ ಚೇತನರು ಹಾಗೂ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು ಪೆÇೀಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಗಳು, ನಿವೇಶನ/ ಹಳೆಯ ಕಚ್ಚಾಮನೆ ದಾಖಲೆಗಳೊಂದಿಗೆ https/pmay.urban.gov.in ದಲ್ಲಿ ಸ್ವಂತವಾಗಿ/ ಗ್ರಾಹಕ ಸೇವಾ ಕೇಂದ್ರಗಳಲ್ಲಿ/ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈtನ್ ಮೂಲಕ ಜೂನ್, 30 ರೊಳಗೆ ಅರ್ಜಿ…

Read More

ಬೆಂಗಳೂರು: ಗ್ರಾಹಕರಿಗೆ ಮಟನ್ ಎಂದು ನಂಬಿಸಿ ಗೋಮಾಂಸ (ಬೀಫ್) ಉಣಿಸುತ್ತಿದ್ದ ರೆಸ್ಟೋರೆಂಟ್ ಮಾಲೀಕರಿಬ್ಬರನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಮೂಲತಃ ಕೇರಳದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಬ್ಬರು ನಗರದ ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಯಲೋರಂ ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಗೋಮಾಂಸದ (ಬೀಫ್) ಉಲ್ಲೇಖ ಇರಲಿಲ್ಲ. ಆದರೆ, ಇಲ್ಲಿ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗ್ರಾಹಕರಿಗೆ ಗೋಮಾಂಸವನ್ನು ನೀಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಖಚಿತ ಮಾಹಿತಿ ಮತ್ತು ಗ್ರಾಹಕರ ದೂರುಗಳ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಬಂಧಿತ ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಇದೇ…

