Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಅವಲಂಬಿತ ವಿವಾಹಿತ ಮಗಳೂ ಸಹ ಅನುಕಂಪದ ನೇಮಕಾತಿಗೆ ಅರ್ಹ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇಲ್ಮನವಿ ಸಲ್ಲಿಸಿದ ಅನುಕಂಪದ ನೇಮಕಾತಿ ಅರ್ಜಿಯನ್ನು ಮರುಪರಿಶೀಲಿಸಿ ಎಂಟು ವಾರಗಳ ಒಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದ್ದು, ಡಿಯೋರಿಯಾ ನಿವಾಸಿ ಚಂದಾ ದೇವಿ ಅವರ ವಿಶೇಷ ಮೇಲ್ಮನವಿಯ ಮೇರೆಗೆ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಮತ್ತು ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ. ಚಂದಾ ದೇವಿಯ ತಂದೆ ಸಂಪೂರ್ಣಾನಂದ ಪಾಂಡೆ ಭಟ್ಪರ್ ರಾಣಿ ತೆಹಸಿಲ್‌ನ ಬಂಕಟಾ ಬ್ಲಾಕ್‌ನ ಗಜಧ್ವ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅವರು 2014 ರಲ್ಲಿ ಸೇವೆಯ ಸಮಯದಲ್ಲಿ ನಿಧನರಾದರು. ಚಂದಾ ದೇವಿ ಅನುಕಂಪದ ಕೋಟಾದಲ್ಲಿ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದರು. ಡಿಸೆಂಬರ್ 2016 ರಲ್ಲಿ, ಜಿಲ್ಲಾ ಮೂಲ ಶಿಕ್ಷಣ ಅಧಿಕಾರಿ, ಅವರು ವಿವಾಹಿತ ಮಗಳು ಮತ್ತು ಆದ್ದರಿಂದ ಸೆಪ್ಟೆಂಬರ್ 4, 2000 ರ ಸರ್ಕಾರಿ ಆದೇಶದ…
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು… • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ…
ಬೆಂಗಳೂರು : ಬೆಂಗಳೂರಿನಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ದಿನಾಂಕ: 27-08-2025 ರಿಂದ ಬೆಂಗಳೂರು ನಗರದಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸಲಿದ್ದು, ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟವರಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2023 ಮತ್ತು 2024ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು. ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ, ಮುಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಮುಂಚಿತವಾಗಿ ಏಕ ಗವಾಕ್ಷಿ ವ್ಯವಸ್ಥೆ ((Single window System) ಮೂಲಕ ಪರವಾನಗಿ ಪಡೆದುಕೊಳ್ಳುವಂತೆ ಸೂಚಿಸುವುದು. ಸಾರ್ವಜನಿಕ ರಸ್ತೆ ಹಾಗೂ ಸಾರ್ವಜನಿಕರು ಓಡಾಡುವ ಜಾಗಗಳಲ್ಲಿ ವಾಹನ ಮತ್ತು ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗುವ ರೀತಿಯಲ್ಲಿ ಪೆಂಡಾಲ್, ಚಪ್ಪರ ಹಾಕಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲು…
