Author: kannadanewsnow57

ನವದೆಹಲಿ : ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಒಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡಿದೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹುತಾತ್ಮ ದಿನದ ಅಂಗವಾಗಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ್ದಾರೆ. ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಈಶ್ವರ ಖಂಡ್ರೆ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎಸ್.ಪೊನ್ನಣ್ಣ, ಶಾಸಕರಾದ ಶಿವಲಿಂಗೇಗೌಡರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ನವದೆಹಲಿ : ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ಬಗ್ಗೆ ಒಂದು ದೊಡ್ಡ ನವೀಕರಣ ಬಂದಿದೆ. ಇದರ ಅಡಿಯಲ್ಲಿ, ಇಲ್ಲಿಯವರೆಗೆ 300 ಕಿಲೋಮೀಟರ್ ವಯಾಡಕ್ಟ್ (ಸೇತುವೆಯಂತಹ ಎತ್ತರದ ರಚನೆ) ನಿರ್ಮಾಣ ಪೂರ್ಣಗೊಂಡಿದೆ. 300 ಕಿ.ಮೀ ವಯಾಡಕ್ಟ್‌ನಲ್ಲಿ, 257.4 ಕಿ.ಮೀ.ಗಳನ್ನು ಫುಲ್ ಸ್ಪ್ಯಾನ್ ಲಾಂಚಿಂಗ್ ಮೆಥಡ್ (FSLM) ಬಳಸಿ ನಿರ್ಮಿಸಲಾಗಿದೆ ಮತ್ತು 37.8 ಕಿ.ಮೀ.ಗಳನ್ನು ಸ್ಪ್ಯಾನ್-ಬೈ-ಸ್ಪ್ಯಾನ್ (SBS) ವಿಧಾನವನ್ನು ಬಳಸಿ ನಿರ್ಮಿಸಲಾಗಿದೆ. ಇದಲ್ಲದೆ, ಈ ಮಾರ್ಗದಲ್ಲಿ 14 ನದಿ ಸೇತುವೆಗಳು, 7 ಉಕ್ಕಿನ ಸೇತುವೆಗಳು, 5 ಪಿಎಸ್‌ಸಿ ಸೇತುವೆಗಳು ಮತ್ತು 2.7 ಕಿ.ಮೀ ನಿಲ್ದಾಣ ಕಟ್ಟಡಗಳನ್ನು ಸಹ ನಿರ್ಮಿಸಲಾಗಿದೆ. ಯೋಜನೆಗೆ ಸಂಬಂಧಿಸಿದ ಮಾಹಿತಿ ಈ ಕೆಲಸಕ್ಕಾಗಿ ಒಟ್ಟು 6455 ಪೂರ್ಣ ಸ್ಪ್ಯಾನ್‌ಗಳು ಮತ್ತು 925 SBS ಸ್ಪ್ಯಾನ್‌ಗಳನ್ನು ಬಳಸಲಾಗಿದೆ. ಪ್ರತಿಯೊಂದು ಪೂರ್ಣ ಸ್ಪ್ಯಾನ್ ಬಾಕ್ಸ್ ಗರ್ಡರ್ ಸುಮಾರು 970 ಟನ್ ತೂಗುತ್ತದೆ. ಪೂರ್ಣ ಸ್ಪ್ಯಾನ್ ವಿಧಾನವನ್ನು ಬಳಸುವ ಕೆಲಸದ ವೇಗವು ಸಾಂಪ್ರದಾಯಿಕ ವಿಧಾನಗಳಿಗಿಂತ 10 ಪಟ್ಟು ಹೆಚ್ಚಾಗಿದೆ. ಈ ಯೋಜನೆಯಲ್ಲಿರುವ ಹೆಚ್ಚಿನ ಉಪಕರಣಗಳಾದ…

Read More

ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಎಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ  ಕನ್ನಡದಲ್ಲಿ 60, ಇಂಗ್ಲೀಷ್ ನಲ್ಲಿ 48 ಅಂಕ ಪಡೆದುಕೊಂಡಿದ್ದು, ಉಳಿದ ಎಲ್ಲಾ ವಿಷಯದಲ್ಲಿ ಫೇಲ್ ಆಗಿದ್ದನು. ಹೀಗಾಗಿ ಬಾಲಕ ನರೇಗಲ್ ಬಸ್ ನಿಲ್ದಾಣದ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ. ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.

Read More

ಕುಜ್ದಾರ್ ಬಲೂಚಿಸ್ತಾನ್: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಕುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದೆ. ಈ ಭೀಕರ ದಾಳಿಯಲ್ಲಿ 4 ಅಮಾಯಕ ಮಕ್ಕಳು ಸೇರಿದಂತೆ ಒಟ್ಟು 5 ಜನರು ದುರಂತವಾಗಿ ಸಾವನ್ನಪ್ಪಿದರು, ಇತರ 38 ಜನರು ಗಾಯಗೊಂಡರು. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಬಸ್ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಈ ದಾಳಿ ನಡೆದಿದೆ. ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ನೆಲೆಸಿತ್ತು. ಸ್ಥಳೀಯ ಆಡಳಿತವು ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಬಿಎಲ್‌ಎ ಮೇಲೆ ಶಂಕೆ ವ್ಯಕ್ತವಾಗಿದೆ, ಇಲ್ಲಿಯವರೆಗೆ ಯಾರೂ ಜವಾಬ್ದಾರಿ ವಹಿಸಿಕೊಂಡಿಲ್ಲ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲವಾದರೂ, ಭದ್ರತಾ ಸಂಸ್ಥೆಗಳು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಮೇಲೆ ಶಂಕೆ ವ್ಯಕ್ತಪಡಿಸಿವೆ. ಈ ಸಂಘಟನೆಯು ಈ ಹಿಂದೆಯೂ ಇಂತಹ ದಾಳಿಗಳಲ್ಲಿ ಭಾಗಿಯಾಗಿದ್ದು, ಅಮೆರಿಕವು ಇದನ್ನು ಭಯೋತ್ಪಾದಕ ಗುಂಪು…

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ವಿಚಾರಣೆ ಮುಂದೂಡಿಕೆ ಆಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

Read More

ಮೈಸೂರು : ಮನೆಯಲ್ಲಿ ಸಿಲಿಂಡರ್ ಬದಲಾಯಿಸುವಾಗ ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಏಕೆಂದರೆ  ಮೈಸೂರಲ್ಲಿ ಸಿಲಿಂಡರ್ ಖಾಲಿಯಾಗಿದೆ ಎಂದು ಸಿಲಿಂಡರ್ ಬದಲಾಯಿಸುವ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಐದು ಜನರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿರುವ ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಜ್ಯೋತಿ (38) ನಾಗಮ್ಮ (55) ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ…

Read More

ತುಮಕೂರು :  ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಎಸ್‌ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್‌ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ. ಇದೀಗ ಇಂಗ್ಲೀಷ್‌ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More