Read More

ಹಿಂದೂ ಧರ್ಮದಲ್ಲಿ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ಬಲವಾದ ಕಾರಣ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಸಾಮಾನ್ಯವಾಗಿ ನಮ್ಮಲ್ಲಿ ಹೆಣ್ಣುಮಕ್ಕಳು ಮಾತ್ರ ಕಿವಿ ಚುಚ್ಚಿಸಿಕೊಳ್ಳುತ್ತಾರೆ ಎಂಬ ಭಾವನೆ ಇದೆ. ಇದರಿಂದಾಗಿ ‘ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ?’ ಎಂಬ ಸಂದೇಹ ಅನೇಕರಲ್ಲಿ ಮೂಡುವುದು ಸಹಜ. ಆದರೆ, ಭಾರತೀಯ ಸನಾತನ ಸಂಪ್ರದಾಯದ ಪ್ರಕಾರ ಕಿವಿ ಚುಚ್ಚಿಸಿಕೊಳ್ಳುವುದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸೀಮಿತವಾಗಿಲ್ಲ. ಹಿಂದೂ ಸಂಸ್ಕೃತಿಯಲ್ಲಿ ಗಂಡುಮಕ್ಕಳಿಗೂ ಇದು ಅತ್ಯಂತ ಪ್ರಮುಖ ಸಂಸ್ಕಾರವಾಗಿದೆ. ಇದನ್ನು “ಕರ್ಣವೇಧ ಸಂಸ್ಕಾರ” ಎಂದು ಕರೆಯಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಮಕ್ಕಳಿಗೆ ಕಿವಿ ಚುಚ್ಚಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲವು ಕುಟುಂಬಗಳಲ್ಲಿ ಬಾಲ್ಯದಲ್ಲೇ ಕಿವಿ ಚುಚ್ಚಿಸಿದರೆ, ಇನ್ನು ಕೆಲವು ಕಡೆ ಉಪನಯನದ (ಮುಂಜಿ) ಸಮಯದಲ್ಲಿ ಈ ಆಚರಣೆಯನ್ನು ಮಾಡಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಫ್ಯಾಷನ್‌ಗಾಗಿಯೂ ಯುವಕರು ಕಿವಿ ಚುಚ್ಚಿಸಿಕೊಳ್ಳುವುದು ಸಾಮಾನ್ಯವಾಗಿದೆ. ಕಿವಿ ಚುಚ್ಚಿಸಿಕೊಳ್ಳುವುದರಿಂದಾಗುವ ಪ್ರಯೋಜನಗಳು: 1. ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ನಂಬಿಕೆಗಳು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕಿವಿ ಚುಚ್ಚಿಸಿಕೊಳ್ಳುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಮುಂಬೈ: ಭಾರತದ ಭೌತಿಕ ಕರೆನ್ಸಿ (ನೋಟುಗಳು) ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆ ಕಾಣುವ ಸಾಧ್ಯತೆ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪಾಲಿಮರ್ ಅಥವಾ ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಪ್ರಾಯೋಗಿಕ ಯೋಜನೆಯನ್ನು (Pilot Scheme) ಪ್ರಾರಂಭಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ. ದೇಶದಲ್ಲಿ ಡಿಜಿಟಲ್ ಪಾವತಿಗಳು ವೇಗವಾಗಿ ಬೆಳೆಯುತ್ತಿದ್ದರೂ, ನಗದಿಗೆ ಇರುವ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ನೋಟು ಮುದ್ರಣ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಮತ್ತು ಪ್ರತಿ ವರ್ಷ ಕೋಟ್ಯಂತರ ಹಾನಿಗೊಳಗಾದ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಬೇಕಾಗಿರುವುದು ಆರ್‌ಬಿಐಗೆ ದೊಡ್ಡ ಸವಾಲಾಗಿದೆ. ಹೀಗಾಗಿ, ಸುಮಾರು ಹತ್ತು ವರ್ಷಗಳ ಹಿಂದಿನ ಈ ಪ್ರಸ್ತಾಪವನ್ನು ಆರ್‌ಬಿಐ ಈಗ ಮತ್ತೆ ಗಂಭೀರವಾಗಿ ಪರಿಗಣಿಸುತ್ತಿದೆ. ಏನಿದು ಪ್ಲಾಸ್ಟಿಕ್ ಕರೆನ್ಸಿ ನೋಟುಗಳು? ಪ್ಲಾಸ್ಟಿಕ್ ನೋಟುಗಳು ಎಂದರೆ ನಮ್ಮ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳಂತೆ ಗಟ್ಟಿಯಾಗಿರುವುದಿಲ್ಲ. ಇವುಗಳನ್ನು ಅತ್ಯಂತ ತೆಳುವಾದ, ಪ್ಲಾಸ್ಟಿಕ್ ಆಧಾರಿತ ‘ಪಾಲಿಮರ್’ ವಸ್ತುವಿನಿಂದ ತಯಾರಿಸಲಾಗುತ್ತದೆ. ಇವು ಸಾಂಪ್ರದಾಯಿಕ ಕಾಗದದ ನೋಟುಗಳಂತೆಯೇ ಮೃದುವಾಗಿದ್ದು, ಸುಲಭವಾಗಿ…

Read More

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಜೂನ್ 1 ರಿಂದ ಜಾರಿಗೆ ಬರುವಂತೆ ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ (ATF) ಮೇಲಿನ ರಫ್ತು ಸುಂಕವನ್ನು (Export Levies) ಪರಿಷ್ಕರಿಸಿದೆ. ಆದರೆ, ದೇಶೀಯ ಅಬಕಾರಿ ಸುಂಕದ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಉಂಟಾಗಿರುವ ಅನಿವಾರ್ಯತೆ ಮತ್ತು ಜಾಗತಿಕ ಮಾರುಕಟ್ಟೆಯ ಏರುಪೇರುಗಳ ನಡುವೆ, ದೇಶದಲ್ಲಿ ಇಂಧನದ ಕೊರತೆಯಾಗದಂತೆ ತಡೆಯಲು ಈ ವರ್ಷದ ಆರಂಭದಲ್ಲಿ ಸರ್ಕಾರವು ರಫ್ತು ಸುಂಕವನ್ನು ವಿಧಿಸಿತ್ತು. ಇದೀಗ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಪ್ರಕಾರ, ಪರಿಷ್ಕೃತ ದರಗಳು ಜೂನ್ 1, 2026 ರಿಂದ ಜಾರಿಗೆ ಬರಲಿವೆ. ರಫ್ತು ಸುಂಕ ವಿಧಿಸಲು ಕಾರಣವೇನು? ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಅತಿಯಾದ ರಫ್ತು ಪ್ರಕ್ರಿಯೆಗೆ ಕಡಿವಾಣ ಹಾಕಲು ಸರ್ಕಾರವು ಮೊದಲ ಬಾರಿಗೆ ಮಾರ್ಚ್ 27, 2026 ರಂದು ಪೆಟ್ರೋಲ್, ಡೀಸೆಲ್ ಮತ್ತು ಎಟಿಎಫ್ ರಫ್ತಿನ ಮೇಲೆ ವಿಶೇಷ…