ನವದೆಹಲಿ : ಈ ಶೈಕ್ಷಣಿಕ ವರ್ಷದಿಂದಲೇ ಮನಃಶಾಸ್ತ್ರ ಮತ್ತು ಆರೋಗ್ಯ ಸಂಬಂಧಿತ ಕೋರ್ಸ್ ಗಳನ್ನು ಇನ್ನು ಮುಂದೆ ದೂರ ಶಿಕ್ಷಣ ಅಥವಾ ಆನ್ಲೈನ್ ವಿಧಾನದ ಮೂಲಕ ಕಲಿಸುವುದನ್ನು ಸ್ಥಗಿತಗೊಳಿಸಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ) ಆದೇಶ ಹೊರಡಿಸಿದೆ. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು 2025 ರಿಂದ ಆರೋಗ್ಯ ರಕ್ಷಣೆ, ಮನೋವಿಜ್ಞಾನ, ಪೌಷ್ಟಿಕಾಂಶ ಮತ್ತು ಸಂಬಂಧಿತ ವಿಷಯಗಳಲ್ಲಿ ಆನ್‌ಲೈನ್ ಅಥವಾ ದೂರ ಶಿಕ್ಷಣದ ಮೂಲಕ ಕೋರ್ಸ್‌ಗಳನ್ನು ನಡೆಸದಂತೆ ನಿರ್ದೇಶಿಸಿದೆ. ಈ ನಿಷೇಧವು NCHP ಕಾಯ್ದೆ, 2021 ರ ಅಡಿಯಲ್ಲಿ ಅನ್ವಯಿಸುತ್ತದೆ. ಇದು ಮನೋವಿಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಆಹಾರ ಮತ್ತು ಪೋಷಣೆ, ಜೈವಿಕ ತಂತ್ರಜ್ಞಾನ, ಕ್ಲಿನಿಕಲ್ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿಯಂತಹ ಕೋರ್ಸ್‌ಗಳನ್ನು ಒಳಗೊಂಡಿದೆ. ಈ ನಿಯಮವು ಸಂಬಂಧಿತ ವಿಶೇಷತೆಗೆ ಮಾತ್ರ ಅನ್ವಯಿಸುತ್ತದೆ UGC ಕಾರ್ಯದರ್ಶಿ ಮನೀಶ್ ಜೋಶಿ, “ಜುಲೈ-ಆಗಸ್ಟ್, 2025 ಮತ್ತು ನಂತರದ ಶೈಕ್ಷಣಿಕ ಅವಧಿಗೆ ಮುಕ್ತ ಮತ್ತು ದೂರಶಿಕ್ಷಣ ಮತ್ತು ಆನ್‌ಲೈನ್ ಮೋಡ್ ಅಡಿಯಲ್ಲಿ ಮನೋವಿಜ್ಞಾನವನ್ನು…
ಗಣೇಶ ಚತುರ್ಥಿ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ದ್ವಾರದಲ್ಲಿ ಗಣೇಶನ ವಿಗ್ರಹವನ್ನು ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಅಡೆತಡೆಗಳನ್ನು ನಿವಾರಿಸುವವನು ಎಂದು ಕರೆಯಲ್ಪಡುವ ಗಣೇಶ, ಮನೆಯನ್ನು ದುಷ್ಟ ಕಣ್ಣುಗಳು ಮತ್ತು ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತಾನೆ. ಗಣೇಶ ಚತುರ್ಥಿಯ ಸಮಯದಲ್ಲಿ ನೀವು ಹೊಸ ಮನೆಗೆ ಸ್ಥಳಾಂತರಗೊಳ್ಳಲು ಯೋಜಿಸುತ್ತಿದ್ದರೆ ಅಥವಾ ನಿಮ್ಮ ಮುಖ್ಯ ದ್ವಾರದಲ್ಲಿ ಗಣೇಶ ವಿಗ್ರಹವನ್ನು ಸ್ಥಾಪಿಸಲು ಬಯಸಿದರೆ, ಕೆಲವು ವಾಸ್ತು ನಿಯಮಗಳನ್ನು ಅನುಸರಿಸುವುದು ಮುಖ್ಯ. ಅವುಗಳನ್ನು ನಿರ್ಲಕ್ಷಿಸುವುದು ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು. ಪ್ರವೇಶದ್ವಾರದಲ್ಲಿ ಗಣೇಶ ವಿಗ್ರಹವನ್ನು ಇಡುವಾಗ ನೀವು ತಪ್ಪಿಸಬೇಕಾದ 8 ಸಾಮಾನ್ಯ ತಪ್ಪುಗಳು ಇಲ್ಲಿವೆ: 1. ತಪ್ಪು ದಿಕ್ಕನ್ನು ಆಯ್ಕೆ ಮಾಡುವುದು ಉತ್ತರ, ಪೂರ್ವ ಅಥವಾ ಈಶಾನ್ಯ (ಇಶಾನ್) ದಿಕ್ಕನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಿಗ್ರಹವನ್ನು ಎಂದಿಗೂ ದಕ್ಷಿಣಾಭಿಮುಖವಾಗಿ ಇಡಬೇಡಿ, ಏಕೆಂದರೆ ಈ ದಿಕ್ಕು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ. ನಿಮ್ಮ ಮುಖ್ಯ ದ್ವಾರವು ದಕ್ಷಿಣದಲ್ಲಿದ್ದರೆ, ವಿಗ್ರಹವನ್ನು ಮನೆಯ ಒಳಗೆ ಮುಖ ಮಾಡುವಂತೆ ಇರಿಸಿ.…