Read More

ಬೆಂಗಳೂರು : ವಿದ್ಯುತ್ ನಮ್ಮ ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗ. ಆದರೆ, ಅಲ್ಪಸ್ವಲ್ಪ ಅಜಾಗರೂಕತೆ ವಹಿಸಿದರೂ ಇದು ಪ್ರಾಣಕ್ಕೆ ಕುತ್ತು ತರಬಲ್ಲದು. ಹೀಗಾಗಿಯೇ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿ ರಕ್ಷಣೆಯ ಹಿತದೃಷ್ಟಿಯಿಂದ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ವಿದ್ಯುತ್ ಸುರಕ್ಷತೆಗೆ ಸಂಬಂಧಿಸಿದಂತೆ ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಕಟಿಸಿದ್ದಾರೆ. ಮನೆ, ಕಚೇರಿ, ಕೈಗಾರಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಪಾಲಿಸಲೇಬೇಕಾದ ಪ್ರಮುಖ ನಿಯಮಗಳು ಇಲ್ಲಿವೆ: 1. ಮನೆ ಬಳಕೆ ಗ್ರಾಹಕರು ನೆನಪಿನಲ್ಲಿಡಬೇಕಾದ ಅಂಶಗಳು ಪರಿಣತರ ಸೇವೆ: ವೈರಿಂಗ್ ಅಥವಾ ಯಾವುದೇ ಸಣ್ಣ ವಿದ್ಯುತ್ ಕೆಲಸವಿದ್ದರೂ ನೀವೇ ಕೈಹಾಕಬೇಡಿ. ಸರ್ಕಾರದಿಂದ ಮಾನ್ಯತೆ ಪಡೆದ ಎಲೆಕ್ಟ್ರಿಷಿಯನ್‌ಗಳ ಮೂಲಕವೇ ಕೆಲಸ ಮಾಡಿಸಿ. ಗುಣಮಟ್ಟದ ವಸ್ತುಗಳು: ಯಾವಾಗಲೂ ಐಎಸ್ಐಸ (ISI) ಮುದ್ರೆ ಇರುವ ವೈರ್, ಕೇಬಲ್ ಹಾಗೂ ಸ್ವಿಚ್‌ಗಳನ್ನೇ ಬಳಸಿ. ಅರ್ಥಿಂಗ್ ಮತ್ತು ಆರ್‌ಸಿಡಿ: ಮನೆಗೆ ಸಮರ್ಪಕವಾದ ಅರ್ಥಿಂಗ್ (ಭೂಸಂಪರ್ಕ) ಕಲ್ಪಿಸಿ. ವಿದ್ಯುತ್ ಸೋರಿಕೆಯಿಂದ ತಕ್ಷಣ ರಕ್ಷಣೆ ಪಡೆಯಲು ‘ಆರ್ಸಿ ಡಿ’ (RCD)…

Read More

ಚಂಬಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬೊಲೆರೊ ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಬಿದ್ದು ಎಂಟು ಜನರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ವೈರಾಗಢ್-ಸಚ್ ಪಾಸ್-ಕಿಲ್ಲರ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಆದರೆ, ಶನಿವಾರ ಸಂಜೆ ವೇಳೆಗೆ ಸ್ಥಳೀಯರಿಗೆ ವಿಷಯ ತಿಳಿದುಬಂದ ಹಿನ್ನೆಲೆಯಲ್ಲಿ ಈ ದುರಂತ ತಡವಾಗಿ ಬೆಳಕಿಗೆ ಬಂದಿದೆ. ಚಂಬಾದ ಚುರಾಹ್ ವಿಧಾನಸಭಾ ಕ್ಷೇತ್ರದ ಭಾಜಪಾ ಶಾಸಕ ಹಂಸರಾಜ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, “ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಕಂದಕವು ಅತ್ಯಂತ ಆಳವಾಗಿರುವುದು ಮತ್ತು ಹವಾಮಾನ ವೈಪರೀತ್ಯದಿಂದಾಗಿ ಅಪಘಾತ ನಡೆದು ೪೦ ಗಂಟೆಗಳಾಗುತ್ತ ಬಂದರೂ ಶವಗಳನ್ನು ಹೊರತೆಗೆಯಲು ಸಾಧ್ಯವಾಗಿಲ್ಲ,” ಎಂದು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆಯಿಂದ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಕೊಲ್ಕತ್ತಾ ಮತ್ತು ಬೆಂಗಳೂರಿನಿಂದ ಹಿಮಾಚಲ ಪ್ರದೇಶಕ್ಕೆ ಪ್ರವಾಸಕ್ಕೆ ಬಂದಿದ್ದ ಇಬ್ಬರು…

Read More

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸಿವಿಲ್ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ತಿದ್ದುಪಡಿ ತರಲು ಸರ್ಕಾರ ಕರಡು ಪ್ರತಿಯನ್ನು ಸಿದ್ಧಪಡಿಸಿದ್ದು, ನೇರ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇಕಡಾ 2 ರಷ್ಟು ಸಮಾನಾಂತರ ಮೀಸಲಾತಿ (Horizontal Reservation) ಕಲ್ಪಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಆಶಾಕುಮಾರಿ ಎ. ಜೆ. ಅವರ ಹೆಸರಿನಲ್ಲಿ ಈ ಕರಡು ಅಧಿಸೂಚನೆ ಪ್ರಕಟವಾಗಿದೆ. ಯಾರಿಗೆ ಅನ್ವಯ?: ಕನಿಷ್ಠ 10 ವರ್ಷಗಳ ಕಾಲ ಕರ್ನಾಟಕದಲ್ಲಿ ವಾಸವಾಗಿದ್ದು, ನಿಗದಿಪಡಿಸಿದ 34 ಕ್ರೀಡೆಗಳಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಈ ಮೀಸಲಾತಿ ಅನ್ವಯವಾಗುತ್ತದೆ. ಶೈಕ್ಷಣಿಕ ಅರ್ಹತೆ ಕಡ್ಡಾಯ: ಕ್ರೀಡಾಪಟುಗಳು ತಾವು ಅರ್ಜಿ ಸಲ್ಲಿಸುವ ಹುದ್ದೆಗೆ ನಿಗದಿಪಡಿಸಲಾದ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಹುದ್ದೆಗಳ ಭರ್ತಿ: ಒಂದು…

Read More

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED) ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್‌ಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. ಸೋಮವಾರ (ಜೂನ್ 1) ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದಾರೆ. ಕಳೆದ ಶುಕ್ರವಾರವೇ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಮೊದಲ ಬಾರಿಗೆ ಸಮನ್ಸ್ ನೀಡಿತ್ತು. ಆದರೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅವರು ವಿಚಾರಣೆಯಿಂದ ವಿನಾಯಿತಿ ಕೋರಿದ್ದರು. ಈ ಮನವಿಯನ್ನು ಪರಿಗಣಿಸಿದ್ದ ಅಧಿಕಾರಿಗಳು ತಾತ್ಕಾಲಿಕ ವಿನಾಯಿತಿ ನೀಡಿದ್ದರು. ಆದರೆ ಇದೀಗ ತನಿಖೆಯನ್ನು ಚುರುಕುಗೊಳಿಸಿರುವ ಇಡಿ, ಸೋಮವಾರವೇ ವಿಚಾರಣೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಕಡಕ್ ಆದೇಶ ನೀಡಿದೆ. ಈ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಈಗಾಗಲೇ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಮಹತ್ವದ ಮಾಹಿತಿ ಕಲೆಹಾಕುತ್ತಿದೆ.ಇತ್ತೀಚೆಗಷ್ಟೇ ಬೆಂಗಳೂರಿನ ಅಶೋಕನಗರದಲ್ಲಿರುವ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು.…

Read More