2025-26ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟವಾದಲ್ಲಿ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಕೈಗೊಳ್ಳುವ ಎರಡು ವಾರದೊಳಗಾಗಿ ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ರೈತರು ನೇರವಾಗಿ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 18002093536 ಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಅದೇ ರೀತಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ, ಭೂ ಕುಸಿತ ಇಂತಹ ಅವಘಡಗಳಿಂದ ಬೆಳೆ ನಷ್ಟವಾದರೆ ಅವಘಡ ಸಂಭವಿಸಿದ 72 ಗಂಟೆಯೊಳಗಾಗಿ ರೈತರು TATA AIG ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 18002093536 ಗೆ ಕರೆ ಮಾಡಿ…
ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಯಿಂದ ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನೆ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮತ್ತು ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಯೋಜನೆಗಳು ಸೌಲಭ್ಯ ಪಡೆಯಬಹುದು. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30…
ಬೆಂಗಳೂರು : ಅನುಕಂಪ ಆಧಾರದ ಮೇಲೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಪ್ರಥಮ ವೇತನ ಪ್ರಮಾಣ ಪತ್ರ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅನುಕಂಪ ಆಧಾರದ ನೇಮಕಾತಿ ನಿಯಮಗಳು 1996ರಲ್ಲಿನ ಎಲ್ಲಾ ಷರತ್ತುಗಳನ್ನು ಪೂರೈಸಿದ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಅಭ್ಯರ್ಥಿಗಳಿಗೆ ಉಲ್ಲೇಖ (2)ರ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 2011 ಹಾಗೂ 2017ರಲ್ಲಿ ತಿದ್ದುಪಡಿಯಾದಂತೆ ನೇಮಕಾತಿ ನೀಡಲಾಗಿತ್ತು, ಅಭ್ಯರ್ಥಿಗಳು ನೇಮಕಾತಿ ಮಾಡಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆಂದು ಮತ್ತು ಸದರಿ ನೌಕರರಿಗೆ ಪ್ರಥಮ ವೇತನ ಪ್ರಮಾಣ ಪತ್ರ ನೀಡಲು ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರು ಉಲ್ಲೇಖ (4)ರಂತೆ ಮನವಿಗಳನ್ನು ಸಲ್ಲಿಸಿರುತ್ತಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ. ನಿಮ್ಮ ಬಾಕಿ ದಂಡವನ್ನು…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹಾಗಾದರೆ ಯಾರಿಗೆ ಎಷ್ಟು ಒಳ ಮೀಸಲಾತಿ ಪ್ರಮಾಣ ಅಂತ ಅಧಿಕೃತ ಆದೇಶ ಮುಂದೆ ಓದಿ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಧಿಕೃತವಾಗಿ ನಡವಳಿ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪುಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ ಆದೇಶ ಸಂಖ್ಯೆ : SWD/SLP/8 2024(P-1), ದಿನಾಂಕ: 12-11-2024 ಮತ್ತು…












